Updated News From Kaup

ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ - ಬೇಸಿಗೆ ಶಿಬಿರ ಸಮಾರೋಪ

Thumbnail
Posted On: 05 Apr 2024, 06:37 PM

ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಏಪ್ರಿಲ್ 5ರಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಅಸೆಟ್ ನ ಪದಾಧಿಕಾರಿಗಳಾದ ಜಿ.ಟಿ. ಆಚಾರ್ಯ ವಹಿಸಿ ಮಾತನಾಡಿ ಮಕ್ಕಳಿಗೆ ಬೇಸಿಗೆ ಶಿಬಿರದ ಮಹತ್ವ, ಶಿಬಿರದ ಕಲಿತ ವಿಷಯಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಕಾಪು ಜನಾರ್ಧನ ಆಚಾರ್ಯ, ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ, ಭಾರತಿ ದಿವಾಕರ ಆಚಾರ್ಯ, ಹರೀಶ್ ಆಚಾರ್ಯ, ಪ್ರಾಂಶುಪಾಲೆ ಸಂಗೀತಾ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ವಾಣಿ ವಂದಿಸಿದರು.

ಕಾಪು : ಜೆಡಿಎಸ್ ಪಕ್ಷದ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆ

Thumbnail
Posted On: 05 Apr 2024, 01:53 PM

ಕಾಪು : ಜನತಾದಳ(ಜಾತ್ಯಾತೀತ)ಪಕ್ಷದ ಕಾಪು ವಿಧಾನಸಭಾ ಕ್ಷೇತ್ರ ಸಮಿತಿಯ ದಕ್ಷಿಣ ವಿಭಾಗದ ಅಧ್ಯಕ್ಷರಾಗಿ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂ ಆಯ್ಕೆಯಾಗಿರುತ್ತಾರೆ. ಕಾಪು ಪಂಚಾಯತ್ ಮಾಜಿ ಸದಸ್ಯ, ಸಾಮಾಜಿಕ, ಧಾರ್ಮಿಕ ಮಂದಾಳು, ಪಕ್ಷ ಸಂಘಟನೆಯಲ್ಲಿ ಸೇವೆಗೈಯುತ್ತಿರುವ ಕಾಪು ಶ್ರೀ ದೇವರಾಜ ಕೋಟ್ಯಾನ್ ತೊಟ್ಟಂರವರನ್ನು ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಅವರು ನೇಮಕ ಮಾಡಿರುತ್ತಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಹ್ಯಾಪಿ ಇಂಜಿನಿಯರಿಂಗ್ ವಿಷಯದ ಕುರಿತು ಉಪನ್ಯಾಸ

Thumbnail
Posted On: 04 Apr 2024, 03:17 PM

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ ಹ್ಯಾಪಿ ಇಂಜಿನಿಯರಿಂಗ್ ಎಂಬ ವಿಷಯದ ಕುರಿತು ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ತಜ್ಞ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಎದುರಿಸುತ್ತಿರುವ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಇದಕ್ಕಾಗಿ ಅವರು ದಿನನಿತ್ಯದ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಒತ್ತಡವನ್ನು ಕಡಿಮೆ ಮಾಡಲು ಬೇಕಾದ ತಂತ್ರಗಳಾದ ಸಾವಧಾನತೆಯ ತಂತ್ರಗಳು, ಸಮಯ ನಿರ್ವಹಣೆಯ ತಂತ್ರಗಳು ಮತ್ತು ಸಾಮಾಜಿಕ ಬೆಂಬಲವನ್ನು ಪಡೆಯುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಮಾತನಾಡಿ ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಯ ಜೀವನದಲ್ಲಿ ಒಳ್ಳೆಯ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರವೀಂದ್ರ ಹೆಚ್ ಜೆ ಕಾರ್ಯಕ್ರಮವನ್ನು ಸಂಯೋಜಿಸಿದರು.

ಏಪ್ರಿಲ್ 8 - 17 : ಕಟಪಾಡಿಯಲ್ಲಿ ರಜಾ ಮಜಾ -2024 ಮಕ್ಕಳ ಬೇಸಿಗೆ ಶಿಬಿರ

Thumbnail
Posted On: 04 Apr 2024, 03:06 PM

ಕಟಪಾಡಿ : ಎಸ್ ವಿ ಎಸ್ ವಿದ್ಯಾವರ್ಧಕ ಸಂಘ (ರಿ.) ಕಟಪಾಡಿ ಇವರು ಪ್ರಸ್ತುತ ಪಡಿಸುವ ರಜಾ ಮಜಾ -2024 ಮಕ್ಕಳ ಬೇಸಿಗೆ ಶಿಬಿರವು ಏಪ್ರಿಲ್ 8 ರಿಂದ ಏಪ್ರಿಲ್ 17 ರ ವರೆಗೆ 10 ದಿನಗಳ ಕಾಲ ಎಸ್ ವಿ ಎಸ್ ಆಂಗ್ಲ ಮಾದ್ಯಮ ಶಾಲಾ ವಠಾರದಲ್ಲಿ ಜರಗಲಿದೆ. 6 ರಿಂದ 16 ವರ್ಷದ ಮಕ್ಕಳು ಭಾಗವಹಿಸಲು ಅವಕಾಶವಿದೆ. 10 ದಿನಗಳ ಈ ಶಿಬಿರದಲ್ಲಿ ಸುಮಾರು 20 ಕ್ಕೂ ಹೆಚ್ಚಿನ ಚಟುವಟಿಕೆಗಳನ್ನು ನಾಡಿನ ಪ್ರಸಿದ್ದ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿ ತರಬೇತಿಯನ್ನು ನೀಡಲಿದ್ದಾರೆ. ಮುಖ್ಯವಾಗಿ ವೆಂಕಿ ಪಲಿಮಾರು, ರಾಜೇಶ್ ಕಾಮತ್, ರಾಜೇಂದ್ರ ಭಟ್ ಬೆಳ್ಮಣ್, ರಮೇಶ್ ಬಂಟಕಲ್, ರಾಘವ್ ಸೂರಿ ಮಂಗಳೂರು, ಚಂದ್ರಕಲಾ ರಾವ್, ರಮಿತಾ ಶೈಲೇಂದ್ರ ಕಾರ್ಕಳ, ಮನೋಜ್ ಕಾಂಚನ್, ಭಾಗ್ಯಲಕ್ಷ್ಮೀ ಉಪ್ಪೂರು, ದೀಕ್ಷಾ ಸಾಲಿಯಾನ್, ಶ್ರುತಿ ಭಟ್ ಉದ್ಯಾವರ,ಪ್ರಥಮ್ ಕಾಮತ್ ಕಟಪಾಡಿ, ಮುಸ್ತಾಫಾ,ನಾಗೇಶ್ ಕಾಮತ್ ಹಾಗೂ ಇನ್ನಿತರರು ತರಬೇತಿಯನ್ನು ನೀಡಲಿದ್ದಾರೆ. ಶಿಬಿರದ ಮುಖ್ಯ ಆಕರ್ಷಣೆಯಾಗಿ ಅಗ್ನಿಶಾಮಕ ದಳ ಉಡುಪಿ ಇವರಿಂದ ಅಗ್ನಿಶಾಮಕ ಪ್ರಾತ್ಯಕ್ಷಿಕೆ, ವ್ಯಕ್ತಿತ್ವ ವಿಕಸನ ತರಬೇತಿ, ಪಿಕ್ನಿಕ್, ಡ್ರಾಯಿಂಗ್, ಕ್ರಾಫ್ಟ್,ಮ್ಯಾಜಿಕ್, ಫೇಸ್ ಪೈಂಟಿಂಗ್, ಯೋಗ, ನೃತ್ಯ, ಸಂಗೀತ, ಟೆರಾಕೋಟ ಕಲೆ, ಮುಖವಾಡ ತಯಾರಿ, ಕಾಡಿನಲ್ಲಿ ಒಂದು ದಿನ, ಸ್ವಿಮ್ಮಿಂಗ್, ಮನೋರಂಜನಾ ಆಟಗಳು ಇನ್ನೂ ಹಲವು ಕಾರ್ಯಕ್ರಮಗಳು ಇರಲಿವೆ. ಶಿಬಿರದಲ್ಲಿ ಝೀ ಕನ್ನಡ ಪಾರು ಧಾರಾವಾಹಿಯ ಬಾಲನಟಿ ಪ್ರಾನ್ವಿ ಅಕ್ಷಯ್ ಮಂಗಳೂರು ಜೂ. ರಿಷಭ್ ಶೆಟ್ಟಿ ಖ್ಯಾತಿಯ ಪ್ರದೀಪ್ ಆಚಾರ್ಯ ಶಿರ್ವ ಭಾಗವಹಿಸಲಿರುವರು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಸಂಚಾಲಕರಾದ ಕೆ ಸತ್ಯೇಂದ್ರ ಪೈ ಯವರ ನೇತೃತ್ವದಲ್ಲಿ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ, ಶಿಕ್ಷಕೇತರ ಬಳಗದವರು ಶಿಬಿರದ ಕಾರ್ಯಕ್ರಮವನ್ನು ಸಂಘಟಿಸಲಿದ್ದು, ಕಾರ್ಯಕ್ರಮದ ಸಂಯೋಜನೆಯನ್ನು ಕಲಾವಿದ ನಾಗೇಶ್ ಕಾಮತ್ ಕಟಪಾಡಿ ನಿರ್ವಹಿಸಲಿರುವರು ಎಂದು ಶಾಲಾ ಮುಖ್ಯೋಪಾಧ್ಯಾಯರಾದ ದೇವೇಂದ್ರ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 8088143006 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ.

ಹೆಜಮಾಡಿ : ಶ್ರೀ ದೈವರಾಜ ಕೋರ್ದಬ್ಬು ದೃೆವಸ್ಥಾನದ ನೂತನ ಕಾರ್ಯಾಲಯದ ಉದ್ಘಾಟನೆ

Thumbnail
Posted On: 03 Apr 2024, 02:09 PM

ಹೆಜಮಾಡಿ : ಹೆಜಮಾಡಿ ಬಸ್ತಿಪಡ್ಪು ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಾರ್ಯಾಲಯವನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಭಾಸ್ಕರ್ ಭಟ್ ಉದ್ಘಾಟಿಸಿದರು. ಕ್ಷೇತ್ರದ ಅನುವಂಶಿಕ ಮೋಕ್ತೇಸರ ಅರುಣ್ ಶೆಟ್ಟಿ, ಮೋಕ್ತೇಸರ ಸುರೇಶ್ ಶೆಟ್ಟಿಯವರು ದೀಪ ಪ್ರಜ್ವಲನೆಗೈದರು. ಈ ಸಂದರ್ಭದಲ್ಲಿ ಅರುಣ್ ಶೆಟ್ಟಿ ಮುಂಬೈ, ವಸಂತ ದೇವಾಡಿಗ, ಕ್ಷೇತ್ರದ ಪ್ರಧಾನ ಅರ್ಚಕ ಜಗ್ನನಾಥ ಮುಖಾರಿ, ಮಹೇಶ್ ಶೆಟ್ಟಿ ಗರಡಿಮನೆ, ಹೆಜಮಾಡಿ ಗ್ರಾ.ಪಂ ಸದಸ್ಯ ಶರಣ್ ಕುಮಾರ್ ಮಟ್ಟು, ಕ್ಷೇತ್ರ ಸಮಿತಿ ಸದಸ್ಯರಾದ ಎಚ್ ಪರಮೇಶ್ವರ್, ಎಚ್ ರಾಜು, ಶೇಖರ್ ಹೆಜಮಾಡಿ, ಗಣೇಶ್ ಎಚ್., ಕೇಶವ ಸಾಲ್ಯಾನ್ ಹೆಜಮಾಡಿ , ಮಧ್ಯಸ್ಥ ರಾಮಚಂದ್ರ ಎಚ್, ಪದ್ಮನಾಭ ಸುವರ್ಣ, ಸಚ್ಚಿದಾನಂದ ಭಟ್ ಮತ್ತು ಹತ್ತು ಸಮಸ್ತರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಪು : ಪಂಜಿನ ಮೆರವಣಿಗೆಯ ಮೂಲಕ ಮತದಾನದ ಜಾಗೃತಿ

Thumbnail
Posted On: 02 Apr 2024, 11:10 PM

ಕಾಪು : ತಾಲೂಕು ಆಡಳಿತ ಕಾಪು, ತಾಲೂಕು ಪಂಚಾಯತ್ ಕಾಪು, ಪುರಸಭೆ ಕಾಪು ಇವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆಯ ಮೂಲಕ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯ ವರೆಗೆ ಮೆರವಣಿಗೆಯಲ್ಲಿ ಸಾಗಿ ಕಾಪು ತಾಲೂಕು ತಹಶೀಲ್ದಾರ್ ಡಾ| ಪ್ರತಿಭಾ ಆರ್ ರವರು ಮತದಾನದ ಮಹತ್ವ ಮತ್ತು ಮತದಾರರ ಕರ್ತವ್ಯದ ಬಗ್ಗೆ ಮಾತನಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ‌ಪುರಸಭೆ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಕಾರ್ಯದರ್ಶಿಯವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ - ಬೇಸಿಗೆ ಶಿಬಿರದ ಉದ್ಘಾಟನೆ

Thumbnail
Posted On: 02 Apr 2024, 11:07 AM

ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಏಪ್ರಿಲ್ 1ರಂದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕುತ್ಯಾರು ಯುವಕ ಮಂಡಲದ ಅಧ್ಯಕ್ಷರಾದ ಸುಶಾಂತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಬಿರದಲ್ಲಿ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಹಾರೈಕೆಯ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸೆಟ್ ನ ಕಾರ್ಯಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ವಹಿಸಿದ್ದರು. ಗುರುರಾಜ್ ಆಚಾರ್ಯ, ದಿವಾಕರ ಆಚಾರ್ಯ, ಪ್ರಭಾರ ಮುಖ್ಯ ಶಿಕ್ಷಕಿ ಅಮಿತಾ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅಮಿತಾ ಸ್ವಾಗತಿಸಿದರು.ಶಿಕ್ಷಕಿ ರಮ್ಯಾ ಪ್ರಭು ನಿರೂಪಿಸಿ, ಶಿಕ್ಷಕ ಮಂಜುನಾಥ ಶೇಟ್ ವಂದಿಸಿದರು.

ಪಡುಬಿದ್ರಿ : ಕಲಿಯುಗದಲ್ಲಿ ಸಂಪತ್ತಿಗಿಂತ ಆರೋಗ್ಯ ಎನ್ನುವುದೇ ದೊಡ್ಡ ಭಾಗ್ಯ - ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ

Thumbnail
Posted On: 31 Mar 2024, 08:24 PM

ಪಡುಬಿದ್ರಿ : ಸಾಮಾಜಿಕ, ಕಲಾ ಕ್ಷೇತ್ರ, ತುಳು ಸಂಸ್ಕೃತಿ ಜೊತೆಗೆ ದೈವಾರಾಧನೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ ಪಿ.ಕೆ.ಸದಾನಂದ. ಇವರ ಸಾಧನೆಗೆ ಸರಕಾರದ ವತಿಯಿಂದ ಸೂಕ್ತ ಮಾನ್ಯತೆ ದೊರಕಬೇಕಿದೆ. ತುಳುನಾಡಿನ ಪ್ರತಿ ವಿಷಯದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಸಂಪನ್ಮೂಲ ವ್ಯಕ್ತಿ ಇವರಾಗಿದ್ದಾರೆ. ಕಲಿಯುಗದಲ್ಲಿ ಸಂಪತ್ತಿಗಿಂತ ಆರೋಗ್ಯ ಎನ್ನುವುದೇ ದೊಡ್ಡ ಭಾಗ್ಯ ಪಿ ಕೆ ಸದಾನಂದರಿಗೆ ದೇವರು ಆರೋಗ್ಯ ಭಾಗ್ಯ ಕರಣಿಸಲಿ ಎಂದು ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಹೇಳಿದರು. ಅವರು ಜಾನಪದ ವಿದ್ವಾಂಸ ಪಿ. ಕೆ. ಸದಾನಂದ ಮತ್ತು ಶಾರದ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚಿಸಿದರು. ಸನ್ಮಾನ/ಸಾಮಾಜಿಕ ಕಾರ್ಯ : ಕಾರ್ಯಕ್ರಮದಲ್ಲಿ ಹತ್ತು ಪೌರ ಕಾರ್ಮಿಕರು, ಹಿರಿಯ ದಂಪತಿಗಳು, ಹಿರಿಯ ಮತ್ತು ಯುವ ಮೂರ್ತೆದಾರರನ್ನು ಸನ್ಮಾನಿಸಲಾಯಿತು. ವಿಕಲಚೇತನರಿಗೆ ಗಾಲಿ ಕುರ್ಚಿಯನ್ನು ವಿತರಿಸಲಾಯಿತು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಪಿ. ಕೆ. ಸದಾನಂದ ದಂಪತಿಯ ಮಕ್ಕಳಾದ ಶೀಲಾ ನವೀನ್, ಗಣೇಶ್ ಗುಜರನ್ ಕುಟುಂಬಸ್ಥರು ಉಪಸ್ಥಿತರಿದ್ದರು. ಶರತ್ ಅಡ್ವೆ ಕಾರ್ಯಕ್ರಮ ನಿರೂಪಿಸಿದರು.

ಉದ್ಯಾವರ : ಸೌಹಾರ್ದ ಮತ್ತು ವಿಶಿಷ್ಟ ರೀತಿಯಲ್ಲಿ ಈಸ್ಟರ್ ಹಬ್ಬದ ಆಚರಣೆ

Thumbnail
Posted On: 31 Mar 2024, 05:41 PM

ಉದ್ಯಾವರ : ಸೌಹಾರ್ದ ಸಮಿತಿ ಉದ್ಯಾವರ ಇದರ ಮಾಜಿ ಅಧ್ಯಕ್ಷರು ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ಶೈನ್ ಇದರ ಪದಾಧಿಕಾರಿ ಹಾಗೂ ಯುವ ಉದ್ಯಮಿಯಾಗಿರುವಂತ ಲಯನ್ ವಿಲ್ಫ್ರೆಡ್ ಡಿಸೋಜರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಇಂದು ಈಸ್ಟರ್ ಹಬ್ಬವನ್ನು ವಿಶಿಷ್ಟ ಮತ್ತು ಸೌಹಾರ್ದತೆಯಲ್ಲಿ ಆಚರಿಸಿದರು. ಸರಕಾರದ ಯೋಜನೆಗಳನ್ನು ಜಾತಿ ಮತ ಭೇದವಿಲ್ಲದೆ ಸರ್ವರಿಗೂ ಬಾಗಿಲವರೆಗೂ, ಯಾವುದೇ ಪ್ರಚಾರವಿಲ್ಲದೆ ಜನರ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿಕೊಂಡಿರುವಂತಹ, ಡಿಜಿಟಲ್ ಸೇವಾ ಕೇಂದ್ರದ ಮೂಲಕ ರಾಜ್ಯದಲ್ಲಿಯೇ ವಿಶಿಷ್ಟವಾದ ಸ್ಥಾನಮಾನ ಹೊಂದಿರುವಂತಹ ಉದ್ಯಾವರದ ಸೌಮ್ಯ ಇವರನ್ನು ಅವರ ಪತಿ ಹರಿಶ್ಚಂದ್ರ ರವರ ಉಪಸ್ಥಿತಿಯಲ್ಲಿ ಲಯನ್ ವಿಲ್ಫ್ರೆಡ್ ಡಿಸೋಜರವರು ತಮ್ಮ ಸಂಪಿಗೆ ನಗರದಲ್ಲಿರುವ ಸ್ವಗೃಹದಲ್ಲಿ ಹಬ್ಬದ ಪ್ರಯುಕ್ತ ಅಭಿನಂದಿಸಿ ಗೌರವ ಧನ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಲಯನ್ ವಿಲ್ಫ್ರೆಡ್ ಡಿಸೋಜರವರ ತಾಯಿ ಮತ್ತು ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಸೌಹಾರ್ದತೆಯ ನಾಡಿನಲ್ಲಿ ಈಸ್ಟರ್ ಹಬ್ಬದ ಸಂಭ್ರಮದಲ್ಲಿ ನಡೆದಂತಹ ಕಾರ್ಯಕ್ರಮ ಎಲ್ಲರಿಗೂ ಪ್ರೇರಣೆ ಮತ್ತು ಮಾದರಿ.

ಕಾಪು : ಜೆಡಿಎಸ್ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಜೆಡಿಎಸ್ ಮೈತ್ರಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Thumbnail
Posted On: 30 Mar 2024, 09:11 PM

ಕಾಪು : ಕರ್ನಾಟಕ ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಮೈತ್ರಿಯ ಮೂಲಕ ಎದುರಿಸಲು ಸನ್ನದ್ಧವಾಗಿರುವ ಸಂದರ್ಭದಲ್ಲಿ ಇದಕ್ಕೆ ಮುನ್ನುಡಿ ಎಂಬಂತೆ ಕಾಪುವಿನ ಜೆಡಿಎಸ್ ಕಚೇರಿಗೆ ಉಡುಪಿ ಚಿಕ್ಕಮಗಳೂರು ಬಿಜೆಪಿ ಜೆಡಿಎಸ್ ಮೈತ್ರಿಯ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿದರು. ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ ಬಿಜೆಪಿ ಪಕ್ಷದ ಪ್ರಮುಖರನ್ನು ಆತ್ಮೀಯವಾಗಿ ಬರಮಾಡಿಕೊಂಡು ಉಡುಪಿ ಚಿಕ್ಕಮಗಳೂರು ಬಿಜೆಪಿ ಜೆಡಿಎಸ್ ಮೈತ್ರಿಯ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ರನ್ನು ಗೌರವಿಸಿದರು. ಈ ಸಂದರ್ಭ ಜೆಡಿಎಸ್ ಪ್ರಮುಖರು ಈ ಬಾರಿಯ ಚುನಾವಣೆಯನ್ನು ಮೈತ್ರಿಯ ಮೂಲಕ ಎದುರಿಸುವ ಭರವಸೆ ನೀಡಿ, ಪಡುಬಿದ್ರಿ ಚಿಕ್ಕಮಗಳೂರು ರೈಲ್ವೆ ಯೋಜನೆ ಬಗೆಯೂ ಉಡುಪಿ ಚಿಕ್ಕಮಗಳೂರು ಬಿಜೆಪಿ ಜೆಡಿಎಸ್ ಮೈತ್ರಿಯ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯ ಗಮನ ಸೆಳೆದರು. ಜೆಡಿಎಸ್ ಪ್ರಮುಖರಾದ ವಾಸುದೇವ ರಾವ್, ಗಂಗಾಧರ ಭಿರ್ತಿ, ವೆಂಕಟೇಶ್, ಅಶ್ರಫ್, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನವೀನ್ ಶೆಟ್ಟಿ ಕುತ್ಯಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಕುಮಾರ್, ಸತೀಶ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.