Updated News From Kaup
ಪಡುಬಿದ್ರಿ : ಕ್ರೀಡೆಗಳು ವ್ಯಕ್ತಿಯನ್ನು ಆರೋಗ್ಯವಂತ, ಕ್ರಿಯಾಶೀಲನನ್ನಾಗಿ ಮಾಡಲು ಸಹಕಾರಿ - ಶರತ್ ಶೆಟ್ಟಿ
Posted On: 01-11-2023 03:18PM
ಪಡುಬಿದ್ರಿ : ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ. ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯ ವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯ ವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು ಅದ್ದರಿಂದ ಜೀವನದಲ್ಲಿ ಕ್ರೀಡೆಗಳು ಅವಶ್ಯಕ ಎಂದು ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಗೌರವ ಅಧ್ಯಕ್ಷ ಶರತ್ ಶೆಟ್ಟಿ ಹೇಳಿದರು. ಪಡುಬಿದ್ರಿ ಬೋರ್ಡ್ ಶಾಲಾ ಮ್ಯೆದಾನದಲ್ಲಿ ಪಡುಬಿದ್ರಿ ರೋಟರಿ ಕ್ಲಬ್ , ಇನ್ನರ್ ವೀಲ್ ಕ್ಲಬ್ , ರೋಟರಿ ಸಮುದಾಯದಳ ಹಾಗು ರೋಟರಾಕ್ಟ್ ಕ್ಲಬ್ ವತಿಯಿಂದ ನಡೆದ ಕುಟುಂಬ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಪು : ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
Posted On: 01-11-2023 10:44AM
ಕಾಪು : ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನವೆಂಬರ್ 1ರಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ರಾಜ್ಯೋತ್ಸವ ಕೇವಲ ಆಚರಣಗೆ ಸೀಮಿತವಾಗದಿರಲಿ…ಕನ್ನಡಿಗರ ಮನೆ ಮನಸ್ಸಿನ ಹಬ್ಬವಾಗಲಿ
Posted On: 01-11-2023 06:59AM
ಪ್ರತೀ ಸಲ ಕರ್ನಾಟಕ ರಾಜ್ಯೋತ್ಸವ ಆಚರಣೆಯ ವೇಳೆ ಕೇಳಿ ಬರುವ ಒಂದೇ ಕೂಗು “ಕನ್ನಡ ಭಾಷೆಯನ್ನು ಉಳಿಸಿ!”. ಕರ್ನಾಟಕದ ಮಾತೃಭಾಷೆಯಾಗಿರುವ ಕನ್ನಡವನ್ನು ಕರ್ನಾಟಕದಲ್ಲಿ ಉಳಿಸಿ ಎಂದು ಹೋರಾಟ ಮಾಡಬೇಕಾದ ಪರಿಸ್ಥಿತಿ ನಮ್ಮ ಕನ್ನಡಿಗರದ್ದು. ಹಾಗಾದರೆ ನಮ್ಮ ಭಾಷೆಯನ್ನು ಸಾಯಿಸುವಂತೆ ಮಾಡುತ್ತಿರುವವರು ಯಾರು? ಜಾಗತೀಕರಣ, ವಾಣಿಜ್ಯೀಕರಣದಿಂದ ಪರಭಾಷೆಗಳು ಕನ್ನಡದ ಮೇಲೆ ಪ್ರಭಾವ ಬೀರಿರಬಹುದು. ಆದರೆ ಪ್ರಾಚೀನ ಹಾಗೂ ಸಮೃದ್ದ ವಾದ ಕನ್ನಡ ನುಡಿ ಇಷ್ಟೊಂದು ಕ್ಷೀಣವಾಗಲು ಕಾರಣಕತ೯ರು ನಾವೇ ಅಲ್ಲವೇ?ಎಂಬುದು ಚಿಂತಿಸಬೇಕಾದ ಸಂಗತಿ. ಭಾಷೆ ಎನ್ನುವುದು ಸಂವಹನ ಮಾಧ್ಯಮ ಮಾತ್ರವಾಗಿರದೆ ಅದು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಅಂತಹ ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಕನ್ನಡ ನುಡಿ ಇಂದು ಕರ್ನಾಟಕದಲ್ಲಿ ಸೊರಗಿಹೋಗುತ್ತಿದೆ. ಒಂದು ಕಾಲದಲ್ಲಿ “ಕನ್ನಡವೇ ನಮ್ಮಮ್ಮ ಅವಳಿಗೆ ಕೈ ಮುಗಿಯಮ್ಮ” ಎಂದು ಹಾಡಿದ್ದ ನಾವು ಇಂದು Sorry, I can’t speak kannada ಅನ್ನುತ್ತೇವೆ.
ನವೆಂಬರ್ ೪ : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಾಪು ತಾಲ್ಲೂಕು ೫ನೇ ಕನ್ನಡ ಸಾಹಿತ್ಯ ಸಮ್ಮೇಳನ
Posted On: 01-11-2023 06:40AM
ಕಾಪು : ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಕಾಪು ತಾಲ್ಲೂಕು ಘಟಕದ ೫ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ ೪, ಶನಿವಾರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಿವೃತ್ತ ಉಪನ್ಯಾಸಕ, ಕನ್ನಡ ಸಂಘಟಕ ಕೆ.ಎಸ್. ಶ್ರೀಧರ ಮೂರ್ತಿ ಶಿರ್ವಾರವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ‘ಸಿರಿಗನ್ನಡದ ಸೊಗಸು; ಭಾಷಾ ಶುದ್ಧತೆಯೆಡೆಗೆ ಪುಟ್ಟ ಹೆಜ್ಜೆ’ ಪರಿಕಲ್ಪನೆಯಲ್ಲಿ ದಿನವಿಡೀ ಗೋಷ್ಠಿಗಳು, ಸಂವಾದ, ಪ್ರಾತ್ಯಕ್ಷಿಕೆ ಜರಗಲಿವೆ. ಸಮ್ಮೇಳನದ ಉದ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ| ಮಹೇಶ ಜೋಶಿ ಅವರು ನೆರವೇರಿಸಲಿದ್ದು, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ, ಶಿರ್ವ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಆರ್. ಪಾಟ್ಕರ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಕ್ಯಾಥರಿನ್ ರೊಡ್ರಿಗಸ್, ಕಾಪು ತಹಶೀಲ್ದಾರ್ ನಾಗರಾಜ ವಿ. ನಾಯ್ಕಡ, ಪಾಂಬೂರು ಚರ್ಚ್ ಧರ್ಮಗುರು ವಂ. ಹೆನ್ರಿ ಮಸ್ಕರೇನಸ್, ಶಿರ್ವ ಸುನ್ನಿ ಜಾಮಿಯಾ ಮಸೀದಿ ಧರ್ಮಗುರು ಸಿರಾಜುದ್ದೀನ್ ಝೈನಿ, ಕಾಲೇಜಿನ ಪ್ರಾಚಾರ್ಯರಾದ ಡಾ. ತಿರುಮಲೇಶ್ವರ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ. ನಿರ್ದೇಶಕಿ ಪೂರ್ಣಿಮಾ, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಶಶಿಧರ ವಾಗ್ಳೆ, ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರರು, ನಿವೃತ್ತ ಪಂ. ಅಭಿವೃದ್ಧಿ ಅಧಿಕಾರಿ ಶಂಕರ ಪದಕಣ್ಣಾಯ, ಜಿಲ್ಲಾ ಕನ್ನಡ ಭವನ ಸಮಿತಿ ಕಾರ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಗೌರವ ಕೋಶಾಧಿಕಾರಿ ಮನೋಹರ ಪಿ. ಭಾಗವಹಿಸುವರು. ಕಸಾಪ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಉಚ್ಚಿಲ : ಬಹುಭಾಷಾ ನಟ ಸುಮನ್ ತಲ್ವಾರ್ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳ ಭೇಟಿ
Posted On: 31-10-2023 07:51PM
ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಖ್ಯಾತ ಬಹುಭಾಷಾ ನಟ ಸುಮನ್ ತಲ್ವಾರ್ ಭೇಟಿ ನೀಡಿದರು.
ಶಿರ್ವ : ಹಿಂದೂ ಜೂನಿಯರ್ ಕಾಲೇಜು - ಜೇಸಿ ಇಂಡಿಯಾ ವಿದ್ಯಾರ್ಥಿವೇತನ ವಿತರಣೆ
Posted On: 30-10-2023 09:34PM
ಶಿರ್ವ : ಹಿಂದೂ ಜೂನಿಯರ್ ಕಾಲೇಜು ಶಿರ್ವ ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಮನವಿಯ ಮೇರೆಗೆ ಜೇಸಿ ಇಂಡಿಯಾ ವಿದ್ಯಾರ್ಥಿವೇತನ ಕಾರ್ಯಕ್ರಮ 2023ರ ಯೋಜನೆಯಡಿಯಲ್ಲಿ, ಜೇಸಿ ಮಂಗಳೂರು ಲಾಲ್ ಬಾಗ್ ಇವರು ಕೊಡಮಾಡಲ್ಪಟ್ಟ ವಿದ್ಯಾರ್ಥಿವೇತನವನ್ನು ಸೋಮವಾರ ಹಿಂದೂ ಜೂನಿಯರ್ ಕಾಲೇಜು ಶಿರ್ವ ಕಾಲೇಜಿನ ಪ್ರಾಂಶುಪಾಲರಾದ ಭಾಸ್ಕರ್ ಎ. ಇವರಿಗೆ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ಸಂಯೋಜಕರಾದ ಕುತ್ಯಾರು ಕಿಶೋರ್ ಶೆಟ್ಟಿಯವರು ಹಸ್ತಾಂತರಿಸಿದರು.
ಡಿಸೆಂಬರ್ 17 : ಕುಲಾಲ ಸಮಾಜ ಬಾಂಧವರಿಗಾಗಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ - ಕುಲಾಲ ಟ್ರೋಫಿ : 2023
Posted On: 30-10-2023 09:27PM
ಕಾಪು : ಕುಲಾಲ ಸಂಘ ಪೆರ್ಡೂರು ಹಾಗೂ ಕುಲಾಲ ಸೇವಾದಳ ಇವರ ಆಶ್ರಯದಲ್ಲಿ ಕುಲಾಲ ಟ್ರೋಫಿ -2023 ಕ್ರಿಕೆಟ್ ಪಂದ್ಯಾಟವು ಪೆರ್ಡೂರು ಪ್ರೌಢಶಾಲಾ ಮೈದಾನದಲ್ಲಿ ಡಿಸೆಂಬರ್ 17, ಭಾನುವಾರ ನಡೆಯಲಿದೆ.
ಉಡುಪಿ : ಮತ್ಸ್ಯ ಮೇಳ - 2023 ಕಾರ್ಯಕ್ರಮ
Posted On: 28-10-2023 08:05PM
ಉಡುಪಿ : ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾಲಕ ಇಲಾಖೆ, ಸ್ಕೊಡ್ ವೆಸ್ ಸಂಸ್ಥೆ-ಶಿರಸಿ ಮತ್ತು ಉಡುಪಿ, ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಅಮಿಟೆಡ್ ಇವರ ಜಂಟಿ ಆಶ್ರಯದಲ್ಲಿ ಶನಿವಾರ ಲಕ್ಷ್ಮೀ ಸೋಮ ಬಂಗೇರ ಸಹಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಇಲ್ಲಿ ಮತ್ಸ್ಯ ಮೇಳ - 2023 ಕಾರ್ಯಕ್ರಮ ಜರಗಿತು.
ಓಮನ್ ಬಿಲ್ಲವಾಸ್ : ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಸಂಪನ್ನ
Posted On: 28-10-2023 03:22PM
ಗಲ್ಫ್ ರಾಷ್ಟ್ರದ ರಾಜಧಾನಿ ಮಸ್ಕಟ್ ನಲ್ಲಿ ಓಮನ್ ಬಿಲ್ಲವಾಸ್ ಸಂಘಟನೆಯ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಪೂಜೆ ಬಹಳ ವಿಜೃಂಭಣೆಯಿಂದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.
ಉಡುಪಿ : ಎಬಿವಿಪಿ ವತಿಯಿಂದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ
Posted On: 28-10-2023 02:47PM
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡಿನ ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು. ನಗರ ಕಾರ್ಯದರ್ಶಿ ಶ್ರೀವತ್ಸ ಅವರು ಮಾತನಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ವಿಶೇಷವಾಗಿ ಉಡುಪಿ ದಕ್ಷಿಣ ಕನ್ನಡ ಭಾಗದ ಮನೆಗಳಲ್ಲಿ ಬೀಡಿ ಕಟ್ಟಿ ಜೀವನ ನಡೆಸುವವರ ಬಡ ಮಕ್ಕಳಿಗೆ ಬರುವ ವಿದ್ಯಾರ್ಥಿ ವೇತನ ಬಾರದೆ ಇರುವುದು ಅವಶ್ಯಕ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆ ಆಗುತ್ತಿದೆ.
