Updated News From Kaup

1 ಕೋಟಿ ಅನುದಾನದಲ್ಲಿ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಗುದ್ದಲಿ ಪೂಜೆ

Posted On: 20-05-2025 07:08PM

ಪಡುಬಿದ್ರಿ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ರಿಪ್ - ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಮಂಗಳವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Posted On: 19-05-2025 06:17PM

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಸೋಮವಾರ ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೇ.29 - 30 : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳ - ನೂತನ ಧ್ವಜಸ್ತಂಭದ ಮರದ ಆಗಮನ ಮೆರವಣಿಗೆ ; ನಿಧಿಕುಂಭ ಸ್ಥಾಪನೆ

Posted On: 19-05-2025 12:51PM

ಪಡುಬಿದ್ರಿ : ಸುಮಾರು 30 ಕೋಟಿ ವೆಚ್ಚದಲ್ಲಿ ಶಾಸ್ತ್ರೀಯ ನೆಲೆಗಟ್ಟಿನಲ್ಲಿ, ಶಿಲ್ಪ ವಿನ್ಯಾಸಗಳೊಂದಿಗೆ ಪರಿಷ್ಕೃತಗೊಳಿಸಿ ಪುನರಚಿಸಿ ಜೀರ್ಣೋದ್ಧಾರ ಕಾರ್ಯಗಳಿಗೆ ಸಂಕಲ್ಪಿಸಲಾಗಿರುವ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮೇ.29 ರಂದು ನೂತನ ಧ್ವಜಸ್ತಂಭದ ಮರದ ಆಗಮನ ಮೆರವಣಿಗೆ ಹಾಗೂ ಮೇ.30ರಂದು ಶ್ರೀ ಮಹಾಗಣಪತಿ ಸನ್ನಿಧಾನದಲ್ಲಿ ನಿಧಿಕುಂಭ ಸ್ಥಾಪನೆಯು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ| ಕೆ. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಡುಬಿದ್ರಿಯಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುಕ್ಕುಂಜ, ಮಲಂಗೋಳಿ ರಸ್ತೆ ದುರಸ್ತಿಗೊಳಿಸುವಂತೆ ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ಮನವಿ

Posted On: 18-05-2025 04:58PM

ಕಾಪು : ತಾಲೂಕಿನ ಕುತ್ಯಾರು ಗ್ತಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಂಜ, ಮಲಂಗೋಳಿ ಭಾಗದ ರಸ್ತೆ ದುರಸ್ತಿ ಸೇರಿದಂತೆ ಊರಿನ ಹಲವು ಬೇಡಿಕೆಗಳ ಕುರಿತು ಬಿಜೆಪಿ ಪಕ್ಷದ ಹಿರಿಯರಾದ ಪ್ರಭಾಕರ್ ಶೆಟ್ಟಿ ಪಡುಮನೆ ಕಳತ್ತೂರು ಮುಂದಾಳತ್ವದಲ್ಲಿ ಭಾನುವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು.

ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣ : ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು

Posted On: 18-05-2025 04:15PM

ಕಟಪಾಡಿ : ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರನಾಡೆಂದು ಹೇಳಬಹುದು. ಪಾಜಕ ಕ್ಷೇತ್ರ, ದುರ್ಗಾದೇವಿ ಸನ್ನಿಧಾನ, ಪರಶುರಾಮ ಸನ್ನಿಧಾನವನ್ನು ಸುತ್ತುವರಿಯುವ ಮೂಲಕ ಕಟಪಾಡಿ ಏಣಗುಡ್ಡೆಯ ಪಂಪಾ ಕ್ಷೇತ್ರದ ಅಯ್ಯಪ್ಪ ‌ಸನ್ನಿಧಾನವು ಪಾವಿತ್ರ್ಯ ತರುವ ಕಾರ್ಯವಾಗಿದೆ. ಹಿಂದು ಧರ್ಮದ ಉಳಿವಿನೊಂದಿಗೆ ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣವಾಗಿದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಹೇಳಿದರು. ಅವರು ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಬಳಿಕ‌ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಕಟಪಾಡಿಯ ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ 40 ವರ್ಷಗಳ ನಂತರ ಸುಮಾರು 5 ಕೋಟಿ ವೆಚ್ಚದ ದೇವಳ ನಿರ್ಮಾಣದ ಕನಸು ಕಂಡಿದ್ದಾರೆ. ನನಸಾಗಲಿ ಎಂದರು.

ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ : 15ನೇ ವರ್ಷದ ವಾರ್ಷಿಕೋತ್ಸವ ಸಂಪನ್ನ

Posted On: 18-05-2025 03:56PM

ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ ಸಂಸ್ಥೆಯ 15ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸಾಗರ್ ವಿದ್ಯಾ ಮಂದಿರ ಶಾಲೆಯ ಸಾಗರ ದರ್ಶಿನಿ ವೇದಿಕೆಯಲ್ಲಿ ನೆರವೇರಿತು.

ಅರ್ಬುದ

Posted On: 18-05-2025 03:43PM

ಯಾರು ಬಲ್ಲರು ನಿನ್ನ ಮಾಯಕಾರತನವ ??? ಸುದ್ಧಿಯಿಲ್ಲದೆ ಸ್ವಯಂಭು ಮೂರ್ತಿವೆತ್ತು ಬಲಿತು ಮದ್ದಿಗೂ ಬಗ್ಗದೆ ಬುದ್ಧಿಗೆ ಒಗ್ಗದೆ ಸಿದ್ಧಿಗೂ ಸಿಗದೆ ತಂದೊಡ್ಡುವೆ ಬದುಕಿಗೂ ಸಾವಿಗೂ ನರಕ ಯಾತನೆ ಬಂದೊದಗುವೆ ಬಾಳಿಗೆ ನಿತ್ಯ ಕಂಠಕನಾಗಿ ಬಡವನೋ ಬಲ್ಲಿದನೋ ಬಾಲ್ಯ ಯೌವ್ವನ ವೃದ್ಧಾಪ್ಯ ನಿನಗಿಲ್ಲ ಬೇಧ ಅರ್ಬುದರಾಯ ಕಡು ಸಮಾನತೆಯ ಜೀವ ಭಕ್ಷಕ ಹರಿಕಾರ ಮಡುವಿಕೊಳ್ಳುತಿ ದಶಪಾದಗಳಲಿ ಏಡಿರಾಯ

ಕನ್ನಡ ನಮ್ಮ ಸ್ವಾಭಿಮಾನದ ಸಂಕೇತವಾಗಿದ್ದು ಇದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು : ಡಾ. ನಿಕೇತನ

Posted On: 18-05-2025 03:35PM

ಉಡುಪಿ : ಪರಸ್ಪರ ಒಗ್ಗೂಡುವಿಕೆ ನಮ್ಮ ಸಂಸ್ಕೃತಿ ಮತ್ತು ಭಾಷೆಯ ಅಪೂರ್ವವಾದ ಕೊಡುಗೆಯಾಗಿದೆ. ನಮ್ಮ ಸಾಹಿತ್ಯ ವಿವಿಧ ಮಜಲುಗಳನ್ನು ಸ್ಪರ್ಶಿಸಿ ವಿವಿಧ ರಂಗಕ್ಕೆ ಕಾಲಿಟ್ಟರೂ ಕೂಡ ಅದರ ಮೌಲ್ಯವನ್ನು ಕಳೆದುಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಏರಿದೆ ಎಂದು ಪ್ರಾಧ್ಯಾಪಕಿ, ಸಾಹಿತಿ ಡಾ. ನಿಕೇತನ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ನಡೆದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ 'ಕಲಾಯತನ ಸಾಹಿತ್ಯ ಯಕ್ಷ ಸಂಭ್ರಮ' ದಲ್ಲಿ ಸಮಾರೋಪ ಭಾಷಣ ಮಾಡಿದರು. ಸಾಮಗರವರ ದೈತ್ಯ ಪ್ರತಿಭೆ ಅವರ ಮಾನವೀಯತೆಯ ನಡೆ ಅಭಿನಂದನಾಹ೯ ಕನ್ನಡ ಮತ್ತು ಆಂಗ್ಲ ಭಾಷೆಯ ಅವರ ಪ್ರೌಢಿಮೆ ಅವರು ನಾಡಿಗೆ ಕೊಟ್ಟಂತ ಶ್ರೇಷ್ಠ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿದೆ. ಕನ್ನಡ ನಮ್ಮ ಸ್ವಾಭಿಮಾನದ ಸಂಕೇತವಾಗಿದೆ ಇದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಹೇಳಿದರು. ಈ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಚರ್ಚೆಗಳು ವಿಚಾರಗೋಷ್ಠಿ ಯಕ್ಷ ಕವಿಗೋಷ್ಠಿ ಸೇರಿದಂತೆ ಬಹಳಷ್ಟು ಉತ್ತಮವಾದ ಕಾರ್ಯಕ್ರಮಗಳು ನಡೆದಿದೆ ಎಂದರು.

ಮೇ.18 : ಕಟಪಾಡಿಯಲ್ಲಿ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ

Posted On: 17-05-2025 08:34PM

ಕಟಪಾಡಿ : ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ (ರಿ.) ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್‌ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಮೇ.18, ಆದಿತ್ಯವಾರ ಬೆಳಗ್ಗೆ 9.47ಕ್ಕೆ ನಡೆಯಲಿದೆ.

ಕಾಪುವಿನಲ್ಲಿ ಕರ್ನಾಟಕ ರಾಜ್ಯ ಮಟ್ಟದ ಅಂಡರ್ 15 ಓಪನ್ ಮತ್ತು ಗರ್ಲ್ಸ್ ಫೀಡೆರೇಟೆಡ್ ಚೆಸ್ ಚಾಂಪಿಯನ್‌ಶಿಪ್ 2025

Posted On: 15-05-2025 04:46PM

ಕಾಪು : ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಕಾಪು ಉಡುಪಿ ವತಿಯಿಂದ ಎಐಸಿಎಫ್ ದೆಹಲಿ, ಕೆಎಸ್ಸಿಎ ಬೆಂಗಳೂರು ಮತ್ತು ಯುಡಿಸಿಎ ಉಡುಪಿ ಮೇರೆಗೆ ಕಾಪುವಿನಲ್ಲಿ ಪ್ರಥಮ ಬಾರಿಗೆ ಮೇ.23 ರಿಂದ ಮೇ.25ರವರೆಗೆ ಕರ್ನಾಟಕ ರಾಜ್ಯ ಮಟ್ಟದ ಅಂಡರ್ 15 ಓಪನ್ ಮತ್ತು ಗರ್ಲ್ಸ್ ಫೀಡೆರೇಟೆಡ್ ಚೆಸ್ ಚಾಂಪಿಯನ್‌ಶಿಪ್ 2025 ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸಭಾಗೃಹದಲ್ಲಿ ಜರಗಲಿದೆ ಎಂದು ಸಂಸ್ಥೆಯ ಸ್ಥಾಪಕ ಮಾ| ಸಾಕ್ಷಾತ್ ಯು.ಕೆ.ಕಾಪು ಹೇಳಿದರು. ಅವರು ಕಾಪು ಪ್ರೆಸ್ ಕ್ಲಬ್‌ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.