Updated News From Kaup

ಕಾರ್ಕಳ : ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಿ.ಎಸ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Posted On: 11-08-2023 06:40PM

ಕಾರ್ಕಳ : ಕಂಪೆನಿ ಸೆಕ್ರೆಟರಿ ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್‌ ಮಂಜುನಾಥ ಭಟ್‌, ಶ್ರೀಯಾ ಕೆ ಎಸ್‌, ಶ್ರಾವ್ಯ ಭಟ್‌ ಎಸ್‌, ಪ್ರಣೀತಾ, ಧನುಷ್‌ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.

ಪಡುಬಿದ್ರಿ : ತ್ಯಾಜ್ಯ ಸಮಸ್ಯೆ - ಪಡುಬಿದ್ರಿ ಗ್ರಾಪಂ ಎದುರು ಕಾಂಗ್ರೆಸ್‌ ಪ್ರತಿಭಟನೆ

Posted On: 11-08-2023 06:33PM

ಪಡುಬಿದ್ರಿ: ಕಾಂಗ್ರೆಸ್ ಸ್ಥಾನೀಯ ಸಮಿತಿಯು ತನ್ನ ಸ್ಥಳೀಯ ನಾಯಕರು, ಗ್ರಾ. ಪಂ. ಸದಸ್ಯರು, ಗ್ರಾಮಸ್ಥರ ಬೆಂಬಲದೊಂದಿಗೆ ತ್ಯಾಜ್ಯ ಸಮಸ್ಯೆಯನ್ನು ಬಗೆಹರಿಸುವಂತೆ, ಮುಂದೆ ಎಂದೂ ಗ್ರಾ. ಪಂ. ಆವರಣದಲ್ಲಿ ತ್ಯಾಜ್ಯಗಳ ರಾಶಿಯನ್ನು ಪರಿಸರ ಮಾಲಿನ್ಯವಾಗುವ ರೀತಿಯಲ್ಲಿ ಪೇರಿಸಿಡಕೂಡದೆಂಬಂತೆ ಪ್ರತಿಭಟನೆಯನ್ನು ಶುಕ್ರವಾರದಂದು ಹಮ್ಮಿಕೊಂಡಿತ್ತು.

ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ

Posted On: 09-08-2023 09:40PM

ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ ಸಂಪನ್ನಗೊಂಡಿತು. ಮಾತೃ ವಂದನಾ ಕಾರ್ಯಕ್ರಮವನ್ನು ಪುರೋಹಿತರಾದ ಮೌನೇಶ್ ಶರ್ಮ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ, ವಿಧಾನಗಳಿಂದ ನೆರವೇರಿತು.

ಆಗಸ್ಟ್ 11 : ಕಾಪುವಿನ ರಾಣ್ಯಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Posted On: 09-08-2023 09:34PM

ಕಾಪು : ಇಲ್ಲಿನ ರಾಣ್ಯಕೇರಿ ಅಂಗನವಾಡಿ ಹತ್ತಿರ ಮಾರಿಗುಡಿ ಹಾಲ್ ನಲ್ಲಿ ಆಗಸ್ಟ್ 11, ಶುಕ್ರವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ (ಬಿಪಿ, ಶುಗರ್, ಮೂತ್ರ, ಪ್ರೊಟೀನ್ ಮತ್ತು ಕಿಡ್ನಿ ಪರೀಕ್ಷೆ) ಜರಗಲಿದೆ.

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ

Posted On: 09-08-2023 10:45AM

ಕಾಪು : ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಇದರ ಗೌರವ ಸಲಹೆಗಾರರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ 15 ಲಕ್ಷ ರೂ ದೇಣಿಗೆ

Posted On: 08-08-2023 10:23PM

ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಗಲಕೋಟೆಯ ಇಳ್ಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಲಾಯಿತು.

ಕಾರ್ಕಳ : ಸಿ ಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Posted On: 08-08-2023 05:05PM

ಕಾರ್ಕಳ : ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟೆರ್ಡ್‌ ಅಕೌಂಟೆಂಟ್‌ ಆಫ್‌ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್‌ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್‌ ಪೈ, ಹೆಗ್ಡೆ ಅನಿರುದ್ಧ್‌ ರಮೇಶ್‌, ಅಭಿಷೇಕ್‌ ಪಿ ಎಸ್‌, ವಿಂದ್ಯಾ ವಿನಯ್‌ ಹೆಗಡೆ, ಎಸ್‌ ಅನುರಾಜ್‌ ಇವರು ಸಿ ಎ ಫೌಂಡೇಶನ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ ಎ ಇಂಟರ್‌ ಮೀಡಿಯೆಟ್‌ ಗೆ ಅರ್ಹತೆ ಗಳಿಸಿದ್ದಾರೆ.

ಉಚ್ಚಿಲ : ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಕೂಟ

Posted On: 08-08-2023 04:56PM

ಉಚ್ಚಿಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಉಡುಪಿ ಮತ್ತು ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಂಗಳವಾರ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಕೂಟ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಜರಗಿತು.

ಕಾಪು : ಆಗಸ್ಟ್ 27 ರಂದು ಪೊಲಿಪುವಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Posted On: 07-08-2023 10:53PM

ಕಾಪು : ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಪೊಲಿಪು, ಮುಂಬೈ, ಗುರ್ಮೆ ಫೌಂಡೇಶನ್, ಗುರ್ಮೆ ಕಳತ್ತೂರು ಇವರ ಆಶ್ರಯದಲ್ಲಿ, ಪೊಲಿಪು ಮೊಗವೀರ ಮಹಾಸಭೆ, ಪೊಲಿಪು, ಮುಂಬೈ, ಪೊಲಿಪು ಹಳೆ ವಿದ್ಯಾರ್ಥಿ ಸಂಘ, ಪೊಲಿಪು, ಮುಂಬೈ, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಪೊಲಿಪು ಇವರ ಸಹಭಾಗಿತ್ವದೊಂದಿಗೆ ಶ್ರೀನಿವಾಸ ವೈದ್ಯಕೀಯ ಕಾಲೇಜು, ಮುಕ್ಕ, ಸುರತ್ಕಲ್, ಮಂಗಳೂರು ಇವರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಆಗಸ್ಟ್ 27, ಆದಿತ್ಯವಾರ ಬೆಳಗ್ಗೆ ಗಂಟೆ 9ರಿಂದ ಸ.ಹಿ.ಪ್ರಾ.ಶಾಲೆ, ಪೊಲಿಪು ಇಲ್ಲಿ ಜರಗಲಿದೆ.

ಎರ್ಮಾಳು : ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

Posted On: 07-08-2023 06:44PM

ಎರ್ಮಾಳು : ಶ್ರೀ ಕುದ್ರೊಟ್ಟು ಬ್ರಹ್ಮ ಬೈದರ್ಕಳ ಗರಡಿಯ ಕೋಟಿ ಚೆನ್ನಯ ಯುವ ಬಳಗ ಹಾಗೂ ಬೈದಶ್ರೀ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಎರ್ಮಾಳು ಬಾಕ್ಯಾರು ಗದ್ದೆಯಲ್ಲಿ ಕೆಸರ್ಡ್‌ ಒಂಜಿ ದಿನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಗರಡಿಯ ಪ್ರಧಾನ ಅರ್ಚಕ ಸದಾನಂದ ನಾಯ್ಗರು ಹಾಗೂ ಗರಡಿಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು.