Updated News From Kaup

ಶಂಕರಪುರ : ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ

Thumbnail
Posted On: 22 Sep 2023, 08:31 PM

ಶಂಕರಪುರ : ದ್ವಾರಕಾಮಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಗುರುವಾರ ಜಯಂಟ್ಸ್ ಸಪ್ತಾಹದ ಅಂಗವಾಗಿ ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ ಕಾಯ೯ಕ್ರಮವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಬಿಲ್ವಪತ್ರ ಗಿಡದಿಂದ ನಮ್ಮ ಆರೋಗ್ಯಕ್ಕೆ ಮತ್ತು ಪರಿಸರಕ್ಕೆ ವಿಶೇಷವಾದ ಲಾಭವಿದೆ. ಈ ಗಿಡವನ್ನು ನೆಟ್ಟು ನಮ್ಮ ಆರೋಗ್ಯವನ್ನು ಮತ್ತು ಆಧ್ಯಾತ್ಮಿಕವಾಗಿ ನಮ್ಮ ಸಮಾಜವನ್ನು ಕೂಡ ಕಾಪಾಡಬಹುದು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಅಧ್ಯಕ್ಷ ವಿವೇಕಾನಂದ ಕಾಮತ್, ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಸುನೀತಾ ಮಧುಸೂಧನ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತಾಗಿ ಜಯಂಟ್ಸ್ ಗ್ರೂಪ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಬಿಲ್ವ ಪತ್ರ ಅಭಿಯಾನದ ಕುರಿತಾಗಿ ಮಾಹಿತಿ ನೀಡಿದರು. ಈ ಸಂದರ್ಭ ಬೆಂಗಳೂರಿನ ಸಾಯಿ ಭಕ್ತರಾದ ಶ್ರೀರಾಮು ಇವರು ಕೊಡ ಮಾಡಿದ ಸಾಯಿ ಮುಖ್ಯಪ್ರಾಣ ಭಾವಚಿತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿ ವಂದಿಸಿದರು. ಸುಮಾರು 300 ಜನರಿಗೆ ಗಿಡಗಳನ್ನು ವಿತರಿಸಲಾಯಿತು.

ಉಚ್ಚಿಲ ದಸರಾ-2023: ಯುವ ನೃತ್ಯೋತ್ಸವಕ್ಕಾಗಿ ಸಾರ್ವಜನಿಕರಿಂದ ಆಡಿಶನ್ ರೌಂಡ್‌ಗೆ ಆಹ್ವಾನ

Thumbnail
Posted On: 22 Sep 2023, 12:33 PM

ಉಚ್ಚಿಲ : ದ.ಕ.ಮೊಗವೀರ ಮಹಾಜನ ಸಂಘ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ಯುವ ದಸರಾ -2023ರ ಅಂಗವಾಗಿ ಹಮ್ಮಿಕೊಂಡಿರುವ ನೃತ್ಯೋತ್ಸವ ಸಲುವಾಗಿ ಸಾರ್ವಜನಿಕರಿಂದ ನೃತ್ಯ ಸ್ಪರ್ಧೆಯ ಆಡಿಶನ್ ರೌಂಡ್‌ಗಾಗಿ ಸ್ಪರ್ಧಿಗಳನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 8ರಂದು ಸಂಜೆ 3 ಗಂಟೆಯಿಂದ 6 ಗಂಟೆವರೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ಆಡಿಶನ್ ರೌಂಡ್ ಸ್ಪರ್ಧೆ ನಡೆಯಲಿದೆ. ಆಡಿಶನ್ ಸುತ್ತಿನ ಸ್ಪರ್ಧಾ ನಿಯಮಗಳು: ಸ್ಪರ್ಧೆಯಲ್ಲಿ ಪ್ರತಿಯೊಂದು ನೃತ್ಯ ತಂಡದಲ್ಲಿ ಕನಿಷ್ಠ 5 ಜನರಿಗೆ ಅವಕಾಶ. ಯಾವುದೇ ವಯಸ್ಸಿನ ಮಿತಿ ಇಲ್ಲ, ತಂಡವೊಂದಕ್ಕೆ 5(4+1) ನಿಮಿಷದ ಅವಕಾಶ. ಆಡಿಶನ್ ಸುತ್ತಿನಲ್ಲಿ ಯಾವುದೇ ಕಾಸ್ಟ್ಯೂಮ್ (ವೇಷಭೂಷಣ) ಅಗತ್ಯವಿಲ್ಲ. ಆಡಿಶನ್ ಸುತ್ತಿನಲ್ಲಿ ಆಯ್ಕೆಯಾದ ತಂಡಗಳು ಅಕ್ಟೋಬರ್ 15ರಂದು ನಡೆಯುವ ಯುವ ದಸರಾ ಉತ್ಸವದ ನೃತ್ಯ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ. ಆಡಿಶನ್ ಸುತ್ತಿನಲ್ಲಿ ಒಬ್ಬ ಸ್ಪರ್ಧಿ ಬೇರೆ ಬೇರೆ ತಂಡಗಳಲ್ಲಿ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಯಾವುದೇ ಭಾಷೆ ಅಥವಾ ನೃತ್ಯ ಪ್ರಾಕಾರದ ನಿರ್ಬಂಧವಿಲ್ಲ. ಫೈನಲ್ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ಸಹಿತ ಪ್ರಥಮ ಬಹುಮಾನ 30ಸಾವಿರ ರೂ., ದ್ವಿತೀಯ 20ಸಾವಿರ ರೂ., ತೃತೀಯ 15ಸಾವಿರ ರೂ., ಚತುರ್ಥ 10 ಸಾವಿರ ರೂ. ಹಾಗೂ 5 ತಂಡಗಳಿಗೆ ತಲಾ 5ಸಾವಿರ ರೂ. ನಂತೆ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು ಎಂದು ದಸರಾ ಸಮಿತಿ ಪ್ರಕಟಣೆ ತಿಳಿಸಿದೆ.

ಹೆಜಮಾಡಿ : ವಿಶ್ವ ಹಿಂದೂ ಪರಿಷತ್ - 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ; ಸಭಾ ಕಾರ್ಯಕ್ರಮ

Thumbnail
Posted On: 19 Sep 2023, 09:43 PM

ಹೆಜಮಾಡಿ : ವಿಶ್ವ ಹಿಂದೂ ಪರಿಷತ್, ಹೆಜಮಾಡಿ ಇದರ 48ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಲುವಾಗಿ ಸೆಪ್ಟೆಂಬರ್ 19ರಂದು ಸಭಾ ಕಾರ್ಯಕ್ರಮ ಜರಗಿತು. ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಹೆಜಮಾಡಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸುಧಾಕರ ಕರ್ಕೇರ, ರಾಷ್ಟ್ರಮಟ್ಟದ ತರಬೇತುದಾರರಾದ ರಾಜೇಂದ್ರ ಭಟ್ ಕೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ ಎ ಮೆಂಡನ್, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದಯಾನಂದ ಹೆಜಮಾಡಿ, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಶ್ರೀಹರಿ ಭಟ್, ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾಮನ್ ಕೋಟ್ಯಾನ್, ಹೆಜಮಾಡಿ ಘಟಕ ಭಜರಂಗದಳದ ಸಂಚಾಲಕರಾದ ನವೀನ್ ಕೋಟ್ಯಾನ್, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ ಉಪಸ್ಥಿತರಿದ್ದರು.

ಉಡುಪಿ : ಮಹಿಳಾ ಮೀಸಲಾತಿ ಮಾಜಿ‌ ಪ್ರಧಾನಿ ದೇವೇಗೌಡರ ಕನಸಿನ ಕೂಸು - ಯೋಗೀಶ್ ವಿ ಶೆಟ್ಟಿ

Thumbnail
Posted On: 19 Sep 2023, 09:40 PM

ಉಡುಪಿ : ಲೋಕಸಭೆ ಮತ್ತು ರಾಜ್ಯವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33% ಮೀಸಲಾತಿ ನೀಡುವ ವಿಚಾರವನ್ನು 1996ರಲ್ಲಿ ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದಾಗ ಪ್ರಸ್ತಾವನೆ ಮಾಡಿದ್ದರು. ಇದು ದೇವೇಗೌಡರ ಕನಸಿನ ಕೂಸು. ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೂ ಆ ಸಂದರ್ಭ ಲೋಕಸಭೆ ಸದಸ್ಯರಾಗಿದ್ದರು. ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇದರ ಬಗ್ಗೆ ಪ್ರಸ್ತಾವನೆ ಮಾಡಿದ್ದು ಸಂತೋಷ ತಂದಿರುತ್ತದೆ. ಇದು ಆದಷ್ಟು ಶೀಘ್ರದಲ್ಲಿ ಜಾರಿಗೆ ಬರಲಿ. ಇದು ಅಭಿವೃದ್ಧಿ ಸಮಾಜ ಸುಧಾರಣೆಯ ಹೊಸ ಹೆಜ್ಜೆ ಮಹಿಳಾ ಮೀಸಲಾತಿಗೆ ಮರು ಜೀವ ತಂದದ್ದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಪು : ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ ಆಚರಣೆ

Thumbnail
Posted On: 19 Sep 2023, 12:27 PM

ಕಾಪು : ಮೊದಲ ಪೂಜಿತ ದೇವ ಗಣಪತಿಯ ಆರಾಧನಾ ಮಹೋತ್ಸವ ಗಣೇಶ ಚತುರ್ಥಿಯ ಸಂಭ್ರಮವನ್ನು ‌ಕಾಪು ತಾಲೂಕಿನಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಮೂಲಕ 14 ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕಾಪು ತಾಲೂಕಿನ ದೇವಳಗಳಲ್ಲಿ ವಿಶೇಷ ಪೂಜೆಯೊಂದಿಗೆ, ಉಚ್ಚಿಲದಲ್ಲಿ 33 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ಕಾಪುವಿನಲ್ಲಿ 44ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, ಪಾದೂರಿನಲ್ಲಿ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ, 20 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪಣಿಯೂರು, 36 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಎರ್ಮಾಳು ಸೇರಿದಂತೆ ಪಡುಬಿದ್ರಿ ಇನ್ನಿತರ ಭಾಗಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗಣೇಶೋತ್ಸವವು ಆಚರಿಸಲಾಗುತ್ತಿದೆ.

ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ವ್ಯಕ್ತಿಗೆ ಸಹಾಯಗೈದ ಕುಲಾಲ್ಸ್ ದೋಹಾ ಸದಸ್ಯರು

Thumbnail
Posted On: 18 Sep 2023, 11:23 PM

ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ಕಾಪು ತಾಲೂಕಿನ ಅದಮಾರುವಿನ ರಾಜೇಶ್ ಕುಲಾಲ್ ಅವರ ಮನವಿಗೆ ದೋಹಾ ಕತಾರ್ ಕುಲಾಲ ಮಿತ್ರರು ಸ್ಪಂದಿಸಿ ಅವರಿಗೆ 25 ಸಾವಿರ ರೂಪಾಯಿ ಸಹಾಯ ನೀಡಿದ್ದಾರೆ.

ನಮ್ಮ ನಾಡ ಒಕ್ಕೂಟ - ಕಾಪು ತಾಲೂಕು ಘಟಕದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರರಿಗೆ ಸನ್ಮಾನ

Thumbnail
Posted On: 18 Sep 2023, 10:35 PM

ಕಾಪು : ಮನುಕುಲದ ಸೇವೆಯೆ ಭಗವಂತನ ಸೇವೆ ಎಂಬ ಧ್ಯೇಯ ವಾಕ್ಯವನ್ನು ನಂಬಿಕೊಂಡು ಜಾತಿ ಮತ ಬೇದವಿಲ್ಲದೆ ಸಮಾಜ ಸೇವೆಯಲ್ಲಿ ಜನರಿಗೆ ತನ್ನ ಕೈಯಲ್ಲಿ ಆಗುವ ಸಹಾಯ ಮಾಡುತ್ತ ಉತ್ತಮ ಸಮಾಜ ಸೇವಕರಾಗಿ ಗುರುತಿಸಿ ಅನೇಕ ಸಂಘ ಸಂಸ್ಥೆಗಳಿಂದ ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪಡೆದ ಫಾರೂಕ್ ಚಂದ್ರನಗರರನ್ನು ನಮ್ಮ ನಾಡ ಒಕ್ಕೂಟ (ರಿ.) ಕಾಪು ತಾಲೂಕು ಘಟಕದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭ ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ಅಶ್ರಫ್ ಪಡುಬಿದ್ರಿ, ಉಪಾಧ್ಯಕ್ಷರಾದ ಮಹಮ್ಮದ್ ಇರ್ಫಾನ್ ಕಾಪು, ಕಾರ್ಯದರ್ಶಿ ಅಬ್ದುಲ್ ಹಮೀದ್ ಯೂಸುಫ್, ಕೋಶಾಧಿಕಾರಿ ಯು.ಎ ರಶೀದ್, ಸದಸ್ಯ ರಝಾಕ್ ಉಚ್ಚಿಲ ಉಪಸ್ಥಿತರಿದ್ದರು.

ಪಣಿಯೂರು : ಶೈನಿಂಗ್ ಫ್ರೆಂಡ್ಸ್ ಖಾನ - 4ನೇ ವರ್ಷದ ಹುಲಿವೇಷ

Thumbnail
Posted On: 18 Sep 2023, 07:05 PM

ಪಣಿಯೂರು : ಇಲ್ಲಿನ ಖಾನ ಶೈನಿಂಗ್ ಫ್ರೆಂಡ್ಸ್ ವತಿಯಿಂದ ಗಣೇಶ ಚತುರ್ಥಿಯ ಸಂದರ್ಭದಲ್ಲಿ 4 ನೇ ವರ್ಷದ ಹುಲಿ ವೇಷ, ಊದು ಸೇವೆ ನಡೆಯಲಿದೆ. ಸಂಗ್ರಹದ ಹಣವನ್ನು ಆರ್ಥಿಕವಾಗಿ ಹಿಂದುಳಿದ ಅಶಕ್ತರಿಗೆ ಹಂಚಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುವರು.

ಕಾಪು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದಂಡತೀರ್ಥ ಉಳಿಯಾರಗೋಳಿ : 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Thumbnail
Posted On: 18 Sep 2023, 06:59 PM

ಕಾಪು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದಂಡತೀರ್ಥ ಉಳಿಯಾರಗೋಳಿ ಇಲ್ಲಿಯ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 19, ಮಂಗಳವಾರ ಶ್ರೀ ಬಾವು ಬಬ್ಬರ್ಯ ದೈವಸ್ಥಾನದ ಬಳಿ, ಕೈಪುಂಜಾಲು ಇಲ್ಲಿ ಜರಗಲಿದೆ. ಬಿಂದಾಸ್ ಫ್ರೆಂಡ್ಸ್ ಕೈಪುಂಜಾಲು ಬೆಳಿಗ್ಗೆ ಗಂಟೆ 7ಕ್ಕೆ ಗಣಹೋಮ, 8 ಕ್ಕೆ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ಗಂಟೆ 11:30 ಕ್ಕೆ ಮಹಾಪೂಜೆ, ಮಧ್ಯಾಹ್ನ ಗಂಟೆ 2ಕ್ಕೆಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 3 ಕ್ಕೆ ಪ್ರಸಾದ ವಿತರಣೆ, ಸಂಜೆ ಗಂಟೆ 5:30 ಕ್ಕೆ ವಿಸರ್ಜನಾ ಪೂಜೆ, ಸಾಯಂಕಾಲ ಗಂಟೆ 4ಕ್ಕೆ ವಿಸರ್ಜನಾ ಮೆರವಣಿಗೆ ಜರಗಲಿದೆ ಎಂದು‌ ಪ್ರಕಟನೆ ತಿಳಿಸಿದೆ. ನೇರ ಪ್ರಸಾರಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ ಪದಗ್ರಹಣ ಸಮಾರಂಭ

Thumbnail
Posted On: 18 Sep 2023, 05:08 PM

ಪಡುಬಿದ್ರಿ : ವ್ಯಕ್ತಿಯೊಬ್ಬ ತನ್ನ ದುರ್ಗುಣಗಳನ್ನು ಬದಲಾಯಿಸಿಕೊಂಡು ಸತ್ಪ್ರಜೆಯಾಗಿ ಬಾಳಿದರೆ ಸಮಾಜದ ಪರಿವರ್ತನೆ ಸಾಧ್ಯ. ಆ ಪರಿವರ್ತನೆಯ ಪಥವನ್ನು ಯುವವಾಹಿನಿಯ ಪ್ರತಿಜ್ಞಾ ವಿಧಿಯಲ್ಲಿ ಸ್ಪಷ್ಟವಾಗಿ ಕಾಣಬಹುದು ಎಂದು ಬೈಂದೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹರೀಶ್ ಕೋಟ್ಯಾನ್ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಅವರು ಅವಿಭಜಿತ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಯುವವಾಹಿನಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ. ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ ಶುಭ ಹಾರೈಸಿದರು. ಕಾರ್ಯದರ್ಶಿ ಡಾ| ಐಶ್ವರ್ಯ ಸಿ. ಅಂಚನ್ ಗತಸಾಲಿನ ಕಾರ್ಯಚಟುವಟಿಕೆಗಳ ವರದಿ ಮಂಡಿಸಿದರು. ಘಟಕದ ಉಪಾಧ್ಯಕ್ಷರಾದ ಅಶ್ವಥ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಡ್ವೆ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಯುವವಾಹಿನಿಯ ಸಂಘಟನಾ ಕಾರ್ಯದರ್ಶಿ ಉದಯ ಕಾವೂರು ಉಪಸ್ಥಿತರಿದ್ದರು. ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.