Updated News From Kaup

ರಾಹುಲ್ ಗಾಂಧಿ ಹೆಸರಿನಲ್ಲಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಸಹಾಯ ಧನ ಹಸ್ತಾಂತರ

Posted On: 10-05-2024 06:17PM

ಕಾಪು : ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ಮುಂಬೈ ಅಂದೇರಿ ಭಾಗದ ಕಾಂಗ್ರೆಸ್ ಪದಾಧಿಕಾರಿಯಾದ ಮಹೇಶ್ ಶೆಟ್ಟಿ ಉದ್ಯಮಿ ಮುಂಬೈ ಬರಬೆಟ್ಟು ಗುತ್ತು ಕಳತ್ತೂರು ಹಾಗೂ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿ ರೂ. 10,000 ವನ್ನು ದೇವಾಲಯಕ್ಕೆ ನೀಡಿದರು.

ಈ ಸಂದರ್ಭದಲ್ಲಿ ಇವರನ್ನು ದೇವಾಲಯದ ಆಡಳಿತ ಮೊಕ್ತೇಸರ ಕೇಂಜ ಶ್ರೀಧರ ತಂತ್ರಿ ಯವರು ಶಾಲು ಹೊದಿಸಿ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ಕರುಣಾಕರ ತಂತ್ರಿ, ಶ್ರೀಧರ ತಂತ್ರಿ ಕಳತ್ತೂರು ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ

Posted On: 10-05-2024 09:45AM

ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಜಮಾಡಿ ಸರಕಾರಿ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ ಶೇ. 100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ 25 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 4, ಪ್ರಥಮ ಶ್ರೇಣಿಯಲ್ಲಿ 10, ದ್ವಿತೀಯ ಶ್ರೇಣಿಯಲ್ಲಿ 3, ತೃತೀಯ ‌ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಕಾಪು : ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ.100 ಫಲಿತಾಂಶ

Posted On: 09-05-2024 09:31PM

ಕಾಪು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕಾಪು ತಾಲೂಕಿನ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಶೇ 100. ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ 26 ವಿದ್ಯಾರ್ಥಿಗಳು ಹಾಜರಾಗಿದ್ದು. ವಿಶಿಷ್ಠ ಶ್ರೇಣಿಯಲ್ಲಿ 5 ಮಂದಿ, ಪ್ರಥಮ ಶ್ರೇಣಿಯಲ್ಲಿ 12 ಮಂದಿ, ದ್ವಿತೀಯ ಶ್ರೇಣಿಯಲ್ಲಿ 9 ಮಂದಿ ಉತ್ತೀರ್ಣರಾಗಿದ್ದಾರೆ.

ಶಾಲಾ ನಾಯಕಿ ಕುಮಾರಿ ಕಾವ್ಯ 606 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿ ಆಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಉದ್ಯಾವರ : ಎಸ್.ಎಫ್.ಎಕ್ಸ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ

Posted On: 09-05-2024 12:53PM

ಉದ್ಯಾವರ : ಗ್ರಾಮೀಣ ಭಾಗದಲ್ಲಿನ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಎಸ್ ಎಸ್ ಎಲ್ ಸಿ ಯಲ್ಲಿ 100 ಪ್ರತಿಶತದೊಂದಿಗೆ ವಿಶೇಷ ಸಾಧನೆ ಮಾಡಿದೆ.

58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಸತತ 100 ಪ್ರತಿಶತ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯು, ಕಳೆದ 15 ವರ್ಷಗಳಲ್ಲಿ 13 ಬಾರಿ ಈ ಸಾಧನೆ ಮಾಡಿದೆ. ಈ ವಿದ್ಯಾ ಸಂಸ್ಥೆಯು ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Posted On: 09-05-2024 11:16AM

ಉಡುಪಿ : 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ.

ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ, ದ.ಕ. ಜಿಲ್ಲೆ (92.12%) ದ್ವಿತೀಯ ಸ್ಥಾನಿಯಾಗಿದ್ದು ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾ‌ರ್ ಸಿಂಗ್‌ ಇದ್ದರು.

ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.

ಉಡುಪಿ ತಾಲೂಕು ಕಸಾಪದಿಂದ ಸಂಸ್ಥಾಪನ ದಿನಾಚರಣೆ ; ಉಪನ್ಯಾಸ

Posted On: 08-05-2024 07:24PM

ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.

ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ ಕೃತಿಗಳು ಓದುಗರನ್ನು ಸಹೃದಯಿಗಳನ್ನಾಗಿ ಮಾಡುತ್ತದೆ. ವೈಚಾರಿಕ ದೃಷ್ಟಿಕೋನ ಬೆಳೆಸುತ್ತದೆ. ಪದವೀಧರರು ವಿದ್ಯಾವಂತರೆನಿಸಿಕೊಳ್ಳುವುದಿಲ್ಲ. ವಿದ್ಯೆಯ ಜೊತೆಗೆ ವಿವೇಕ ಮೂಡಲು ಸಾಹಿತ್ಯ ಓದಬೇಕು. ಬದುಕನ್ನು ಸಂಭ್ರಮಿಸಬೇಕಾದರೆ ವರ್ತಮಾನದಲ್ಲಿ ಜೀವಿಸಬೇಕು. ಇದರಿಂದ ವ್ಯಕ್ತಿ ಶಕ್ತಿಯಾಗಲು ಸಾಧ್ಯ. ಸಣ್ಣ ವಿಷಯಗಳಿಗೆ ಆತ್ಮಹತ್ಯೆಗೆ ಮುಂದಾಗುವ ಎಳೆ ಮನಸ್ಸುಗಳು ಕಾರಂತರ ಕೃತಿಗಳನ್ನು ಓದಿದರೆ ಅಂಥ ಆಲೋಚನೆಗಳೇ ಹುಟ್ಟುಕೊಳ್ಳುವುದಿಲ್ಲ. ಬದುಕಿನ ಅನನ್ಯತೆ ಅರಿವಾಗುತ್ತದೆ ಎಂದು ಹೇಳಿದರು.

ಜೀವನಕ್ಕಾಗಿ ಆಯುರ್ವೇದ ಈ ವಿಷಯವಾಗಿ ಜಿಲ್ಲಾ ಆಯುಷ್ ಆಸ್ಪತ್ರೆಯ ತಜ್ಞ ವೈದ್ಯೆಯಾದ ಡಾ. ಸ್ವಾತಿ ಶೇಟ್ ಮಾತನಾಡುತ್ತಾ ಉತ್ತಮ ಆರೋಗ್ಯಕರ ಜೀವನಕ್ಕೆ ಆಯುರ್ವೇದ ಪದ್ಧತಿ ಅತಿ ಅಗತ್ಯ. ದಿನನಿತ್ಯ ಜೀವನದಲ್ಲಿ ಪೌಷ್ಟಿಕವಾದ ಆಹಾರವನ್ನು ಹಿತಮಿತದಲ್ಲಿ ಸೇವಿಸುವುದರೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆಶಾ ಕುಮಾರಿ ವಹಿಸಿದ್ದರು. ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್. ಪಿ. ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ್ ಶೆಣೈ, ಕಸಾಪ ಬೈಂದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಜಿಲ್ಲಾ ಘಟಕದ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ಧನ್ ವಂದಿಸಿದರು.

ಬೆಳ್ತಂಗಡಿ : ಮಾಜಿ ಶಾಸಕ ವಸಂತ್ ಬಂಗೇರ ನಿಧನ

Posted On: 08-05-2024 06:53PM

ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ, ಬಿಲ್ಲವ ಸಮಾಜದ ನಾಯಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ್ ಬಂಗೇರ ಇಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆಗೆ ಒಳಗಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ 1946ರ ಜನವರಿ 15ರಂದು ಬೆಳ್ತಂಗಡಿಯಲ್ಲಿ ಜನಿಸಿದ್ದರು. ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದರು. 1985ರಲ್ಲಿ ಮತ್ತೆ ಭಾಜಪ ಬೆಂಬಲದಿಂದ ಸ್ಪರ್ಧಿಸಿ ಶಾಸಕರಾದರು. 1989ರಲ್ಲಿ ಬಿಜೆಪಿಯನ್ನು ತೊರೆದು ಜಾತ್ಯಾತೀತ ಜನತಾದಳಕ್ಕೆ ಸೇರ್ಪಡೆಗೊಂಡು ಸ್ಪರ್ಧಿಸಿ, ಸೋತಿದ್ದರು.1994ರಲ್ಲಿ ಜಾತ್ಯಾತೀತ ಜನತಾದಳದಿಂದ ಸ್ಪರ್ಧಿಸಿದ್ದ ಕೆ. ವಸಂತ ಬಂಗೇರ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಬಂಗೇರರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದರು. 1999ರಲ್ಲಿ ಮತ್ತು 2004ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬಂಗೇರರು ಸೋಲು ಅನುಭವಿಸಿದ್ದರು. 2008ರ ವಿಧಾನ ಸಭಾ ಚುನಾವಣೆಯಲ್ಲಿ ಬಂಗೇರರು ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಾಂಗ್ರೆಸ್ ಬೆಂಬಲದಲ್ಲಿ ಸ್ಪರ್ಧಿಸಿ ನಾಲ್ಕನೇ ಅವಧಿಗೆ ಶಾಸಕರಾಗಿ ಚುನಾಯಿತರಾಗುವಲ್ಲಿ ಯಶಸ್ವಿಯಾದರು. 2013ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಮತ್ತೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಬಂಗೇರ ಅವರ ಪಾರ್ಥಿವ ಶರೀರ ಮೇ 9ರಂದು ಮುಂಜಾನೆ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.

ಮೇ 12: ನಿಖಿತಾ ಕುಲಾಲ್ ಸ್ಮರಣಾರ್ಥ ಉಚಿತ ನೋಟ್ ಬುಕ್ ವಿತರಣೆ

Posted On: 08-05-2024 06:28PM

ಕಾಪು : ನಿಖಿತಾ ಕುಲಾಲ್ ನೆನಪಿನಲ್ಲಿ ಅವರ ಮನೆಯವರು ಕೊಡಮಾಡುವ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮೇ 12 ರಂದು ಕುತ್ಯಾರು ರಾಮೋಟ್ಟು ಬನತೋಡಿ ಗದ್ದೆಯಲ್ಲಿ ನಡೆಯಲಿದೆ ಎಂದು ಕುಲಾಲ ಸಂಘ (ರಿ.) ಕಾಪು ವಲಯ ಪ್ರಕಟಣೆಯಲ್ಲಿ ತಿಳಿಸಿರುವರು.

ಮೇ 11,14 : ಕುತ್ಯಾರು ಕಲ್ಯಾಣಿ ನಿಲಯ ಪಡುಮನೆಯಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ, ನೇಮೋತ್ಸವ

Posted On: 08-05-2024 06:25PM

ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಯಾಣಿ ನಿಲಯ ಪಡುಮನೆ ಇಲ್ಲಿ ಸೇವೆ ರೂಪದಲ್ಲಿ ಮೇ11ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಹಾಗೂ ಮೇ 14 ರಂದು ಹರಕೆಯ ನೇಮೋತ್ಸವ ನಡೆಯಲಿದೆ ಎಂದು ಪಡುಮನೆ ಕುತ್ಯಾರು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಟಪಾಡಿ ಸೃಷ್ಠಿ ಫೌಂಡೇಶನ್, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ವತಿಯಿಂದ ಸಹಾಯಧನ ವಿತರಣೆ

Posted On: 08-05-2024 06:22PM

ಕಟಪಾಡಿ : ಇಲ್ಲಿನ ಸೃಷ್ಠಿ ಫೌಂಡೇಶನ್ (ರಿ.) ಮತ್ತು ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ವತಿಯಿಂದ ಅಕಾಲಿಕವಾಗಿ ನಿಧನರಾದ ಪತ್ರಕರ್ತ ಡಾ.ಶೇಖರ್ ಅಜೆಕಾರ್ ಅವರ ಕುಟುಂಬಕ್ಕೆ ರೂ.20 ಸಾವಿರ ಸಹಾಯಧನವನ್ನು ಉಡುಪಿ ಜಗನ್ನಾಥ ಸಭಾ ಭವನದಲ್ಲಿ ವಿತರಿಸಲಾಯಿತು.

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಅವರು ತಾರಾ ಶೇಖರ್ ಅವರಿಗೆ ಠೇವಣಿ ಸರ್ಟಿಫಿಕೇಟ್ ಹಸ್ತಾಂತರಿಸಿದರು.

ಸೃಷ್ಠಿ ಫೌಂಡೇಶನ್ ಅಧ್ಯಕ್ಷ ಪ್ರಕಾಶ ಸುವರ್ಣ ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ಅಧ್ಯಕ್ಷ ನಾಗೇಶ್ ಕಾಮತ್ ಕಟಪಾಡಿ, ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಶಿರ್ವ, ಚಲನಚಿತ್ರ ಕಲಾವಿದರಾದ ಶೋಭರಾಜ್ ಪಾವೂರು, ರಾಹುಲ್ ಅಮೀನ್, ವಿನೀತ್ ಕುಮಾರ್, ಶೈಲಶ್ರೀ ಮುಲ್ಕಿ, ಸಿನೆಮಾ ನಿರ್ಮಾಪಕರಾದ ದತ್ತಾತ್ರೇಯ ಪಾಟ್ಕರ್, ಚಂದ್ರಕಲಾ ರಾವ್, ಕ್ಲಿಂಗ್ ಜಾನ್ಸನ್, ಸಂದೀಪ್ ಕಾಮತ್, ಭುವನೇಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.