Updated News From Kaup

ಫೆಬ್ರವರಿ 20 : ಕಾಪುವಿನಲ್ಲಿ ಆನಂದ ಲಹರಿ ಮಹಾ ಸತ್ಸಂಗ

Thumbnail
Posted On: 10 Feb 2024, 05:58 PM

ಕಾಪು : ವಿಶ್ವಸಂಸ್ಥೆಯಿಂದ ಮಾನ್ಯತೆ ಪಡೆದ ಜೀವನ ಕಲೆ ಹಾಗೂ ಸುದರ್ಶನ ಕ್ರಿಯಾಯೋಗದ ಸ್ಥಾಪಕಾಚಾರ್ಯ, ಅಂತರಾಷ್ಟ್ರೀಯ ಖ್ಯಾತಿಯ ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಫೆಬ್ರವರಿ 20, ಮಂಗಳವಾರದಂದು ಸಂಜೆ 5 ಗಂಟೆಗೆ ಕಾಪು ಸಮುದ್ರ ಕಿನಾರೆಯಲ್ಲಿರುವ ಮಂಥನ ರೆಸಾರ್ಟ್ ಬಳಿ ನಡೆಯಲಿರುವ ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶನಿವಾರ ಮಂಥನ ರೆಸಾರ್ಟ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಾನವತಾವಾದಿ ಹಾಗೂ ಶಾಂತಿದೂತ ಶ್ರೀ ರವಿಶಂಕರ್ ಗುರೂಜಿ ಅವರ ಮಹಾ ಸತ್ಸಂಗವನ್ನು ಆಯೋಜಿಸಿರುತ್ತೇವೆ. ಜೀವನಕಲಾ ಸಂಸ್ಥೆಯ ಕಾರ್ಯಕ್ರಮಗಳು ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದು ಇಡೀ ಜಗತ್ತಿನಲ್ಲಿ ಲಾಭರಹಿತವಾದ ಶೈಕ್ಷಣಿಕ, ಮಾನವೀಯ ಮೌಲ್ಯಗಳುಳ್ಳ ಪ್ರಮುಖ ಸಂಸ್ಥೆಯಾಗಿದೆ. ಉಡುಪಿ ಜಿಲ್ಲೆಗೆ ಬಂದು ಆನಂದ ಲಹರಿ ಮಹಾ ಸತ್ಸಂಗದಲ್ಲಿ ಭಾಗವಹಿಸಿ ಜ್ಞಾನ, ಧ್ಯಾನ ಹಾಗೂ ಗಾನದ ಸವಿಯನ್ನು ನೀಡಲಿದ್ದಾರೆ. ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ ಎಂದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಆಟ್೯ ಆಫ್ ಲಿವಿಂಗ್ ಶಿಕ್ಷಕರಾದ ರಾಧಾ ಶೆಣೈ, ದಿನೇಶ್ ಕಾಮತ್, ವಸಂತ್ ಕುಮಾರ್, ಪ್ರಶಾಂತ್ ಪೈ, ವಿಮಲಾಕ್ಷಿ ದಿವಾಕರ್, ಶೈಲಜ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಕಳ : ಕ್ರಿಯೇಟಿವ್‌ ಪುಸ್ತಕ ಮನೆಯ “ಮೊಬೈಲ್‌ ಬಿಡಿ ಪುಸ್ತಕ ಹಿಡಿ” ಯೋಜನೆಗೆ ಅಭೂತಪೂರ್ವ ಬೆಂಬಲ

Thumbnail
Posted On: 10 Feb 2024, 05:47 PM

ಕಾರ್ಕಳ : ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶವಿರಿಸಿಕೊಂಡು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಕಾರ್ಯ ನಡೆಯಿತು. ಸಾಹಿತ್ಯಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ ತಾಲೂಕಿನ ಸ್ಥಳೀಯ ಶಾಲೆಗಳನ್ನು ಸಂದರ್ಶಿಸಿ ಪುಸ್ತಕವನ್ನು ಕೊಡಮಾಡಲಾಯಿತು. ಸಾರ್ವಜನಿಕರಿಂದ ಮತ್ತು ವಿದ್ಯಾಭಿಮಾನಿಗಳಿಂದ ಅಪೂರ್ವ ಬೆಂಬಲ ವ್ಯಕ್ತವಾಗಿ ಪ್ರತಿನಿತ್ಯ ಸುಮಾರು ಹತ್ತು ಪುಸ್ತಕಗಳನ್ನು ಪುಸ್ತಕ ದಾನಿಗಳ ನೆರವಿನೊಂದಿಗೆ ವಿತರಿಸಲಾಯಿತು. ಈ ಯೋಜನೆಗೆ ಸಾರ್ವಜನಿಕರು, ಪುಸ್ತಕ ಪ್ರಿಯರಿಂದ ರೂ. 28,110 ಸಂಗ್ರಹಗೊಂಡು, ದಿನಕ್ಕೆ 10 ಪುಸ್ತಕದಂತೆ ಒಟ್ಟು 312 ಪುಸ್ತಕಗಳನ್ನು ಜನವರಿ ತಿಂಗಳಿನಲ್ಲಿ ಕಾರ್ಕಳವಲ್ಲದೆ ದೂರದ ಸುಳ್ಯ, ಪುತ್ತೂರಿನ ಶಾಲೆಗಳನ್ನೂ ಆಯ್ಕೆಮಾಡಿ ಪುಸ್ತಕ ವಿತರಿಸಲಾಗಿದೆ ಹಾಗೂ ಪುಸ್ತಕ ಸ್ವೀಕರಿಸಿದ ವಿದ್ಯಾರ್ಥಿಗಳೇ ಸ್ವತಃ ಪತ್ರ ಮುಖೇನ ತಮ್ಮ ಅಭಿಪ್ರಾಯ ತಿಳಿಸುವುದು ಹೆಮ್ಮೆಯ ಸಂಗತಿಯಾಗಿದೆ ಮತ್ತು ಪುಸ್ತಕ ಪ್ರೀತಿಯ ದ್ಯೋತಕವಾಗಿದೆ. ಇದೀಗ ಫೆಬ್ರವರಿ ತಿಂಗಳಿನ ಪುಸ್ತಕ ತಲುಪಿಸುವ ಕಾರ್ಯ ನಡೆಯುತ್ತಿದೆ. ಸಾಹಿತ್ಯಾಸಕ್ತರು, ಶಿಕ್ಷಣ ಪ್ರೇಮಿಗಳು, ಉಪನ್ಯಾಸಕರು, ಶಿಕ್ಷಕ ಬಂಧುಗಳು, ಸಾರ್ವಜನಿಕರು ಈ ಯೋಜನೆಗೆ ಕೈಜೋಡಿಸುವಂತೆ ವಿನಂತಿಸಿದ್ದಾರೆ.

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Thumbnail
Posted On: 10 Feb 2024, 05:34 PM

ಕಾಪು : ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ದೇಗುಲ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಇದಕ್ಕಾಗಿ ಮೊಗವೀರ ಸಂಘಟನೆಗಳಾದ ಮೊಗವೀರ ಮಹಾಸಭಾ ದ.ಕ, ಮೊಗವೀರ ಮಹಾಜನ ಸಂಘ(ರಿ.) ಮತ್ತು ಕಾಪು ನಾಲ್ಕು ಪಟ್ಣ ಮೊಗವೀರ ಸಭಾ ಹಾಗೂ ಮಹಿಳಾ ಮಂಡಳಿ ಇವರ ನೇತೃತ್ವದಲ್ಲಿ ಗುರುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಅರ್ಚಕರಾದ ಜನಾರ್ದನ ತಂತ್ರಿ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರು ಮೊಗವೀರ ಸಮುದಾಯಕ್ಕೆ ಅಪಾರ ಮತ್ಸ್ಯ ಸಂಪತ್ತು ದೊರಕುವಂತಾಗಲಿ ಮತ್ತು ಅಮ್ಮನ ದಯೆಯಿಂದ ಅತೀ ಹೆಚ್ಚು ಮೊಗವೀರ ಬಂಧುಗಳು "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರ್ಪಡೆಯಾಗಲಿ ಎಂದು ಪ್ರಾರ್ಥಿಸಿದರು. ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಯಾಗಲು ಮನವಿ ಪತ್ರವನ್ನು ಕಾಪು ಕ್ಷೇತ್ರದ ಶಾಸಕರು, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಅವರು ದ. ಕ ಮೊಗವೀರ ಮಹಾಸಭಾದ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ನಂತರ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಗೌರವಾಧ್ಯಕ್ಷರಾದ ನಾಡೋಜ ಡಾ. ಜಿ. ಶಂಕರ್ ಮತ್ತು ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರ ಮುಂದಾಳತ್ವದಲ್ಲಿ ಉಪ್ಪಳದಿಂದ ಶಿರೂರು ಭಾಗದವರೆಗಿನ ಎಲ್ಲಾ ಮೊಗವೀರ ಸಮಾಜ ಬಾಂಧವರಿಗೆ ಈ ಮನವಿ ಪತ್ರವನ್ನು ತಲುಪಿಸಲಿದ್ದೇವೆ ಮತ್ತು ಅತೀ ಹೆಚ್ಚಿನ ಆರ್ಥಿಕ ಸಹಕಾರವನ್ನು ನಮ್ಮ ಸಮಾಜದಿಂದ ನೀಡಲಿದ್ದೇವೆ ಎಂದು ದ. ಕ. ಮೊಗವೀರ ಮಹಾಸಭಾದ ಕಾರ್ಯದರ್ಶಿ ಸುಧಾಕರ ಕುಂದರ್ ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಜೇಂದ್ರ ಹಿರಿಯಡಕ, ದಿನೇಶ್ ಏರ್ಮಾಳು, ಕಾಪು ನಾಲ್ಕು ಪಟ್ನ ಅಧ್ಯಕ್ಷರಾದ ಮನೋಜ್ ಕಾಂಚನ್, ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಮೋಹನ್ ಬಂಗೇರ, ದೇವಳದ ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರುಗಳಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕರಾದ ಮಧುಕರ್ ಎಸ್, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಚಂದ್ರಶೇಖರ್ ಅಮೀನ್, ಬಾಬು ಮಲ್ಲಾರ್, ಶೈಲಜಾ ಪುರುಷೋತ್ತಮ್, ಪ್ರಚಾರ ಸಮಿತಿಯ ಸಂಚಾಲಕರುಗಳಾದ ಜಯರಾಮ್ ಆಚಾರ್ಯ, ಶ್ರೀಧರ ಕಾಂಚನ್, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಕಾಪು ಮೊಗವೀರ ಮಹಾಸಭಾ ಅಧ್ಯಕ್ಷರಾದ ಕುಶ ಸಾಲ್ಯಾನ್, ಶೀಲರಾಜ್, ಜಗದೀಶ್ ಮೆಂಡನ್, ಆಶಾ ಎಂ. ಕುಂದರ್, ಶಕುಂತಲಾ ಕೋಟ್ಯಾನ್, ಉಷಾ, ಕವಿತಾ, ಮಮತಾ, ಗೀತಾ ರಾಜ್, ಕೃಷ್ಣ ಕರ್ಕೇರ, ಭಾಸ್ಕರ ಅಮೀನ್, ಸುನೀತಾ, ಯಶವಂತಿ, ಸುನಿಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ಪಡುಬಿದ್ರಿ : ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಲಕ್ಷಾಂತರ ಮೌಲ್ಯದ ಮಾದಕ ವಸ್ತು ನಾಶ  

Thumbnail
Posted On: 10 Feb 2024, 05:20 PM

ಪಡುಬಿದ್ರಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು 2,76,000 ರೂ. ಬೆಲೆಯ ಗಾಂಜಾವನ್ನು ನಂದಿಕೂರಿನ ಔದ್ಯೋಗಿಕ ನಗರದಲ್ಲಿ ನಾಶಪಡಿಸಲಾಯಿತು. ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 1 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ. ಇದರಲ್ಲಿ 2008ರ ಒಂದು ಪ್ರಕರಣ, 2011ರ ಒಂದು ಪ್ರಕರಣ, 2016ರ ಒಂದು ಪ್ರಕರಣ, 2020ರ ಎರಡು ಪ್ರಕರಣ, 2022ರ ಒಂದು ಪ್ರಕರಣ ಹಾಗೂ 2023ರ 5 ಪ್ರಕರಣ ಸೇರಿವೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

ಫೆ. 9 - 17 : ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವ ; ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

Thumbnail
Posted On: 10 Feb 2024, 04:54 PM

ಕಟಪಾಡಿ : ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವವು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪರವೂರು ರಾಕೇಶ್ ತಂತ್ರಿಯವರ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ದೇವದಾಸ ಶಾಂತಿಯವರ ಪೌರೋಹಿತ್ಯದಲ್ಲಿ ಫೆಬ್ರವರಿ 9, ಶುಕ್ರವಾರದಿಂದ, 17 ಶನಿವಾರದವರೆಗೆ ರವರೆಗೆ ಜರಗಲಿದೆ. ಜಾತ್ರಾ ಉತ್ಸವದ ಪವಿತ್ರ ದಿನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳ‌ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಗಳು ಜರಗಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ : ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾದ ನಿಧಿ ಟಿ. ಶೆಟ್ಟಿ

Thumbnail
Posted On: 10 Feb 2024, 04:34 PM

ಉಚ್ಚಿಲ : ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾಪು ತಾಲೂಕಿನ ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಧಿ ಟಿ. ಶೆಟ್ಟಿಯವರು ತುಳು ಭಾಷಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ ಬಹುಮಾನ ಪಡೆದಿದ್ದಾರೆ. ಧಾರವಾಡದ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜನತಾ ಶಿಕ್ಷಣ ಸಮಿತಿ ಸಹಯೋಗದಲ್ಲಿ ಗುರುವಾರ ಮತ್ತು ಶುಕ್ರವಾರ ಸನ್ನಿಧಿ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ನಡೆದಿದ್ದು, ಕುಮಾರಿ ನಿಧಿ ಶೆಟ್ಟಿ ತುಳು ಭಾಷಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಕುಮಾರಿ ನಿಧಿ ಶೆಟ್ಟಿಯವರನ್ನು ಶಾಲಾ ಆಡಳಿತ ಮಂಡಳಿ ಮೊಗವೀರ ಹಿತ ಸಾಧನ ವೇದಿಕೆ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ನಿಧಿ ಶೆಟ್ಟಿಯವರು ಕುಂಜೂರು ಕಿನ್ನೋಡಿ ಗುತ್ತು ತಿಮ್ಮಪ್ಪ ಶೆಟ್ಟಿ ಮತ್ತು ಶಾಂತ ಶೆಟ್ಟಿ, ದಂಪತಿಯ ಪುತ್ರಿ.

ಕುತ್ಯಾರು : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ - ಧ್ಯಾನದ ಬಗ್ಗೆ ಮಾಹಿತಿ

Thumbnail
Posted On: 10 Feb 2024, 04:21 PM

ಕುತ್ಯಾರು : ಆನೆಗುಂದಿ ಸರಸ್ವತೀ ಪೀಠದ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಲಕ್ಷ್ಮೀ ನಾಯ್ಕ್ ಬೆಳ್ಮಣ್ ಇವರು ಶ್ರೀ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ಧ್ಯಾನದ ಮಹತ್ವವನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ತಿಳಿಸಿದರು. ಶಾಲಾ ಉಪ ಪ್ರಾಂಶುಪಾಲೆ ಸೌಮ್ಯರವರು ಲಕ್ಷ್ಮೀ ನಾಯ್ಕರನ್ನು ಗೌರವಸಿದರು. ಅನಿತಾ ಮಾತಾಜಿ ಸ್ವಾಗತಿಸಿದರು. ರಮ್ಯಾ ಮಾತಾಜಿ ವಂದಿಸಿದರು.

ಕಾಪು : 800 ಕ್ಕೂ ಅಧಿಕ ಮಕ್ಕಳಿಗೆ ಸುಮಾರು 1.50 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ಪರಿಕರಗಳ ವಿತರಣೆ

Thumbnail
Posted On: 10 Feb 2024, 04:11 PM

ಕಾಪು : ಮುಂಬಯಿಯ ಮಾಜಿ ಕಾರ್ಪೊರೇಟರ್, ಜೋಸೆಫ್ ಪಟೇಲ್ ಎಸ್ಟೇಟ್ ನವರಾತ್ರಿ ದುರ್ಗಾಪೂಜಾ ಮಂಡಲ್ ಇದರ ಸ್ಥಾಪಕಿ ಕಾಪು ಗರಡಿಮನೆ ದಿ. ಗೀತಾ ಯಾದವ್ ಅವರ ಸ್ಮರಣಾರ್ಥ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಪು ಪರಿಸರದ ವಿವಿಧ ಶಾಲೆಗಳ 800 ಕ್ಕೂ ಅಧಿಕ ಮಕ್ಕಳಿಗೆ ಸುಮಾರು 1.50 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಶೈಕ್ಷಣಿಕ ಪರಿಕರಗಳನ್ನು ವಿತರಿಸಿದ ದಿ‌. ಗೀತಾ ಯಾದವ್ ಅವರ ಪುತ್ರ ಸಂತೋಷ್ ಯಾದವ್ ಅವರು ಮಾತನಾಡಿ, ಕಾಪು ಗರಡಿ ಮನೆಯಲ್ಲಿ ಹುಟ್ಟಿ ಬೆಳೆದ ಮಾತೃಶ್ರೀಯವರು ಮುಂಬಯಿಯಲ್ಲಿ ಸುಮಾರು 25 ವರ್ಷಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಗೈದು, ರಾಜಕೀಯವಾಗಿಯೂ ಬೆಳೆದಿದ್ದಾರೆ. ಇದೀಗ ನಮ್ಮೊಡನೆ ಇಲ್ಲದ ಅವರ‌ ಸ್ಮರಣೆಗಾಗಿ ಕಳೆದ ಮೂರು ವರ್ಷಗಳಿಂದ ವಿವಿಧ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಮುಂಬಯಿಗೆ ಸೀಮಿತವಾಗಿದ್ದ ಸೇವಾ ಕಾರ್ಯಗಳನ್ನು ಅವರ ಹುಟ್ಟೂರಿನಲ್ಲಿಯೂ ನಡೆಸುವ ಮೂಲಕ ಅವರಿಗೆ ಹುಟ್ಟೂರಿನ ಬಗೆಗೆ ಇದ್ದ ಪ್ರೀತಿಯನ್ನು ವಿಸ್ತರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಕಾಪು ಗರಡಿ ರಸ್ತೆಯಲ್ಲಿರುವ ಅಂಗನವಾಡಿ, ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ವಿಶ್ವನಾಥ್ ಪೂಜಾರಿ ಕಾಪು, ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾ, ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್. ರಾವ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ‌ ರಮಣಿ ವೈ., ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಲಿಂಗಪ್ಪ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು : ನಿರಂತರ 12 ಗಂಟೆಗಳ ಕಾಲ ಗಾಯನ ಮಾಡಿ ವಿಶ್ವ ದಾಖಲೆ ಮಾಡಿದ ತಂಡ

Thumbnail
Posted On: 07 Feb 2024, 05:10 PM

ಮಂಗಳೂರು : ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇತ್ತೀಚೆಗೆ ನಿರಂತರ 12 ಗಂಟೆಗಳ ಕಾಲ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ ಗಾಯನ ತಂಡದ ಮುಖ್ಯಸ್ಥ ಗಂಗಾಧರ್ ಗಾಂಧಿಯವರನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು. ಟಿ.ಖಾದರ್ ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ವಿಶ್ವ ದಾಖಲೆ ಪ್ರಮಾಣ ಪತ್ರ ನೀಡಿ, ಹಾರ ಪೇಟಾ ಶಾಲು ತೊಡಿಸಿ ಅಭಿನಂದಿಸಿದರು. ಕಾರ್ಯಕ್ರಮ ಆಯೋಜಕ ಸಂಸ್ಥೆ NSCDF ನ ಅಂತಾರಾಷ್ಟ್ರೀಯ ವಕ್ತಾರೆ ಮಮತಾ ಕೋಟ್ಯಾನ್ ಮತ್ತಿತರರು ಉಪಸ್ಥಿತಿಯಿದ್ದರು. 12 ಗಂಟೆಗಳ ನಿರಂತರ ಗಾಯನ ಕಾರ್ಯಕ್ರಮದಲ್ಲಿ ರಾಣಿ ಪುಷ್ಪಲತಾ ದೇವಿ, ವರ್ಷ ಕರ್ಕೇರಾ , ಶ್ರೀ ರಕ್ಷ ಸರ್ಪಂಗಳ, ನೇತ್ರ ಖುಶಿ ಯುಗಳ ಗೀತೆಗಳಿಗೆ ಧ್ವನಿಯಾಗಿದ್ದರು.

ಕಾಪು : ಮಾನ್ಯ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಪ್ರತಿಷ್ಠಾನ - ಸಂಸ್ಕೃತಿ ಸಂಚಯನದಲ್ಲಿ ಅನಿವಾಸಿಗರು ಚಿಂತನ ಮಂಥನ

Thumbnail
Posted On: 07 Feb 2024, 05:02 PM

ಕಾಪು : ಮಾನ್ಯ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಪ್ರತಿಷ್ಠಾನ ವತಿಯಿಂದ ಭಾರತೀಯ ಪ್ರವಾಸಿ ದಿನದ ಪ್ರಯುಕ್ತ ಸಂಸ್ಕೃತಿ ಸಂಚಯನದಲ್ಲಿ ಅನಿವಾಸಿಗರು ಎಂಬ ಶೀರ್ಷಿಕೆಯಡಿ ಚಿಂತನ ಮಂಥನ ಕಾರ್ಯಕ್ರಮ ಕಾಪುವಿನಲ್ಲಿ ಜರಗಿತು. ಕಾರ್ಯಕ್ರಮವನ್ನು ರಾಜಕೀಯ, ಸಾಮಾಜಿಕ ಮುಂದಾಳು ಗೀತಾಂಜಲಿ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕರಾವಳಿ ಕರ್ನಾಟಕದ ಉಭಯ ಜಿಲ್ಲೆಯಲ್ಲಿ ಅತ್ಯಧಿಕ ಸಂಖ್ಯೆಯ ಜನರು ವಿದೇಶದಲ್ಲಿ ನೆಲೆನಿಂತು ತನ್ಮೂಲಕ ತನ್ನ ಹುಟ್ಟೂರಿಗೆ ಸೇವೆಯನ್ನು ಮಾಡುತ್ತಿದ್ದು, ಅವರಿಗೂ ಕೂಡಾ ನೆರೆಯ ಕೇರಳ ರಾಜ್ಯ ಸಹಕರಿಸುವಂತೆ ನಮ್ಮಲ್ಲಿಯು ಸಂಪೂರ್ಣ ಸಹಕಾರ ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೂರೆಯಬೇಕು ಎಂದು ಹೇಳಿದರು. ಅನಿವಾಸಿ ಪ್ರವಾಸಿಗರ ಸಂವಾದ ಹಾಗೂ ಬೆಂಗಳೂರಿನಲ್ಲಿ ಜನವರಿ 14ರಂದು‌ ಬಿಡುಗಡೆಯಾಗಿದ್ದ ಪಿ.‌ಎಸ್‌ ರಂಗನಾಥ್‌ ಸಂಪಾದಕತ್ವದ ಅರಬ್ಬರ ನಾಡಿನಲ್ಲಿ ಕನ್ನಡಿಗರು ಎಂಬ ಪುಸ್ತಕವನ್ನು ಕರಾವಳಿಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅನಿವಾಸಿಗನಾಗಿ ಎರಡು ದಶಕಗಳ ಕಾಲ ವಿದೇಶದ ಕೆಲ ವಿಚಾರಗಳನ್ನು ಶಿವಾನಂದ ಕೋಟ್ಯಾನ್ ಹಂಚಿಕೂಂಡರು. ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲಾವಿದ ರಾಜ ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.