Updated News From Kaup
ಉಡುಪಿ ಜಿಲ್ಲಾ ಜೆಡಿಎಸ್ ತಂಡದಿಂದ ನೇಜಾರುವಿನ ಮೃತ ಆಯ್ನಾಝ್ ತಂದೆ, ಕುಟುಂಬಸ್ಥರ ಭೇಟಿ
Posted On: 22 Nov 2023, 06:39 PM
ಉಡುಪಿ : ಜೆಡಿಎಸ್ ಜಿಲ್ಲಾಧ್ಯಕ್ಷರ ಸಹಿತ ಪದಾಧಿಕಾರಿಗಳು ನೇಜಾರಿನಲ್ಲಿ ಹತ್ಯೆಗೀಡಾದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿಯವರು ಮೃತ ಆಯ್ನಾಝ್ ತಂದೆ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕರೆಮಾಡಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಯಧ್ಯಕ್ಷ ವಾಸುದೇವ ರಾವ್, ಪ್ರಧಾನ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಶ್ರೀಕಾಂತ್ ಪೂಜಾರಿ ಹೆಬ್ರಿ, ರಝಕ್ ಉಚ್ಚಿಲ, ವೆಂಕಟೇಶ್, ಅಶ್ರಫ್, ಅಮಿರ್ ಶಿರ್ವ, ಉದಯ ಶೆಟ್ಟಿ, ಬಿ.ಕೆ ಹೆಜಮಾಡಿ ಮತ್ತು ರಶೀದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ : ಕಾಪು ವಲಯದ ಪದಪ್ರದಾನ ಸಮಾರಂಭ
Posted On: 22 Nov 2023, 07:41 AM
ಕಾಪು : ಬೇರೆಯವರ ಮುಖದಲ್ಲಿ ನಗು ತರಿಸುವ ಛಾಯಾಗ್ರಾಹಕರ ಕಾರ್ಯ ದೇವರು ಮೆಚ್ಚುವಂತದ್ದು. ತಂತ್ರಜ್ಞಾನ ಬದಲಾವಣೆಗೆ ತಕ್ಕಂತೆ ಛಾಯಾಗ್ರಾಹಕರು ಇರಬೇಕಾಗಿದೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಹೇಳಿದರು. ಅವರು ಮಂಗಳವಾರ ಕಾಪುವಿನ ಹೋಟೆಲ್ ಕೆ 1 ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ -ಉಡುಪಿ ಜಿಲ್ಲೆ ಇದರ ಕಾಪು ವಲಯದ ಪದಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಧಿಕಾರ ಹಸ್ತಾಂತರ : ಎಸ್ ಕೆ ಪಿ ಎ ದ.ಕ, ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ ಸಮ್ಮುಖದಲ್ಲಿ ಎಸ್ ಕೆ ಪಿ ಕಾಪು ವಲಯದ ಅಧ್ಯಕ್ಷ ವಿನೋದ್ ಕಾಂಚನ್ ನಿಯೋಜಿತ ಅಧ್ಯಕ್ಷ ಸಚಿನ್ ಉಚ್ಚಿಲ ಅವರಿಗೆ, ಕಾರ್ಯದರ್ಶಿ ರಾಜೇಶ್ ಶಂಕರಪುರ ನಿಯೋಜಿತ ಕಾರ್ಯದರ್ಶಿ ರಾಘವೇಂದ್ರ ಭಟ್ ಅವರಿಗೆ, ಕೋಶಾಧಿಕಾರಿ ರಾಘವೇಂದ್ರ ಭಟ್ ನಿಯೋಜಿತ ಕೋಶಾಧಿಕಾರಿ ಕಿರಣ್ ಕಾಪುರವರಿಗೆ ಅಧಿಕಾರ ಹಸ್ತಾಂತರಿಸಿದರು. ಸನ್ಮಾನ : ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ರಂಗಕರ್ಮಿ ಗಣೇಶ್ ರಾವ್ ಎಲ್ಲೂರು, ನೂತನ ಅಧ್ಯಕ್ಷ ಸಚಿನ್ ಉಚ್ಚಿಲ, ನಿರ್ಗಮಿತ ಅಧ್ಯಕ್ಷ ವಿನೋದ್ ಕಾಂಚನ್ ದಂಪತಿಗಳನ್ನು ಸನ್ಮಾನಿಸಲಾಯಿತು. ಬಹುಮಾನ ವಿತರಣೆ : ಉಚ್ಚಿಲ ದಸರಾ ಬಗ್ಗೆ ಆಯೋಜಿಸಲಾದ ವಿಡಿಯೋಗ್ರಫಿ ಸ್ಪರ್ಧಾ ವಿಭಾಗದಲ್ಲಿ ಸಂತೋಷ್ ಕಾಪು (ಪ್ರಥಮ), ರಾಘವೇಂದ್ರ ಜೋಗಿ (ದ್ವಿತೀಯ), ಪ್ರಕಾಶ್ ಆಚಾರ್ಯ (ತೃತೀಯ), ಛಾಯಾಗ್ರಹಣ ವಿಭಾಗದಲ್ಲಿ ಪ್ರದೀಪ್ ಉಪ್ಪೂರು (ಪ್ರಥಮ), ಹರೀಶ್ ಆಚಾರ್ಯ ಉಡುಪಿ (ದ್ವಿತೀಯ), ರತನ್ ಶೆಟ್ಟಿ (ತೃತೀಯ) ಬಹುಮಾನ ಪಡೆದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಕೆ ಪಿ ಎ ದ.ಕ, ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್ ವಹಿಸಿದ್ದರು. ಈ ಸಂದರ್ಭ ಮೊಗವೀರ ಮಹಾಜನ ಸಂಘ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಎಸ್ ಕೆ ಪಿ ಎ ದ.ಕ ಮತ್ತು ಉಡುಪಿ ಸಂಚಾಲಕರಾದ ಕರುಣಾಕರ ಕಾನಂಗಿ, ಎಸ್ಕೆಪಿಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್ ಬಂಟ್ವಾಳ, ಎಸ್ ಕೆ ಪಿ ಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ,ಎಸ್ ಕೆಪಿಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್, ಎಸ್ ಕೆ ಪಿ ಎ ಉಪಾಧ್ಯಕ್ಷ ಜಯಕರ ಸುವರ್ಣ, ಪದಾಧಿಕಾರಿಗಳಾದ ಕರುಣಾಕರ ನಾಯಕ್, ಸತೀಶ್ ಶರ್ಮಾಳು, ಸಂತೋಷ್ ಕಾಪು, ದೀಪಕ್ ಶೆಣೈ, ಕಿರಣ್ ಕಾಪು, ಪ್ರವೀಣ್ ಕಾಪು, ಅರುಲ್ ಶಿರ್ವ, ವಿಕ್ರಂ ಭಟ್, ಉದಯ ಇನ್ನಾ, ವೀರೇಂದ್ರ ಶಿರ್ವ, ವಿನೋದ್ ಕಾಂಚನ್, ಕೃಷ್ಣರಾವ್, ರವಿ ಕುಮಾರ್, ಶ್ರೀನಿವಾಸ ಐತಾಳ್, ಉದಯ್ ಮುಂಡ್ಕೂರು, ಅಶೋಕ್ ಪಡುಬಿದ್ರಿ, ಅಶೋಕ್ ಸುರಭಿ, ಇರ್ಷಾದ್ ಬೆಳಪು, ರವಿರಾಜ್ ಶೆಟ್ಟಿ ಬೆಳ್ಮಣ್ ಮತ್ತಿತರರು ಉಪಸ್ಥಿತರಿದ್ದರು. ರವಿ ಕುಮಾರ್ ಕಟಪಾಡಿ ಸ್ವಾಗತಿಸಿದರು. ರಾಘವೇಂದ್ರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಭಟ್ ವಂದಿಸಿದರು.
ಶಿರ್ವ : ಸಾಹಿತ್ಯಕ್ಕೆ ಜಾತಿ ಧರ್ಮದ ಬೇಧವಿಲ್ಲ ಅದು ಎಲ್ಲರನ್ನೂ ಒಂದುಗೂಡಿಸುತ್ತದೆ - ಪ್ರೊ.ವೈ.ಭಾಸ್ಕರ್ ಶೆಟ್ಟಿ
Posted On: 21 Nov 2023, 04:05 PM
ಶಿರ್ವ : ದೇಶಾಭಿಮಾನದ ಜೊತೆಗೆ ಭಾಷಾಭಿಮಾನ ಕೂಡ ಇರಬೇಕು. ಭಾಷೆಯ ಮೇಲೆ ಅಭಿಮಾನ ಇರಬೇಕು ಹೊರತು ಅಹಂಕಾರ ಇರಬಾರದು. ಸಾಹಿತ್ಯಕ್ಕೆ ಜಾತಿ ಧರ್ಮದ ಬೇಧವಿಲ್ಲ ಅದು ಎಲ್ಲರನ್ನೂ ಒಂದುಗೂಡಿಸುತ್ತದೆ. ಲಕ್ಷ ಲಕ್ಷದಲ್ಲಿ ಜನಪ್ರತಿನಿಧಿಗಳು ತಮಗಾಗಿ ವೆಚ್ಚ ಮಾಡುತ್ತಿರುವಾಗ ಅವರಿಗೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಬಗ್ಗೆ ಲಕ್ಷ್ಯವಿಲ್ಲ. ಇದು ರಾಜಕೀಯ ವ್ಯವಸ್ಥೆಯ ದುರಂತವಾಗಿದೆ ಎಂದು ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕದಿಂದ ಕನ್ನಡ ರಾಜ್ಯೋತ್ಸವ ಮಾಸಾಚಾರಣೆ ಸಂಪದ - 2023 ತಿಂಗಳ ಸಡಗರ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಶಿರ್ವದ ಎಂ. ಎಸ್. ಆರ್. ಎಸ್ ಕಾಲೇಜಿನಲ್ಲಿ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವಿದ್ಯಾ ಅಮ್ಮಣ್ಣಾಯ ಮಾತನಾಡಿ ಅಮ್ಮನ ಮಡಿಲಿನಿಂದ ಸಾಹಿತ್ಯವು ಆರಂಭವಾಗಿ ನಮ್ಮ ಬದುಕಿನ ಉದ್ದಕ್ಕೂ ಇರುತ್ತದೆ. ಸಾಹಿತ್ಯವು ಪದಗಳ ಜೋಡಣೆಯೊಂದಿಗೆ, ಅನುಭವ ಜೊತೆಗೆ ಭಾವನಾತ್ಮಕತೆಯನ್ನು ಹೊಂದಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಪುಂಡಲೀಕ ಮರಾಠೆ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ದೇವದಾಸ ಹೆಬ್ಬಾರ್, ಎಂ. ಎಸ್. ಆರ್. ಎಸ್ ಕಾಲೇಜಿನ ಪ್ರಾಚಾರ್ಯರಾದ ಡಾ. ನಯನ ಪಕ್ಕಳ, ಕಾಪು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿ ದೀಪಕ್ ಕೆ. ಬೀರ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ದೇವದಾಸ ಹೆಬ್ಬಾರ್ ಪ್ರಸ್ತಾವಿಸಿ, ಸ್ವಾಗತಿಸಿದರು. ಎಂ. ಎಸ್. ಆರ್. ಎಸ್ ಕಾಲೇಜಿನ ಕನ್ನಡ ಉಪನ್ಯಾಸಕಿ ವರಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಕಾಪು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು.
ಹೆಜಮಾಡಿ : ಫಾತಿಮಾ ರಲಿಯಾ ಅವರ 'ಕಡಲು ನೋಡಲು ಹೋದವಳು' ಕೃತಿ ಪಿ. ಲಂಕೇಶ್ ಪ್ರಶಸ್ತಿಗೆ ಆಯ್ಕೆ
Posted On: 21 Nov 2023, 03:44 PM
ಹೆಜಮಾಡಿ : ಗ್ರಾಮದ ಫಾತಿಮಾ ರಲಿಯಾ ಅವರ 'ಕಡಲು ನೋಡಲು ಹೋದವಳು' ಕೃತಿ ಶಿವಮೊಗ್ಗದ ಕರ್ನಾಟಕ ಸಂಘ ಪ್ರತೀ ವರ್ಷ ನೀಡುವ ಪಿ. ಲಂಕೇಶ್ ಪ್ರಶಸ್ತಿಗೆ ಆಯ್ಕೆಯಾಗಿದೆ. ನವೆಂಬರ್ 26ರಂದು ಶಿವಮೊಗ್ಗದ ಹಸೂಡಿ ವೆಂಕಟ ಶಾಸ್ತ್ರಿಗಳ ಸಾಹಿತ್ಯ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಹತ್ತು ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಈ ಪ್ರಶಸ್ತಿ ಒಳಗೊಂಡಿದೆ. ಫಾತಿಮಾ ರಲಿಯಾರವರ ಪ್ರಥಮ ಕೃತಿಯಾಗಿದೆ. ಅಹರ್ನಿಶಿ ಪ್ರಕಾಶನ ಪ್ರಕಟಿಸಿದೆ.
ಡಿಸೆಂಬರ್ 24 : ಪಲಿಮಾರಿನಲ್ಲಿ ರಕ್ತದಾನ ಶಿಬಿರ
Posted On: 21 Nov 2023, 02:47 PM
ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರಿತೇಶ್ ದೇವಾಡಿಗ : 8660365719 ಹರೀಶ್ : 9964553031
ನವೆಂಬರ್ 26 : ಶ್ರೀ ಧೂಮಾವತಿ ದೈವಸ್ಥಾನ ಅವರಾಲು ಮಟ್ಟು ಇದರ 6ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ
Posted On: 21 Nov 2023, 02:37 PM
ಪಲಿಮಾರು : ಶ್ರೀ ಧೂಮಾವತಿ ದೈವಸ್ಥಾನ ಅವರಾಲು ಮಟ್ಟು ಇದರ 6ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವವು ನವೆಂಬರ್ 26, ಆದಿತ್ಯವಾರ ಜರಗಲಿದೆ. ಅವರಾಲು ಕಂಕಣಗುತ್ತು ಗುತ್ತಿನಾರ್ ಕೃಷ್ಣ ಶೆಟ್ಟಿ ಜ್ಯೋತಿ ಬೆಳಗಿಸುವ ಮೂಲಕ ಭಜನಾ ಮಂಗಲೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ ಗಂಟೆ 8:30ಕ್ಕೆ ಭಜನಾ ಕಾರ್ಯಕ್ರಮ ಆರಂಭವಾಗಲಿದ್ದು ಮಧ್ಯಾಹ್ನ 12.30 ಕ್ಕೆ ಧೂಮಾವತಿ ಪರಿವಾರ ದೈವಗಳಿಗೆ ಹೋಮ, ಪಂಚಕಜ್ಜಾಯ ಸೇವೆ, ಮಧ್ಯಾಹ್ನ ಗಂಟೆ 1ಕ್ಕೆ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹಿರ್ಗಾನದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ : ಬೈಂದೂರು ಮಡಿಲಿಗೆ "SMG ಟ್ರೋಫಿ 2023"
Posted On: 21 Nov 2023, 02:33 PM
ಕಾರ್ಕಳ : ಭಾರತೀಯ ಕಥೋಲಿಕ್ ಯುವ ಸಂಚಲನ(ICYM) ಹಿರ್ಗಾನ ಇದರ ಮುಂದಾಳತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಥೋಲಿಕ ಕ್ರೈಸ್ತ ಸಮಾಜ ಬಾಂಧವರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಕೂಟ "SMG ಟ್ರೋಫಿ 2023" ಹಿರ್ಗಾನ ಚರ್ಚ್ ಮೈದಾನದಲ್ಲಿ ನವೆಂಬರ್ 19 ರಂದು ಅದ್ದೂರಿಯಾಗಿ ನೆರವೇರಿತು. ಉಡುಪಿ ಧರ್ಮ ಪ್ರಾಂತ್ಯದ ವಿವಿಧ ಚರ್ಚುಗಳಿಂದ 32 ತಂಡಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು. ಹಿರ್ಗಾನ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಹಾಗೂ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರ್ಗಾನ ಧರ್ಮ ಕೇಂದ್ರದ ಧರ್ಮ ಗುರುಗಳಾದ ವಂ. ಸ್ವಾಮಿ ಜೋನ್ ವಾಲ್ಟರ್ ಮೆಂಡೋಂನ್ಸಾ ವಹಿಸಿದ್ದರು. ವೇದಿಕೆಯಲ್ಲಿ ಎಫ್.ಎಂ.ಎಂ ಕಾನ್ವೆಂಟಿನ ಮುಖ್ಯಸ್ಥೆ ಸಿ. ಬ್ರಿಜಿತ್ ಮಾಡ್ತಾ, ಪಾಲನಾ ಮಂಡಳಿಯ ಸದಸ್ಯರು, ಐಸಿವೈಎಂ ಕಾರ್ಕಳ ವಲಯದ ಸದಸ್ಯರು, ಮತ್ತಿತರರು ಹಾಜರಿದ್ದರು. ಫೈನಲ್ ಪಂದ್ಯದಲ್ಲಿ ಬೈಂದೂರು ದೇವಾಲಯದ ತಂಡ ಪ್ರಥಮ ಸ್ಥಾನ ಗಳಿಸಿದರೆ, ಶಂಕರಪುರ ದೇವಾಲಯದ ತಂಡವು ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಸಮಾರಂಭದಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಯುವ ನಿರ್ದೇಶಕರಾದ ವಂ. ಸ್ವಾಮಿ ಸ್ಟೀವನ್ ಫೆರ್ನಾಂಡಿಸ್, ಕಾರ್ಕಳ ವಲಯದ ಯುವ ನಿರ್ದೇಶಕರಾದ ವಂ. ಲ್ಯಾರಿ ಪಿಂಟೊ, ಹಿರ್ಗಾನ ಧರ್ಮ ಕೇಂದ್ರದ ಧರ್ಮ ಗುರುಗಳಾದ ವಂ. ಸ್ವಾಮಿ ಜೋನ್ ವಾಲ್ಟರ್ ಮೆಂಡೋಂನ್ಸಾ, ಎಫ್ಎಂಎಂ ಕಾನ್ವೆಂಟಿನಾ ಮುಖ್ಯಸ್ಥರಾದ ಸಿ. ಬ್ರಿಜಿತ್ ಮಾಡ್ತಾ, ಐಸಿವೈಯಂ ಕೇಂದ್ರೀಯ ಅಧ್ಯಕ್ಷೆ ಕು. ಅಶ್ಲಿ ಡಿಸೋಜಾ, ಹಿರ್ಗಾನ ಘಟಕದ ಸಲಹೆಗಾರರಾದ ಝಿನ ಡಿಸಿಲ್ವಾ, ಅಧ್ಯಕ್ಷ ಗ್ರೇಶನ್ ಡಿಸೋಜಾ ಹಾಗೂ ಕಾರ್ಯದರ್ಶಿ ಅಶುವಲ್ ಡಿಸೋಜಾ, ಮತ್ತಿತರು ಉಪಸ್ಥಿತರಿದ್ದರು. ಎಲ್ಸನ್ ಹಿರ್ಗಾನ್ ಕಾರ್ಯಕ್ರಮ ನಿರೂಪಿಸಿದರು.
ಪಡುಬಿದ್ರಿ : ಕೆ.ಪಿ.ಎಸ್ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ
Posted On: 21 Nov 2023, 02:28 PM
ಪಡುಬಿದ್ರಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡುಬಿದ್ರಿ ಇದರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಮಂಗಳವಾರ ಜರಗಿತು. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕುಂದು ಕೊರತೆಯ ಬಗ್ಗೆ ಮಾಹಿತಿ ಪಡೆದು ಇದಕ್ಕೆ ಪರಿಹಾರೋಪಾಯ ಕಂಡುಕೊಳ್ಳುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಪದ್ಮಿನಿ ತಂತ್ರಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಪ್ರಾಂಶುಪಾಲರಾದ ಅಜಯ್, ಮುಖ್ಯಶಿಕ್ಷಕರಾದ ಕೃಷ್ಣಯ್ಯ, ಗೀತಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣ ಬಂಗೇರ ಹಾಗೂ ರವೀಂದ್ರನಾಥ ಜಿ ಶೆಟ್ಟಿ, ದಯಾನಂದ ಶೆಟ್ಟಿ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಉಪನ್ಯಾಸಕರು, ಸಹ ಶಿಕ್ಷಕರು ಉಪಸ್ಥಿತರಿದ್ದರು.
ಉಡುಪಿ : ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
Posted On: 21 Nov 2023, 02:22 PM
ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಉತ್ತರ ಕನ್ನಡ ಜಿಲ್ಲಾ ವಿಭಾಗ ಇದರ ವತಿಯಿಂದ ಹೊನ್ನಾವರದಲ್ಲಿ ನಡೆಯಲಿರುವ ಕರಾವಳಿ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಸಾಮಾಜಿಕ ಕಾರ್ಯಕರ್ತ ರಕ್ತದಾನಿ ರಾಘವೇಂದ್ರ ಪ್ರಭು ಕವಾ೯ಲುರವರು ಆಯ್ಕೆಯಾಗಿದ್ದಾರೆ.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ
Posted On: 20 Nov 2023, 08:18 PM
ಪಡುಬಿದ್ರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ, ಉಡುಪಿ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಪಡುಬಿದ್ರಿ ಸಹಕಾರ ಸಂಗಮ ವೈ ಲಕ್ಷ್ಮಣ ಸಭಾಂಗಣದಲ್ಲಿ ಆಯೋಜಿಸಲಾದ "70ನೇ ಅಖಿಲ ಭಾರತ ಸಹಕಾರ ಸಪ್ತಾಹ" ಸಮಾರೋಪ ಸಮಾರಂಭವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ರೈತರಿಗೆ ಅನುಕೂಲಕರವಾದ ಸಹಕಾರಿ ಸಂಸ್ಥೆಗಳು ಬಹು ಬೇಗನೆ ಅವರಿಗೆ ಬೇಕಾದ ಹಣಕಾಸಿನ ಸಹಾಯದ ಜೊತೆಗೆ ಇತರೆ ವ್ಯವಸ್ಥೆಗೆ ಪೂರಕವಾಗಿದೆ. ನಮ್ಮ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಇತರೆಡೆಗಳಿಗೆ ಮಾದರಿ ಎನಿಸಿದೆ. ಸಮಾಜಮುಖಿ ಕೆಲಸಗಳಿಗೆ ಸಹಕಾರಿ ಕ್ಷೇತ್ರವು ಪ್ರೋತ್ಸಾಹಿಸುತ್ತಿದೆ ಎಂದರು. ಭಾರತದಲ್ಲಿ ಸಹಕಾರಿ ಕ್ಷೇತ್ರಕ್ಕೆ 119 ವರ್ಷಗಳ ಇತಿಹಾಸವಿದೆ ಎಂದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನವೀಕೃತ ಹವಾ ನಿಯಂತ್ರಿತ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು. ಕುರ್ಚಿ/ಸಹಾಯ ಧನ ವಿತರಣೆ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ವತಿಯಿಂದ ಸ್ವಸಹಾಯ ಗುಂಪಿಗೆ 25 ಪ್ಲಾಸ್ಟಿಕ್ ಕುರ್ಚಿಗಳನ್ನು ಮತ್ತು ಸುಮಾರು 200 ರೈತರಿಗೆ ತಲಾ 3 ಸಾವಿರ ರೂ. ನಂತೆ ಸಹಾಯಧನವನ್ನು ವಿತರಿಸಲಾಯಿತು. ಸನ್ಮಾನ : ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಮಂಗಳೂರು ಇದರ ಅಧ್ಯಕ್ಷರಾದ ಡಾ। ಎಮ್. ಎನ್. ರಾಜೇಂದ್ರ ಕುಮಾರ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ಶಶಿಕಲಾ ವೈ., ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ, ನಿವೃತ್ತ ಸಹಕಾರಿ ಮೇಲ್ವಿಚಾರಕ ಬಾಲಕೃಷ್ಣ ರಾವ್ ಅವರನ್ನು ಸಮ್ಮಾನಿಸಲಾಯಿತು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಸಹಕಾರಿ ಯೂನಿಯನ್ ನಿ. ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಬೆಳಪು ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ವೈ, ಕುಂದಾಪುರ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ನಿವೃತ್ತ ಪ್ರಾಂಶುಪಾಲರು, ಜಾನಪದ ವಿದ್ವಾಂಸರಾದ ಗಣನಾಥ್ ಎಕ್ಕಾರ್, ಅಶೋಕ್ ಕುಮಾರ್ ಬಲ್ಲಾಳ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ, ನಿರ್ದೇಶಕರಾದ ಶಿವರಾಮ ಶೆಟ್ಟಿ, ಗಿರೀಶ್ ಪಲಿಮಾರು, ವಾಸುದೇವ ಪಲಿಮಾರು, ರಾಜಾರಾಮ್ ರಾವ್, ವೈ.ಜಿ.ರಸೂಲ್, ಯಶವಂತ್ ಪಡುಬಿದ್ರಿ, ಮಾಧವ ಆಚಾರ್ಯ, ಸ್ಟಾನ್ಲಿ ಕ್ವಾಡ್ರಸ್, ಸುಚರಿತಾ ಎಲ್. ಅಮೀನ್, ಕಾಂಚನಾ, ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಕಾರಿ ದೀಪಕ್ ಸಾಲ್ಯಾನ್ ಉಪಸ್ಥಿತರಿದ್ದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಸ್ತಾವಿಸಿ ಸ್ವಾಗತಿಸಿದರು. ಸೊಸೈಟಿಯ ನಿರ್ದೇಶಕರಾದ ಸುಚರಿತಾ ಎಲ್ ಅಮೀನ್ ಹಾಗೂ ಗಿರೀಶ್ ಪಲಿಮಾರು ಕಾರ್ಯಕ್ರಮ ನಿರ್ವಹಿಸಿದರು. ಸೊಸೈಟಿಯ ಉಪಾಧ್ಯಕ್ಷ ಗುರುರಾಜ ಪೂಜಾರಿ ವಂದಿಸಿದರು.
