Updated News From Kaup
ಕಾಪು : ಹೊಸ ಮಾರಿಗುಡಿ ದೇವಸ್ಥಾನ - ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನಕ್ಕೆ ಶಾಸಕರಿಂದ ಚಾಲನೆ

Posted On: 09-07-2023 04:08PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ "ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಅಭಿಯಾನ" ಜುಲೈ 9 ರಿಂದ ಅಕ್ಟೋಬರ್ 15 ರ ವರೆಗೆ ನಡೆಯಲಿದ್ದು, ಈ ಸಲುವಾಗಿ ಜುಲೈ 9 ರಂದು ನಡೆದ "ದೀಕ್ಷಾ ದೀಪ ಪ್ರಜ್ವಲನ ಕಾರ್ಯಕ್ರಮಕ್ಕೆ" ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸಮಿತಿ ಪದಾಧಿಕಾರಿಗಳು, ಸಮಿತಿಯ ಗೌರವಾಧ್ಯಕ್ಷರುಗಳು, ಸದಸ್ಯರು ಹಾಗೂ ದೀಕ್ಷೆ ಸ್ವೀಕರಿಸಿದ ಸಂಯೋಜಕರು, ಭಕ್ತರು ಉಪಸ್ಥಿತರಿದ್ದರು.
ಉಡುಪಿ : 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ಸಂಪನ್ನ

Posted On: 09-07-2023 03:59PM
ಉಡುಪಿ : ಕನಾ೯ಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಬ್ರಹ್ಮಾವರ ರೋಯಲ್ ಇನ್ ಸಭಾಂಗಣದಲ್ಲಿ ಜುಲೈ 8ರಂದು 21 ನೇ ವಷ೯ದ ವೈದ್ಯರ ದಿನಾಚರಣೆ ಮತ್ತು ವೈದ್ಯರ ಅಭಿನಂದನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿ ಕೆ.ಎಂ.ಸಿ ಮಣಿಪಾಲದ ಡೀನ್ ಯುರಾಲಜಿ ವಿಭಾಗದ ಪ್ರಾಧ್ಯಾಪಕ ಡಾ| ಪದ್ಮರಾಜ್ ಹೆಗ್ಡೆ ಮಾತನಾಡಿ, ವೈದ್ಯರು ತಮ್ಮ ಹೆಚ್ಚಿನ ಸಮಯವನ್ನು ರೋಗಿಗಳ ಸೇವೆಯಲ್ಲಿ ಕಳೆಯುತ್ತಾರೆ. ಆದರೆ ರೋಗಿಗಳಿಗೆ ತೊಂದರೆಯಾದಾಗ ವೈದ್ಯರಿಗೆ ತೊಂದರೆ ಕೊಡುವುದು ಸರಿಯಲ್ಲ, ಇವರ ಸೇವೆಯನ್ನು ಸಮಾಜ ಗುರುತಿಸಿ ಅವರಿಗೆ ಗೌರವ ನೀಡುತ್ತಿರುವುದು ಅಭಿನಂದನೀಯ ಎಂದರು.
ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷ ಮತ್ತು ಎ.ವಿ ಬಾಳಿಗಾ ಸಮೂಹ ಸಂಸ್ಥೆಗಳ ನಿದೇ೯ಶಕ ಡಾ| ಪಿ.ವಿ ಭಂಡಾರಿ, ವೈದ್ಯರನ್ನು ವಿನಾ ಕಾರಣ ಹಲ್ಲೆ ಮಾಡುವುದು ಅವರ ಮೇಲೆ ಮಾನಸಿಕ ಕಿರುಕುಳ ನಡೆಯುತ್ತಿರುವುದು ಖಂಡನೀಯ. ವೈದ್ಯರ ಸಂಘದಿಂದ ಮಾತ್ರ ಈ ಹಿಂದೆ ವೈದ್ಯರನ್ನು ಗುರುತಿಸಲಾಗುತ್ತಿತ್ತು ಆದರೆ ಇಂದು ಸಮಾಜದ ವಿವಿಧ ಸಂಘ- ಸಂಸ್ಥೆಗಳು ಈ ಕಾಯ೯ ಮಾಡುತ್ತಿರುವುದು ಅಭಿನಂದನೀಯ ಎಂದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಜಯಂಟ್ಸ್ ಅಧ್ಯಕ್ಷ ವಿವೇಕಾನಂದ ಕಾಮತ್ ವಹಿಸಿದ್ದರು.
ವೇದಿಕೆಯಲ್ಲಿ ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ಕಾಯ೯ದಶಿ೯ ಪ್ರಸನ್ನ ಕಾರಂತ್, ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ಸುಂದರ ಪೂಜಾರಿ ಮೂಡುಕುಕ್ಕುಡೆ ಮುಂತಾದವರು ಉಪಸ್ಥಿತರಿದ್ದರು.
ಖ್ಯಾತ ವೈದ್ಯರುಗಳಾದ ಮಣಿಪಾಲ ಕೆ.ಎಂ.ಸಿ ಯ ಚಮ೯ ರೋಗ ವಿಭಾಗದ ಪ್ರಾಧ್ಯಾಪಕ ಡಾI ಸತೀಶ್ ಪೈ, ಹೈಟೆಕ್ ಆಸ್ಪತ್ರೆಯ ಮೂಳೆ ರೋಗ ತಜ್ಞ ಡಾI ಉಮೇಶ್ ಪ್ರಭು ಯು, ಪ್ರಾಥಮಿಕ ಆರೋಗ್ಯ ಕೇಂದ್ರ ದೊoಡೆ ರಂಗಡಿಯ ವೈದ್ಯಾಧಿಕಾರಿ ಡಾI ಚoದ್ರಿಕಾ ಕಿಣಿ, ಕೋಟ ಪಿ.ಹೆಚ್.ಸಿ ಆರೋಗ್ಯಾಧಿಕಾರಿ ಡಾ| ವಿಶ್ವನಾಥ್ ಬಿ ಯವರನ್ನು ಗೌರವಿಸಲಾಯಿತು. ಈ ಸಂದಭ೯ದಲ್ಲಿ ಸನ್ಮಾನಿತರು ಮಾತನಾಡಿದರು. ಹಿರಿಯ ಸಾಧಕ ವೈದ್ಯಕೀಯ ಪ್ರತಿನಿಧಿಗಳನ್ನು ಗುರುತಿಸಲಾಯಿತು. ಜಯಂಟ್ಸ್ ಕಾಯ೯ದಶಿ೯ ಮಿಲ್ಟನ್ ಒಲಿವೇರಾ ವರದಿ ವಾಚಿಸಿದರು. ಮಧುಸೂಧನ್ ಹೇರೂರು ಪ್ರಸ್ತಾವನೆಗೈದರು. ಅಂಬಿಕಾ, ಡೊರಿಸ್, ಸುಬ್ರಮಣ್ಯ ಆಚಾಯ೯, ರಾಘವೇಂದ್ರ ಪ್ರಭು, ಕವಾ೯ಲು ಪರಿಚಯಿಸಿದರು. ಅನಂತ್ ಹೊಳ್ಳ ನಿರೂಪಿಸಿದರು. ಪ್ರಸನ್ನ ಕಾರಂತ್ ವಂದಿಸಿದರು.
ಕಾಪು : ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆ ಉದ್ಘಾಟನೆ

Posted On: 09-07-2023 02:05PM
ಕಾಪು : ಇಲ್ಲಿನ ಕೊಂಬಗುಡ್ಡೆ ಮಲ್ಲಾರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ನೂತನ ಪಾಕಶಾಲೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ರವಿವಾರ ಉದ್ಘಾಟಿಸಿದರು.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಪಾಕಶಾಲೆಯ ನಿರ್ಮಾಣ ಪೂರ್ಣಗೊಂಡಿದೆ.

ಅಭಿನಂದನೆ : ಬಬ್ಬುಸ್ವಾಮಿ ದೈವಸ್ಥಾನ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪುಷ್ಪರಾಜ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸುಧಾಕರ್ ಶೆಟ್ಟಿ ಮಲ್ಲಾರು, ಪುರಸಭಾ ಸದಸ್ಯರಾದ ಉಮೇಶ ಕರ್ಕೇರ, ಹರಿಣಿ, ಕ್ಷೇತ್ರದ ಗುರಿಕಾರರಾದ ಶೀನ ಮಲ್ಲಾರು, ಕೃಷ್ಣ ಮಾಸ್ತರ್, ಸಾಧು ಮಾಸ್ತರ್ ಮುಖೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುಂಡಾಳ ಮಹಾ ಸಭಾದ ಉಡುಪಿ ಜಿಲ್ಲಾಧ್ಯಕ್ಷರಾದ ಶಿವರಾಜ್ ಮಲ್ಲಾರು ನಿರೂಪಿಸಿದರು.
ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಮಗುವಿನ ಚಿಕಿತ್ಸೆಗೆ ಸಹಾಯ ಹಸ್ತ

Posted On: 09-07-2023 08:04AM
ಪಡುಬಿದ್ರಿ : ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ 6 ವರ್ಷದ ಪುಟ್ಟ ಮಗು ಸಾನ್ವಿಯ ವೈದ್ಯಕೀಯ ಶುಶ್ರೂಷೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ನ್ನು ಸಾನ್ವಿಯ ತಂದೆಯವರಿಗೆ ಹಸ್ತಾಂತರಿಸಿ, ಸಾನ್ವಿ ಆದಷ್ಟು ಬೇಗ ಗುಣಮುಖಲಾಗಳೆಂದು ಪಡುಬಿದ್ರಿಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವರ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು.
ಈ ಸಂಧರ್ಭದಲ್ಲಿ ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನ್ ಚಂದ್ರ ಜೆ ಶೆಟ್ಟಿ, ಎಸ್ ಇ ಝೆಡ್ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಸುಜಿತ್ ಶೆಟ್ಟಿ, ಯೋಗೀಶ್ ಪೂಜಾರಿ ಪಾದೆಬೆಟ್ಟು, ದಿನೇಶ್ ಶೆಟ್ಟಿ, ಸಂದೇಶ್ ಶೆಟ್ಟಿ ಪಾದೆಬೆಟ್ಟು ಮತ್ತು ರವಿ ಶೆಟ್ಟಿ ಪಾದೆಬೆಟ್ಟು ಉಪಸ್ಥಿತರಿದ್ದರು.
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ; ಶಾಶ್ವತ ಪರಿಹಾರದ ಭರವಸೆ

Posted On: 08-07-2023 10:49PM
ಪಡುಬಿದ್ರಿ : ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರಿಯ ಕಾಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಳೆಯಿಂದ ಮಾನವ ಜೀವ ಹಾನಿ,ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ಕಾಲು ಸಂಕ ಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಈ ಸಂದರ್ಭ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಅಶೋಕ್ ಕುಮಾರ್ ಕೊಡವೂರು, ಉದಯಕುಮಾರ್ ಶೆಟ್ಟಿ, ನವೀನ್ ಚಂದ್ರ ಜೆ.ಶೆಟ್ಟಿ, ರಾಜಶೇಖರ ಕೋಟ್ಯಾನ್, ಶರ್ಫುದ್ದೀನ್, ಶಿವ ಪ್ರಸಾದ್ ಶೆಟ್ಟಿ ಎರ್ಮಾಳ್, ದೀಪಕ್ ಎರ್ಮಾಳ್, ಕಿಶೋರ್ ಕುಮಾರ್ ಎರ್ಮಾಳ್, ಗಣೇಶ್ ಕೋಟ್ಯಾನ್, ನವೀನ್ ಎನ್.ಶೆಟ್ಟಿ, ರಮೀಜ್ ಹುಸೇನ್, ಜ್ಯೋತಿ ಮೆನನ್, ಫರ್ಜಾನ, ಸಂಜಯ್, ನಿಯಾಜ್, ಆಶಾ ಕಟಪಾಡಿ, ತಸ್ನೀನ್ ಅರ, ಕರುಣಾಕರ್ ಪೂಜಾರಿ, ಹಸನ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

Posted On: 08-07-2023 10:22PM
ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು.
ಶಿರ್ವವಲಯದ ಗೌರವಸಲಹೆಗಾರರಾದ ಮಧ್ವರಾಜಭಟ್ ದೀಪ ಬೆಳಗಿಸುವುದರ ಮೂಲಕ ಬಾಲ ಸಂಸ್ಕಾರ ಕೇಂದ್ರವನ್ನು ಉದ್ಘಾಟಿಸಿ ಬಾಲ ಸಂಸ್ಕಾರ ಕೇಂದ್ರದ ಅವಶ್ಯಕತೆಯ ಬಗ್ಗೆ ಮಾತನಾಡಿದರು.
ಈ ಸಂದರ್ಭ ಕಾಪು ಪ್ರಖಂಡ ಕಾರ್ಯದರ್ಶಿ ರಾಜೇಂದ್ರಶೆಣೈ, ಮಾತೃಶಕ್ತಿ ಕಾಪು ತಾಲೂಕು ಪ್ರಮುಖ್ ವಾಣಿ ಆಚಾರ್ಯ, ಶಿರ್ವವಲಯ ಗೌರವಾಧ್ಯಕ್ಷರಾದ ನಾಗರಾಜಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಸಹ ಕಾರ್ಯದರ್ಶಿ ವಿಖ್ಯಾತ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾರ್ಕಳ : ಕ್ರಿಯೇಟಿವ್ ಕಾಲೇಜು - ಕ್ರಿಯೇಟಿವ್ ಸಮಾಗಮ

Posted On: 08-07-2023 04:39PM
ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ದಿನಾಂಕ ಜುಲೈ 7ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ʼಕ್ರಿಯೇಟಿವ್ ಸಮಾಗಮʼ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ “ಸಪ್ತಸ್ವರ”ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ಗಣನಾಥ ಶೆಟ್ಟಿಯವರು ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.
ಸಂಸ್ಥಾಪಕರಾದ ಅಮೃತ್ ರೈ ಕಾಲೇಜಿನ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಅಶ್ವತ್ ಎಸ್. ಎಲ್ ರವರು ಬದುಕನ್ನು ನಿರ್ಧರಿಸುವ ಪಿ.ಯು ಶಿಕ್ಷಣದಲ್ಲಿ ತಾವುಗಳೆಲ್ಲ ತಮ್ಮ ಅಪ್ಪ ಅಮ್ಮಂದಿರ ಭರವಸೆ ಉಳಿಸಿಕೊಳ್ಳುವಂತಹ ಸಾಧನೆ ಮಾಡುವಂತಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಕ್ರಿಯಾಶೀಲ ವ್ಯಕ್ತಿತ್ವದಿಂದ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯ. ಸಾಧನೆಗೆ ಯಾವುದೇ ಅಡ್ಡದಾರಿಗಳಿಲ್ಲ. ನೇರ ದಾರಿಯ ಪರಿಶ್ರಮವೇ ಸಾಧನೆಯ ಮೆಟ್ಟಿಲು ಆದ್ದರಿಂದ ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ಉದಾಸೀನ ಪ್ರವೃತ್ತಿಯವರಾಗದೆ ನಿರಂತರ ಶ್ರಮದಿಂದ ಉನ್ನತಿಗೇರುವಂತಾಗಲಿ ಎಂದು ನುಡಿದರು.
2022-23 ನೇ ಸಾಲಿನ ಪ್ರಥಮ ಪಿಯುಸಿ ತರಗತಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಿಗಳಾದ ವಿದ್ಯಾರ್ಥಿಗಳನ್ನು ಸಂಸ್ಥಾಪಕರಾದ ಆದರ್ಶ ಎಂ. ಕೆ ಮತ್ತು ಗಣಪತಿ ಭಟ್ ಕೆ. ಎಸ್ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಸ್ವಾಗತಿಸಿದರು. ಕುಮಾರಿ ವಿಜೇತಾ ಮತ್ತು ಬಳಗದವರು ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್ ಕೆ ವಂದನಾರ್ಪಣೆಗೈದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ಕೀರ್ತಿ ಪಾಟ್ಕರ್, ಯೋನಾ ಭಾಸ್ಕರ ಶೆಟ್ಟಿ, ನಾಗಶಿವಾನಿ, ಸಾನ್ವಿಕುಮಾರ್ ನಿರೂಪಣೆಗೈದರು.
ಜುಲೈ 9 (ನಾಳೆ) : ಕಾಪು ಹೊಸಮಾರಿಗುಡಿ ದೇವಸ್ಥಾನ - ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೊಳಿಸುವ ಮಹಾಅಭಿಯಾನಕ್ಕೆ ಚಾಲನೆ

Posted On: 08-07-2023 04:28PM
ಕಾಪು : ಇಲ್ಲಿನ ಹೊಸಮಾರಿಗುಡಿ ದೇವಸ್ಥಾನವು ಸಂಪೂರ್ಣ ಇಳಕಲ್ ಕೆಂಪು ಶಿಲೆಯೊಂದಿಗೆ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಪ್ರಥಮ ಹಂತದ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಜೀರ್ಣೋದ್ಧಾರದ ಅಂಗವಾಗಿ 9 ಶಿಲಾಸೇವೆ ಸಮರ್ಪಿಸಿ ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸದಸ್ಯರನ್ನು ಸೇರ್ಪಡೆ ಗೊಳಿಸುವ ಮಹಾಅಭಿಯಾನಕ್ಕೆ ಜುಲೈ 9 ರಂದು ಅಮ್ಮನ ಸನ್ನಿಧಿಯಲ್ಲಿ ಚಾಲನೆ ನೀಡಲಾಗುವುದು. ಮಹಾಅಭಿಯಾನದ ಮೂಲಕ 9 ಶಿಲಾ ಸೇವೆ ಸಮರ್ಪಿಸುವ ಕನಿಷ್ಟ ಒಂಭತ್ತು ಸದಸ್ಯರನ್ನು ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆಗೊಳಿಸುವ ಸಮಿತಿ ಸದಸ್ಯರು ದೀಕ್ಷಾ ದೀಪ ಪ್ರಜ್ವಲನೆ ನಡೆಸಿ ಸಂಕಲ್ಪ ಸ್ವೀಕರಿಸಲಿದ್ದಾರೆ.

ಪ್ರಪಂಚದಾದ್ಯಂತ 99,999 ಸದಸ್ಯರನ್ನು ಸೇರ್ಪಡೆಗೊಳಿಸಿ 9,99,999 ಶಿಲಾ ಸೇವೆ ಸಮರ್ಪಿಸುವ ಗುರಿಯೊಂದಿಗೆ ಅಮ್ಮನ ಸಂಪೂರ್ಣ ಶಿಲಾಮಯ ಮಾರಿಗುಡಿ ನಿರ್ಮಾಣದ ಗುರಿ ಹೊಂದಲಾಗಿದೆ. ಈ ಅಭಿಯಾನವು ಜುಲೈ 9 ರಿಂದ ಅಕ್ಟೋಬರ್ 15ರವರೆಗೆ ಅಂದರೆ 99 ದಿನಗಳವರೆಗೆ ನಡೆಯಲಿದೆ. ಪೂರ್ವಭಾವಿಯಾಗಿ ಮುಂಬಯಿ - ಪುಣೆ - ಬೆಂಗಳೂರು ಹಾಗೂ 18 ದೇಶಗಳಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ಮೂಲಕವಾಗಿ ಪ್ರಪಂಚದಾದ್ಯಂತ ಇರುವ ಅಮ್ಮನ ಭಕ್ತರು 9 ಶಿಲಾಸೇವೆಯ ಬಾಬ್ತು 9,999 ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಶಿಲೆಯನ್ನು ನೀಡಿ, ಶಿಲಾಪುಷ್ಪವನ್ನು ಅರ್ಪಿಸಿ, “ಕಾಪುವಿನ ಅಮ್ಮನ ಮಕ್ಕಳು” ತಂಡಕ್ಕೆ ಸೇರ್ಪಡೆಗೊಳಿಸುವ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ.

ಕಳೆದ ಜೂನ್ 12 ರಂದು ಕಾಪು ಹೊಸಮಾರಿಗುಡಿಯ ಮಾರಿಯಮ್ಮ ದೇವಿಯ ಸಾನಿಧ್ಯ ಚಲನೆ ಮತ್ತು ತಾತ್ಕಾಲಿಕ ಗುಡಿಯಲ್ಲಿ ಸಾನಿಧ್ಯ ಪ್ರತಿಷ್ಟೆ ಕಾರ್ಯಕ್ರಮ ನಡೆದಿರುತ್ತದೆ. ಮುಂದಿನ ನವರಾತ್ರಿ ಸಂದರ್ಭ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್ ನಲ್ಲಿ ನಡೆಯುವ ಸುಗ್ಗಿ ಮಾರಿಪೂಜೆಗೆ ಮೊದಲು ಮಾರಿಯಮ್ಮನ ಗುಡಿ ಸಮರ್ಪಣೆಗೆ ಯೋಜನೆ ರೂಪಿಸಲಾಗಿದೆ.

ಕಾಪು ಶಾಸಕ, ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅವರು ಎಲ್ಲ ಸಮಾಜದ ಗಣ್ಯರೊಂದಿಗೆ ದೀಪ ಪ್ರಜ್ವಲನೆಗೊಳಿಸಿ, ಕಾಪುವಿನ ಅಮ್ಮನ ಮಕ್ಕಳು ತಂಡಕ್ಕೆ ಸೇರ್ಪಡೆ ಮಹಾಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಮಿತಿಯ ಗೌರವಾಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಹಾಗೂ ದೀಕ್ಷೆ ಸ್ವೀಕರಿಸಲಿರುವ ಸಂಯೋಜಕರು ಪಾಲ್ಗೊಳ್ಳಲಿದ್ದಾರೆ ಎಂದು ಕಾಪು ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ ಹಾಗೂ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಗೆ ಮಾತೃ ವಿಯೋಗ

Posted On: 08-07-2023 11:26AM
ಕಾಪು : ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆಗಿರುವಂತಹ ವಿನಯ್ ಕುಮಾರ್ ಸೊರಕೆ ರವರ ತಾಯಿ ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.
ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91)ರವರು ಮೂರು ಜನ ಪುತ್ರರು, ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆಯಲ್ಲಿ ನಡೆಯುವುದು ಎಂದು ತಿಳಿಸಲಾಗಿದೆ.
ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ - ವನಮಹೋತ್ಸವ

Posted On: 07-07-2023 07:47PM
ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ ಇವರ ಆಶ್ರಯದಲ್ಲಿ ಕಾಪುವಿನಲ್ಲಿ ವನಮಹೋತ್ಸವ ಆಚರಿಸಲಾಯಿತು.

ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ ಮತ್ತು ಮಂಜುನಾಥ್ ಅತಿಥಿಗಳಾಗಿ ಭಾಗವಹಿಸಿದ್ದರು. ಜೀವನ್ ದಾಸ್ ಶೆಟ್ಟಿ ಮರಗಳ ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಸಂಸ್ಥೆಯ ವಿನೋದ್ ರಾವ್ ವನಮಹೋತ್ಸವದ ಕುರಿತು ಮಾತನಾಡಿದರು. ಈ ಸಂದರ್ಭ ಸಂಸ್ಥೆಯ ಉದ್ಯೋಗಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಸಂಸ್ಥೆಯ ಉದ್ಯೋಗಿಗಳಿಗೆ ಹೂವಿನ ಮತ್ತು ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮ ಆಯೋಜಕರಾದ ಸಂಸ್ಥೆಯ ರಶ್ಮಿ ಎಸ್ ಎಮ್ ಸ್ವಾಗತಿಸಿದರು. ವೀಣಾ ಶೆಟ್ಟಿ ವಂದಿಸಿದರು.