Updated News From Kaup
ಪಡುಬಿದ್ರಿ ಸಿ.ಎ.ಸೊಸೈಟಿಯ ಹೆಜಮಾಡಿ ಶಾಖಾ ಕಟ್ಟಡದಲ್ಲಿ ನೂತನ ಸಭಾಂಗಣ ಉದ್ಘಾಟನೆ
Posted On: 08-06-2025 03:11PM
ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಹೆಜಮಾಡಿ ಶಾಖಾ ಕಟ್ಟಡದಲ್ಲಿರುವ 'ಎಚ್. ನಾರಾಯಣ' ನೂತನ ಸಭಾಂಗಣವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ ಗಣ್ಯರು ಭಾನುವಾರ ಉದ್ಘಾಟಿಸಿದರು.
ಕಾಪು : ಮಜೂರು ಮದರಸದಲ್ಲಿ ಮಾದಕ ದ್ರವ್ಯದ ವಿರುದ್ದ ಅಭಿಯಾನ
Posted On: 07-06-2025 01:31PM
ಕಾಪು : ಸಮಾಜದಲ್ಲಿ ಅಮಲು ಪದಾರ್ಥದ ಉಪಯೋಗವು ಜಾಸ್ತಿಯಾಗುತಿದ್ದು ಮಾದಕ ದ್ರವ್ಯ ವಿರುದ್ಧದ ಅಭಿಯಾನಗಳು ಸಮಾಜದ ಕಣ್ಣು ತೆರೆಸಲು ಕಾರಣವಾಗಿರುತ್ತದೆ ಎಂದು ಮಸ್ಜಿದ್ ಅಧ್ಯಕ್ಷರಾದ ಡಾ. ಫಾರೂಕ್ ಚಂದ್ರನಗರ ತಿಳಿಸಿದರು. ಅವರು ಸಿರಾಜುಲ್ ಹುದಾ ಮದರಸ ಮಜೂರು -ಮಲ್ಲಾರು ಇದರ ವಿದ್ಯಾರ್ಥಿಗಳು ಸುನ್ನಿ ಬಾಲ ಸಂಘ ಇದರ ಅಧೀನದಲ್ಲಿ ನಡೆಸಿದ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.
ನಡುವಣ ಲೋಕದ ನಡೆ - ಪುಸ್ತಕ ಬಿಡುಗಡೆ
Posted On: 04-06-2025 06:58AM
ಕಾಪು : ಜಾನಪದ ಆರಾಧನೆಗಳಲ್ಲಿ ಮರೆಯಾಗುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಹಾಗೂ ಸಂಪ್ರದಾಯ ಮತ್ತು ಪರಂಪರೆಗಳನ್ನು ಕಾಪಿಡಲು ಕ್ಷೇತ್ರಕಾರ್ಯ ಆಧರಿತ ಕೆಲಸಗಳು ಇನ್ನಷ್ಟು ನಡೆಯಬೇಕು ಎಂದು ಹಿರಿಯ ಸಾಹಿತಿ, ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಜರಗಿದ ಕೆ.ಎಲ್.ಕುಂಡಂತಾಯರ "ನಡುವಣ ಲೋಕದ ನಡೆ - ದೈವಾರಾಧನೆ ನೆಲೆ ಕಲೆ" ಎಂಬ ಪುಸ್ತಕದ ದ್ವಿತೀಯ ಆವೃತ್ತಿಯ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಳುನಾಡಿನಲ್ಲಿ ಬೆಳೆದಿರುವ ದೇವಾಲಯ ಸಂಸ್ಕೃತಿ, ಜನಜೀವನದೊಂದಿಗೆ ಹಾಸುಹೊಕ್ಕಾಗಿರುವ ದೈವಾರಾಧನೆ, ನಾಗಾರಾಧನೆ ಮುಂತಾದ ಶ್ರದ್ಧೆಗಳ ವಿಭಾಗಗಳಲ್ಲಿ ಅಧ್ಯಯನ ನಡೆಸಿ ಲೇಖನಗಳನ್ನು ಬರೆಯುತ್ತಿರುವ ಕುಂಡಂತಾಯರ ಕಾರ್ಯವನ್ನು ಭಟ್ ಶ್ಲಾಘಿಸಿದರು.
ಮುಂಡಾಲ ಯುವ ವೇದಿಕೆ ಪಡುಬಿದ್ರಿ : ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
Posted On: 01-06-2025 07:17PM
ಪಡುಬಿದ್ರಿ : ಇಲ್ಲಿನ ಮುಂಡಾಲ ಯುವ ವೇದಿಕೆಯ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ ರವಿವಾರ ಪಡುಬಿದ್ರಿ ಸಾಯಿ ಆರ್ಕೇಡ್ ಸಭಾಂಗಣದಲ್ಲಿ ನಡೆಯಿತು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನ
Posted On: 27-05-2025 11:49AM
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ನೂತನವಾಗಿ ಆಯ್ಕೆಯಾದ ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲ ಬೆಂಗಳೂರು ಹಾಗು ದಕ್ಷಿಣ ಕನ್ನಡ ಒಕ್ಕೂಟ ನಿಗಮದ ನಿರ್ದೇಶಕರಾಗಿ ಆಯ್ಕೆಯಾದ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಚಿಕಿತ್ಸೆಗೆ ಸಹಾಯದ ನಿರೀಕ್ಷೆಯಲ್ಲಿ ಕಾಪು ಮಲ್ಲಾರು ಗ್ರಾಮದ ಮಾಸ್ಟರ್ ನಿಶಾಂತ್ ಕುಟುಂಬ
Posted On: 26-05-2025 10:03AM
ಕಾಪು : ಇಲ್ಲಿನ ಮಲ್ಲಾರು ಗ್ರಾಮದಲ್ಲಿ ವಾಸವಾಗಿರುವ ಶಿವ ಮತ್ತು ಸುನೀತಾ ದಂಪತಿಗಳ 2 ವರ್ಷದ ಮಗು (Hspt No 4015051) Diagnosed with Chronic Kidney Disease ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಮಗುವನ್ನು ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಿಸಿರುತ್ತಾರೆ. ಈ ಮಗುವಿಗೆ ತಕ್ಷಣದಿಂದ ಪೆರಿಟೋನಿಯಲ್ ಡಯಾಲಿಸಿಸ್ನ ಅಗತ್ಯವಿರುತ್ತದೆ. ಈ ಕುಟುಂಬವು ಆರ್ಥಿಕವಾಗಿ ಹಿಂದುಳಿದವರಾಗಿದ್ದು ತೀರಾ ಬಡವರಾಗಿದ್ದಾರೆ. ಕೂಲಿ ಕೆಲಸ ಮಾಡಿ ತಮ್ಮ ಜೀವನವನ್ನು ಸಾಗಿಸುತ್ತಿರುವ ಕುಟುಂಬವು ಮಗುವಿನ ಚಿಕಿತ್ಸೆಯನ್ನು ನಡೆಸಲು ಅಶಕ್ತವಾಗಿರುತ್ತದೆ. ಕರುಣೆಯುಳ್ಳ ನಿಮ್ಮೊಂದಿಗೆ ಮಗುವಿನ ಚಿಕಿತ್ಸೆಗಾಗಿ ಈ ಕುಟುಂಬವು ಸಹಾಯವನ್ನು ಯಾಚಿಸುತ್ತಿದೆ
ಜೂ.1 : ಸಾಲ್ಮರ ಆಯುರ್ವೇದ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
Posted On: 25-05-2025 06:03PM
ಶಿರ್ವ : ಶಂಕರಪುರ ಸಮೀಪದ ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ, ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ಮತ್ತು ಇನ್ನಂಜೆ ಯುವಕ ಮಂಡಲ (ರಿ) ಇವರ ಸಹಯೋಗದಲ್ಲಿ ಜೂನ್.1, ರವಿವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರ ಪರ್ಯಂತ ಆಸ್ಪತ್ರೆಯ ನುರಿತ ವೈದ್ಯರಿಂದ "ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ" ಸಾಲ್ಮರ ಆಯುರ್ವೇದ ಕೇಂದ್ರದಲ್ಲಿ ಜರುಗಲಿದೆ.
ಅಹಿಂಸಾ ಸಂದೇಶಕ್ಕಾಗಿ ಯುವಕರಿಬ್ಬರ 12 ದಿನ, ಮೂರು ರಾಜ್ಯಗಳು, ಮೂರು ಸಾವಿರ ಕಿ.ಮೀ. ಬೈಕ್ ರ್ಯಾಲಿಗೆ ಚಾಲನೆ
Posted On: 25-05-2025 03:04PM
ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು ಎಚ್ಚರಿಸುವುದಕ್ಕಾಗಿ ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಯುವಕರಾದ ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಇವರಿಂದ 12 ದಿನಗಳ, ಮೂರು ರಾಜ್ಯಗಳಲ್ಲಿ, ಮೂರು ಸಾವಿರ ಕಿಲೋಮೀಟರ್ ಬೈಕ್ ರ್ಯಾಲಿಗೆ ಭಾನುವಾರ ಬೆಳಿಗ್ಗೆ ಕಾಪು ಹೊಸ ಮಾರಿಗುಡಿ ಆವರಣದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು.
ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ಎರ್ಮಾಳು ಬಡಾ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Posted On: 25-05-2025 02:47PM
ಪಡುಬಿದ್ರಿ : ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘ (ನಿ.) ಎರ್ಮಾಳು ಬಡಾ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಕುಂಟಿಕಾನ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿ.ಪ್ರಾ.ಶಾಲೆ ಎರ್ಮಾಳು ಬಡಾ ಇಲ್ಲಿ ಜರಗಿತು.
ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Posted On: 24-05-2025 04:45PM
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ವರ್ಷಂಪ್ರತಿಯಂತೆ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಎಸ್ಎಸ್ಎಲ್ಸಿ/ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಪಾಠದಲ್ಲಿ ಪೂರ್ಣ ಅಂಕ(125/125)ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರದೊಂದಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
