Updated News From Kaup

ಕಾಪು : ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ನಾಮಪತ್ರ ಸಲ್ಲಿಕೆ

Posted On: 19-04-2023 02:33PM

ಕಾಪು : ನಮ್ಮ ಅಭ್ಯರ್ಥಿಯ ಗೆಲುವಿಗೆ ಪಕ್ಷವು ಶ್ರಮಿಸಲಿದ್ದು. ಉತ್ತಮ ಯೋಜನೆಗಳನ್ನು ಕಾಪು ತಾಲೂಕಿಗೆ ನೀಡಲಿದ್ದೇವೆ. ಈ ಬಾರಿ ಕಾಪು ವಿಧಾನ ಸಭಾಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಮಹಿಳೆಗೆ ಸ್ಥಾನ ನೀಡಿದೆ. ಸಮಾಜ ಸೇವೆ ಮಾಡುತ್ತಿರುವ ಸಬೀನ ಸಮದ್ ರಿಗೆ ನಮ್ಮ ಪಕ್ಷವು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಹೇಳಿದರು. ಅವರು ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಪು : ಗೆಲುವಿನ ನಿರೀಕ್ಷೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷ ; ಕುಮಾರಸ್ವಾಮಿ ಯೋಜನೆಗಳೇ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ

Posted On: 19-04-2023 01:42PM

ಕಾಪು : ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಲವಾರು ಜನಪರ ಕಾರ್ಯಗಳ ಮೂಲಕ ರಾಜ್ಯದಲ್ಲಿ ಪ್ರಗತಿ ಕಂಡಿದೆ. ಇವರ ಕಾರ್ಯಗಳೇ ನಮ್ಮ ಕಾಪು ತಾಲೂಕಿನ ಅಭ್ಯರ್ಥಿ ಸಬೀನಾ ಸಮದ್ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಹೇಳಿದರು. ಅವರು ಬುಧವಾರ ಕಾಪು ಜೆಡಿಎಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಹೆಜಮಾಡಿ : ದಾಖಲೆಗಳಿಲ್ಲದ್ದ 4.79 ಲಕ್ಷ ರೂ. ಮೌಲ್ಯದ ಸಿಗರೇಟ್ ವಶ

Posted On: 18-04-2023 07:00PM

ಹೆಜಮಾಡಿ : ಚುನಾವಣೆಯ ನಿಮಿತ್ತ ಹೆಜಮಾಡಿ ಚೆಕ್‌ಪೋಸ್ಟ್ ಬಳಿ ಅಧಿಕಾರಿಗಳು, ಪೋಲಿಸರು ತಪಾಸಣೆಯಲ್ಲಿದ್ದಾಗ ಕಾರು ಮತ್ತು ಯಾವುದೇ ದಾಖಲೆ ಇಲ್ಲದ 4.79 ಲಕ್ಷ ರೂ. ಮೌಲ್ಯದ ಸಿಗರೇಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಪು : ಬಿಜೆಪಿ ಪಕ್ಷದ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ಉದ್ಘಾಟನೆ

Posted On: 18-04-2023 06:19PM

ಕಾಪು : ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್‌ ನ್ನು ಬಿಜೆಪಿಯ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಸಹಿತವಾಗಿ ಗಣ್ಯರು ಎಪ್ರಿಲ್ 17 ರಂದು ಉದ್ಘಾಟಿಸಿದರು.

ಉಚ್ಚಿಲ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ - ಬಿಜೆಪಿ ಕಾಪು ತಾಲೂಕು ಅಧ್ಯಕ್ಷನ ವಿರುದ್ಧ ದೂರು

Posted On: 17-04-2023 11:04PM

ಉಚ್ಚಿಲ : ಇಲ್ಲಿನ ಸಭಾಂಗಣವೊಂದರಲ್ಲಿ ಬಿಜೆಪಿ ವತಿಯಿಂದ ನಡೆದ ಸಭೆಯಲ್ಲಿ ಕಾಪು ತಾಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಯಾವುದೇ ಅನುಮತಿ ಪಡೆಯದೇ ಸುಮಾರು100 ಜನರಿಗೆ ಉಪಹಾರ ವಿತರಿಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಘಟನೆ ಆದಿತ್ಯವಾರ ನಡೆದಿದೆ

ನಾಳೆ (ಎಪ್ರಿಲ್ 18) : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

Posted On: 17-04-2023 07:00PM

ಕಾಪು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ, ಶಾಸಕರಾದ ವಿನಯ್ ಕುಮಾರ್ ಸೊರಕೆ ನಾಳೆ ಕಾಪು ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಉಚ್ಚಿಲ : ಕಾಂಗ್ರೆಸ್ ನ ಗ್ಯಾರಂಟಿ ಕಾಡ್೯ ಚೀನಿ ಸೆಟ್ ರೇಡಿಯೋ ಕತೆಯಂತೆ - ಕೋಟ ಶ್ರೀನಿವಾಸ ಪೂಜಾರಿ

Posted On: 16-04-2023 04:54PM

ಉಚ್ಚಿಲ : ಸಾಮಾಜಿಕ ಜಾಲತಾಣವನ್ನು ಅತ್ಯಂತ ಬಲಿಷ್ಟಗೊಳಿಸಬೇಕಾಗಿದೆ. ಆಡಳಿತಾತ್ಮಕ, ಸೈದ್ಧಾಂತಿಕ ಸಮರ್ಥನೆಗೂ ಸಾಮಾಜಿಕ ಜಾಲತಾಣ ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಚ್ಚಿಲ ಮೊಗವೀರ ಸಭಾಭವನದಲ್ಲಿ ಜರಗಿದ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರ ದೃಷ್ಟಿಯ ದೇವಾಲಯ ಉತ್ಸವ : ಎಲ್ಲೂರು ವಿಶ್ವೇಶ್ವರ ದೇವರಿಗೆ "ಭೌವನೋತ್ಸವ"

Posted On: 16-04-2023 09:04AM

ರಾಷ್ಟ್ರೀಯ ಏಕತೆ , ರಾಷ್ಟ್ರದ ಸಮೃದ್ಧಿ , ಪ್ರಜಾಶಾಂತಿ , ಜನಪದರ ನೆಮ್ಮದಿಯೆ ಮೊದಲಾದ ಲೋಕದೃಷ್ಟಿಯ ಆಶಯವಿರುವ "ದೇವಾಲಯಗಳ ವಾರ್ಷಿಕ ಮಹೋತ್ಸವ"ಗಳು ಸಕಲ ಪಾಪಗಳನ್ನು ಪರಿಹರಿಸುವಂತಹದ್ದು , ಅಮಂಗಲವನ್ನು ನಾಶಪಡಿಸುವಂತಹದ್ದು ,ಸೌಭಾಗ್ಯ - ಸಂತತಿ - ಸಂಪತ್ತು ಕೊಡುವಂತಹದ್ದು , ಧರ್ಮ - ಅರ್ಥ - ಕಾಮ - ಮೋಕ್ಷಗಳೆಂಬ ಚತುರ್ವಿಧ ಪುರುಷಾರ್ಥ ಈಡೇರಿಸುವಂತಹದ್ದು ಎಂಬುದು ಶಾಸ್ತ್ರ ಪ್ರಮಾಣ. ಈ ಸಂಕಲ್ಪದೊಂದಿಗೆ ನಡೆಸುವ ಉತ್ಸವದ ಅಂತ್ಯದಲ್ಲಿ ಮಹೋತ್ಸವದಿಂದ ಸಂತುಷ್ಟರಾದ ದೇವರು ರಾಜನಿಗೆ - ರಾಷ್ಟ್ರಕ್ಕೆ = "ರಾಜಾರಾಷ್ಟ್ರಕ್ಕೆ" ಹಾಗೂ ನಡೆಸಿದಂತಹಾ ಕರ್ತೃಗಳಿಗೆ, ನೋಡಿದಂತಹ ಮಹಾಜನರಿಗೆ ಬರುವಂತಹ ಸಕಲಾರಿಷ್ಟಗಳನ್ನು ಪರಿಹರಿಸಿ ಸದಾ ಭಾಗ್ಯ- ಭೋಗ - ನಿತ್ಯಸೌಮಂಗಲ್ಯೋತ್ಸವವನ್ನು ಅನುಗ್ರಹಿಸಬೇಕೆಂದು ಪ್ರಾರ್ಥಿಸಿಕೊಳ್ಳವುದು ಅಥವಾ ಧ್ಯಾನಿಸುವ ಸಂಪ್ರದಾಯವಿದೆ . ಇಂತಹ ಉತ್ಸವಗಳು ಅಂಕುರಾರೋಪಣ ಮೂಲಕ ನೆರವೇರಿದರೆ ಉತ್ತಮ , ಧ್ವಜಾರೋಹಣ ಪುರಸ್ಸರ ಸಂಪನ್ನಗೊಂಡರೆ ಮಧ್ಯಮ , ಭೇರಿತಾಡನ ಪೂರ್ವಕ ನಡೆದರೆ ಅಧಮ ಎಂದು ಉತ್ಸವಗಳನ್ನು ತಂತ್ರ - ಆಗಮ ಶಾಸ್ತ್ರಗಳು ವಿವರಿಸುತ್ತವೆ . ಒಂದು ದಿನದಲ್ಲಿ ಪೂರೈಸುವ ಉತ್ಸವವು ಶೈವೋತ್ಸವ , ಮೂರುದಿನಗಳ ಉತ್ಸವ ಗೌಣೋತ್ಸವ , ಐದು ದಿನಗಳ ಉತ್ಸವ ಭೌತಿಕೋತ್ಸವ, ಏಳು ದಿನಗಳ ಉತ್ಸವ ಭೌವನೋತ್ಸವ, ಒಂಬತ್ತು ದಿನಗಳ ಉತ್ಸವ ದೈವಿಕೋತ್ಸವ, ಹನ್ನೆರಡು ದಿನಗಳ ಉತ್ಸವ ಶ್ರೀಕರೋತ್ಸವ, ಇಪ್ಪತ್ತೊಂದು ದಿನಗಳ ಉತ್ಸವ ರೌದ್ರೋತ್ಸವ. ಇಂತಹ ಮಹೋತ್ಸವವನ್ನು ವರ್ಷದ ಯಾವ ತಿಂಗಳುಗಳಲ್ಲಿ ಮಾಡಬಹುದು ಅಥವಾ ಪ್ರಾರಂಭಿಸಬಹುದು ಎಂದರೆ : ಕಾರ್ತಿಕ ಮಾಸದಲ್ಲಿ , ಮಾರ್ಗಶಿರ ಮಾಸದಲ್ಲಿ ,ಮಾಘ - ಪಾಲ್ಗುಣ ಮಾಸಗಳಲ್ಲಿ , ಚೈತ್ರ - ವೈಶಾಖ ಮಧ್ಯದಲ್ಲಾಗಲಿ ನರವೇರಿಸ ಬಹುದೆಂಬುದು ಶಾಸ್ತ್ರ ಸೂಚನೆ . ಸಂಕ್ರಮಣದಲ್ಲಾಗಲಿ ,‌ಪೌರ್ಣಮಿ - ಅಮಾವಸ್ಯೆಯಲ್ಲಾಗಲಿ , ದೇವರ ಜನ್ಮನಕ್ಷತ್ರದಲ್ಲಾಗಲಿ ಮಹೋತ್ಸವ ಆರಂಭಿಸಬೇಕು ಎಂದು ನಿರ್ದೇಶಿಸುತ್ತದೆ ಶಾಸ್ತ್ರ . ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವರ ಸನ್ನಿಧಿಯಲ್ಲಿ ಮೇಷ ಸಂಕ್ರಮಣದಂದು ಧ್ವಜಾರೋಹಣ ಪರಸ್ಸರ ಉತ್ಸವ ಆರಂಭವಾಗುತ್ತದೆ . ಈ ಸಂದರ್ಭವು ಚೈತ್ರ - ವೈಶಾಖ ಮಾಸಗಳ ನಡುವೆ ಒದಗಿಬರುತ್ತದೆ. ಎ.13 ರಂದು ಅಂಕುರಾರೋಪಣ,ಎಪ್ರಿಲ್ 14 ರಂದು ಧ್ಜಜಾರೋಹಣದೊಂದಿಗೆ ಉತ್ಸವ ಆರಂಭಗೊಂಡು ಎಪ್ರಿಲ್ 20 ರ ಪರ್ಯಂತ ಏಳು ದಿನಗಳ ಕಾಲ ನೆರವೇರುವುದು .ಏಳು ದಿನಗಳ ಉತ್ಸವವಾಗಿರುವುದರಿಂದ ಇದು "ಭೌವನೋತ್ಸವ".

ಎಪ್ರಿಲ್ 16 - 30 : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ವತಿಯಿಂದ ಸಮ್ಮರ್ ಕ್ಯಾಂಪ್ ದಮಾಕ

Posted On: 15-04-2023 11:10PM

ಕಾಪು : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ಇವರ ವತಿಯಿಂದ ನೆರವೇರಲಿರುವ ಸಮ್ಮರ್ ಕ್ಯಾಂಪ್ ದಮಾಕ ಎಪ್ರಿಲ್ 16ರಿಂದ ಎಪ್ರಿಲ್ 30ರವರೆಗೆ ನಡೆಯಲಿದೆ.

ಪಡುಬಿದ್ರಿ : ಕಂಚಿನಡ್ಕ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ತಾಲೂಕು ಅಧಿಕಾರಿ ವರ್ಗ ಭೇಟಿ

Posted On: 15-04-2023 10:58PM

ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದ ಕಂಚಿನಡ್ಕದ ವಲ್ನರೇಬಲ್ ಮತಗಟ್ಟೆಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಕಾಪು ತಾಲೂಕು ಅಧಿಕಾರಿ ವರ್ಗ ಭೇಟಿ ನೀಡಿದರು.