Updated News From Kaup

ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆಯನ್ನು ಎದುರಿಸುತ್ತಿದ್ದೇನೆ : ವಿನಯಕುಮಾರ್ ಸೊರಕೆ

Posted On: 04-03-2023 10:50PM

ಉದ್ಯಾವರ : ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಸೇವೆಯನ್ನು ಮಾಡಿದ್ದೇನೆ. ಅಧಿಕಾರ ಇದ್ದ ಅಥವಾ ಅಧಿಕಾರ ಇಲ್ಲದ ಸಮಯದಲ್ಲೂ ಜನರೊಂದಿಗೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಅಧಿಕಾರ ಇದ್ದಂಥ ಸಮಯದಲ್ಲಿ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ಪ್ರಸ್ತುತ ಚುನಾವಣೆ ನಾನು ಎದುರಿಸುತ್ತಿರುವ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆಯಾಗಲಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಯಾವರದಲ್ಲಿ ಭಾವನಾತ್ಮಕವಾಗಿ ಮಾತನಾಡಿದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಬಂಟಕಲ್ಲು : ರವಿಪ್ರಭ ಕೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

Posted On: 01-03-2023 01:25PM

ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾದ ರವಿಪ್ರಭಾ ಕೆ ಇವರು ಎನ್.ಎಮ್.ಎ.ಎಮ್ ತಾಂತ್ರಿಕ ಮಹಾವಿದ್ಯಾಲಯ, ನಿಟ್ಟೆ ಇಲ್ಲಿಯ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ರಮೇಶ್ ಭಟ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಸ್ಟಡೀಸ್ ಆಫ್ ಕೊರೊಶನ್ ಇನ್ಹಿಬಿಶನ್ ಆಫ್ ಅಲ್ಯುಮಿನಿಯಂ ಬೈ ಯುಸಿಂಗ್‌ ಸಿಂಪಲ್ ಆ್ಯಂಡ್ ಫ್ಯೂಸ್ಡ್ ಹೀಟಿರೋಸೈಕ್ಲಿಕ್ ಕಾಂಪೌಂಡ್ಸ್ ಇನ್ ಅಸಿಡಿಕ್ ಮಿಡಿಯಮ್ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಾಚ್೯ 21, 22 : ಕಾಪು ಮಾರಿಯಮ್ಮನ ಸನ್ನಿಧಿಯಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ

Posted On: 01-03-2023 10:28AM

ಕಾಪು : ಇಲ್ಲಿನ ಮೂರು ಮಾರಿಗುಡಿಗಳಲ್ಲಿ ನಡೆಯುವ ಕಾಲಾವಧಿ ಸುಗ್ಗಿ ಮಾರಿಪೂಜೆ ಮಾಚ್೯ 21, ಮಂಗಳವಾರ ಮತ್ತು 22, ಬುಧವಾರದಂದು ನಡೆಯಲಿದೆ ಎಂದು ಮೂರು ಮಾರಿಗುಡಿಗಳ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಿವೃತ್ತ ಶಿಕ್ಷಕ ಗೋಪಾಲಕೃಷ್ಣ ಭಟ್ ಕೆ. ಎಮ್ ಇವರ ಗುರುವಂದನಾ ಕಾರ್ಯಕ್ರಮಕ್ಕಾಗಿ ಸಜ್ಜಾಗಿದೆ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು

Posted On: 28-02-2023 10:19PM

ಕಾಪು : ಗೋಪಾಲಕೃಷ್ಣ ಭಟ್ ಕೆ. ಎಮ್ ದೂರದ ಕಾಸರಗೋಡುವಿನ ಸಂಪ್ರದಾಯಸ್ಥ ಮನೆತನದ ಪರಮೇಶ್ವರ ಭಟ್ ಮತ್ತು ಸುಮತಿ ದಂಪತಿಗಳ ಪುತ್ರರಾಗಿ ಜನಿಸಿದ ಶ್ರೀಯುತರು ಬಾಲ್ಯದ ವಿದ್ಯಾಭ್ಯಾಸವನ್ನು ತನ್ನ ಊರಿನಲ್ಲಿ ಪಡೆದರು. ಇವರ ಕುಟುಂಬವು ಕೂಡ ಶಿಕ್ಷಕ ಕುಟುಂಬವೆಂದು ಹೇಳಿದರೂ ಅತಿಶಯೋಕ್ತಿಯಾಗಲಾರದು. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಗಾದೆ ಮಾತು ಇವರಿಗೆ ಎಲ್ಲಾ ವಿಧದಲ್ಲೂ ಸಲ್ಲುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಗಣಿತ ಹಾಗೂ ವಿಜ್ಞಾನದ ಬಗ್ಗೆ ಅಪಾರ ಅನುಭವ ಹೊಂದಿ ಆ ಅನುಭವವನ್ನು ಮೈಗೂಡಿಸಿಕೊಂಡ ಹಿರಿಮೆ ಇವರದ್ದು. ಇವರು ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಗೆ 1986 ರಲ್ಲಿ ಅಧ್ಯಾಪಕರಾಗಿ ಸೇರಿ ಗಣಿತ ಪಾಠ ಮಾಡುವುದರಲ್ಲಿ ವರ್ಷದಿಂದ ವರ್ಷಕ್ಕೆ ಎತ್ತರಕ್ಕೆ ಏರುತ್ತಾ ಹೋದರು. ಉಡುಪಿ ಜೆಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಎಸ್ ಎಸ್ ಎಲ್ ಸಿ ಗಣಿತದಲ್ಲಿ ಸರಾಸರಿ ಅಂಕಗಳಲ್ಲಿ ಪ್ರಥಮ, ಉಡುಪಿ ಜಿಲ್ಲಾ ಸಾಧಕ ಶಿಕ್ಷಕ ಪ್ರಶಸ್ತಿ, ತನ್ನೂರಿನ ಹಾಗೂ ಅನೇಕ ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿದೆ.

ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಮಂಜುನಾಥ್ ಮತ್ತು ಸದಾನಂದರಿಗೆ ಪಿಎಚ್‌ಡಿ ಪದವಿ

Posted On: 28-02-2023 06:43PM

ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಮಂಜುನಾಥ್ ಎಸ್ ಇವರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಮಕೃಷ್ಣ ಎನ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪ್‌ಮೆಂಟ್ ಆಫ್ ಎ ಡ್ಯುಯಲ್ ಸ್ಟಿಲ್೯ ಚೇಂಬರ್ ಫಾರ್ ಆ್ಯನ್ ಐಡಿ ಎಂಜಿನ್ ಆ್ಯಂಡ್ ಇನ್ವೆಸ್ಟಿಗೇಷನ್ ಆನ್ ಇಟ್ಸ್ ಇಫೆಕ್ಟ್ ಆನ್ ಎಂಜಿನ್ ಪರ್ಫಾರ್‌ಮೆನ್ಸ್ ಯುಸಿಂಗ್ ಎ ಬಯೋಡೀಸೆಲ್ ಬ್ಲೆಂಡ್" ಎಂಬ ಸಂಶೋಧನಾ ಪ್ರಬಂಧಕ್ಕೆ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಸದಾನಂದ ಎಲ್ ಇವರು ಬ್ಯಾರೀಸ್‌ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಿ ಅಜೀಜ್ ಮುಸ್ತಫ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎಮ್ ಎಲ್ ಅಪ್ರೊಚಸಸ್ ಟವರ್ಡ್ಸ್ ಡಿಟೆಕ್ಟಿಂಗ್ ಆಂಡ್ರೈಡ್ ಸ್ಪೆಸಿಫಿಕ್ ಅಡ್ವಾನ್ಸ್‌ಡ್ ಮಾಲ್ವೇರ್ಸ್" ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಪಡುಬಿದ್ರಿ : ಕ್ಷುಲ್ಲಕ ಕಾರಣ ; ಹಲ್ಲೆ, ಜೀವಬೆದರಿಕೆ ; ಇತ್ತಂಡಗಳಿಂದ ದೂರು

Posted On: 27-02-2023 10:41PM

ಪಡುಬಿದ್ರಿ : ಕ್ಷುಲ್ಲಕ ಕಾರಣದಿಂದ ಇತ್ತಂಡಗಳ ನಡುವೆ ಹಲ್ಲೆ, ಜೀವಬೆದರಿಕೆ ಬಗ್ಗೆ ಆದಿತ್ಯವಾರ ದೂರು ಪ್ರತಿದೂರು ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.

ಜೀರ್ಣಗೊಂಡ ದೇವಾಲಯಗಳ ಉದ್ಧಾರ ಊರಿಗೆ ಶ್ರೇಯಸ್ಕರ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Posted On: 27-02-2023 09:14PM

ಉಡುಪಿ : ಹಳೆಯ ಬಟ್ಟೆಯನ್ನು ತೊಡೆದು ಹೊಸ ಬಟ್ಟೆಯನ್ನು ಉಡುವುದು ವೈಯುಕ್ತಿಕವಾಗಿ ವ್ಯಕ್ತಿಗೆ ಹೇಗೆ ಶ್ರೇಯಸ್ಕರವೋ, ಹಾಗೇ ಜೀರ್ಣಗೊಂಡ ದೇವಾಲಯಗಳನ್ನು ಉದ್ಧಾರಗೊಳಿಸುವುದು ಊರಿಗೆ ಶ್ರೇಯಸ್ಕರವಾದುದು, ಆದ್ದರಿಂದ ದೇವಾಲಯಗಳ ಜೀರ್ಣೋದ್ಧಾರದಲ್ಲಿ ಊರವರೆಲ್ಲರೂ ಒಮ್ಮನಸ್ಸಿನಿಂದ ಸೇವೆ ಸಲ್ಲಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ, ಇಲ್ಲಿನ ಪೆರ್ಣಂಕಿಲದ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭದ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಅನುಗ್ರಹ ಸಂದೇಶ ನೀಡಿದರು.

ಕಾಪು : ನಿವೃತ್ತ ಮುಖ್ಯ ಶಿಕ್ಷಕ ಹಾಜಿ ಬಾವು ಬ್ಯಾರಿ ಕರಂದಾಡಿ ನಿಧನ

Posted On: 27-02-2023 07:54AM

ಕಾಪು : ಇಲ್ಲಿನ ಕರಂದಾಡಿ ನಿವಾಸಿ ನಿವೃತ್ತ ಮುಖ್ಯ ಶಿಕ್ಷಕ ಹಾಜಿ ಬಾವು ಬ್ಯಾರಿ ಕರಂದಾಡಿ ಇವರು ಫೆಬ್ರವರಿ 25ರಂದು ಅಲ್ಪಕಾಲದ ಅಸೌಖ್ಯದಿಂದ ತನ್ನ ನಿವಾಸದಲ್ಲಿ ನಿಧನರಾದರು.

ಕಾಪು : ದೇವಾಡಿಗರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನಕ್ಕಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಮನವಿ

Posted On: 25-02-2023 06:29PM

ಕಾಪು : ಇಲ್ಲಿನ ದೇವಾಡಿಗರ ಸಂಘದ ಸಮುದಾಯ ಭವನ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಪಡೆಯುವ ಬಗ್ಗೆ ಪ್ರಶಾಂತ್ ಕುಮಾರ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಧ್ಯಕ್ಷ ಗೋವರ್ಧನ್ ಸೇರಿಗಾರ್ ಮತ್ತು ದೇವಾಡಿಗ ಸಮಾಜದ ನಾಯಕರು ಸೇರಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ನೀಡಿದರು.

ಇಂದು - ನಾಳೆ : ಕಟಪಾಡಿ ಕಂಬಳ

Posted On: 25-02-2023 06:18PM

ಕಟಪಾಡಿ : ತುಳುನಾಡಿನ ಇತಿಹಾಸದಲ್ಲಿ ಪ್ರಾಮುಖ್ಯತೆ ಗಳಿಸಿರುವ ಕಟಪಾಡಿ ಕಂಬಳಕ್ಕೆ ಇಂದು ಚಾಲನೆ ನೀಡಲಾಯಿತು.