Updated News From Kaup
ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಆಯ್ಕೆ

Posted On: 09-03-2024 07:31AM
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಸುಜಲ ಎಸ್ ಸುವರ್ಣ ಇವರು ಆಯ್ಕೆಯಾಗಿರುತ್ತಾರೆ.
ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುತ್ತಾರೆ.
ಬಂಗಾರದ ಕನಸು ನನಸು ಮಾಡಲಿದೆ ಸಾಯಿ ಗೋಲ್ಡ್ ಸ್ಕೀಮ್

Posted On: 09-03-2024 07:01AM
ಕಟಪಾಡಿ : ಇಲ್ಲಿನ ಸಾಯಿ ಗೋಲ್ಡ್ ಸಂಸ್ಥೆಯು ಕಂತಿನ ಮೂಲಕ ಹಣ ಪಾವತಿಸುವ ಜೊತೆಗೆ ಒಂದಷ್ಟು ಹೊಸ ಯೋಜನೆಗಳನ್ನು ಚಿನ್ನ ಪ್ರಿಯರಿಗಾಗಿ ತಂದಿದ್ದಾರೆ.

ಏಪ್ರಿಲ್ 15 ಕ್ಕೆ ಮೊದಲ ಕಂತು ಪ್ರಾರಂಭವಾಗಲಿದ್ದು, ಪ್ರತಿ ಸದಸ್ಯರು ಪ್ರತಿ ತಿಂಗಳು ರೂ. 1000/-ದಂತೆ 20 ಕಂತು ಪಾವತಿಸತಕ್ಕದ್ದು. ಸದಸ್ಯರು ಪ್ರತಿ ತಿಂಗಳು 13ನೇ ತಾರೀಕಿಗಿಂತ ಮುಂಚೆ ಕಂತನ್ನು ಪಾವತಿಸಬೇಕು. ತಪ್ಪಿದರೆ ನಿಮ್ಮ ನಂಬರನ್ನು ಡ್ರಾದಲ್ಲಿ ಸೇರಿಸಲಾಗುವುದಿಲ್ಲ. ಪ್ರತಿ ತಿಂಗಳ 15ನೇ ತಾರೀಕಿನಂದು ಸಂಜೆ 5.30 ಗಂಟೆಗೆ ಸರಿಯಾಗಿ ಹಾಜರಿದ್ದ ಸದಸ್ಯರ ಸಮ್ಮುಖ ಹಾಗೂ ನಮ್ಮ ಕಾಪು ಯುಟ್ಯೂಬ್ ನೇರ ಪ್ರಸಾರದಲ್ಲಿ ಡಾ. ನಡೆಸಲಾಗುವುದು. ಪ್ರತಿ ತಿಂಗಳು ಡ್ರಾ ಫಲಿತಾಂಶವನ್ನು ಸದಸ್ಯರಿಗೆ ವಾಟ್ಸಾಪ್ ಮೂಲಕ ತಿಳಿಸಲಾಗುವುದು. ಅರ್ಧದಲ್ಲಿ ಕಂತು ಕಟ್ಟದೆ ಇದ್ದರೆ, ಯಾವುದೇ ಚಿನ್ನವನ್ನು ನೀಡಲಾಗುವುದಿಲ್ಲ. (ಅಂತಹ ಸದಸ್ಯರು ಕೊನೆಯಲ್ಲಿ ಪೂರ್ತಿ ಹಣವನ್ನು ಪಾವತಿಸಿ ಚಿನ್ನವನ್ನು ಪಡೆದುಕೊಳ್ಳಬಹುದು.)

ಬಹುಮಾನ ವಿಜೇತರು ಮುಂದಿನ ಕಂತಿನಿಂದ ಹಣ ಕಟ್ಟುವಂತಿಲ್ಲ. ಯಾವ ಕಾರಣಕ್ಕೂ ಚಿನ್ನದ ಬದಲಾಗಿ ಹಣ ಕೊಡಲಾಗುವುದಿಲ್ಲ. ಕೊನೆಗೆ ಉಳಿದ ಸದಸ್ಯರ ಆಯ್ಕೆಯ ಚಿನ್ನವನ್ನು 30 ದಿವಸದ ಒಳಗೆ ಪಡೆದು ಕೊಳ್ಳತಕ್ಕದು. 916 ಹಾಲ್ಮಾರ್ಕಿನ ಚಿನ್ನವಾಗಿರುತ್ತದೆ ಹಾಗೂ ಚಿನ್ನದ ಜಿ.ಎಸ್.ಟಿ. ಮತ್ತು ಮಜೂರಿಯನ್ನು ಸದಸ್ಯರೇ ಭರಿಸತಕ್ಕದ್ದು. ಕರಪತ್ರದಲ್ಲಿ ತೋರಿಸುವ ಚಿನ್ನಾಭರಣದ ಚಿತ್ರಗಳು ವಿವರಣೆಯ ಉದ್ದೇಶಕ್ಕೆ ಮಾತ್ರ. ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ : ಪರ್ಸನಲ್ ಕಾಂಪ್ಲೆಕ್ಸ್ , ಏಣಗುಡ್ಡೆ, ಕಟಪಾಡಿ, ಉಡುಪಿ ಜಿಲ್ಲೆ -574 105. ಸಂಪರ್ಕ ಸಂಖ್ಯೆ : 9036001528, 9036001529, 8748999424, 9916278269
ಮುಲ್ಕಿ : ಸಿ.ಎಸ್.ಐ. ಬಾಲಿಕಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ

Posted On: 08-03-2024 10:18PM
ಮುಲ್ಕಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮುಲ್ಕಿ ಸಿ.ಎಸ್.ಐ. ಬಾಲಿಕಾಶ್ರಮದ ಮಕ್ಕಳೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭ ಡಾ. ಐಶ್ವರ್ಯ ಸಿ.ಅಂಚನ್ ಆಯುರ್ವೇದ ಜೀವನ ಪದ್ಧತಿ ಮತ್ತು ಚಿಕಿತ್ಸಾ ಮಾಹಿತಿ ನೀಡಿದರು. ಇದೇ ಸಂದರ್ಭ ಸ್ನಾತಕೋತ್ತರ 6ನೇ ರ್ಯಾಂಕ್ ವಿಜೇತೆ ಡಾ. ಐಶ್ವರ್ಯ ಸಿ. ಅಂಚನ್ರವರನ್ನು ಸಂಘಟಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಬಾಲಿಕಾಶ್ರಮದ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಮಾತನಾಡಿ, ಸ್ವಾವಲಂಬಿಗಳಾಗಿ, ಸಾಧಕರಾಗಿ ಸಂಸ್ಥೆಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ಸಿ.ಎಸ್.ಐ. ಚರ್ಚ್ ಸಭಾಪಾಲಕ ರೆ.ಫಾ. ಸ್ಟೀವನ್ ಸರ್ವೋತ್ತಮ ಮುಖ್ಯ ಅತಿಥಿಯಾಗಿ ಮಾತನಾಡಿ, ಸಾಧಕರ ಶ್ರಮ ಬಾಲೆಯರಿಗೆ ಪ್ರೇರಣೆಯಾಗಲಿ ಎಂದರು.
ಸೇವಾದಳದ ಅಧ್ಯಕ್ಷ ಸಂತೋಷ್ ಪೂಜಾರಿ, ಮಹಿಳಾ ಮಂಡಳಿ ಅಧ್ಯಕ್ಷೆ ರೋಹಿಣಿ ಆನಂದ್, ಕಲ್ಪತರು ಸ್ವಸಹಾಯ ಸಂಘದ ಮೇಲ್ವಿಚಾರಕ ರಮಾನಂದ ಪೂಜಾರಿ, ಬಾಲಿಕಾಶ್ರಮದ ಮೇಲ್ವಿಚಾರಕಿ ಶಾಂತಿ ಮುಖ್ಯ ಅತಿಥಿಗಳಾಗಿದ್ದರು. ರವಿರಾಜ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ರೋಹಿಣಿ ಆನಂದ್ ಸ್ವಾಗತಿಸಿದರು. ಕಾರ್ಯದರ್ಶಿ ತೇಜವತಿ ವಂದಿಸಿದರು.
ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ : ಉಡುಪಿ ತಂಡ ವಿನ್ನರ್ಸ್, ಕುಂದಾಪುರ ತಂಡ ರನ್ನರ್ಸ್

Posted On: 06-03-2024 04:48PM
ಹೆಜಮಾಡಿ : ಲೀಗ್ ಮಾದರಿಯಲ್ಲಿ ಹೆಜಮಾಡಿಯ ರಾಜೀವ್ ಗಾಂಧಿ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಕಾಪು ತಾ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ರಜತ ಸಂಭ್ರಮದ ಕ್ರಿಕೆಟ್ ಪಂದ್ಯಾಕೂಟದಲ್ಲಿ ಭಾಗವಹಿಸಿದ್ದ ಆರು ತಂಡಗಳ ಕ್ರಿಕೆಟ್ ಹಣಾಹಣಿಯಲ್ಲಿ ರೋಚಕವಾಗಿದ್ದ ಅಂತಿಮ ಪಂದ್ಯದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡವು, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು 4ರನ್ನುಗಳಿಂದ ಸೋಲಿಸಿ ಜಿಲ್ಲಾ ಮಟ್ಟದ ಕ್ರಿಕೆಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ವಿಜಯೀ ಜಿಲ್ಲಾ ತಂಡವು ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟ್ ಮಾಡಿದ ಉಡುಪಿ ತಂಡವು ನಿಗದಿತ 5 ಓವರ್ಗಳಲ್ಲಿ 37ರನ್ನುಗಳನ್ನು ಪೇರಿಸಿತ್ತು. ಕುಂದಾಪುರ ತಾ| ಪತ್ರಕರ್ತರ ತಂಡವು ದ್ವಿತೀಯ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ವಿನೋದ್ ಸಾಲ್ಯಾನ್ ಬೆಳ್ಳಾಯರು ಮುಖ್ಯ ಅತಿಥಿಗಳಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಜತ ಸಂಭ್ರಮದ ಸಂಚಾಲಕ ಮಹಮ್ಮದ್ ಶರೀಫ್, ಕಾಪು ತಾ| ಅಧ್ಯಕ್ಷ ಹರೀಶ್ ಹೆಜಮಾಡಿ, ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ, ಕ್ರೀಡಾ ಸಂಚಾಲಕ ರಾಕೇಶ್ ಕುಂಜೂರು ವೇದಿಕೆಯಲ್ಲಿದ್ದರು. ಯತೀಶ್ ಉಡುಪಿ, ಸಂತೋಷ್ ಕುದೇಶ್ವರ, ಹರೀಶ್ ಕುಂದಾಪುರ, ರಾಘವೇಂದ್ರ ಉಡುಪಿ ವೈಯಕ್ತಿಕ ಪ್ರಶಸ್ತಿಗೆ ಭಾಜನರಾದರು.
ಮುಖ್ಯ ಅತಿಥಿಗಳಾಗಿದ್ದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ಮಾತನಾಡಿ, ಒತ್ತಡದ ನಡುವೆಯೂ ಪತ್ರಕರ್ತರು ಕ್ರೀಡೋತ್ಸಾಹದಿಂದ ಸೇರಿದ್ದೀರಿ. ನಿಮ್ಮ ಸಂಘಟನೆಯಿಂದ ಮತ್ತಷ್ಟು ಬಲಯುತರಾಗಿರಿ ಎಂದರು. ಕ್ರೀಡಾಸೂರ್ತಿ, ಕ್ರೀಡಾ ಮನೋಭಾವ ಪತ್ರಕರ್ತರಲ್ಲಿ ನಿರಂತರವಾಗಿರಲಿ. ಇದು ಸೌಹಾರ್ದತೆಗೂ ನಾಂದಿಯಾಗುತ್ತದೆ. ಯಾವುದೇ ಹಮ್ಮು ಇರದೆ ಭಾಗವಹಿಸುತ್ತಿರುವುದನ್ನು ಕಂಡು ತನಗೂ ಕ್ರಿಕೆಟ್ ಆಡಬೇಕೆನಿಸಿದೆ. ಪತ್ರಕರ್ತರ ಮತ್ತಷ್ಟು ಕ್ರೀಡೋತ್ಸವಗಳು ನಡೆಯುತ್ತಿರಲಿ ಎಂದು ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಅರ್. ಹೇಳಿದರು. ಅವರು ಫೈನಲ್ ಪಂದ್ಯದ ಕ್ರೀಡಾಳುಗಳಿಗೆ ಹಸ್ತಲಾಘವವನ್ನಿತ್ತು ಅಂತಿಮ ಪಂದ್ಯದ ಟಾಸ್ ಚಿಮ್ಮಿ ತಂಡಗಳಿಗೆ ಶುಭ ಹಾರೈಸಿದರು. ಪಂದ್ಯಾಕೂಟವನ್ನು ಉದ್ಘಾಟಿಸಿದ ಅಸ್ಪೆನ್ ಇನ್ಪ್ರಾ ಪಡುಬಿದ್ರಿಯ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ ಅವರು, ಪತ್ರಕರ್ತರು ನಿರಂತರ ತಮ್ಮ ಕಾರ್ಯನಿರತರಾಗಿದ್ದು ವಿಪರೀತ ಕಾರ್ಯ ಬಾಹುಳ್ಯದ ನಡುವೆಯೂ ಪಂದ್ಯಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯವೆಂದರು. ಮಾಜಿ ತಾ. ಪಂ. ಸದಸ್ಯ ನವೀನ್ಚಂದ್ರ ಶೆಟ್ಟಿ, ಉದ್ಯಮಿ ದೀಪಕ್ ಕುಮಾರ್ ಎರ್ಮಾಳು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿದರು.
ಕಾಪು ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ನಝೀರ್ ಪೊಲ್ಯ, ತಾಲೂಕು ಸಂಘದ ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ, ಹೆಜಮಾಡಿ ಗ್ರಾ. ಪಂ. ಅಧ್ಯಕ್ಷೆ ರೇಶ್ಮಾ ಮೆಂಡನ್, ರಜತ ಸಂಭ್ರಮ ಸಮಿತಿಯ ಸಂಚಾಲಕ ಮೊಹಮ್ಮದ್ ಶರೀಫ್ ಕಾರ್ಕಳ, ಸಾಮಾಜಿಕ ಕಾರ್ಯಕರ್ತ ಶೇಖರ್ ಹೆಜಮಾಡಿ ಉಪಸ್ಥಿತರಿದ್ದರು. ಹರೀಶ್ ಹೆಜಮಾಡಿ ಸ್ವಾಗತಿಸಿದರು. ಕಾಪು ತಾಲೂಕು ಸಂಘದ ಕ್ರೀಡಾ ಸಂಚಾಲಕ ರಾಕೇಶ್ ಕುಂಜೂರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಸಂತೋಷ್ ಕಾಪು ವಂದಿಸಿದರು.
ಕಾಪು ಫ್ಲೈ ಓವರ್ ಅಂಡರ್ ಪಾಸ್ನಲ್ಲಿ ಕೊನೆಗೂ ಬೆಳಕು ಕಂಡ ಕಾಪು ಜನತೆ : ನಮ್ಮ ಕಾಪು ವರದಿ ಫಲಶ್ರುತಿ

Posted On: 05-03-2024 08:07PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ ಬೆಳಕು ಕಾಣದೇ ಒಂದುವರೆ ವರುಷ ಕಳೆದಿರುವ ಕಾಪು ಜನತೆ ಇದೀಗ ನಮ್ಮ ಕಾಪು ನ್ಯೂಸ್ ವರದಿ ಬಿತ್ತರಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಮಾಡಿರುತ್ತಾರೆ. ಸಾಮಾಜಿಕ ಕಾರ್ಯಕರ್ತ ಜಯರಾಮ್ ಆಚಾರ್ಯ ಈ ಬಗ್ಗೆ ಮಾಧ್ಯಮದ ಗಮನಕ್ಕೆ ತಂದಿದ್ದು, ಅಧಿಕಾರಿಗಳಿಗೆ ನಿರಂತರವಾಗಿ ಮೇಲ್ ಮೂಲಕ ಮನವಿಯನ್ನು ಸಲ್ಲಿಸುತ್ತಿದ್ದರು. ನಮ್ಮ ಕಾಪು ವರದಿಯ ನಂತರ ಟೋಲ್ ಮ್ಯಾನೇಜರ್ ತಿಮ್ಮಯ್ಯ ಎ. ಎಸ್ ಅವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಹಲೋಜೇನ್ ಲೈಟ್ ಅಳವಡಿಸುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಟೋಲ್ ಸಿಬ್ಬಂದಿಗಳು, ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಸೂಕ್ತ ಸ್ಪಂದನೆ ನೀಡಿರುವುದಕ್ಕೆ ಕಾಪು ಜನತೆಯ ಪರವಾಗಿ ಜಯರಾಮ್ ಆಚಾರ್ಯ ಅವರು ಅಭಿನಂದನೆ ಮತ್ತು ಧನ್ಯವಾದಗಳನ್ನು ತಿಳಿಸಿರುತ್ತಾರೆ.
ಉಡುಪಿ : ಅಧಿಕಾರಿಗಳ ವೈಫಲ್ಯದಿಂದ ಕಾಪುವಿನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಆಸಾಮಿ

Posted On: 04-03-2024 08:09PM
ಉಡುಪಿ : ಕಾಪು ಹೊಸ ಮಾರಿಗುಡಿ ಮುಂಭಾಗದ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ 3 ಹಲೊಜೆನ್ ಲೈಟ್ಗಳನ್ನು ಅಳವಡಿಸಿದ್ದರೂ, ಕಳೆದ 18 ತಿಂಗಳಿನಿಂದ ಬೆಳಕಿಲ್ಲದೆ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ಸ್ಥಳೀಯ ನಿವಾಸಿ ಜಯರಾಮ್ ಆಚಾರ್ಯ ಅವರು ಅಧಿಕಾರಿಗಳಿಗೆ Email ಮೂಲಕ ಮನವಿ ಕಳುಹಿಸಿದ್ದರೂ ಕೂಡಾ ಯಾವುದೇ ಪ್ರತಿಕ್ರಿಯೆ ದೊರೆತಿರಲಿಲ್ಲ, ನಮ್ಮ ಕಾಪು ನ್ಯೂಸ್ ಮೂಲಕ ಈ ವರದಿಯನ್ನು ಮಾಚ್೯ 1, ಶುಕ್ರವಾರದಂದು ಬಿತ್ತರಿಸಿದ್ದು, ಮರುದಿನ ಜಯರಾಮ್ ಆಚಾರ್ಯ ಅವರು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರನ್ನು ಮುಖತಃ ಭೇಟಿ ಮಾಡಿ ಮನವಿ ನೀಡಿದ್ದರು.
ಮಾಚ್೯ 2, ಶನಿವಾರ ರಾತ್ರಿ 08:30 ರ ಅಸುಪಾಸಿಗೆ ಈ ಭಾಗದಲ್ಲಿ ಸೇಲ್ಸ್ ಮ್ಯಾನ್ ಓರ್ವರು ನಡೆದುಕೊಂಡು ಹೋಗುತ್ತಿದ್ದಾಗ ಅವರ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಇದ್ದ ಪರ್ಸನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಇನ್ನಾದರೂ ಬೆಳಕಿನ ವ್ಯವಸ್ಥೆಯನ್ನು ಮಾಡುವರೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯರಾಮ್ ಆಚಾರ್ಯ ನಮ್ಮ ಕಾಪು ನ್ಯೂಸ್ ಮೂಲಕ ಅಗ್ರಹಿಸಿದ್ದಾರೆ.
ಮಾರ್ಚ್ 10 : ಸಮಾಜರತ್ನ. ಕೆ. ಲೀಲಾಧರ ಶೆಟ್ಟಿ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Posted On: 04-03-2024 04:42PM
ಕಾಪು : ಸಮಾಜರತ್ನ ಕೆ ಲೀಲಾಧರ ಶೆಟ್ಟಿ ಸ್ಮರಣಾರ್ಥ ಅವರ ಅಭಿಮಾನಿ ಬಳಗದ ವತಿಯಿಂದ, ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಇವರ ನೇತೃತ್ವದಲ್ಲಿ, ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಮಾರ್ಚ್ 10, ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2.30 ರವರೆಗೆ ಶಿರ್ವ ಕೊಲ್ಲಬೆಟ್ಟು ಸಂಘ ಮಿತ್ರ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮವು ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದ್ದು ,ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಶೈಲೇಶ್ ಹಾಗೂ ಬಳಗ ಉದ್ಯಾವರ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅಂದು ನಡೆಯುವ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆ

Posted On: 03-03-2024 03:24PM
ಉಡುಪಿ : ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಬಾಗಲಕೋಟೆ ಇದರ ವತಿಯಿಂದ ಮಾರ್ಚ್ 17ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು ನುಡಿ ಅದೇ ರೀತಿ ಸಮಾಜ ಸೇವಾ ವಿಭಾಗದಲ್ಲಿ ಕೊಡ ಮಾಡುವ ಹೆಮ್ಮೆಯ ಕನ್ನಡಿಗ ಯುವ ಪುರಸ್ಕಾರಕ್ಕೆ ಉಡುಪಿಯ ರಾಘವೇಂದ್ರ ಪ್ರಭು,ಕವಾ೯ಲು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ರಮೇಶ್ ಕಮತಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಪು : ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ - ಬೋಳ ಸದಾಶಿವ ಶೆಟ್ಟಿ

Posted On: 03-03-2024 02:28PM
ಕಾಪು : ಕಳೆದ 45 ವರ್ಷಗಳಿಂದ ಸಹಕಾರ ಭಾರತಿ ದೇಶಾದ್ಯಂತ ಸಂಘಟನಾತ್ಮಕವಾಗಿ 28 ರಾಜ್ಯಗಳ 650 ಕ್ಕಿಂತಲೂ ಹೆಚ್ಚಿನ ಜಿಲ್ಲೆಗಳಲ್ಲಿ ನಿರಂತರ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಸಕ್ರಿಯವಾದ ತಾಲೂಕು ಘಟಕಗಳ ಮೂಲಕ ಗ್ರಾಮೀಣ ಭಾಗದ ಎಲ್ಲಾ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ನಿರಂತರ ಸಂಪರ್ಕದ ಮೂಲಕ, ಸಹಕಾರಿ ಕ್ಷೇತ್ರದ ಬಲವರ್ಧನೆಗಾಗಿ ಕಾಯೋನ್ಮುಖವಾಗಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿ ತಿಳಿಸಿದರು. ಅವರು ಕಾಪು ಕೆವನ್ ಹೋಟೆಲ್ ಸಭಾಂಗಣದಲ್ಲಿ ಜರುಗಿದ ತಾಲೂಕು ಅಭ್ಯಾಸ ವರ್ಗದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟದ, ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಮಾತನಾಡಿ ಹೈನುಗಾರರು ಸೊಸೈಟಿಗಳಿಗೆ ಪೂರೈಸುವ ಹಾಲಿಗೆ ವೈಜ್ಞಾನಿಕ ದರ ನಿಗದಿ, ದುಬಾರಿಯಾಗುತ್ತಿರುವ ನಂದಿನಿ ಪಶು ಆಹಾರಕ್ಕೆ ಸಬ್ಸಿಡಿ, ಆರು ತಿಂಗಳಿನಿಂದ ಬಾಕಿ ಇರುವ ಹೈನುಗಾರರ ಸಬ್ಸಿಡಿ ಹಣದ ಬಿಡುಗಡೆ, ಪಶು ವೈದ್ಯರ ಕೊರತೆ ನೀಗಿಸಲು ಖಾಲಿ ಇರುವ ಹುದ್ದೆಗಳ ಭರ್ತಿ, ಹಾಲು ಉತ್ಪಾದಕ ಸಂಘಗಳನ್ನು ವಿವಿಧೋದ್ದೇಶ ಸಂಘಗಳಾಗಿ ಕಾರ್ಯನಿರ್ವಹಿಸಲು ಯೋಜನೆ, ಯಶಸ್ವಿ ಯೋಜನೆ ಅಡಿಯಲ್ಲಿ ಚಿಕಿತ್ಸೆ ಪಡೆಯಲು ಪ್ರಮುಖ ಖಾಸಗಿ ಆಸ್ಪತ್ರೆಗಳ ಸೇರ್ಪಡೆ ಮೊದಲಾದ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಹೈನುಗಾರರ ಪರವಾಗಿ ಮುಂದಿನ ದಿನಗಳಲ್ಲಿ ಆಂದೋಲನ, ಚಳವಳಿ ಹಾಗೂ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕಾಪು ತಾಲೂಕು ಸಹಕಾರ ಭಾರತೀಯ ಕೋಶಾಧ್ಯಕ್ಷರಾದ ಸುಧಾಮ ಶೆಟ್ಟಿ, ಮಲ್ಲಾರು ಅಧ್ಯಕ್ಷತೆ ವಹಿಸಿದ್ದರು. ಕಾಪು ತಾಲೂಕಿನ ಪ್ಯಾಕ್ಸ್, ಹಾಲು, ಸೌಹಾರ್ದ ಮತ್ತು ಮೀನುಗಾರಿಕಾ ಸೊಸೈಟಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪ್ಯಾಕ್ಸ್ ಪ್ರಕೋಷ್ಠದ ಸಂಚಾಲಕರಾದ ಕುತ್ಯಾರು ಪ್ರಸಾದ್ ಶೆಟ್ಟಿಯವರು ಸ್ವಾಗತಿಸಿದರು. ಅವರಾಲು ಹಾಲು ಉತ್ಪಾದಕರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಕಾರ ಭಾರತಿ ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಕೇಶವ ಮೋಯ್ಲಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮೂಡಬಿದ್ರೆಯ ಸಹಕಾರಿ ಆಡಳಿತ ಕಾಲೇಜಿನ ಉಪನ್ಯಾಸಕಿ ಬಿಂದು ಬಿ. ನಾಯರ್ ಸಹಕಾರಿ ವ್ಯವಸ್ಥಾಪನೆ ಎನ್ನುವ ವಿಚಾರದ ಬಗ್ಗೆ, ಸಹಕಾರ ಭಾರತಿ ಮೈಸೂರು ವಿಭಾಗದ ಸಂಘಟನಾ ಪ್ರಮುಖ ಮೋಹನ್ ಕುಮಾರ್ ಕುಂಬಳೇಕರ್ ಸಹಕಾರ ಭಾರತಿ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದರು.
ಉಚ್ಚಿಲ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟನೆ

Posted On: 03-03-2024 02:06PM
ಉಚ್ಚಿಲ : ನಮ್ಮ ದೇಶ, ರಾಜ್ಯಕ್ಕೆ ಹೋಲಿಸಿದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸಹಕಾರಿ ಚಳುವಳಿ ಯಶಸ್ವಿಯಾಗಿ ಮನ್ನಡೆಯುತ್ತಿದೆ. ಖಾಸಗಿ, ವಾಣಿಜ್ಯ ಬ್ಯಾಂಕುಗಳಲ್ಲಿ ವ್ಯವಹಾರ ತಪ್ಪಲ್ಲ. ನಮ್ಮ ಸಮಾಜ, ಗ್ರಾಹಕರ ಆರೋಗ್ಯದ ಬಗ್ಗೆ ಇವರು ಚಿಂತಿಸಿಲ್ಲ. ಇದು ಸಹಕಾರಿ ಕ್ಷೇತ್ರದ ಮೂಲಕ ಮಾತ್ರ ಸಾಧ್ಯವಾಗಿದೆ. ಸಹಕಾರಿ ಕ್ಷೇತ್ರ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕಾರ್ಯಗಳ ಜೊತೆಗೆ ಉಳಿತಾಯದ ಬಗ್ಗೆಯೂ ಜಾಗೃತಿ ಮೂಡಿಸುತ್ತಿದೆ. ಈ ನಿಟ್ಟಿನಲ್ಲಿ ಬೆಳಪು ವ್ಯವಸಾಯ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಿದ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಚ್ಚಿಲದ ಸೈಯ್ಯದ್ ಅರಬಿ ಜುಮ್ಮಾ ಮಸೀದಿ ಖತೀಬರಾದ ಜನಾಬ್| ಇಸ್ಹಾಕ್ ಫೈಝಿ ಹಾಗೂ ಉಚ್ಚಿಲ ಚರ್ಚ್ ಧರ್ಮಗುರುಗಳಾದ ರೆ|ಫಾ। ಜೋಸ್ವಿ ಫೆರ್ನಾಂಡೀಸ್ ಆಶೀರ್ವಚನ ನೀಡಿದರು. ಈ ಸಂದರ್ಭ ಪಡುಬಿದ್ರಿ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಉಚ್ಚಿಲ ರೋಟರಿ ಕ್ಲಬ್ ಅಧ್ಯಕ್ಷರಾದ ಯು.ಸಿ. ಶೇಖಬ್ಬ ಸಂದರ್ಭೋಚಿತವಾಗಿ ಮಾತನಾಡಿದರು. ಶಿಬಿರದ ಮುಖ್ಯ ವೈದ್ಯೆ ಡಾ. ಶ್ರೀಕೀರ್ತಿ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿದ್ದರು. ಬೆಳಪು ಸಿ.ಎ.ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೋಚನ, ಪ್ರಸಾದ್ ನೇತ್ರಾಲಯದ ಸಂಪರ್ಕಾಧಿಕಾರಿ ಹರ್ಷ, ಬೆಳಪು ಸಿ.ಎ. ಬ್ಯಾಂಕ್ ನಿರ್ದೇಶಕರುಗಳು, ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಪದಾಧಿಕಾರಿಗಳು, ಸಿಬ್ಬಂದಿ, ಪ್ರಸಾದ್ ನೇತ್ರಾಲಯದ ವೈದ್ಯರು ಉಪಸ್ಥಿತರಿದ್ದರು.
ಸುಮಾರು ನೂರಕ್ಕೂ ಮಿಕ್ಕಿ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದರು. ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಪ್ರಸ್ತಾವನೆಗೈದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.