Updated News From Kaup
ಪಡುಬಿದ್ರಿ : ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ವತಿಯಿಂದ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ
Posted On: 19 Mar 2023, 09:48 PM
ಪಡುಬಿದ್ರಿ : ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವ ಪಡುಬಿದ್ರಿಯ ತುಳುನಾಡ ಕಲಾವಿದರು ಸಂಘಟನೆಯ ಕಾರ್ಯ ಶ್ಲಾಘನೀಯ. ಪಡುಬಿದ್ರಿ ಭಾಗದಲ್ಲಿ ಕಲಾವಿದರಿಗೆ ಕೊರತೆಯಿಲ್ಲ. ಹಲವಾರು ಪ್ರತಿಭೆಗಳಿವೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಅಧ್ಯಕ್ಷರಾದ ವೈ, ಸುಧೀರ್ ಕುಮಾರ್ ಹೇಳಿದರು. ಅವರು ಮಾಚ್೯ 18 ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ಪಡುಬಿದ್ರಿ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಮುನ್ನ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಜನರಿಗೆ ಉತ್ತಮವಾದಂತಹ ಮನೋರಂಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೀಗೆಯೇ ಮುಂದುರಿಯಲಿ ಎಂದರು. ಕನ್ನಂಗಾರು ಬ್ರಹ್ಮ ಬೈದರ್ಕಳ ಗರಡಿಯ ಅರ್ಚಕರಾದ ಗಿರಿಧರ ಅಂಚನ್, ಬೆಂಗಳೂರಿನ ಯುವ ಉದ್ಯಮಿ ವಿಶ್ವಾಸ್ ವಿ ಅಮೀನ್, ಪಾದೆಬೆಟ್ಟು ಸುಬ್ರಹ್ಮಣ್ಯ ಯುವಕ ಮಂಡಲದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರೋಟರಿ ಕ್ಲಬ್ ಪಡುಬಿದ್ರಿಯ ಪೂರ್ವಾಧ್ಯಕ್ಷರಾದ ಕೃಷ್ಣ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ಸನ್ಮಾನ : ಸಮಾಜ ಸೇವಕ ಕೃಷ್ಣ ಬಂಗೇರ, ಕಲಾ ಪೋಷಕಿ ಗೀತಾ ಅರುಣ್, ಸಾಂಸ್ಕೃತಿಕ ರಂಗದ ಯುವ ಪ್ರತಿಭೆ ವೈಷ್ಣವಿ ರಾವ್ ನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ವಲಯ 5ರ ಪೂರ್ವ ಸಹಾಯಕ ಗವರ್ನರ್ ಗಣೇಶ್ ಆಚಾರ್ಯ ಉಚ್ಚಿಲ, ಪಡುಬಿದ್ರಿಯ ಯುವ ಉದ್ಯಮಿ ಸುನಿಲ್ ಕುಮಾರ್, ಪಡುಬಿದ್ರಿ ರೋಟರಿ ಅಧ್ಯಕ್ಷೆ ಗೀತಾ ಅರುಣ್ ಉಪಸ್ಥಿತರಿದ್ದರು. ತುಳುನಾಡ ಕಲಾವಿದರು ಅಧ್ಯಕ್ಷ ವೈ ಸುಕುಮಾರ್ ಸ್ವಾಗತಿಸಿ, ಪ್ರಸ್ತಾವಿಸಿದರು. ಕಾರ್ಯಕ್ರಮವನ್ನು ಯಶೋದ, ರಾಜೇಶ್ ಶೇರಿಗಾರ್, ಸಂತೋಷ್ ನಿರ್ವಹಿಸಿದರು. ಸ್ಥಾಪಕ ಅಧ್ಯಕ್ಷ ರವೀನ್ ಪಡುಬಿದ್ರಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ : ಓಂಕಾರ್ ಕಲಾ ಸಂಗಮ ಇವರಿಂದ ನೃತ್ಯ ವೈಭವ, ತುಳುನಾಡ ಕಲಾವಿದರಿಂದ ಕಿರು ನಾಟಕ ಪರಮ್ ವೀರ್, ವೈಷ್ಣವಿ ಕಲಾವಿದೆರ್ ಕೊಯಿಲ ಮಂಗಳೂರು ವತಿಯಿಂದ ಕುಸೆಲ್ದ ಗೌಜಿ ಹಾಸ್ಯಮಯ ಕಾರ್ಯಕ್ರಮ ಜರಗಿತು.
ಉಡುಪಿ : ಮತದಾನ ಜಾಗೃತಿ - ಕಿರುಚಿತ್ರ ಸ್ಪರ್ಧೆ ವಿಜೇತರು
Posted On: 19 Mar 2023, 05:44 PM
ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಅಂಗವಾಗಿ ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಿರುಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ. ಸಾಧನಾ ಕಟಪಾಡಿ ಅವರ ನನ್ನ ಮತ ನನ್ನ ಹೆಮ್ಮೆ ಕಿರು ಚಿತ್ರವು ಪ್ರಥಮ ಸ್ಥಾನ ಪಡೆದಿದ್ದು, 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಆದಿತ್ಯ ಅಂಬಲಪಾಡಿ ಅವರ ಓಟು=02 ಕಿರುಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದ್ದು, 7,500 ರೂ. ನಗದು ಹಾಗೂ ಪ್ರಶಸ್ತಿ ಪತ್ರ, ಕೆ. ಸತ್ಯೇಂದ್ರ ಪೈ ಅವರ ಮತದಾರ ಕಿರುಚಿತ್ರವು ತೃತೀಯ ಸ್ಥಾನ ಪಡೆದಿದ್ದು, 5,000 ರೂ ನಗದು ಹಾಗೂ ಪ್ರಶಸ್ತಿ ಪತ್ರ, ಸುಚಿತ್ರ ಎಸ್ ಅವರ ಮತ ಸಂಭ್ರಮ ಕಿರು ಚಿತ್ರಕ್ಕೆ ನಾಲ್ಕನೇ ಸ್ಥಾನ ಲಭಿಸಿದ್ದು, 2,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಸತೀಶ್ ಕಲ್ಯಾಣಪುರ ಅವರ ನಮ್ಮ ಓಟು ನಮ್ಮ ಪವರ್ ಕಿರು ಚಿತ್ರವು ಐದನೇ ಸ್ಥಾನ ಪಡೆದಿದ್ದು, 1,000 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಪಡೆದಿರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕ - ಗೋಗ್ರಾಸ ಸಮರ್ಪಣೆ
Posted On: 19 Mar 2023, 02:51 PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕದ ನೇತೃತ್ವದಲ್ಲಿ ನೀಲಾವರ ಗೋಶಾಲೆಗಾಗಿ ಗೋಗ್ರಾಸ ಇಂದು ನೀಡಲಾಯಿತು. ಈ ಪ್ರಯುಕ್ತ ಪಡುಬೆಳ್ಳೆ ದೊಡ್ಡಮನೆಯ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಜೋಳದ ಬೆಳೆಯನ್ನು ಇಂದು ಕಟಾವು ಮಾಡಿ ಗೋಶಾಲೆಗೆ ಸಮರ್ಪಿಸಲಾಯಿತು.
ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ಶಿರ್ವ ಮತ್ತು ಪಾಂಗಾಳ ಘಟಕಗಳಿಂದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ
Posted On: 19 Mar 2023, 02:45 PM
ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ಮತ್ತು ಪಾಂಗಾಳ ಘಟಕ ವತಿಯಿಂದ ಸಾಮಾಜಿಕ ಕಾರ್ಯಗಳು ಇಂದು ಜರಗಿತು. ಶಿರ್ವ ವಿಷ್ಣುಮೂರ್ತಿ ಘಟಕ ವತಿಯಿಂದ ಶಿರ್ವ ಹಿಂದೂ ರುದ್ರಭೂಮಿ ಮತ್ತು ಪಾಂಗಾಳ ಘಟಕ ವತಿಯಿಂದ ಪಾಂಗಾಳ ಗಾಂಧಿನಗರದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ ನಡೆಯಿತು.
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ ನಡಿಗೆ ಪಾದಯಾತ್ರೆ
Posted On: 19 Mar 2023, 02:32 PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಷಷ್ಠಮ ವರ್ಷದ ಸನ್ನಿಧಾನದೆಡೆಗೆ ನಮ್ಮ ನಡಿಗೆ ಪಾದಯಾತ್ರೆ ಮಟ್ಟಾರು ಬಬ್ಬರ್ಯ ಕಟ್ಟೆ ಬಳಿಯಿಂದ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದವರೆಗೆ ಇಂದು ನಡೆಯಿತು.
ಕಾಪು : ಓಂ ಬಬ್ಬು ಸ್ವಾಮಿ ಟ್ರೋಫಿ -2023 ; ಸಿ ಎಫ್ ಸಿ ಚಂದ್ರನಗರ ಪ್ರಥಮ, ಅರಫಾ ಬಾಯ್ಸ್ ಹೆಜಮಾಡಿ ದ್ವಿತೀಯ
Posted On: 19 Mar 2023, 12:52 PM
ಕಾಪು : ಓಂ ಶ್ರೀ ಬಬ್ಬು ಸ್ವಾಮಿ ಕ್ರಿಕೆಟರ್ಸ್ ಪಾದೂರು ಇವರ ಆಶ್ರಯದಲ್ಲಿ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಓಂ ಬಬ್ಬು ಸ್ವಾಮಿ ಟ್ರೋಫಿ -2023 ಪಂಜತ್ತೂರು ಮೈದಾನದಲ್ಲಿ ಮಾಚ್೯ 18 ಹಾಗೂ 19ರಂದು ನಡೆಯಿತು. ಪ್ರಥಮ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ. 33,333ನ್ನು ಸಿ ಎಫ್ ಸಿ ಚಂದ್ರನಗರ ತಂಡ, ದ್ವಿತೀಯ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ.22,222ನ್ನು ಅರಫಾ ಬಾಯ್ಸ್ ಹೆಜಮಾಡಿ ತಂಡ ಪಡೆದುಕೊಂಡಿದೆ.
ಪಡುಬಿದ್ರಿ ಜಾತ್ರೆ ; ಕಾಪು ಮಾರಿಪೂಜೆಯಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಹಿಂದು ಪರ ಸಂಘಟನೆಗಳಿಂದ ಮನವಿ
Posted On: 19 Mar 2023, 09:25 AM
ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಾಚ್೯ 21 ಮತ್ತು 22 ರಂದು ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡದಂತೆ ಪಡುಬಿದ್ರಿ ವಿಶ್ವಹಿಂದು ಪರಿಷತ್ ಬಜರಂಗದಳದ ಕಾರ್ಯಕರ್ತರು ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿ ನೀಡಿರುತ್ತಾರೆ. ಕಾಪುವಿನಲ್ಲಿಯೂ ಮಾಚ್೯ 21 ಮತ್ತು 22 ರಂದು ಜರಗುವ ಮಾರಿಪೂಜೆಯಲ್ಲಿಯೂ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಕಾಪುವಿನ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹೊಸ ಮಾರಿಗುಡಿಯ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
ಕಾಪು : ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಘೋಷಣೆ - ಬಿಜೆಪಿ ಹಿಂದುಳಿದ ಮೋರ್ಚಾದ ಕುಲಾಲ ಸಮುದಾಯದ ನಾಯಕರಿಂದ ಕೃತಜ್ಞತೆ
Posted On: 19 Mar 2023, 12:21 AM
ಕಾಪು : ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪನೆಯ ಘೋಷಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಕಾಪು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಸಂತೋಷ್ ಕುಲಾಲ್ ಪಡುಮನೆ, ಕಾರ್ಯದರ್ಶಿ ಉದಯ ಕುಲಾಲ್ ಕಳತ್ತೂರು, ಕಾರ್ಯಕಾರಿಣಿ ಸದಸ್ಯರು ಗಣೇಶ್ ಕುಲಾಲ್ ವರ್ವಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾರ್ಕಳ : ಇನ್ನಾದಲ್ಲಿ ಸುಸಜ್ಜಿತ ರುದ್ರಭೂಮಿ ಮೋಕ್ಷಧಾಮ ಲೋಕಾರ್ಪಣೆ
Posted On: 18 Mar 2023, 06:01 PM
ಕಾರ್ಕಳ : ಮೂಲ ಸೌಕರ್ಯಗಳನ್ನು ಒದಗಿಸುವ ನಿರಂತರ ಪ್ರಯತ್ನಗಳು ಸ್ಥಳೀಯಾಡಳಿತ ಮಾಡಿದಾಗ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಜಿ.ಪಂ ಸದಸ್ಯರಾದ ಕೆದಿಂಜೆ ಸುಪ್ರಿತ್ ಶೆಟ್ಟಿ ಹೇಳಿದರು. ಅವರು ಇಂದು ಇನ್ನಾ ಗ್ರಾಮ ಪಂಚಾಯತ್ ಸಾರ್ವಜಿನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರು ಹಾಗೂ ಗ್ರಾ.ಪಂ ಅಧ್ಯಕ್ಷರಾದ ಕುಶ ಆರ್ ಮೂಲ್ಯ ವಹಿಸಿದ್ದರು. ಈ ಸಂದರ್ಭ ಸರಿತಾ ಶೆಟ್ಟಿ, ಮಾಜಿ ಜಿ.ಪಂ ಸದಸ್ಯರಾದ ರೇಷ್ಮಾ ಉದಯ ಶೆಟ್ಟಿ, ತಾ.ಪಂ ಉಪಾಧ್ಯಕ್ಷರಾದ ಗೋಪಾಲ ಮೂಲ್ಯ, ಗ್ರಾ.ಪಂ ಉಪಾಧ್ಯಕ್ಷರಾದ ವಿಮಲ, ಪ್ರೇಮ್ ಕುಲಾಲ್, ಪಂಚಾಯತ್ ಕಾರ್ಯದರ್ಶಿ ರಮೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತ, ಅಮರನಾಥ ಶೆಟ್ಟಿ, ಜಯ ಎಸ್ ಕೋಟ್ಯಾನ್, ಪ್ರವೀಣ್ ಜೆ ಶೆಟ್ಟಿ, ಯು ಸುಬ್ರಮಣ್ಯ ತಂತ್ರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬೆಳ್ಳಣ್ ವಲಯ ಮೇಲ್ವಿಚಾರಕಿ ಭಾರತಿ, ಗ್ರಾಮಸ್ಥರಾದ ಗಣಪತಿ, ಸುರೇಶ್ ಮೂಲ್ಯ, ಪ್ರಭಾಕರ ಇನ್ನಾ, ದೀಪಕ್ ಕಾಮತ್, ರಮೇಶ್ ಮೂಲ್ಯ, ಲಕ್ಷ್ಮೀ ಕಾಂತ್ ರಾವ್, ಸುಜಾತ ಗಿರಿಯಪ್ಪ, ಅಪ್ಪಿ ಜೆ ಕರ್ಕೇರಾ ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ಸ್ವಾಗತಿಸಿದರು. ಶಿಕ್ಷಕರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಹರೀಶ್ ಶೆಟ್ಟಿ ದಡ್ಡು ವಂದಿಸಿದರು.
ಮಾರ್ಚ್ 23ರಿಂದ 26 : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸಮಾರಂಭ ; ಅನಂತೋತ್ಸವ 2023
Posted On: 18 Mar 2023, 05:29 PM
ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2023ನೇ ಸಾಲಿನ ವಾರ್ಷಿಕ ಸಮಾರಂಭಗಳು ಮಾರ್ಚ್ 23 ರಿಂದ 26ರವರೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಆಶಯದಂತೆ ಮಾ.17 ನಿಧನರಾದ ವಿದ್ಯಾಸಂಸ್ಥೆಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕ, ಕಾರ್ಯಕ್ರಮಗಳ ರೂವಾರಿ ಅನಂತೇಶ್ ರಾವ್ ಅವರ ನೆನಪಿಗಾಗಿ ವರ್ಣೋತ್ಸವ 2023ರ ಬದಲಾಗಿ ಅನಂತೋತ್ಸವ 2023 ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಮಾರ್ಚ್ 23ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ತಾಂತ್ರಿಕ-ಸಾಂಸ್ಕೃತಿಕ ಸ್ಪರ್ಧೆ ಅನಂತೋತ್ಸವ 2023 ಕಾರ್ಯಕ್ರಮ ನಡೆಯಲಿದ್ದು, ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ರಾಹುಲ್ ಕೋಟ್ಯಾನ್ ಮತ್ತು ನಿಖಿಲ್ ಆಚಾರ್ಯ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಜಗದೀಶ್ ಆಚಾರ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ತಾಂತ್ರಿಕ ಸ್ಪರ್ಧೆಗಳ ಜೊತೆಗೆ ನೃತ್ಯ, ಗಾಯನ, ಫೋಟೋಗ್ರಫಿ, ಚಿತ್ರಕಲೆ, ಮುಖವರ್ಣ ಸ್ಪರ್ಧೆ ನಡೆಯಲಿರುವುದು. ಅದೇ ದಿನ ಸಂಜೆ ಮನೋಂರಜನಾ ಕಾರ್ಯಕ್ರಮವು ನಡೆಯಲಿದೆ. ಮಾರ್ಚ್ 24ರಂದು ಮಧ್ಯಾಹ್ನ 3 ಗಂಟೆಗೆ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಉಪಯೋಕಾಯುಕ್ತ, ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಭಾಗವಹಿಸಲಿದ್ದು, ಶ್ರೀ ಸೋಸಲೆ ವ್ಯಾಸರಾಜ ಮಠದ ಶ್ರೀಪಾದರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಾರ್ಚ್ 25ರಂದು ಬೆಳಗ್ಗೆ 9.30ರಿಂದ ಆಟೋ ಎಕ್ಸ್‌ಪೋ ವಾಹನ ಪ್ರದರ್ಶನ ನಡೆಯಲಿದೆ. ಸಂಜೆ ಕಾಲೇಜಿನ ಯಕ್ಷಗಾನ ಸಂಘ ಯಕ್ಷಸಿಂಚನದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ “ಮಹಿಷವಧೆ” ಹಾಗೂ “ಸಮಸಪ್ತಕರ ಕಾಳಗ” ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮಾರ್ಚ್ 26 ಕಾಲೇಜು ಘಟಿಕೋತ್ಸವ ಕಾರ್ಯಕ್ರಮವು ನಡೆಯಲಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಉಪಕುಲಪತಿಗಳಾದ ಡಾ. ಎಸ್ ವಿದ್ಯಾಶಂಕರ್ ಮುಖ್ಯ ಅತಿಥಿಗಳಾಗಿ, ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಮುಖ್ಯಸ್ಥರಾದ ಪ್ರಶಾಂತ್ ಶೆಣೈ ಭಾಗವಹಿಸಲಿದ್ದಾರೆ. ಸಂಜೆ ಹಳೆ ವಿದ್ಯಾರ್ಥಿಗಳ ಸಮಾವೇಶ ನಡೆಯಲಿದೆ. ಸಂಜೆ 7ಗಂಟೆಗೆ ದೇಶದ ಪ್ರತಿಷ್ಟಿತ ಮ್ಯುಸಿಕಲ್ ಬ್ಯಾಂಡ್ ಸಂಸ್ಥೆಯಾದ “ಅಗಮ್' ತಂಡದವರಿಂದ ಸಂಗೀತ ರಸಮಂಜರಿ ಮನೋರಂಜನಾ ಕಾರ್ಯಕ್ರಮ ಜರಗಲಿದೆ. ಶೈಕ್ಷಣಿಕ ವರ್ಷ 2023 ರಿಂದ ಎಂಬಿಎ ಕೋರ್ಸ್ ನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಮಂಜುನಾಥ್, ಡಾ.ರವಿ ಪ್ರಭ, ಸಚಿನ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.
