Updated News From Kaup

ಅಕ್ಟೋಬರ್ 13-14 : ದೇಸಿ ಕ್ರ್ಯೂ ಉದ್ಯೋಗ ಮೇಳ

Posted On: 11-10-2023 07:19PM

ಕಾಪು : ಇಲ್ಲಿನ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿಯಿರುವ ದೇಸಿ ಕ್ರ್ಯೂ ಸಂಸ್ಥೆಯಿಂದ ಅಕ್ಟೋಬರ್ 13 ಮತ್ತು 14 ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ನಡೆಯಲಿದೆ.

ಕಾಪು : ನೈಋತ್ಯ ಪದವೀಧರ ಕ್ಷೇತ್ರ, ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಪೂರ್ವ ಸಿದ್ಧತಾ ಸಭೆ

Posted On: 11-10-2023 07:08PM

ಕಾಪು : ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಯ ಕುರಿತು ಬುಧವಾರ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ಜರಗಿತು.

ಅಕ್ಟೋಬರ್ 24 : ಶಿರ್ವ ಸಾರ್ವಜನಿಕ ಶಾರದೋತ್ಸವ - ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 11-10-2023 06:56PM

ಶಿರ್ವ : ಸಾರ್ವಜನಿಕ ಶಾರದೋತ್ಸವ ಸೇವಾ ಸಮಿತಿ, ಶಿರ್ವ ಇದರ ವತಿಯಿಂದ ಅಕ್ಟೋಬರ್ 24 ರಂದು ಜರುಗಲಿರುವ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ಕೇಂಜ ಶ್ರೀದರ್ ತಂತ್ರಿ ಮತ್ತು ಭಾರ್ಗವ ತಂತ್ರಿಯವರ ದಿವ್ಯ ಹಸ್ತ ದಿಂದ ಬಿಡುಗಡೆ ಮಾಡಲಾಯಿತು.

ಕಾಪು : ಬಸ್ ನಿಲ್ದಾಣ ಬಳಿ ಬಿದ್ದುಕೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಆಸೀಫ್ ಆಪತ್ಭಾಂದವ ಮತ್ತು ತಂಡ

Posted On: 11-10-2023 06:45PM

ಕಾಪು : ಕಳೆದ ಎರಡು ದಿನದಿಂದ ಹೊಸ ಮಾರಿಗುಡಿ ಬಳಿಯ ಬಸ್ ನಿಲ್ದಾಣದ ಹತ್ತಿರ ಅನಾಥವಾಗಿ ಬಿದ್ದುಕೊಂಡಿದ್ದ ವ್ಯಕ್ತಿಯೋರ್ವರನ್ನು ಮೈಮುನಾ ಫೌಂಡೇಶನ್ (ರಿ.) ಇದರ ಆಸೀಫ್ ಆಪತ್ಭಾಂದವ ಮತ್ತು ತಂಡ ಅವರನ್ನು ಸ್ನಾನ ಮಾಡಿಸಿ, ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿದರು.

ಅಕ್ಟೋಬರ್ 15 : ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ

Posted On: 11-10-2023 06:26PM

ಕಾಪು : ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಯುವ ಸೇನೆಯ ನೇತೃತ್ವದಲ್ಲಿ ಉಡುಪಿಯಲ್ಲಿ ಅಕ್ಟೋಬರ್ 15ರಂದು ಆಚರಿಸಲಿರುವ ಮಹಿಷಾ ದಸರಾ ಆಚರಣೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ ಎಂದು ಸಮಿತಿಯ ವಿಭಾಗೀಯ ಸಂಚಾಲಕ ಶೇಖರ್ ಹೆಜಮಾಡಿಯವರು ಬುಧವಾರ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದಿಂದ ಕುತ್ಯಾರು ಆನೆಗುಂದಿ ಗೋಶಾಲೆಗೆ ಹಿಂಡಿ, ಹಸಿ ಹುಲ್ಲು ಸಮರ್ಪಣೆ

Posted On: 10-10-2023 04:32PM

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಆನೆಗುಂದಿ ಮಠದ ಗೋಶಾಲೆಗೆ ಹಿಂಡಿ ಮತ್ತು ಹಸಿ ಹುಲ್ಲನ್ನು ಸಮರ್ಪಿಸಲಾಯಿತು.

ಉಡುಪಿ : ಯುವ ರೆಡ್‌ಕ್ರಾಸ್ ಘಟಕದ ಕಾಲೇಜು ವಿದ್ಯಾರ್ಥಿ ನಾಯಕರುಗಳಿಗೆ ತರಬೇತಿ

Posted On: 10-10-2023 04:21PM

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಜಂಟಿ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾಲೇಜುಗಳ ಯುವರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿ ನಾಯಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವು ರೆಡ್‌ಕ್ರಾಸ್ ಭವನದಲ್ಲಿ ಸೋಮವಾರ ನಡೆಯಿತು.

ನವೆಂಬರ್ 4 : ಕಾಪು ತಾಲ್ಲೂಕು ಘಟಕದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ - ಶ್ರೀಧರಮೂರ್ತಿ ಶಿರ್ವ ಸರ್ವಾಧ್ಯಕ್ಷತೆ

Posted On: 10-10-2023 07:12AM

ಬಂಟಕಲ್ಲು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲ್ಲೂಕು ಘಟಕದ 5ನೇ ಕನ್ನಡ ಸಾಹಿತ್ಯ ಸಮ್ಮೇಳನವು ನವೆಂಬರ್ 4, ಶನಿವಾರ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಲಿದೆ.

ಪಡುಕುತ್ಯಾರು : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ,ಕಟಪಾಡಿ - ಗುರು ಸೇವಾ ಪರಿಷತ್ತು ಪ್ರಮುಖರ ಸಭೆ

Posted On: 10-10-2023 07:07AM

ಪಡುಕುತ್ಯಾರು : ಆನೆಗುಂದಿ ಗುರು ಸೇವಾ ಪರಿಷತ್ತಿನ ವಿವಿಧ ಪ್ರಾದೇಶಿಕ ಸಮಿತಿಗಳ ಮುಖ್ಯಸ್ಥರುಗಳ ಮತ್ತು ಪದಾಧಿಕಾರಿಗಳು ಸಭೆಯು ನಡೆಯಿತು.

ಪಡುಕುತ್ಯಾರು : ಆನೆಗುಂದಿ ಶ್ರೀ ಚಾತುರ್ಮಾಸ್ಯ ಕೃತಜ್ಞತಾ ಸಮರ್ಪಣಾ ಸಭೆ

Posted On: 10-10-2023 07:04AM

ಪಡುಕುತ್ಯಾರು :ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಶೋಭಕೃತ್ ನಾಮ ಸಂವತ್ಸರದ 19ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ-2023 ಜುಲೈ 3ರಿಂದ ಸೆಪ್ಟಂಬರ್ 29 ತನಕ ಯಶಸ್ವಿಯಾಗಿ ಸಂಪನ್ನಗೊಂಡ ಬಗ್ಗೆ ಸೇವಾ ಕಾರ್ಯಕರ್ತರಿಗೆ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು.