Updated News From Kaup

ಬೆಳ್ತಂಗಡಿ : ಮಾಜಿ ಶಾಸಕ ವಸಂತ್ ಬಂಗೇರ ನಿಧನ

Posted On: 08-05-2024 06:53PM

ಬೆಳ್ತಂಗಡಿ : ಕಾಂಗ್ರೆಸ್ ಮುಖಂಡ, ಬಿಲ್ಲವ ಸಮಾಜದ ನಾಯಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ್ ಬಂಗೇರ ಇಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೇ 12: ನಿಖಿತಾ ಕುಲಾಲ್ ಸ್ಮರಣಾರ್ಥ ಉಚಿತ ನೋಟ್ ಬುಕ್ ವಿತರಣೆ

Posted On: 08-05-2024 06:28PM

ಕಾಪು : ನಿಖಿತಾ ಕುಲಾಲ್ ನೆನಪಿನಲ್ಲಿ ಅವರ ಮನೆಯವರು ಕೊಡಮಾಡುವ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಮೇ 12 ರಂದು ಕುತ್ಯಾರು ರಾಮೋಟ್ಟು ಬನತೋಡಿ ಗದ್ದೆಯಲ್ಲಿ ನಡೆಯಲಿದೆ ಎಂದು ಕುಲಾಲ ಸಂಘ (ರಿ.) ಕಾಪು ವಲಯ ಪ್ರಕಟಣೆಯಲ್ಲಿ ತಿಳಿಸಿರುವರು.

ಮೇ 11,14 : ಕುತ್ಯಾರು ಕಲ್ಯಾಣಿ ನಿಲಯ ಪಡುಮನೆಯಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ, ನೇಮೋತ್ಸವ

Posted On: 08-05-2024 06:25PM

ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಯಾಣಿ ನಿಲಯ ಪಡುಮನೆ ಇಲ್ಲಿ ಸೇವೆ ರೂಪದಲ್ಲಿ ಮೇ11ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಹಾಗೂ ಮೇ 14 ರಂದು ಹರಕೆಯ ನೇಮೋತ್ಸವ ನಡೆಯಲಿದೆ ಎಂದು ಪಡುಮನೆ ಕುತ್ಯಾರು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಟಪಾಡಿ ಸೃಷ್ಠಿ ಫೌಂಡೇಶನ್, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ವತಿಯಿಂದ ಸಹಾಯಧನ ವಿತರಣೆ

Posted On: 08-05-2024 06:22PM

ಕಟಪಾಡಿ : ಇಲ್ಲಿನ ಸೃಷ್ಠಿ ಫೌಂಡೇಶನ್ (ರಿ.) ಮತ್ತು ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಸಂಸ್ಥೆಯ ವತಿಯಿಂದ ಅಕಾಲಿಕವಾಗಿ ನಿಧನರಾದ ಪತ್ರಕರ್ತ ಡಾ.ಶೇಖರ್ ಅಜೆಕಾರ್ ಅವರ ಕುಟುಂಬಕ್ಕೆ ರೂ.20 ಸಾವಿರ ಸಹಾಯಧನವನ್ನು ಉಡುಪಿ ಜಗನ್ನಾಥ ಸಭಾ ಭವನದಲ್ಲಿ ವಿತರಿಸಲಾಯಿತು.

ಇನ್ನಂಜೆ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯ 46ನೇ ಭಜನಾ ಮಂಗಳೋತ್ಸವ ಸಂಪನ್ನ

Posted On: 08-05-2024 06:18PM

ಇನ್ನಂಜೆ : ಇಲ್ಲಿನ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯ 46ನೇ ಭಜನಾ ಮಂಗಳೋತ್ಸವವು ಸತ್ಯನಾರಾಯಣ ಪೂಜೆ, ಅನ್ನ ಸಂತರ್ಪಣೆ ಹಾಗೂ ವಿವಿಧ ಭಜನಾ ಮಂಡಳಿಯ ತಂಡದಿಂದ ಭಜನಾ ಕಾರ್ಯಕ್ರಮದೊಂದಿಗೆ ಸಂಪನ್ನಗೊಂಡಿತು.

ಕಾಪು : ದಂಡ ತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ನೀಲಾನಂದ ನಾಯ್ಕ್ ಅಧಿಕಾರ ಸ್ವೀಕಾರ

Posted On: 05-05-2024 09:56PM

ಕಾಪು : ಇಲ್ಲಿನ ಪ್ರತಿಷ್ಠಿತ ದಂಡ ತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ನೀಲಾನಂದ ನಾಯ್ಕ್ ಅಧಿಕಾರ ವಹಿಸಿಕೊಂಡಿದ್ದಾರೆ.

ಕಾಪು : ಕನ್ನಡ ಸಾಹಿತ್ಯ ಪರಿಷತ್ತು ಇದರ ೧೧೦ನೇ ಸಂಸ್ಥಾಪನಾ ದಿನಾಚರಣೆ

Posted On: 05-05-2024 09:26PM

ಕಾಪು : ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿಗಳ ಕೊಡುಗೆ ಅಪಾರ. ಪ್ರಾಕೃತಿಕ ಅನುಭವ, ಲೋಕಜ್ಞಾನ, ಅಧ್ಯಯನ ಜ್ಞಾನ, ಭಾಷಾ ಜ್ಞಾನ ಬೆಳೆದಾಗ ಸಾಹಿತ್ಯ ಸೃಷ್ಟಿಗೆ ಬೇಕಾದ ಮನೋಸ್ಥಿತಿ ನಿರ್ಮಾಣ ಆಗುತ್ತದೆ. ಆಂಗ್ಲ ಮಾಧ್ಯಮದ ಪ್ರಭಾವದಿಂದ ಕನ್ನಡ ಭಾಷಾಭಿಮಾನ ಕುಂಠಿತಗೊಳ್ಳುತ್ತಿದೆ. ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ಹಿರಿಯ ವಿದ್ವಾಂಸರಾದ ವೇದಮೂರ್ತಿ ಅಶೋಕ ಆಚಾರ್ಯ ಕಲ್ಯಾ ಅಭಿಪ್ರಾಯಪಟ್ಟರು. ಅವರು ರವಿವಾರ ಕಾಪು ರೋಟರಿ ಶತಾಬ್ದಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇದರ "೧೧೦ನೇ ಸಂಸ್ಥಾಪನಾ ದಿನಾಚರಣೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಾದೂರು : ವೈದ್ಯಕೀಯ ತಪಾಸಣಾ ಶಿಬಿರ

Posted On: 05-05-2024 09:03PM

ಪಾದೂರು : ಸಿ.ಎಸ್.ಐ ಇಮಾನ್ಯೂಲ್ ಚಚ್೯ ಪಾದೂರು ಕಾಪು, ಮಿಷನ್ ಆಸ್ಪತ್ರೆ, ಜಯಂಟ್ಸ್ ಗ್ರೂಪ್ ,ವೈದ್ಯಕೀಯ ಪ್ರತಿನಿಧಿಗಳ ಸಂಘ ಮತ್ತು ಗಿರಿಜಾ ಸಜಿ೯ಕಲ್ ಮತ್ತು ಐ ನೀಡ್ಸ್ ಅಪ್ಟಿಕಲ್ ವತಿಯಿಂದ ಪಾದೂರು ಯು.ಬಿ.ಎಂ ಶಾಲಾ ವಠಾರದಲ್ಲಿ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಪಡುಬಿದ್ರಿ : ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Posted On: 05-05-2024 01:04PM

ಪಡುಬಿದ್ರಿ : ಶಿಬಿರಗಳು ವ್ಯಕಿತ್ವ ನಿರ್ಮಾಣ, ನಾಯಕತ್ವ ಗುಣ, ಸ್ನೇಹ ವಲಯ ಹಾಗು ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ, ಆತ್ಮ ವಿಶ್ವಾಸ ವೃದ್ಧಿ ಇಂತಹ ಗುಣಗಳು ಮಕ್ಕಳಲ್ಲಿ ಬೆಳೆಯಲು ಸಹಕಾರಿ ಅಗುತ್ತದೆ. ಕ್ರಿಯಾಶೀಲತೆಯಿಂದ ಕೂಡಿರಲು ಹಾಗು ಅವರ ಪ್ರತಿಭೆಯು ಹೊರಹೊಮ್ಮಲು ಮಕ್ಕಳಿಗೆ ಶಿಬಿರವು ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಜೆಸಿಐ ಇಂಡಿಯಾ ವಲಯ ತರಬೇತುದಾರೆ ರೇಶ್ಮಾ ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ರವಿವಾರ ಪಡುಬಿದ್ರಿ ಓಂಕಾರ ಕಲಾ ಸಂಗಮದ‌ ವತಿಯಿಂದ ‌ಸತತ ಮೂರನೇ ಬಾರಿ ನಡೆಯುವ ಹದಿನೈದು ದಿನಗಳ ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಸಿ ಮಾತನಾಡಿದರು.

ಕಾಪು : ಎರಡು ವರ್ಷಕ್ಕೊಮ್ಮೆ ನಡೆಯುವ ಪಿಲಿ ಕೋಲಕ್ಕೆ ಚಾಲನೆ

Posted On: 04-05-2024 04:24PM

ಕಾಪು : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಇಂದು ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಹತ್ತಿರದ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತ್ತದೆ. ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. ಹುಲಿವೇಷದ ಬಣ್ಣಗಾರಿಕೆಯೊಂದಿಗೆ ವಿಚಿತ್ರವಾಗಿ ಹುಲಿಯಂತೆ ಆರ್ಭಟಿಸುತ್ತ ಒಲಿಗುಂಡದಿಂದ ವೇಷಧಾರಿ ವೈಭವದಿಂದ ಹೊರಬರುವ ಮೂಲಕ ಪಿಲಿಕೋಲಕ್ಕೆ ಚಾಲನೆ ದೊರೆಯುತ್ತದೆ. ಹುಲಿ ಬೇಟೆಯ ಜೊತೆಗೆ ಗ್ರಾಮ ಸಂಚಾರಕ್ಕೆ ಹೊರಟು ಹಳೆ ಮಾರಿಗುಡಿ ಮುಂಭಾಗದ ಬಾಳೆಯ ಗರುಡ- ಗಂಬವನ್ನು ಮುರಿಯುವ ಹುಲಿ ವೇಷಧಾರಿ, ಜೀವಂತ ಕೋಳಿಯ ರಕ್ತ ಹೀರುವ ಸನ್ನಿವೇಶ ಮೈ ಜುಮ್ಮೆನಿಸುತ್ತದೆ. ಈ ಸಮಯದಲ್ಲಿ ಹುಲಿಯ ಅರ್ಭಟ, ಹಾರಾಟ ಮೈನವಿರೇಳಿಸುತ್ತದೆ.