Updated News From Kaup

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ - ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ಸಂಪನ್ನ

Posted On: 17-10-2023 11:32AM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಹೊಸ ಮಾರಿಗುಡಿ ಜೀರ್ಣೋದ್ದಾರದ ಕಾಪು ವಿಧಾನಸಭಾ ಕ್ಷೇತ್ರ ಗ್ರಾಮ ಸಮಿತಿ ಮತ್ತು ವಿವಿಧ ಸಮಿತಿಯ ಮಹಿಳೆಯರಿಂದ ಸಾಮೂಹಿಕ ನವದುರ್ಗಾ ಕುಂಕುಮಾರ್ಚನೆ ಸೇವೆ ನಡೆಯಿತು.

ಬಂಟಕಲ್ಲು : ಶ್ರೀ ದುರ್ಗಾಪರಮೇಶ್ವರೀ ದೇವಳದ ಶರನ್ನವರಾತ್ರಿ ಮಹೋತ್ಸವ - ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Posted On: 16-10-2023 10:45PM

ಬಂಟಕಲ್ಲು : ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಶರನ್ನವರಾತ್ರಿ ಮಹೋತ್ಸವದಲ್ಲಿ ಒಂಭತ್ತು ದಿನಗಳ ಪರ್ಯಂತ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ತಿರುಮಲೇಶ್ವರ ಭಟ್ ದೀಪ ಪ್ರಜ್ವಲನದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಭಾರತೀಯ ಸನಾತನ ಸಂಸ್ಕೃತಿಯಲ್ಲಿ ನವರಾತ್ರಿ ಉತ್ಸವ ಶಕ್ತಿದೇವತೆಗಳ ಆರಾಧನೆಗೆ ವಿಶೇಷ ಪ್ರಾಧಾನ್ಯತೆ ಇದ್ದು ದುರ್ಗೆಯು ಲೋಕಕಲ್ಯಾಣಾರ್ಥ ನವರೂಪಗಳನ್ನು ಧರಿಸಿ ಅಸುರ ದುಷ್ಟಶಕ್ತಿಗಳ ನಾಶ ಮಾಡಿ ಧರ್ಮವನ್ನು ರಕ್ಷಿಸಿದ ಹಿನ್ನೆಲೆಯನ್ನು ದೇಶದಾದ್ಯಂತ ವಿವಿಧ ರೂಪದಲ್ಲಿ ನವರಾತ್ರಿ ಹಬ್ಬದ ಮೂಲಕ ದೇವಿಯ ಆರಾಧನೆ ನಡೆಯುತ್ತಿದೆ. ಈ ಕ್ಷೇತ್ರದಲ್ಲಿಯೂ ದೇವಿಯ ಆರಾಧನೆಯೊಂದಿಗೆ ಪ್ರತೀ ವರ್ಷವೂ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಕಾಪುವಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ನೀಡಿದ ಕಾಪು ಅಭಿವೃದ್ಧಿ ಸಮಿತಿ

Posted On: 16-10-2023 10:41PM

ಕಾಪು : ಇಲ್ಲಿನ ಪ್ರಮುಖ ಸಮಸ್ಯೆಗಳ ಬಗ್ಗೆ ಕಾಪು ಅಭಿವೃದ್ಧಿ ಸಮಿತಿಯು ಕಾಪುವಿನ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರಗಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮನವಿ ನೀಡಿತು.

ಪಡುಕುತ್ಯಾರು : ಆನೆಗುಂದಿ ಮಹಾ ಸಂಸ್ಥಾನ - ರಜತ ಮಂಟಪ ಸಮರ್ಪಣೆ

Posted On: 15-10-2023 03:46PM

ಪಡುಕುತ್ಯಾರು : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡು ಕುತ್ಯಾರಿನ ಶ್ರೀ ಸರಸ್ವತೀ ಮಾತೃ ಮಂಡಳಿಯ ವತಿಯಿಂದ 21ಕಿಲೋಗ್ರಾಂ ಬೆಳ್ಳಿಯಲ್ಲಿ ತಯಾರಿಸಲಾದ 5.5 ಅಡಿ ಎತ್ತರ ಹಾಗೂ 3.5 ಅಡಿ ಅಗಲದ ಅತ್ಯಾಕರ್ಷಕ ಕುಸುರಿ ಕೆಲಸದೊಂದಿಗೆ ನಿರ್ಮಾಣಗೊಂಡ ಜಗದ್ಗುರುಗಳವರ ಪಟ್ಟದ ದೇವರ ರಜತ ಮಂಟಪವು ಶರನ್ನವರಾತ್ರಿಯ ಆರಂಭದ ದಿನವಾದ ರವಿವಾರ ಶ್ರೀಕರಾರ್ಚಿತ ಪೂಜೆಗೆ ಸಮರ್ಪಣೆಗೊಂಡಿತು.

ಕಟಪಾಡಿ : ಉಚಿತ ಪ್ರಾಣ ಯೋಗ ಶಿಬಿರ ಉದ್ಘಾಟನೆ

Posted On: 15-10-2023 01:34PM

ಕಟಪಾಡಿ : ಪತಂಜಲಿ ಯೋಗ ಸಮಿತಿ ಉಡುಪಿ ಹಾಗೂ ಎಸ್ ವಿ ಎಸ್ ಹಳೆ ವಿದ್ಯಾರ್ಥಿ ಸಂಘ (ರಿ.) ಕಟಪಾಡಿ ಇವರ ಸಹಯೋಗದಲ್ಲಿ ಅಕ್ಟೋಬರ್ 15 ರಿಂದ 24ರ ವರೆಗೆ 10 ದಿನಗಳ ಕಾಲ ನಡೆಯುವ ಉಚಿತ ಪ್ರಾಣ ಯೋಗ ಶಿಬಿರವನ್ನು ಕಟಪಾಡಿಯ ಮಹಿಳಾ ಮಂಡಲದ ಸಭಾ ಭವನದಲ್ಲಿ ರವಿವಾರ ಮುಂಜಾನೆ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಕೆ. ಸತ್ಯೇಂದ್ರ ಪೈ. ಉದ್ಘಾಟಿಸಿದರು.

ಉಚ್ಚಿಲ ದಸರಾ - 2023 ; ಉಡುಪಿ ಜಿಲ್ಲಾಧಿಕಾರಿಯಿಂದ ಚಾಲನೆ

Posted On: 15-10-2023 12:22PM

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಹುಲಿವೇಷ, ಸಾಂಸ್ಕೃತಿಕ ಮೆರುಗಿನ ಜೊತೆಗೆ ಭಕ್ತಿಭಾವದ ಸಂಭ್ರಮವನ್ನು ನವರಾತ್ರಿಯ ಸಂದರ್ಭ ಕಾಣಬಹುದಾಗಿದೆ. ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. ನಾಡಿಗೆ ಸುಖ ಸಮದ್ಧಿ ಜನರು ಸುಖ ಸಂತೋಷದಿಂದ ಇರಲಿ ಎಂದು ಶುಭಹಾರೈಸಿದರು. ನವದುರ್ಗೆಯರು ಮತ್ತು ಶ್ರೀ ಶಾರದಾ ಪ್ರತಿಷ್ಠಾಪನೆ ಯೊಂದಿಗೆ ಶಾರದೆಗೆ ಬೆಳ್ಳಿ ವೀಣೆ, ಬೆಳ್ಳಿ ಕಿರೀಟಧಾರಣೆಯು ನಡೆಯಿತು.

ಉಚ್ಚಿಲ ದಸರಾ - 2023 ; ಕ್ಷಣ ಗಣನೆ ; ವಿದ್ಯುದ್ದೀಪಾಲಂಕಾರದ ಉದ್ಘಾಟನೆ

Posted On: 14-10-2023 08:57PM

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ದಲ್ಲಿ ದಸರಾದ ಪ್ರಯುಕ್ತ ಶನಿವಾರ ಸಂಜೆ ವಿದ್ಯುದ್ದೀಪಾಲಂಕಾರ ಪ್ರಾಯೋಜಕರಾದ MRG ಗ್ರೂಪ್ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ ನೀಡಿದರು.

ಪಡುಬಿದ್ರಿ : ನೂತನ ಗ್ರಾಮ ಒನ್ ಮತ್ತು ಸೈಬರ್ ಕೆಫೆ, ಬುಕ್ಸ್ ಮತ್ತು ಸ್ಟೇಶನರಿ ಕಚೇರಿ ಶುಭಾರಂಭ

Posted On: 14-10-2023 12:58PM

ಪಡುಬಿದ್ರಿ : ಇಲ್ಲಿನ ಅದಿಧನ್ ಸಾಯಿ ಕೃಪಾ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿ ಪ್ರಾರಂಭವಾದ ಪಡುಬಿದ್ರಿ ಗ್ರಾಮ ಒನ್ (ನಾಗರಿಕ ಸೇವಾ ಕೇಂದ್ರ) ಮತ್ತು ಸೈಬರ್ ಕೆಫೆ, ಬುಕ್ಸ್ ಮತ್ತು ಸ್ಟೇಶನರಿ ಕಚೇರಿಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಉದ್ಘಾಟಿಸಿ ಶುಭ ಹಾರೈಸಿದರು.

ಕಾಪು : ಸತತ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ; ಅಭಿನಂದನಾ ಸಮಾರಂಭ

Posted On: 14-10-2023 12:50PM

ಕಾಪು : ಸತತ 3 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ 80 ಬಡಗಬೆಟ್ಟು ಗ್ರಾಮ‌ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿಗಳಿಗೆ ಅಭಿನಂದನಾ ಸಮಾರಂಭವು ಇಂದು ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ, ಸಿಬ್ಬಂದಿವರ್ಗವನ್ನು ಅಭಿನಂದಿಸಿದರು.

ಉಡುಪಿ : ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ

Posted On: 14-10-2023 08:31AM

ಉಡುಪಿ : ಜಿಲ್ಲೆಯಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 14 (ಇಂದು) ಬೆಳಿಗ್ಗೆ 6 ಗಂಟೆಯಿಂದ 15 (ನಾಳೆ)ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.