Updated News From Kaup

ಜೂ.17 (ನಾಳೆ) : ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Posted On: 16-06-2025 10:41PM

ಉಡುಪಿ : ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾಪು : ಯುವಕಾಂಗ್ರೆಸ್ ವತಿಯಿಂದ ವನಮಹೋತ್ಸವ

Posted On: 16-06-2025 08:11PM

ಕಾಪು : ವಿಧಾನಸಭಾಕ್ಷೇತ್ರದ ಯುವಕಾಂಗ್ರೆಸ್ ಸಮಿತಿಯ ವತಿಯಿಂದ ವನಮಹೋತ್ಸವವು‌ ಕಾಪು ರಾಜೀವ್ ಭವನ ಮುಂಭಾಗ ಹಾಗೂ ಹಿರಿಯಡ್ಕಗಳಲ್ಲಿ ನಡೆಯಿತು.

ಬಂಟಕಲ್ಲು ಶಾಲಾ ಹಳೆವಿದ್ಯಾರ್ಥಿ ಶಿವಾನಂದ ಪಾಟ್ಕರ್‌ಗೆ ಸಹಪಾಠಿಗಳಿಂದ ಭಾವಪೂರ್ಣ ನುಡಿನಮನ

Posted On: 16-06-2025 06:34PM

ಶಿರ್ವ : ಶಿಕ್ಷಕರ ನೆಚ್ಚಿನ ವಿದ್ಯಾರ್ಥಿಯಾಗಿ, ಶಾಲೆಯ ನಂಟನ್ನು ಬೆಳಸಿಕೊಂಡು, ಶಾಲಾ ಜೀವನದ ರಜತ ಸಂಭ್ರಮವನ್ನೂ ಅದೇ ಪ್ರಾಥಮಿಕ ಶಾಲೆಯಲ್ಲಿ ಆಚರಿಸಿಕೊಂಡು ವಿದ್ಯಾರ್ಥಿಗಳಿಗೆ, ಶಾಲೆಗೆ ಕೊಡುಗೆಗಳನ್ನು ನೀಡಿ ಕೃತಜ್ಞತಾ ಭಾವವನ್ನು ಬೆಳೆಸಲು ಪ್ರೇರಣಾಕರ್ತರಾದ ಉದ್ಯಮಿ, ಕೊಡುಗೈದಾನಿ ಬಂಟಕಲ್ಲು ಶಿವಾನಂದ ಪಾಟ್ಕರ್ ಮುಂಬಯಿಯಲ್ಲಿ ಇತ್ತೀಚೆಗೆ ತಮ್ಮ 50ರ ಹರೆಯದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಸಹಪಾಠಿಗಳು ಸೋಮವಾರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಶಾಲೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಿದ್ದರು.

ಕುತ್ಯಾರು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕುತ್ಯಾರು ನವೀನ್ ಶೆಟ್ಟಿಗೆ ಅಭಿನಂದನೆ

Posted On: 16-06-2025 06:10PM

ಶಿರ್ವ : ಶಿರ್ವ ಸಮೀಪದ ಕುತ್ಯಾರು ಗ್ರಾ,ಪಂ.ವ್ಯಾಪ್ತಿಯ 159ನೇ ಕುತ್ಯಾರು ಬೂತ್‌ನ ಸಾಮಾನ್ಯ ಕಾರ್ಯಕರ್ತರಾಗಿ ಹಂತಹಂತವಾಗಿ ಬೆಳೆದು ಗ್ರಾ.ಪಂ.ಅಧ್ಯಕ್ಷರಾಗಿ, ತಾಲೂಕು, ಕಾಪು ಬ್ಲಾಕ್ ಮಟ್ಟದಲ್ಲಿ ಪದಾಧಿಕಾರಿಯಾಗಿ ಜಿಲ್ಲಾ ಪ್ರಧಾನಕಾರ್ಯದರ್ಶಿಯಾಗಿ ಮೂರು ಅವಧಿಗೆ ಕರ್ತವ್ಯ ನಿರ್ವಹಿಸಿ ಇದೀಗ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿರುವ ಕುತ್ಯಾರು ನವೀನ್ ಶೆಟ್ಟಿರವರಿಗೆ ಕುತ್ಯಾರು ಬೂತ್ ಕಾರ್ಯಕರ್ತರು ಕುತ್ಯಾರು ಅಶೋಕ್ ಗೌಡ್ರು ನಿವಾಸ ಗಿರಿಜಾದಲ್ಲಿ ಏರ್ಪಡಿಸಿದ ಸರಳ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸನ್ಮಾನಿಸಿದರು.

ಕಾಪು : ರೋಟರಿ ಸಂಭ್ರಮದಲ್ಲಿ ರೋಟರಾಕ್ಟ್ ಕ್ಲಬ್ ಸುಭಾಸ್ ನಗರಕ್ಕೆ 11 ಪ್ರಶಸ್ತಿಗಳು

Posted On: 16-06-2025 05:35PM

ಕಾಪು : ರೋಟರಿ ಸಂಸ್ಥೆಯಿಂದ ಕಾರ್ಕಳದಲ್ಲಿ ನಡೆದ ಸಂಭ್ರಮ 2024-25 ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಟರಾಕ್ಟ್ ಕ್ಲಬ್ ಸುಭಾಸ್ ನಗರ ಕ್ಕೆ ಒಟ್ಟು 11 ಪ್ರಶಸ್ತಿಗಳು ಲಭಿಸಿವೆ.

ಉದ್ಯಾವರ : ನಿರಂತರ್ - ಆಂಕ್ರಿಯಿಂದ ಕವಿತಾ ವಾಚನ, ಸಂವಾದ, ತರಬೇತಿ

Posted On: 16-06-2025 05:22PM

ಉದ್ಯಾವರ : ಸಮಾಜದಲ್ಲಿ ಬದಲಾವಣೆ ಪ್ರಾಕೃತಿಕ ನಿಯಮ. ಸಾಹಿತ್ಯದಿಂದ ಸಾಕಷ್ಟು ಸಮಾಜಿಕ ಚಳವಳಿಗಳು ರೂಪುಗೊಂಡು, ಕವಿ ಮತ್ತು ಸಾಹಿತಿಗಳು ಸಾಮಾಜಿಕ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ತಮ್ಮ ಬಗ್ಗೆಯೇ ಯೋಚಿಸಲು ಸಮಯವಿಲ್ಲದ ಇಂದಿನ ಒಂದು ನಿಮಿಷದ ರೀಲ್ ಕಾಲದಲ್ಲಿ, ಸಾಹಿತಿ, ಕವಿಗಳು ಸಮಾಜದ ಬಗ್ಗೆ ಯೋಚಿಸಿ, ಕವಿತೆ - ಲೇಖನಗಳ ಮೂಲಕ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ಚರ್ಚಿನ ಪ್ರಧಾನ ಗುರು ವಂ| ಅನಿಲ್ ಡಿ ಸೊಜಾ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಅಹರ್ನಿಶಿ ಶ್ರಮಿಸುತ್ತಿರುವ ನಿರಂತರ್ ಉದ್ಯಾವರ್ ಸಾಂಸ್ಕೃತಿಕ ಸಂಘಟನೆಯ ಸ್ಥಾಪನಾ ದಿನದ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾಹಿತ್ಯ ಶಿಬಿರ ಮತ್ತು ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಪು ರೋಟರಿ ಕ್ಲಬ್ ರಜತೋತ್ಸವದಲ್ಲಿ ದಂಡತೀರ್ಥ ಪ್ರಾಂಶುಪಾಲ ನೀಲಾನಂದ ನಾಯ್ಕ್‌ರವರಿಗೆ ಅಭಿನಂದನೆ

Posted On: 16-06-2025 11:55AM

ಕಾಪು : ಇಲ್ಲಿನ ರೋಟರಿ ಕ್ಲಬ್ ಇದರ ರಜತೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ  ಶಿಕ್ಷಣ ಕ್ಷೇತ್ರದಲ್ಲಿ ಕಳೆದ 37 ವರ್ಷಗಳಿಂದ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಅಧ್ಯಾಪಕರಾಗಿ, ಉಪಪ್ರಾಂಶುಪಾಲರಾಗಿ, ಪ್ರಸ್ತುತ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿರುವ ನೀಲಾನಂದ ನಾಯ್ಕ್‌ರವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅಭಿನಂದಿಸಲಾಯಿತು.

ಬಂಟಕಲ್ಲು : 8ನೇ ವರ್ಷದ "ಗಾದಂತ್ ಕ್ಹೇಳ್ ಮೇಳ್" - ಕೆಸರು ಗದ್ದೆ ಕ್ರೀಡೋತ್ಸವ ಸಂಪನ್ನ

Posted On: 16-06-2025 11:44AM

ಶಿರ್ವ : ಪ್ರಕೃತಿಯ ಜೊತೆಗಿನ ಬಾಂಧವ್ಯದೊಂದಿಗೆ ಜೊತೆಯಾದ ಹಿರಿಯರ ಅನುಭವಗಳು, ಕಷ್ಟದ ಶ್ರಮ ಜೀವನ, ಸತ್ಯ, ನಿಷ್ಠೆ, ಪ್ರಾಮಾಣಿಕತೆ ಇಂದು ಮರೆಯಾಗುತ್ತಿದೆ. ಅವರ ಬದುಕು ನಮಗೆ ಆದರ್ಶವಾಗಿರಬೇಕು. ಹಿರಿಯರ ಕೃಷಿ ಸಂಸ್ಕೃತಿ, ಪ್ರಕೃತಿಯ ನಂಟು ನವಪೀಳಿಗೆಗೆ ಪರಿಚಯಿಸುವ "ಗಾದಂತ್ ಕ್ಹೇಳ್ ಮೇಳ್" ಇದೊಂದು ಅರ್ಥಪೂರ್ಣ ಕಾರ್ಯಕ್ರಮ ಎಂದು ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬೆಂಗಳೂರು ಇದರ ನಿರ್ದೇಶಕರಾದ ಎಳ್ಳಾರೆ ಸದಾಶಿವ ಪ್ರಭು ನುಡಿದರು. ಅವರು ರವಿವಾರ ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ಹಾಗೂ ಶ್ರೀದುರ್ಗಾ ಮಹಿಳಾ ವೃಂದದ ಸಹಭಾಗಿತ್ವದಲ್ಲಿ ಸಡಂಬೈಲು ಅನಂತರಾಮ ವಾಗ್ಲೆಯವರ ದೊಡ್ಡಗದ್ದೆಯಲ್ಲಿ ಸಮಾಜದ ಸಂಘಟನೆ, ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಹಾಗೂ ಮನೋರಂಜನೆಯ ಸದುದ್ದೇಶದಿಂದ ಸಮಾಜ ಬಾಂಧವರಿಗಾಗಿ ಏರ್ಪಡಿಸಿದ 8ನೇ ವರ್ಷದ "ಗಾದಂತ್ ಕ್ಹೇಳ್ ಮೇಳ್" - ಕೆಸರು ಗದ್ದೆ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಜೂ. 17 (ನಾಳೆ) : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀಮಾತಾ ಸು-ವರ್ಣ ಪುಷ್ಪಾಂಜಲಿ ಸೇವೆ

Posted On: 16-06-2025 11:20AM

ಕಾಪು : ಇಲ್ಲಿನ ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ಶ್ರೀಮಾತಾ ಸಭಾಭವನ ಉದ್ಘಾಟನೆ ಮತ್ತು ಜಾನಪದ ವಿದ್ವಾಂಸ ಕೆ.ಎಲ್‌. ಕುಂಡಂತಾಯ ಮತ್ತು ತಂಡದವರು ರಚಿಸಿರುವ ಮಹಾಮಾತೆ ಮಾರಿಯಮ್ಮ ಗ್ರಂಥ ಬಿಡುಗಡೆ ಹಾಗೂ ಘಂಟಾನಾದ ಸೇವೆಗೆ ಚಾಲನೆಯು ಜೂನ್ 17, ಮಂಗಳವಾರ ನಡೆಯಲಿದೆ.

ದ.ಕ. ಮೊಗವೀರ ಮಹಾಜನ ಸಂಘದಿಂದ ಮೊಗವೀರ ಗ್ರಾಮಸಭೆಗಳಿಗೆ ಭೇಟಿ

Posted On: 16-06-2025 11:12AM

ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಸಭಾ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಮಹಾಜನ ಸಂಘದ ಆಡಳಿತ ಪದಾಧಿಕಾರಿಗಳು ಭಾನುವಾರ ನಾನಾ ಮೊಗವೀರ ಮಹಾಸಭೆಗಳಿಗೆ ಭೇಟಿ ನೀಡಿದರು.