Updated News From Kaup
ಕುತ್ಯಾರು : ಹುಚ್ಚು ನಾಯಿ ಹಾವಳಿ, ಮುಂಜಾಗ್ರತೆಗೆ ಸೂಚನೆ

Posted On: 01-10-2023 08:46PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ಸಂಚರಿಸುತ್ತಿದ್ದು, ಕೆಲವು ನಾಯಿಗಳಿಗೆ ಕಚ್ಚಿದ್ದು ಗ್ರಾಮದಲ್ಲಿ ತುಂಬಾ ಆತಂಕವನ್ನು ಮೂಡಿಸಿದೆ.
ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮನೆಯ ಸಾಕು ನಾಯಿಗಳನ್ನು ಕಡ್ಡಾಯವಾಗಿ ಮನೆಯಲ್ಲಿ ಕಟ್ಟಿ ಹಾಕಿ ಹಾಗೂ ಕಡ್ಡಾಯವಾಗಿ ರೇಬಿಸ್ ಇಂಜೆಕ್ಷನ್ ಅನ್ನು ತಕ್ಷಣವೇ ನೀಡಬೇಕಾಗಿ ಕುತ್ಯಾರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.
ಪಡುಬಿದ್ರಿ : ಬಂಟರ ಸಂಘದಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ; ವಿದ್ಯಾರ್ಥಿ ವೇತನ ವಿತರಣೆ

Posted On: 01-10-2023 08:41PM
ಪಡುಬಿದ್ರಿ : ಇಲ್ಲಿನ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ "ಸಿರಿಮುಡಿ ದತ್ತಿನಿಧಿ" ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ರವಿವಾರ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ ಶೆಟ್ಟಿ ಸಭಾಭವನದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜರಗಿತು. ಕಾರ್ಯಕ್ರಮವನ್ನು ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ ಆಳ್ವ ಉದ್ಘಾಟಿಸಿದರು.
ಹೇರಂಬ ಇಂಡಸ್ಟ್ರೀಸ್ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಕ್ರೆಡಿಟ್ ಕೋ ಆಪರೇಟಿವ್ ಗೆ ಚಾಲನೆ ನೀಡಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಶಕ್ತರಿಗೆ ನೆರವು ವಿತರಿಸಿದರು. ಮುಂಬಯಿಯ ಉದ್ಯಮಿ ಎಲ್ಲೂರಿನ ಪ್ರವೀಣ ಭೋಜ ಶೆಟ್ಟಿಯವರಿಂದ ಬಂಟಾಶ್ರಯಕ್ಕೆ ಚಾಲನೆ ನೀಡಲಾಯಿತು. ಕೆ.ಎಮ್.ಇಂಡಸ್ಟ್ರೀಸ್ ಮಾಲಕರಾದ ಕೆ.ಎಂ ಶೆಟ್ಟಿ ವಿದ್ಯಾರ್ಥಿವೇತನ ವಿತರಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಬಂಟರ ಸಂಘ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಸೇರಿದಂತೆ ಸಾಧಕರನ್ನು ಸಮಾಜದ ವತಿಯಿಂದ ಅಭಿನಂದಿಸಲಾಯಿತು. ಪ್ರವೀಣ್ ಭೋಜ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎರ್ಮಾಳು ಚಂದ್ರಹಾಸ ಶೆಟ್ಟಿ, ಮುಂಬೈ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ. ಸುರೇಂದ್ರ ಶೆಟ್ಟಿ, ಸಿರಿಮುಡಿ ದತ್ತಿ ನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಎರ್ಮಾಳು, ಯುವ ವಿಭಾಗದ ಅಧ್ಯಕ್ಷ ನವೀನ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ಜಯ ಶೆಟ್ಟಿ ಪದ್ರ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚಿನಲ್ಲಿ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮ

Posted On: 30-09-2023 08:57PM
ಪಡುಬಿದ್ರಿ : ನಮ್ಮ ನಮ್ಮ ಮನೆಯಿಂದಲೇ ಸ್ವಚ್ಛ ತೆ ಬಗ್ಗೆ ಅರಿವು ಮೂಡಿಸುವ ಮೂಲಕ ಪ್ರತಿ ಮನೆಯೂ ,ಪರಿಸರವೂ ಸ್ವಚ್ಛ ಇಡುವುದು ನಮ್ಮ ಆದ್ಯ ಕರ್ತವ್ಯ ಎಂದು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಹೇಳಿದರು.
ಅವರು ಜಿಲ್ಲಾಡಳಿತ ಉಡುಪಿ ಜಿಲ್ಲೆ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ, ಬ್ಲೂ ಫ್ಲಾಗ್ ಬೀಚ್ ಪಡುಬಿದ್ರಿ ಇದರ ವತಿಯಿಂದ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚಿನಲ್ಲಿ ಶನಿವಾರ ನಡೆದ "ಸ್ವಚ್ಛತಾ ಪಕ್ವಾಡ" ಸ್ವಚ್ಛತಾ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ನಮ್ಮ ದೇಶ ವಿಶ್ವಗುರು ಆಗುವ ಸಂದರ್ಭ ಕಾಣುತ್ತೇವೆ. ಸ್ವಚ್ಚತಾ ಕಾರ್ಯಕ್ರಮಗಳನ್ನು ಮಾಡಿ ಇತರರಿಗೆ ಮಾದರಿಯಾಗಬೇಕು. ಈ ಮೂಲಕ ದೇಶಕ್ಕೆ ನಮ್ಮ ಸೇವೆ ನೀಡಬೇಕು ಎಂದು ಕರೆಯಿತ್ತರು.
ಕಾರ್ಯಕ್ರಮದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಶಿಕಾಂತ್ ಪಡುಬಿದ್ರಿ, ಅಜಯ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಪಡುಬಿದ್ರಿ ಪೋಲೀಸ್ ಠಾಣಾ ಅಪರಾಧ ವಿಭಾಗ ಉಪನಿರೀಕ್ಷಕ ಸುದರ್ಶನ್ ದೊಡ್ಮನೆ, ಅಶೋಕ್ ಸಾಲ್ಯಾನ್ ಉಪಸ್ಥಿತರಿದ್ದರು.
ಶಿರ್ವ : ನಾಪತ್ತೆ ಪ್ರಕರಣ - ಶಂಕರಪುರ ಬಿಳಿಯಾರು ನಿವಾಸಿ ಇಂದು ಪತ್ತೆ

Posted On: 29-09-2023 08:45PM
ಕಾಪು : ತಾಲೂಕಿನ ಶಂಕರಪುರ ಬಿಳಿಯಾರು ನಿವಾಸಿ ಸುಮತಿ ಮೂಲ್ಯ ಗುರುವಾರ ನಾಪತ್ತೆಯಾಗಿರುವರು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಪ್ರಸಾರವಾಗಿದ್ದು, ಈ ಬಗ್ಗೆ ಅವರ ಪರಿಚಿತರು, ಕುಟುಂಬ ವರ್ಗ ಹುಡುಕಾಡಿದಾಗ ಸುಮತಿಯವರು ಅವರ ಮನೆಯ ಬಳಿ ಆರೋಗ್ಯವಾಗಿ ಸಿಕ್ಕಿರುತ್ತಾರೆ.
ನಿನ್ನೆಯಿಂದ ಇಂದಿನವರಿಗೂ ನಮ್ಮ ಕುಟುಂಬದ ಜೊತೆಗೆ ಸಹಕರಿಸಿದ ಶಿರ್ವ ಆರಕ್ಷಕ ಠಾಣೆ ಹಾಗೂ ಮಿತ್ರರಿಗೂ ಸುಮತಿ ಮೂಲ್ಯ ಕುಟುಂಬದವರು ಧನ್ಯವಾದ ತಿಳಿಸಿರುವರು.
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆ ಸಾಧ್ಯತೆ

Posted On: 29-09-2023 08:31PM
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 29ರಂದು ಆರೆಂಜ್ ಅಲರ್ಟ್, 30 ಮತ್ತು ಅಕ್ಟೋಬರ್ 1 ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 45-55 ಕಿ.ಮೀ ನಿಂದ 65ಕಿ.ಮೀ ವರೆಗೆ ಬಿರುಗಾಳಿ ಬೀಸಬಹುದು ಎಂದು ತಿಳಿಸಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಿದೆ. ಸಾರ್ವಜನಿಕರು ನದಿ/ನೀರಿರುವ ಪ್ರದೇಶ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ ಮರಗಳ ಹತ್ತಿರ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ
ಅಕ್ಟೋಬರ್ 1 : ಪಡುಬಿದ್ರಿ ಬಂಟರ ಸಂಘದಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ; ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Posted On: 28-09-2023 12:41PM
ಪಡುಬಿದ್ರಿ : ಹಲವಾರು ಸಮಾಜಮುಖಿ ಸೇವೆಗಳನ್ನು ಮಾಡಿರುವ ಪಡುಬಿದ್ರಿ ಬಂಟರ ಸಂಘದಿಂದ ಬಂಟ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು ರೂ. 20 ಲಕ್ಷ ಸಹಾಯಧನ ವಿತರಣಾ ಕಾರ್ಯಕ್ರಮ ಅಕ್ಟೋಬರ್ 1, ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು. ಅವರು ಪಡುಬಿದ್ರಿ ಬಂಟರ ಸಂಘದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸುಮಾರು 350 ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆಯ ಜೊತೆಗೆ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ಸಮಾಜದ ವೃದ್ಧರಿಗೆ ಆಶ್ರಯವಾಗಬೇಕೆಂಬ ದೃಷ್ಟಿಯಿಂದ ಸುಮಾರು 6 ಎಕರೆ ಜಾಗದಲ್ಲಿ ಬಂಟಾಶ್ರಯ, ಕುಟುಂಬ ಸೇವಾಶ್ರಮ ವೃದ್ಧಾಶ್ರಮ ನಿರ್ಮಿಸುವ ಯೋಜನೆಗೆ ಚಾಲನೆ ಮತ್ತು ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎಲ್ಲಾ ಸಮಾಜದವರಿಗೂ ಅನುಕೂಲವಾಗುವಂತೆ ಸಿರಿಮುಡಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಚಾಲನೆ ನೀಡಲಾಗುವುದು ಎಂದರು.
ಕಾರ್ಯಕ್ರಮವನ್ನು ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ ಆಳ್ವ ಉದ್ಘಾಟಿಸಲಿದ್ದು, ಹೇರಂಬ ಇಂಡಸ್ಟ್ರೀಸ್ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಕ್ರೆಡಿಟ್ ಕೋ ಆಪರೇಟಿವ್ ಗೆ ಚಾಲನೆ, ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಶಕ್ತರಿಗೆ ನೆರವು ವಿತರಣೆ, ಮುಂಬಯಿಯ ಉದ್ಯಮಿ ಎಲ್ಲೂರಿನ ಪ್ರವೀಣ ಭೋಜ ಶೆಟ್ಟಿಯವರಿಂದ ಬಂಟಾಶ್ರಯಕ್ಕೆ ಚಾಲನೆ, ಕೆ.ಎಮ್.ಇಂಡಸ್ಟ್ರೀಸ್ ಮಾಲಕರಾದ ಕೆ.ಎಂ ಶೆಟ್ಟಿಯವರಿಂದ ವಿಧ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಶಾಸಕರಾದ ಗುರ್ಮೆ ಸುರೇಶ ಶೆಟ್ಟಿಯವರಿಗೆ ಸಮಾಜದ ವತಿಯಿಂದ ಅಭಿನಂದನೆ ನಡೆಯಲಿದ್ದು, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿಯವರು ವಿವಿಧ ಗಣ್ಯರನ್ನು ಗೌರವಿಸಲಿದ್ದಾರೆ. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಮುಂಬೈ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ. ಸುರೇಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು.
ಈ ಸಂದರ್ಭ ಸಿರಿಮುಡಿ ದತ್ತಿ ನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ವಿಭಾಗದ ನವೀನ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಜಯ ಶೆಟ್ಟಿ ಪದ್ರ ಉಪಸ್ಥಿತರಿದ್ದರು.
ಉಡುಪಿ : ಲಯನ್ಸ್, ಲಿಯೋ ಕ್ಲಬ್ ಮಲ್ಪೆ - ವಿಶ್ವ ಓಜೋನ್ ದಿನಾಚರಣೆ ; ಸಾಧಕರಿಗೆ ಅಭಿನಂದನೆ

Posted On: 25-09-2023 09:59PM
ಉಡುಪಿ : ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ ವತಿಯಿಂದ ವಿಶ್ವ ಓಜೋನ್ ದಿನಾಚರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ರವಿವಾರ ಮಲ್ಪೆ ಗೋಪಾಲ್ ಸಿ ಬಂಗೇರ ಇವರ ಮನೆಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಹರಿನಾಥ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪೂರ್ವ ಗವರ್ನರುಗಳಾದ ಶಿವರಾಂ ಶೆಟ್ಟಿ ತಲ್ಲೂರು, ಶ್ರೀಧರ್ ಶೇಣವ ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಹರಿನಾಥ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪೂರ್ವ ಗವರ್ನರುಗಳಾದ ಶಿವರಾಂ ಶೆಟ್ಟಿ ತಲ್ಲೂರು, ಶ್ರೀಧರ್ ಶೇಣವ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದಭ೯ದಲ್ಲಿ ಶಿಕ್ಷಕರಾದ ಗೋವಿಂದರಾಯ ನಾಯ್ಕ ದಂಪತಿಗಳನ್ನು ಮತ್ತು ಇಂಜಿನಿಯರ್ ರಂಜನ್ ಕೆ ಯವರನ್ನು ಗೌರವಿಸಲಾಯಿತು. ಆತಿಥ್ಯ ವಹಿಸಿದ ಗೋಪಾಲ್ ಸಿ ಬಂಗೇರ ಮತ್ತು ವಿಜಯ ಯುವ ಬಂಗೇರ ಅವರನ್ನು ಗುರುತಿಸಲಾಯಿತು.
ಕಾಪು : ರಾಜೇಶ್ ಕುಲಾಲ್ ಗೆ ಆರ್ಥಿಕ ನೆರವು : ಕಾಪು ಕುಲಾಲ ಯುವ ವೇದಿಕೆ , ಕಾಪು ಕುಲಾಲ ಸಂಘದಿಂದ ಸಹಾಯಹಸ್ತ

Posted On: 25-09-2023 09:51PM
ಕಾಪು : ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳ ಬೆಂಬಲದಿಂದ ಒಟ್ಟುಗೂಡಿದ ರೂ.75,000 ಸಹಾಯಧನವನ್ನು ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.
ಈ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ, ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸತೀಶ್ ಕುಲಾಲ್ ಕಡಿಯಾಳಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ, ನಿವೃತ್ತ ಸೈನಿಕ ಬಾಲಕೃಷ್ಣ ಭಂಡಾರಿ, ಬೊಗ್ಗು ಮೂಲ್ಯ ಬೇಲಾಡಿ, ಶಂಕರ ಮೂಲ್ಯ ಬೇಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಸುಮಂತ್ ಕುಲಾಲ್ ಪಾದೂರು, ರವೀಂದ್ರ ಕುಲಾಲ್ ಪಣಿಯೂರು, ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ, ಮಹೇಶ್ ಕುಲಾಲ್ ಬೇಲಾಡಿ, ಸತೀಶ್ ಕುಲಾಲ್ ಉಳಿಯಾರು, ಜಿಲ್ಲಾ ಕುಲಾಲ ಸಂಘಟನೆಗಳು, ದಾನಿಗಳು ಉಪಸ್ಥಿತರಿದ್ದರು.
ನೆರವು ನೀಡುವವರು ರಾಜೇಶ್ ಕುಲಾಲ್ ಅವರ ಪತ್ನಿ ವಿನೋದ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು.
ಬ್ಯಾಂಕ್ ಖಾತೆ ಮಾಹಿತಿ ಹೀಗಿದೆ: Contact Number::9008559310 Google pay number 9008559310 Bank detail CANARA BANK Mudharangadi. NAME: Vinoda A/c number: 110106025209 IFSC: CNRB0000638.
ಪೆರಂಪಳ್ಳಿಯ ಶರೀನಾರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ

Posted On: 25-09-2023 04:52PM
ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ 'ಮಿಸ್ಟರ್ & ಮಿಸ್ ಟೀನ್ ಕರ್ನಾಟಕ' ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ 'ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್' ಟೈಟಲ್ ಪ್ರಶಸ್ತಿ ದೊರಕಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ ಶರೀನಾರವರಿಗೆ ಪ್ರತಿಷ್ಠಿತ ಟೈಟಲ್ ಪ್ರಶಸ್ತಿ ದೊರಕಿದ್ದು, ಫ್ಯಾಶನ್ ಮಾಡೆಲಿಂಗ್ ನ ಪ್ರಥಮ ಹೆಜ್ಜೆಯಲ್ಲಿಯೇ ಯಶಸ್ವಿಯ ಮೈಲುಗಲ್ಲು ಇಟ್ಟಿದ್ದಾರೆ.
ಪೆರಂಪಳ್ಳಿಯ ಸುನಿಲ್ ಮತ್ತು ಅನಿತಾ ಮತಾಯಸ್ ದಂಪತಿಗಳ ಮಗಳಾಗಿರುವ ಶರೀನಾ ಮತಾಯಸ್ ಪ್ರತಿಭಾವಂತೆಯಾಗಿದ್ದು, ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪೆರಂಪಳ್ಳಿಯ ಫಾತಿಮಾ ಮಾತೆ ದೇವಾಲಯದ ಐಸಿವೈಎಂ ಯುವ ಸಂಘಟನೆಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಪಡುಬಿದ್ರಿ : ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Posted On: 25-09-2023 04:34PM
ಪಡುಬಿದ್ರಿ : ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೋಮವಾರ ಪಡುಬಿದ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಎಲ್ಲದಡಿ ಅವರ ನಿವಾಸದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ನಡೆಯಿತು.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಗಣ್ಯರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ಧೀರಜ್ ಮತ್ತಿತರರು ಉಪಸ್ಥಿತರಿದ್ದರು.