Updated News From Kaup

ಕಾಪು : ಚಂದ್ರಯಾನ - 3 ಯಶಸ್ಸಿಗೆ ನವಗ್ರಹ ಯಾಗ, ಪುರಸ್ಸರ ಚಂದ್ರಶಾಂತಿ

Posted On: 23-08-2023 07:55PM

ಕಾಪು : ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ - 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ಬುಧವಾರ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು.

ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ ನವಗ್ರಹ ಯಾಗ, ಚಂದ್ರಶಾಂತಿ ನಡೆಯಿತು.

ಕಾಪು : ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ

Posted On: 23-08-2023 07:22PM

ಕಾಪು : ತಾಲೂಕಿನ ಶಿರ್ವ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು 14 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸವಿತಾ ಪೂಜಾರಿ 20 ಮತ ಮತ್ತು ಆಶಾ ಆಚಾರ್ಯ 14 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ವಿಲ್ಸನ್‌ ರೊಡ್ರಿಗಸ್‌ 19 ಮತ ಗಳಿಸಿದ್ದು ಬಿಜೆಪಿ ಬೆಂಬಲಿತ ರಾಜೇಶ್‌ ಶೆಟ್ಟಿ 15 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಒಂದು ಅಡ್ಡ ಮತದಾನವಾಗಿದೆ.

ಉಡುಪಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಕೆ. ಪಿ.ಗಿರೀಶ್‌ ಚುನಾವಣಾಧಿಕಾರಿಯಾಗಿದ್ದರು.

ಮುದರಂಗಡಿ ಗ್ರಾಮಪಂಚಾಯತ್ ಅಧ್ಯಕ್ಷರಾಗಿ ನಮಿತಾ, ಉಪಾಧ್ಯಕ್ಷರಾಗಿ ಮೋಹಿನಿ ಸಿ ಹೆಗ್ಡೆ ಅವಿರೋಧ ಆಯ್ಕೆ

Posted On: 23-08-2023 07:14PM

ಮದರಂಗಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗಾಗಿ ಬುಧವಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಅಧಿಕಾರಿ ಗುರುಪ್ರಸಾದ್ ಕಾರ್ಯನಿರ್ವಹಿಸಿದರು.

ಮುದರಂಗಡಿಯಲ್ಲಿ 15 ಸದಸ್ಯರ ಬೆಂಬಲ ಇದ್ದು, 10 ಬಿಜೆಪಿ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ . ಅಧ್ಯಕ್ಷ ಸ್ಥಾನವು ಅನುಸೂಚಿತ ಮಹಿಳೆಗೆ ನಿಗದಿತವಾಗಿದ್ದರಿಂದ ಬಿಜೆಪಿಯಲ್ಲಿ ಅನುಸೂಚಿತ ಮಹಿಳೆ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತೆಗೆ ಒಲಿದಿದೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮೈಕಲ್ ರಮೇಶ್ ಡಿ ಸೋಜಾ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತಿತರರು ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.

ಉಡುಪಿ : ಆರ್.ಎಸ್.ಬಿ ಸಮಾಜದಿಂದ ಚಾತುಮಾ೯ಸ್ಯದಲ್ಲಿರುವ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ

Posted On: 22-08-2023 08:36PM

ಉಡುಪಿ : ಗೋವಾ ಬಾಂಧಿವಾಡೆ ಶ್ರೀ ಮಹಾಲಕ್ಮೀ ದೇವಾಲಯದಲ್ಲಿ ಚಾತುಮಾ೯ಸ್ಯ ಕೈಗೊಂಡಿರುವ ಕೈವಲ್ಯ ಗೌಡಪಾದಚಾಯ೯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ ಮತ್ತು ಕುಲದೇವಾಲಯ ಸಂದಶ೯ನ ಆರ್.ಎಸ್.ಬಿ ಸಮಾಜದ ವತಿಯಿಂದ ಆ.20 ಆದಿತ್ಯವಾರ ನಡೆಯಿತು.

ಈ ಸಂದಭ೯ದಲ್ಲಿ ಸ್ವಾಮೀಜಿಯವರನ್ನು ವಿಶೇಷವಾಗಿ ಗೌರವಿಸಲಾಯಿತು. ನೂರಾರು ಜನ ಸದಸ್ಯರು ಭಾಗವಹಿಸಿದ್ದರು.

ಶಿರ್ವ : ಹಿಂದೂ ಜೂನಿಯರ್ ಕಾಲೇಜು - ವಿದ್ಯಾರ್ಥಿಗಳ ದತ್ತು ಸ್ವೀಕಾರ ; ವಿದ್ಯಾರ್ಥಿ ವೇತನ ಕಾರ್ಯಕ್ರಮ

Posted On: 22-08-2023 08:29PM

ಶಿರ್ವ : ಸ್ಥಳೀಯ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳ ದತ್ತು ಸ್ವೀಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜರಗಿತು.

ಹಿಂದೂ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮಾನಂದ್ ಶೆಟ್ಟಿಗಾರ್ ಇವರು ವಹಿಸಿದ್ದರು. ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ.ವಿ ಸುಬ್ಬಯ್ಯ ಹೆಗ್ಡೆಯವರು ದೀಪ ಪ್ರಜ್ವಲನ ಮಾಡಿದರು. ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಇನ್ನಾ ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ 2 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವೂ ಸೇರಿದಂತೆ ಕಾಲೇಜಿನಲ್ಲಿ ನಡೆಯುವ ಕ್ರೀಡಾಕೂಟ, ವಾರ್ಷಿಕೋತ್ಸವ, ನಿರ್ವಹಣಾ ಕೆಲಸಗಳಿಗೆ, ಹೀಗೆ ಒಟ್ಟು ರೂಪಾಯಿ 4 ಲಕ್ಷ ದ ಕೊಡುಗೆಗಳನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಉಪಾನ್ಯಾಸಕರಾದ ವಿಷ್ಣು ಭಟ್ ದಂಪತಿಗಳನ್ನು ಹಾಗೂ ಕಳೆದ ಬಾರಿ ದ್ವಿತೀಯ ಪಿ.ಯು.ಸಿ ವಾಣಿಜ್ಯ ಪರೀಕ್ಷೆಯಲ್ಲಿ ರಾಜ್ಯಕ್ಕೆ 4 ನೇ ರಾಂಕನ್ನು ಗಳಿಸಿದ ಕುಮಾರಿ ಅಂಶಿ.ಎಸ್. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಂಬೈ ಸಮಿತಿಯ ಗೌರವ ಸಲಹೆಗಾರರಾದ ಕುತ್ಯಾರು ಕಿಶೋರ್ ಶೆಟ್ಟಿ, ಮುಂಬೈ ಸಮಿತಿಯ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಸೊರ್ಕಳ, ಉಪಾಧ್ಯಕ್ಷರಾದ ಕೋಡು ಜಯಪ್ರಕಾಶ್ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಭಾಸ್ಕರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ ಬಾಯಿ ಹಾಗೂ ಕೋಶಾಧಿಕಾರಿ ಉಮೇಶ್ ಆಚಾರ್ಯ ಉಪಸ್ಥಿತರಿದ್ದರು. ನಿಕಟಪೂರ್ವ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕೇಂಜ ಪವನ್ ಶೆಟ್ಟಿ ವಂದಿಸಿದರು.

ಆಗಸ್ಟ್ ‌25 : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ - 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Posted On: 22-08-2023 07:43PM

ಶಿರ್ವ : ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ವತಿಯಿಂದ ಆಗಸ್ಟ್ 25, ಶುಕ್ರವಾರ ಗಾಂಧಿನಗರ ಕಲಾವೃಂದದ ವೇದಿಕೆಯಲ್ಲಿ 10ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಲಿದೆ.

ಈ ನಿಮಿತ್ತ ಬೆಳಗ್ಗೆ ಗಂಟೆ 9 ಕ್ಕೆ ಸಾಮೂಹಿಕ ಪ್ರಾರ್ಥನೆ, ಗಂಟೆ 9.30ಕ್ಕೆ ಕಲಶ ಪ್ರತಿಷ್ಠೆ, ಗಂಟೆ 10ಕ್ಕೆ ಚೂಡಿ ಪೂಜೆ, ಗಂಟೆ 10.15ಕ್ಕೆ ಕುಂಕುಮಾರ್ಚನೆ, ಗಂಟೆ 11.45ಕ್ಕೆ ಭಜನಾ ಕಾರ್ಯಕ್ರಮ, ಗಂಟೆ 12.30ಕ್ಕೆ ಮಂಗಳಾರತಿ ಮಹಾಪೂಜೆ, ಗಂಟೆ 1ಕ್ಕೆ ಅನ್ನಸಂತರ್ಪಣೆ ಜರಗಲಿದೆ ಎಂದು ಶ್ರೀ ವಿಷ್ಣು ಕಲಾವೃಂದ ಗಾಂಧಿನಗರ, ಶಿರ್ವ ಇದರ ಅಧ್ಯಕ್ಷರು ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.

ಕಟಪಾಡಿ ಗ್ರಾಮ ಪಂಚಾಯತ್‌ : ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ

Posted On: 22-08-2023 07:22PM

ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತಿಯ ಎರಡನೇ ಸಾಲಿನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ ಬೆಂಬಲಿತ ಪ್ರಭಾ ಶೆಟ್ಟಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ ಆಗಿದ್ದಾರೆ.

ಕಟಪಾಡಿ ಗ್ರಾಮ ಪಂಚಾಯತಿಯಲ್ಲಿ 26 ಸದಸ್ಯರ ಬಲವಿದ್ದು, ಬಿಜೆಪಿ ಬೆಂಬಲಿತರಾಗಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಅಶೋಕ್‌ ರಾವ್‌ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತೆ ಕವಿತಾ ಸುವರ್ಣ ಸ್ಫರ್ಧಿಸಿದ್ದರು. 14 ಮತಗಳನ್ನು ಪಡೆದ ಪ್ರಭಾ ಶೆಟ್ಟಿ ವಿಜಯಿ ಆಗಿದ್ದಾರೆ. ಅಶೋಕ್‌ ರಾವ್‌ ಮತ್ತು ಕವಿತಾ ಸುವರ್ಣ 12 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.

ಗೆಲುವು ಸಾಧಿಸಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಆಶಾ ಕಟಪಾಡಿ, ವಿನಯ ಬಳ್ಳಾಲ್‌, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.

ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸಮಾರಿಗುಡಿ ದೇವಳದ ಕರಸೇವೆಯಲ್ಲಿ ಇನ್ನಂಜೆ ಗ್ರಾಮಸ್ಥರು

Posted On: 22-08-2023 11:33AM

ಕಾಪು : ಪ್ರಥಮ ಹಂತದಲ್ಲಿ ಸುಮಾರು 30ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಳದಲ್ಲಿ ಈಗಾಗಲೇ ಕರಸೇವೆಯನ್ನು ಮಾಡಿರುವ ಇನ್ನಂಜೆ ಗ್ರಾಮಸ್ಥರು ದೇವಳದ ಪ್ರದಕ್ಷಿಣಾ ಪಥದ ಸುತ್ತಲೂ ಸ್ವಚ್ಛತೆಯನ್ನು ಮಾಡುವ ಮೂಲಕ ಕರಸೇವೆಯನ್ನು ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷರಾದ ಸದಾಶಿವ ಪೂಜಾರಿ ಮಜಲು, ಶ್ರೀದೇವಿ ಭಜನಾ ಮಂಡಳಿಯ ಅಧ್ಯಕ್ಷರಾದ ಕೆ. ಲಕ್ಷ್ಮಣ ಶೆಟ್ಟಿ ಮಂಡೇಡಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಮಲತಾ ಮತ್ತು ಯುವಸೇನೆ ಮಡುಂಬು ತಂಡದ ಅಧ್ಯಕ್ಷರಾದ ಸುನಿಲ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ : ಜಿಲ್ಲಾ ಲಯನ್ಸ್ 317C ಸಂಪುಟ - ಪದಪ್ರದಾನ 'ಬೆಳಕು' ಸಮಾರಂಭ ಸಂಪನ್ನ

Posted On: 21-08-2023 08:37PM

ಉಡುಪಿ : ಜಿಲ್ಲಾ ಲಯನ್ಸ್ 317C ಸಂಪುಟ - ಪದಪ್ರದಾನ 'ಬೆಳಕು' ಸಮಾರಂಭ ಶನಿವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ನಡೆಯಿತು. ಹಿಂದಿನ ಅಂತಾರಾಷ್ಟ್ರೀಯ ನಿರ್ದೇಶಕ ಕೆ.ಜಿ. ರಾಮಕೃಷ್ಣಮೂರ್ತಿ ನೂತನ ಸಂಪುಟ ಪದಪ್ರದಾನ ನೆರವೇರಿಸಿದರು. ಲಯನ್ಸ್ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಥಮ ಮಹಿಳೆ ಓಫಿಲಿಯಾ ಫಿಲೋಮಿನಾ ಕರ್ನೆಲಿಯೋ ಬೆಳಕು ಪದ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದರು. ಉಡುಪಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರು ಆಶೀರ್ವಚನ ನೀಡಿ, ಡಾ| ನೇರಿ ಕರ್ನೇಲಿಯೊ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗಾಗಿ ತೊಡಗಿಸಿಕೊಂಡವರು. ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಕ್ಷೇತ್ರವೇ ಅಡಿಪಾಯವಾಗಿದೆ. ದೂರದೃಷ್ಟಿ ಯೋಜನೆಗಳ ಮೂಲಕ ಅಸಂಖ್ಯಾತ ಜೀವನವನ್ನು ಬೆಳಗಿಸಿದ್ದಾರೆ. ಉತ್ತಮ ನಾಯಕತ್ವ ಸಂಘಟನಾತ್ಮಕ ದೃಷ್ಟಿಕೋನ ಹೊಂದಿರುವ ಅವರಿಂದ ಲಯನ್ ಅಧಿಕಾರಾವಧಿಯಲ್ಲಿ ಸಮಾಜಕ್ಕೆ ಇನ್ನಷ್ಟು ಬೆಳಕು ಸಿಗುವಂತಾಗಲಿ ಎಂದು ಹಾರೈಸಿದರು.

ಲಯನ್ಸ್ ಗವರ್ನರ್ ಡಾ| ನೇರಿ ಕರ್ನೇಲಿಯೋ ಅವರು ಮಾತನಾಡಿ, ಲಯನ್ಸ್ 317ಸಿ ಉತ್ತಮ ಸೇವಾ ಕಾರ್ಯದ ಮೂಲಕ ಮಾದರಿ ಯಾಗಿದೆ. ಶಿಕ್ಷಣ, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿ ಸಾಕಷ್ಟು ಯೋಜನೆಗಳನ್ನು ರೂಪಿಸುವ ಜತೆಗೆ ಸೇವಾ ಮತ್ತು ಸಮಾಜಮುಖಿ ಚಟುವಟಿಕೆ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಲಾಗುವುದು ಎಂದರು. ಸೇವಾ ಚಟುವಟಿಕೆಯಾಗಿ ಹಿಂದಿನ ಜಿಲ್ಲಾ ಗವರ್ನರ್ ಜಿ. ಶ್ರೀನಿವಾಸ್ ಪ್ರಾಯೋಜಕತ್ವದಲ್ಲಿ ಜಿಲ್ಲೆಯ 10 ಶಾಲೆಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ಕಾರವಾರ ಡಿವೈಎಸ್ಪಿ ವೆಲೆಂಟೈನ್ ಡಿ'ಸೋಜಾ ಅವರನ್ನು ಸಮ್ಮಾನಿಸಲಾಯಿತು.

ಲಯನ್ಸ್ ಮಾಜಿ ನಿರ್ದೇಶಕ ಕೆ. ವಂಶಿಧರ್ ಬಾಬು, ಮಲ್ಟಿಪಲ್ ಚೇರ್‌ಪರ್ಸನ್ ರಾಜಶೇಖರಯ್ಯ, ಲಯನ್ಸ್ ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ| ಎಂ. ಕೆ. ಭಟ್, ದ್ವಿತೀಯ ಉಪ ಜಿಲ್ಲಾ ಗವರ್ನರ್ ಸಪ್ಪಾ ಸುರೇಶ್, ಲಯನ್ಸ್ ಕ್ಲಬ್ ಪ್ರಮುಖರಾದ ಪ್ರಕಾಶ್ ಟಿ. ಸೋನ್ಸ್, ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಡಾ| ತಲ್ಲೂರು ಶಿವರಾಮ ಶೆಟ್ಟಿ, ಎನ್. ಎಂ. ಹೆಗಡೆ, ರವಿರಾಜ್ ನಾಯಕ್, ರಿಚರ್ಡ್ ಡಯಾಸ್, ಆದಿತ್ಯ ಆರ್. ಶೇಟ್, ಜೆರಾಲ್ಡ್ ಫೆರ್ನಾಂಡಿಸ್, ಹರಿಪ್ರಸಾದ್ ರೈ, ಮೆಲ್ವಿನ್ ಅರಾನ್ನ, ಜಾರ್ಜ್ ಡಿ'ಸೋಜಾ, ಆಲ್ಡನ್ ಕರ್ನೇಲಿಯೊ ಉಪಸ್ಥಿತರಿದ್ದರು. ಸುಗುಣಾ ಕುಮಾ‌ ಸ್ವಾಗತಿಸಿ, ಉಮೇಶ್ ನಾಯಕ್ ವಂದಿಸಿ, ಡಾ| ಜಗದೀಶ ಹೊಳ್ಳ ನಿಹಾಲ್ ಹೆಗ್ಡೆ ನಿರೂಪಿಸಿದರು.

ಕಟಪಾಡಿ‌ : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನ - ವಿಶ್ವಕರ್ಮ ಧ್ವಜದ ಬಗ್ಗೆ ಚಿಂತನಾ ಸಭೆ

Posted On: 21-08-2023 04:52PM

ಕಟಪಾಡಿ : ವಿಶ್ವ ಬ್ರಾಹ್ಮಣ ಸಮಾಜದ ಸಂಸ್ಕೃತಿಯ, ಸಂಘಟನೆಯ, ಐಕ್ಯತೆಯ ದ್ಯೋತಕವಾಗಿರುವ ವಿಶ್ವಕರ್ಮ ಧ್ವಜದ ಬಣ್ಣ, ಪ್ರಮಾಣ, ಆಕಾರ, ಲಾಂಛನ, ವಿನ್ಯಾಸದ ಬಗ್ಗೆ ಸಮಾಜದ ಸಂಘಟನೆಗಳಲ್ಲಿ, ಸಮಾಜದ ಸದಸ್ಯರಲ್ಲಿ ಒಮ್ಮತ ಅಭಿಪ್ರಾಯ ಮೂಡಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮಹಾಸಂಸ್ಥಾನದ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನವು ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಸಮಾಜದ ದೇವಸ್ಥಾನಗಳ ಧರ್ಮದರ್ಶಿಗಳು, ಸಂಘಟನೆಗಳ ಪ್ರಮುಖರು, ವೈದಿಕ ಮುಖಂಡರು, ಸಮಾಜದ ಗಣ್ಯರು ಪ್ರಮುಖರ ಪಾಲ್ಗೊಳ್ಳುವಿಕೆಯೊಂದಿಗೆ ಆಗಸ್ಟ್ 20 ರಂದು ಪ್ರಥಮ ಚಿಂತನಾ ಸಭೆ ನಡೆಯಿತು.

ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸರಾದ ವೇ.ಬ್ರ. ಶ್ರೀ ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಇವರು ವಿಶ್ವಕರ್ಮ ಧ್ವಜದ ಬಗ್ಗೆ ಪುರಾಣ ಹಿನ್ನೆಲೆ ಸೇರಿದಂತೆ ವಿವಿಧ ದಾಖಲೆಗಳೊಂದಿಗೆ ವಿಷಯವನ್ನು ಮಂಡಿಸಿದರು.

ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಬಿ ಎಂ ಯದುನಂದನ ಆಚಾರ್ಯ, ಮಧೂರು ಶ್ರೀ ಕಾಳಿಕಾಂಬಾ ಮಠದ ಅಧ್ಯಕ್ಷ ನ್ಯಾಯವಾದಿ ಕೆ.ಪ್ರಭಾಕರ ಆಚಾರ್ಯ ಕೋಟೆಕಾರು, ಆರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಜನಾರ್ದನ ಆಚಾರ್ಯ ಆರಿಕ್ಕಾಡಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ್ ಹಳೆಯಂಗಡಿ, ಕಾಟುಕುಕ್ಕೆ ವಾಸುದೇವ ಆಚಾರ್ಯ ಕುಂಬಳೆ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ಪುರುಷೋತ್ತಮ ಆಚಾರ್ಯ ಪುತ್ತೂರು,ಅಶೋಕ ಆಚಾರ್ಯ ಪ್ರತಾಪ ನಗರ, ಪೋಳ್ಯ ಉಮೇಶ ಆಚಾರ್ಯ ಪುತ್ತೂರು,ಪುರುಷೋತ್ತಮ ಆಚಾರ್ಯ ಪುತ್ತೂರು,ಕೋಟ ಗಣೇಶ ಆಚಾರ್ಯ, ನಿತ್ಯಾನಂದ ಆಚಾರ್ಯ ಬಂಗ್ರಮಂಜೇಶ್ವರ, ರೂಪೇಶ್ ಆಚಾರ್ಯ ಶಿರ್ವ, ಹಿತೇಶ್ ಆಚಾರ್ಯಾ ಬಂಗ್ರ ಮಂಗೇಶ್ವರ ಪೆರ್ಣೆ ಮಧುಸೂದನ ಆಚಾರ್ಯ ಕಾಸರಗೋಡು, ಗುರುನಾಥ ಆಚಾರ್ಯ ಹುಬ್ಬಳ್ಳಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಲೋಲಾಕ್ಷ ಶರ್ಮ ಪಡುಕುತ್ಯಾರು, ಮೌನೇಶ ಶರ್ಮ ಪಡುಕುತ್ಯಾರು ಇವರು ಅಭಿಪ್ರಾಯ ಮಂಡಿಸಿದರು.

ಸಂಚಾಲಕರಾದ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು.