Updated News From Kaup
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ : ಕಾಪು ವಲಯದ ಪದಪ್ರದಾನ ಸಮಾರಂಭ
Posted On: 22-11-2023 07:41AM
ಕಾಪು : ಬೇರೆಯವರ ಮುಖದಲ್ಲಿ ನಗು ತರಿಸುವ ಛಾಯಾಗ್ರಾಹಕರ ಕಾರ್ಯ ದೇವರು ಮೆಚ್ಚುವಂತದ್ದು. ತಂತ್ರಜ್ಞಾನ ಬದಲಾವಣೆಗೆ ತಕ್ಕಂತೆ ಛಾಯಾಗ್ರಾಹಕರು ಇರಬೇಕಾಗಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು. ಅವರು ಮಂಗಳವಾರ ಕಾಪುವಿನ ಹೋಟೆಲ್ ಕೆ 1 ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ ಇದರ ಕಾಪು ವಲಯದ ಪದಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿರ್ವ : ಸಾಹಿತ್ಯಕ್ಕೆ ಜಾತಿ ಧರ್ಮದ ಬೇಧವಿಲ್ಲ ಅದು ಎಲ್ಲರನ್ನೂ ಒಂದುಗೂಡಿಸುತ್ತದೆ - ಪ್ರೊ.ವೈ.ಭಾಸ್ಕರ್ ಶೆಟ್ಟಿ
Posted On: 21-11-2023 04:05PM
ಶಿರ್ವ : ದೇಶಾಭಿಮಾನದ ಜೊತೆಗೆ ಭಾಷಾಭಿಮಾನ ಕೂಡ ಇರಬೇಕು. ಭಾಷೆಯ ಮೇಲೆ ಅಭಿಮಾನ ಇರಬೇಕು ಹೊರತು ಅಹಂಕಾರ ಇರಬಾರದು. ಸಾಹಿತ್ಯಕ್ಕೆ ಜಾತಿ ಧರ್ಮದ ಬೇಧವಿಲ್ಲ ಅದು ಎಲ್ಲರನ್ನೂ ಒಂದುಗೂಡಿಸುತ್ತದೆ. ಲಕ್ಷ ಲಕ್ಷದಲ್ಲಿ ಜನಪ್ರತಿನಿಧಿಗಳು ತಮಗಾಗಿ ವೆಚ್ಚ ಮಾಡುತ್ತಿರುವಾಗ ಅವರಿಗೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಬಗ್ಗೆ ಲಕ್ಷ್ಯವಿಲ್ಲ. ಇದು ರಾಜಕೀಯ ವ್ಯವಸ್ಥೆಯ ದುರಂತವಾಗಿದೆ ಎಂದು ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದಿಂದ ಕನ್ನಡ ರಾಜ್ಯೋತ್ಸವ ಮಾಸಾಚಾರಣೆ ಸಂಪದ - 2023 ತಿಂಗಳ ಸಡಗರ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಶಿರ್ವದ ಎಂ. ಎಸ್. ಆರ್. ಎಸ್ ಕಾಲೇಜಿನಲ್ಲಿ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಜಮಾಡಿ : ಫಾತಿಮಾ ರಲಿಯಾ ಅವರ 'ಕಡಲು ನೋಡಲು ಹೋದವಳು' ಕೃತಿ ಪಿ. ಲಂಕೇಶ್ ಪ್ರಶಸ್ತಿಗೆ ಆಯ್ಕೆ
Posted On: 21-11-2023 03:44PM
ಹೆಜಮಾಡಿ : ಗ್ರಾಮದ ಫಾತಿಮಾ ರಲಿಯಾ ಅವರ 'ಕಡಲು ನೋಡಲು ಹೋದವಳು' ಕೃತಿ ಶಿವಮೊಗ್ಗದ ಕರ್ನಾಟಕ ಸಂಘ ಪ್ರತೀ ವರ್ಷ ನೀಡುವ ಪಿ. ಲಂಕೇಶ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ಡಿಸೆಂಬರ್ 24 : ಪಲಿಮಾರಿನಲ್ಲಿ ರಕ್ತದಾನ ಶಿಬಿರ
Posted On: 21-11-2023 02:47PM
ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 26 : ಶ್ರೀ ಧೂಮಾವತಿ ದೈವಸ್ಥಾನ ಅವರಾಲು ಮಟ್ಟು ಇದರ 6ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ
Posted On: 21-11-2023 02:37PM
ಪಲಿಮಾರು : ಶ್ರೀ ಧೂಮಾವತಿ ದೈವಸ್ಥಾನ ಅವರಾಲು ಮಟ್ಟು ಇದರ 6ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವವು ನವೆಂಬರ್ 26, ಆದಿತ್ಯವಾರ ಜರಗಲಿದೆ.
ಹಿರ್ಗಾನದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ : ಬೈಂದೂರು ಮಡಿಲಿಗೆ "SMG ಟ್ರೋಫಿ 2023"
Posted On: 21-11-2023 02:33PM
ಕಾರ್ಕಳ : ಭಾರತೀಯ ಕಥೋಲಿಕ್ ಯುವ ಸಂಚಲನ(ICYM) ಹಿರ್ಗಾನ ಇದರ ಮುಂದಾಳತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಥೋಲಿಕ ಕ್ರೈಸ್ತ ಸಮಾಜ ಬಾಂಧವರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಕೂಟ "SMG ಟ್ರೋಫಿ 2023" ಹಿರ್ಗಾನ ಚರ್ಚ್ ಮೈದಾನದಲ್ಲಿ ನವೆಂಬರ್ 19 ರಂದು ಅದ್ದೂರಿಯಾಗಿ ನೆರವೇರಿತು. ಉಡುಪಿ ಧರ್ಮ ಪ್ರಾಂತ್ಯದ ವಿವಿಧ ಚರ್ಚುಗಳಿಂದ 32 ತಂಡಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.
ಪಡುಬಿದ್ರಿ : ಕೆ.ಪಿ.ಎಸ್ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ
Posted On: 21-11-2023 02:28PM
ಪಡುಬಿದ್ರಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡುಬಿದ್ರಿ ಇದರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಮಂಗಳವಾರ ಜರಗಿತು.
ಉಡುಪಿ : ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
Posted On: 21-11-2023 02:22PM
ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಉತ್ತರ ಕನ್ನಡ ಜಿಲ್ಲಾ ವಿಭಾಗ ಇದರ ವತಿಯಿಂದ ಹೊನ್ನಾವರದಲ್ಲಿ ನಡೆಯಲಿರುವ ಕರಾವಳಿ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಸಾಮಾಜಿಕ ಕಾರ್ಯಕರ್ತ ರಕ್ತದಾನಿ ರಾಘವೇಂದ್ರ ಪ್ರಭು ಕವಾ೯ಲುರವರು ಆಯ್ಕೆಯಾಗಿದ್ದಾರೆ.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ
Posted On: 20-11-2023 08:18PM
ಪಡುಬಿದ್ರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ, ಉಡುಪಿ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಆಯೋಜಿಸಲಾದ "70ನೇ ಅಖಿಲ ಭಾರತ ಸಹಕಾರ ಸಪ್ತಾಹ" ಸಮಾರೋಪ ಸಮಾರಂಭವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ರೈತರಿಗೆ ಅನುಕೂಲಕರವಾದ ಸಹಕಾರಿ ಸಂಸ್ಥೆಗಳು ಬಹು ಬೇಗನೆ ಅವರಿಗೆ ಬೇಕಾದ ಹಣಕಾಸಿನ ಸಹಾಯದ ಜೊತೆಗೆ ಇತರೆ ವ್ಯವಸ್ಥೆಗೆ ಪೂರಕವಾಗಿದೆ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಇತರೆಡೆಗಳಿಗೆ ಮಾದರಿ ಎನಿಸಿದೆ. ಸಮಾಜಮುಖಿ ಕೆಲಸಗಳಿಗೆ ಸಹಕಾರಿ ಕ್ಷೇತ್ರವು ಪ್ರೋತ್ಸಾಹಿಸುತ್ತಿದೆ ಎಂದರು. ಭಾರತದಲ್ಲಿ ಸಹಕಾರಿ ಕ್ಷೇತ್ರಕ್ಕೆ 119 ವರ್ಷಗಳ ಇತಿಹಾಸವಿದೆ ಎಂದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ - ಬಿರುವೆರ್ ಕಾಪು ಟ್ರೋಫಿ -2023 ; ಕ್ರಿಕೆಟ್ ಪಂದ್ಯಾಟದ ವಿಜ್ಞಾಪನ ಪತ್ರ ಬಿಡುಗಡೆ
Posted On: 19-11-2023 12:30PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ (ರಿ.) ಕಾಪು ಇವರ ಆಶ್ರಯದಲ್ಲಿ ಬಿಲ್ಲವ ಸಮಾಜ ಬಾಂಧವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಥಮ ಬಾರಿಗೆ ಕಾಪುವಿನ ದಂಡತೀರ್ಥ ಶಾಲಾ ಮೈದಾನದಲ್ಲಿ ಡಿಸೆಂಬರ್ 30 - 31 ರಂದು ಬಿರುವೆರ್ ಕಾಪು ಟ್ರೋಫಿ -2023 ಕ್ರಿಕೆಟ್ ಪಂದ್ಯಾಕೂಟ ನಡೆಯಲಿದ್ದು ಇದರ ವಿಜ್ಞಾಪನ ಪತ್ರವನ್ನು ಕಾಪು ಜೆಸಿ ಭವನದಲ್ಲಿ ನವೆಂಬರ್ 18ರಂದು ಬಿಡುಗಡೆಗೊಳಿಸಲಾಯಿತು.
