Updated News From Kaup

ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ - ಜಿಲ್ಲಾಧಿಕಾರಿಗೆ ಮನವಿ

Posted On: 13-02-2024 06:53PM

ಉಡುಪಿ : ಪರಿಸ್ಥಿತಿಯ ಒತ್ತಡಕ್ಕೆ ಅಥವಾ ವಿವಿಧ ಕಾರಣಗಳಿಗಾಗಿ ತಪ್ಪು ಮಾಡಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಸಕಾ೯ರಿ ಜುಲ್ಮಾನೆ ಕಟ್ಟಲು ಸಾಧ್ಯವಿಲ್ಲದೆ ಜೀವನ ಪೂತಿ೯ ಜೈಲಿನಲ್ಲಿ ಯಾತನೆ ಅನುಭವಿಸುವವರು ಬಹಳಷ್ಟು ಮಂದಿ ಇದ್ದು ಇವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅನುವು ಮಾಡಬೇಕೆಂದು ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಜಿಲ್ಲಾಧಿಕಾರಿ ಡಾI ವಿದ್ಯಾ ಕುಮಾರಿಯವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಕಾರ್ಕಳ : ಜೆ.ಇ.ಇ ಮೈನ್ಸ್‌ ಫಲಿತಾಂಶ ಪ್ರಕಟ - ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ

Posted On: 13-02-2024 06:51PM

ಕಾರ್ಕಳ : ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್‌ ವಿಭಾಗಕ್ಕೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್‌ ಟೆಸ್ಟಿಂಗ್‌ ಏಜೆನ್ಸಿ ನಡೆಸುವ ಜೆ.ಇ.ಇ ಮೈನ್ಸ್‌ ನ ಮೊದಲ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್‌ ಕಾಲೇಜಿನ 26 ವಿದ್ಯಾರ್ಥಿಗಳು 95 ಪರ್ಸಂಟೈಲ್‌ ಗಿಂತ ಅಧಿಕ ಅಂಕಗಳಿಸಿದ್ದಾರೆ 81 ವಿದ್ಯಾರ್ಥಿಗಳು 90 ಪರ್ಸಂಟೈಲ್‌ ಗಿಂತ ಅಧಿಕ ಅಂಕ ಗಳಿಸಿದ್ದಾರೆ.

ಉಡುಪಿ : ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೋತ್ಸವ ಸಂಪನ್ನ

Posted On: 13-02-2024 05:10PM

ಉಡುಪಿ : ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೋತ್ಸವವನ್ನು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಮಹತ್ವದ್ದು, ಗ್ರಾಮದ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇದೆ ಎಂದು ವೇದಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ

Posted On: 13-02-2024 03:32PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು 2023-24ನೇ ಸಾಲಿನಿಂದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಗಳು ಪ್ರಾರಂಭವಾಗಿದ್ದು ಅದರ ಉದ್ಘಾಟನೆಯನ್ನು ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಕಾಲೇಜಿನ ಆವರಣದಲ್ಲಿ ಮಾಡಿದರು. ಈ ಸಂದರ್ಭ ಮಾತನಾಡಿದ ಶ್ರೀಗಳು ವಿದ್ಯಾಸಂಸ್ಥೆಯಲ್ಲಿ ಎಂಬಿಎ ತರಗತಿಗಳನ್ನು ಪ್ರಾರಂಭಿಸಿದ್ದಕ್ಕೆ ಅತೀವ ಹರ್ಷ ವ್ಯಕ್ತಪಡಿಸಿ, ಸೋದೆ ಮಠದ ಶ್ರೀ ವಾದಿರಾಜ ಸ್ವಾಮೀಜಿಯವರು ಉಡುಪಿಯಲ್ಲಿ ಅಷ್ಟಮಠ ವ್ಯವಸ್ಥೆಯನ್ನು 16ನೇ ಶತಮಾನದಲ್ಲಿಯೇ ರೂಪಿಸಿ, ಈಗಿನ ನಿರ್ವಹಣಾಶಾಸ್ತ್ರದ ಪರಿಣಿತರಿಗೆ ಮಾದರಿಯಾಗಿದ್ದಾರೆ. ತತ್ವಶಾಸ್ತ್ರವನ್ನು ಶಿಕ್ಷಣದಲ್ಲಿ ಅಳವಡಿಸಿದಾಗ ಮಾತ್ರ ಉತ್ತಮ ಆವಿಷ್ಕಾರಗಳು ಹೊರಬರಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಇಂದಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ದೇಶದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀಗಳು ಎಂಬಿಎ ಕೋರ್ಸ್‌ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಫೆಬ್ರವರಿ 20 : ಕವಿ ಸರ್ವಜ್ಞ ಜಯಂತಿ ಆಚರಣೆ

Posted On: 12-02-2024 10:35PM

ಉಡುಪಿ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಇವರ ಆಯೋಜನೆಯಲ್ಲಿ ಉಡುಪಿಯ ಅಜ್ಜರಕಾಡು ಪಿ. ಜಿ. ಎ.ವಿ ಹಾಲ್ ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ಕಾಲೇಜು ಇಲ್ಲಿ ಫೆಬ್ರವರಿ 20 ರಂದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಕುಲಾಲ ಸಂಘಗಳ ಪ್ರಮುಖರ ಸಮ್ಮುಖದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕುಲಾಲ ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿರುವರು.

ಓಮನ್ ಬಿಲ್ಲವಾಸ್ - ಕ್ರೀಡಾಮಹೋತ್ಸವ 2024 ಸಂಪನ್ನ

Posted On: 12-02-2024 06:52PM

ಮಸ್ಕತ್ : ಇಲ್ಲಿನ ಓಮನ್ ಬಿಲ್ಲವಾಸ್ ಸಂಘಟನೆಯಿಂದ ಒಂದು ದಿನದ ಹೊನಲು ಬೆಳಕಿನ ಕ್ರೀಡಾಕೂಟ ಸಂಘದ ಅಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಳ ಇವರ ನೇತೃತ್ವದಲ್ಲಿ ಶುಕ್ರವಾರ ಮಸ್ಕತ್ತಿನ ಅಲ್ ಹೈಲ್ ಕ್ರಿಕೆಟ್ ಮೈದಾನದಲ್ಲಿ ಜರಗಿತು. ಸಂಘಟನೆಯ ಸ್ಥಾಪಕ ಅಧ್ಯಕ್ಷ ದಿವಂಗತ ಪಿ. ಬಿ. ಅಳಕೆ ಇವರ ಸ್ಮರಣಾರ್ಥ ಪುರುಷರಿಗೆ ಕ್ರಿಕೆಟ್, ಮಹಿಳೆಯರಿಗೆ ಕ್ರಿಕೆಟ್ ಮತ್ತು ತ್ರೋಬಾಲ್. ಮಕ್ಕಳಿಗೆ, ಹಿರಿಯರಿಗೆ ವಿವಿದ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಪುರುಷರ ೮ ತಂಡಗಳು ಹಾಗೂ ಮಹಿಳೆಯರ ೪ ತಂಡಗಳು ಪ್ರಪ್ರಥಮವಾಗಿ ಆಯೋಜಿಸಲ್ಪಟ್ಟ 'Late Shri P. B. Alke Trophy 2024’ ಕ್ಕಾಗಿ ತಲಾ 5 ಓವರ್ ಗಳ ಲೀಗ್ ಮಾದರಿಯಲ್ಲಿ ರೋಚಕವಾಗಿ ಸೆಣಸಾಡಿದರು.

17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 : ಶಿವಾನಂದ ಕೋಟ್ಯಾನ್ ಗೆ ವಿಶ್ವಮಾನ್ಯ ಪ್ರಶಸ್ತಿ ಪ್ರದಾನ

Posted On: 12-02-2024 06:42PM

ಸೌದಿ ಅರೇಬಿಯಾ : 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 ಸೌದಿ ಅರೇಬಿಯಾದ ದಮಮ್ ನಲ್ಲಿ ಫೆಬ್ರವರಿ 8 ರಂದು ಅದ್ಧೂರಿಯಾಗಿ ಸಂಪನ್ನವಾಯಿತು. ಓಮಾನ್ ಮಸ್ಕತ್ ನಲ್ಲಿರುವ ಅನಿವಾಸಿಗ ಶಿವಾನಂದ ಕೋಟ್ಯನ್ ರವರಿಗೆ ವಿಶೇಷವಾಗಿ ಆಹ್ವಾನಿಸಿ ತಮ್ಮ ಕೊಡುಗೆ ಕಲೆ, ಸಾಹಿತ್ಯ ಮತ್ತು ಚಲನಚಿತ್ರಗಳ ಆಯೋಜನೆ, ಸಹಾಯ- ಸಹಕಾರ ಸಮಾಜ ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿನ ಸೇವೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.

ಪಾಂಗಳ ಬ್ರಿಡ್ಜ್ ಹತ್ತಿರ ಟಿಪ್ಪರ್ ಪತ್ತೆ ಟೈಯರ್ ನಾಪತ್ತೆ

Posted On: 12-02-2024 10:52AM

ವಾಹನ ಮಾಲೀಕರೇ ಚಾಲಕರೇ ಎಚ್ಚರ ಎಚ್ಚರ ಎಚ್ಚರ

ಫೆಬ್ರವರಿ 20 : ಕಾಪುವಿನಲ್ಲಿ ಆನಂದ ಲಹರಿ ಮಹಾ ಸತ್ಸಂಗ

Posted On: 10-02-2024 05:58PM

ಕಾಪು : ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಸ್ಥಾಪಕಾಚಾರ್ಯ, ಅಂತರಾಷ್ಟ್ರೀಯ ಖ್ಯಾತಿಯ ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಫೆಬ್ರವರಿ 20, ಮಂಗಳವಾರದಂದು ಸಂಜೆ 5 ಗಂಟೆಗೆ ಕಾಪು ಸಮುದ್ರ ಕಿನಾರೆಯಲ್ಲಿರುವ ಮಂಥನ ರೆಸಾರ್ಟ್ ಬಳಿ ನಡೆಯಲಿರುವ ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಕಾರ್ಕಳ : ಕ್ರಿಯೇಟಿವ್‌ ಪುಸ್ತಕ ಮನೆಯ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ

Posted On: 10-02-2024 05:47PM

ಕಾರ್ಕಳ : ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶವಿರಿಸಿಕೊಂಡು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಕಾರ್ಯ ನಡೆಯಿತು.