Updated News From Kaup
ಕಾಪು : ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾರಿಗೆ ಪ್ರಶಸ್ತಿ

Posted On: 18-11-2022 08:56PM
ಕಾಪು : ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ತುಮಕೂರು ಇವರಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ತುಮಕೂರು ಜಿಲ್ಲೆಯ ತಿಪಟೂರಿನ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಜರಗಿತು.
ಕಾಪು ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಗಣ್ಣು ಭೀತಿ ; ಸಮಸ್ಯೆಯಿದ್ದ ಮಕ್ಕಳಿಗೆ ಶಾಲೆಗೆ ಬರದಿರಲು ಸೂಚನೆ

Posted On: 17-11-2022 05:31PM
ಮಂಗಳೂರು : ಪ್ರಸ್ತುತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಲವಡೆ ಮಕ್ಕಳಿಗೆ ಕಣ್ಣಿನ ಸಾಂಕ್ರಾಮಿಕ ರೋಗವಾದ ಕೆಂಗಣ್ಣು (ಕೆಂಪು ಕಣ್ಣು) ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿಗಳ ಸೂಚನೆಯ ಮೇರೆಗೆ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಅದರ ಪ್ರಕಾರ ಕೆಂಗಣ್ಣು ಸಾಂಕ್ರಾಮಿಕವಾಗಿದ್ದು ಮಕ್ಕಳಿಗೆ ಶೀಘ್ರವಾಗಿ ಹರಡುತ್ತದೆ. ಆದುದರಿಂದ ಈ ಕಾಯಿಲೆ ಬಂದ ಮಕ್ಕಳನ್ನು 5 ದಿನ ಶಾಲೆಗೆ ಬರದಂತೆ ತಡೆಯುವುದು ಹಾಗೂ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಪೋಷಕರಿಗೆ ಮನವರಿಕೆ ಮಾಡಿಕೊಡಲು ತಿಳಿಸಿದ್ದಾರೆ.
ಜೆಸಿಐ ಶಂಕರಪುರ ಜಾಸ್ಮಿನ್ : ಪದಪ್ರದಾನ ಸಮಾರಂಭ

Posted On: 17-11-2022 05:28PM
ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಇದರ 2022-23 ಪದಪ್ರದಾನ ಸಮಾರಂಭವು ಜೆಸಿಐ ಶಂಕರಪುರ ಸಭಾಭವನದಲ್ಲಿ ಜರುಗಿತು.
ಅಧ್ಯಕ್ಷರಾದ ಜಗದೀಶ್ ಅಮೀನ್ ನೂತನ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ನೂತನ ಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ ನೂತನ ಜೆಸಿರೇಟ್ ಅಧ್ಯಕ್ಷರಾಗಿ ಜಯಶ್ರೀ ನವೀನ್ ಅಮೀನ್, ಜೆಜೆಸಿ ಅಧ್ಯಕ್ಷರಾಗಿ ಶಶಾಂಕ್ ಕುಲಾಲ್ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಗಿರಿಜಾ ಸರ್ಜಿಕಲ್ ಮಾಲಕರವಾದ ರವೀಂದ್ರ ಶೆಟ್ಟಿ, ವಲಯ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ವಲಯ ಉಪಾಧ್ಯಕ್ಷರಾದ ಸುಧಾಕರ್ ಆಚಾರ್ಯ ಉಪಸ್ಥಿತರಿದ್ದರು. ಜಗದೀಶ್ ಅಮೀನ್ ಸ್ವಾಗತಿಸಿದರು. ಕಾರ್ಯದರ್ಶಿಯಾದ ಪ್ರವೀಣ್ ಪೂಜಾರಿ ವಂದಿಸಿದರು.
ನವೆಂಬರ್ 20 : ಬಿರುವೆರ್ ಕಾಪು ಸೇವಾ ಸಮಿತಿ - ಜ್ಞಾನ ದೀವಿಗೆ ; 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ

Posted On: 15-11-2022 10:52PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ ನವೆಂಬರ್ 20, ಆದಿತ್ಯವಾರ ಅಪರಾಹ್ನ 2 ಗಂಟೆಗೆ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ ಉದ್ಘಾಟಿಸಲಿದ್ದು, ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ್ ಸಾಲ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ನ್ಯಾಯವಾದಿ ಗಿರೀಶ್ ಎಸ್. ಪಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಓಮನ್ ಬಿಲ್ಲವಾಸ್ ನ ಉಪಾಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಾಳ, ಮಸ್ಕತ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು, ಬಿರುವೆರ್ ಕಾಪು ಸೇವಾ ಸಮಿತಿಯ ಕಾನೂನು ಸಲಹೆಗಾರರು, ವಕೀಲರಾದ ಸಂಕಪ್ಪ ಅಮೀನ್ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೆರ್ಣಂಕಿಲ ದೇವಳ ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ

Posted On: 15-11-2022 02:22PM
ಉಡುಪಿ : ಪೆರ್ಣಂಕಿಲ ಶ್ರೀಮಹಾಲಿಂಗೇಶ್ವರ ಮತ್ತು ಮಹಾಗಣಪತಿ ದೇವಳದ ಜೀರ್ಣೊದ್ಧಾರ ಅಂಗವಾಗಿ 10ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿದ್ದು ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಜೀರ್ಣೋದ್ಧಾರ ಪೂರ್ವಭಾವಿ ಸಭೆಯು ಸೋಮವಾರ ನಡೆಯಿತು. ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ತ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜೀರ್ಣೋದ್ಧಾರ ಕಚೇರಿ ಉದ್ಘಾಟಿಸಿ, ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿ, ಬರಿಗೈಯಲ್ಲಿ ಬಂದ ನಾವು ಭಗವಂತ ಕೊಟ್ಟದ್ದನ್ನು ಮರಳಿ ಸಮರ್ಪಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ. ದೇವರು ಕೊಟ್ಟ ಭತ್ತವನ್ನು ದೇವರು ಕೊಟ್ಟ ಭೂಮಿಯಲ್ಲಿ ಬಿತ್ತಿ, ದೇವರು ಕೊಟ್ಟ ನೀರೆರೆದು ಭತ್ತ ಉತ್ಪಾದಿಸಿ ದೇವರಿಗೆ ಸಮರ್ಪಿಸುವುದರ ಹಿಂದೆ ದೇವರ ಅನುಗ್ರಹ ಸ್ಮರಣೆ ಮುಖ್ಯ. ನಮ್ಮದಲ್ಲದ್ದು ನಮ್ಮದಾಗದು, ಎಲ್ಲವೂ ಭಗವಂತನಿಗೆ ಸೇರಿದ್ದು , ತನ್ನದಲ್ಲದ ಸೊತ್ತು ಉಣ್ಣುವವ ಹೇಗೆ ಕಳ್ಳ, ದರೋಡೆಕೋರ ಎನಿಸಿಕೊಳ್ಳುತ್ತಾನೋ ಹಾಗೆಯೇ ದೇವರ ಸೊತ್ತಿಗೆ ಕೈ ಹಾಕಿದರೆ ನಾವು ಕಳ್ಳರಾಗುತ್ತೇವೆ. ದೇವರು ಕೊಟ್ಟದ್ದನ್ನು ನಾವು ಅನುಭವಿಸುತ್ತೇವೆ ಎನ್ನುವ ಅರ್ಪಣೆ, ಕೃತಜ್ಞತಾ ಮನೋಭಾವ ನಮಗಿದ್ದರೆ ಅದು ದೇವರ ಪೂಜೆಯಾಗಬಲ್ಲದು ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕೊಡಿಬೆಟ್ಟು ಗ್ರಾಮಕ್ಕೆ 23ಕೋಟಿ ರೂ., ಪೆರ್ಣಂಕಿಲ ವ್ಯಾಪ್ತಿಗೆ 8ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಪ್ರಗತಿಯಲ್ಲಿದ್ದು ಪೆರ್ಣಂಕಿಲ ದೇವಳ ಪರಿಸರದ ರಸ್ತೆಗೆ 35ಲಕ್ಷ ರೂ. ಸಹಿತ ವಿವಿಧ ಯೋಜನೆಗಳ ಪ್ರಸ್ತಾವನೆಗೆ ಅನುಗುಣವಾಗಿ ನೆರವಿನ ಭರವಸೆ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ, ದೇವಳದ ಜೀರ್ಣೋದ್ಧಾರ ಕಾರ್ಯವು ಭಕ್ತರು ಭಕ್ತಿಯಿಂದ ತಮ್ಮ ಕೊಡುಗೆ ನೀಡಲು ಸಕಾಲ ಎಂದರು. ತಮ್ಮ ತಾಯಿಯ ಹೆಸರಲ್ಲಿ ದೇವಳಕ್ಕೆ ಐದು ಲಕ್ಷ ರೂ. ದೇಣಿಗೆ ಘೋಷಿಸಿದರು.

ದೇವಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮಾತನಾಡಿ, ಊರ ದೇವಳದ ಜೀರ್ಣೋದ್ಧಾರವಾದರೆ ಮನೆ, ವ್ಯಕ್ತಿಯ ಜೀರ್ಣೋದ್ಧಾರವಾದಂತೆ. ನಿಮ್ಮೊಳಗಿನ ಭಕ್ತಿ, ಶಕ್ತಿಯ ನೆರವಿನಿಂದ ಊರ ಸಮಸ್ಯೆಗಳು ಪರಿಹಾರವಾಗಲಿ, ಏಕ ಮನಸ್ಸಿನ ಸಹಕಾರದಿಂದ ದೇವಳ ಜೀರ್ಣೋದ್ಧಾರವಾಗಲಿ ಎಂದು ಹಾರೈಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪೆರ್ಣಂಕಿಲ ಶ್ರೀಶ ನಾಯಕ್ ಪ್ರಾಸ್ತಾವಿಕ ಮಾತನಾಡಿ, ಮೂರ್ನಾಲ್ಕು ದಶಕಗಳಿಂದ ದೇವಳದ ಜೀರ್ಣೋದ್ಧಾರ ಕನಸಾಗಿದ್ದು ಪೇಜಾವರ ಮಠದಿಂದ ನೀಡಿದ 1.5ಕೋಟಿ ರೂ. ಠೇವಣಿಯಾಗಿಟ್ಟು ಭಕ್ತರಿಂದ ಸ್ವಯಂಪ್ರೇರಿತ ದೇಣಿಗೆ ನಿರೀಕ್ಷಿಸಲಾಗಿದೆ. ದೇವಳದ ಪಂಚಾಂಗ ನಿರ್ಮಾಣಕ್ಕೆ 9ಗ್ರಾಮಗಳ ಭಕ್ತರ ಕರಸೇವೆಗೆ ಉದ್ದೇಶಿಸಲಾಗಿದೆ ಎಂದರು. ಪೇಜಾವರ ಮಠದ ದಿವಾನ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ಭಕ್ತರ ಪರವಾಗಿ ಕುದಿ ವಸಂತ ಶೆಟ್ಟಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಸದಾನಂದ ಪ್ರಭು ಸ್ವಾಗತಿಸಿದರು. ಹರೀಶ್ ಸರಳಾಯ ನಿರೂಪಿಸಿದರು. ಉಮೇಶ್ ನಾಯಕ್ ವಂದಿಸಿದರು.
ಕಾಪು : ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ಭಜನೆ, ದೀಪೋತ್ಸವ ಸಂಪನ್ನ

Posted On: 14-11-2022 10:34PM
ಕಾಪು : ತಾಲೂಕಿನ ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ನವೆಂಬರ್ 13ರಂದು ಉದಯಾಸ್ತಮಾನ ಭಜನೆ ಹಾಗೂ ಸಾಯಂಕಾಲ ಪರಮಪೂಜ್ಯ ವಿಶ್ವವಲ್ಲಭತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ದೀಪೋತ್ಸವ ಜರಗಿತು.
ಸುರತ್ಕಲ್ ಟೋಲ್ ರದ್ದು : ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್

Posted On: 14-11-2022 04:50PM
ಸುರತ್ಕಲ್ : ಕಳೆದ ಹದಿನೆಂಟು ದಿನಗಳಿಂದ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದತಿಗೆ ಆಗ್ರಹಿಸಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ಧರಣಿ ನಿರತವಾಗಿದ್ದವು ಇದೀಗ ಅದರ ಪ್ರತಿಫಲವೆಂಬಂತೆ ಟೋಲ್ ರದ್ಧತಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಈ ವಿಷಯ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಪ್ರಧಾನಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜನಗಳ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು : ಜೀರ್ಣೋದ್ಧಾರ ಪೂರ್ವಭಾವಿಯಾಗಿ ತಾಂಬೂಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ

Posted On: 13-11-2022 03:26PM
ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ದೈವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ತಾಂಬೂಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ ನವೆಂಬರ್ 11 ರಂದು ಸಂಜೆ 5 ರಿಂದ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುಪತಿ ಗುಂಡು ಭಟ್ ಇವರ ನೇತೃತ್ವದಲ್ಲಿ ಮತ್ತು ಆಗಮನ ಪಂಡಿತ ವೇ| ಮೂ | ಕುತ್ಯಾರು ಕೇಂಜ ಶ್ರೀಧರ್ ತಂತ್ರಿ ಯವರ ಉಪಸ್ಥಿಯಲ್ಲಿ ಅಘೋರ ಹೋಮ ಮತ್ತು ಪ್ರೇತ ಉಚ್ಚಾಟನೆ ಹಾಗೂ ಇನ್ನಿತರ ವೈದಿಕ ವಿಧಿ ವಿಧಾನಗಳು ಬಬ್ಬರ್ಯ ದೈವಸ್ಥಾನದ ಸಾನಿಧ್ಯದಲ್ಲಿ ನಡೆಯಿತು.
ಮಟ್ಟಾರು ಬಬ್ಬರ್ಯ ದೈವಸ್ಥಾನ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಗ್ರಾಮ ಪಂಚಾಯತ್ ಸದಸ್ಯ ಮಟ್ಟಾರು ಸುರೇಶ ನಾಯಕ್, ಮೂಡು ಮಟ್ಟಾರು ಬಬ್ಬರ್ಯ ದೈವಸ್ಥಾನದ ಅಧ್ಯಕ್ಷ ಜಗದೀಶ್ ಶೆಟ್ಟಿ, ಗೌರವ ಅಧ್ಯಕ್ಷ ಶಂಕರ ಶೆಟ್ಟಿ, ಉಪಾಧ್ಯಕ್ಷ ಹರಿಶ್ಚಂದ್ರ ಶೆಟ್ಟಿ, ವಿಠ್ಠಲ್ ಪೂಜಾರಿ, ಗೌರವಾ ಸಲಹೆಗಾರ ರಾಜು ಬಿ ಸುವರ್ಣ, ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ರವಿ ಪೂಜಾರಿ ಮತ್ತು ಸರ್ವ ಸರ್ವಸದಸ್ಯರು ಉಪಸ್ಥಿತರಿದ್ದರು.
ವೇದಿಕೆಯಲ್ಲಿರುವ ವ್ಯಕ್ತಿಗಳು ದೊಡ್ಡವರಲ್ಲ, ವೇದಿಕೆಯ ಮುಂಭಾಗದಲ್ಲಿರುವ ವ್ಯಕ್ತಿಗಳು ಸಣ್ಣವರಲ್ಲ : ಎನ್. ದಾಮೋದರ ಬರ್ಮಾ ಬರ್ಕಾ

Posted On: 13-11-2022 03:13PM
ಬಂಟಕಲ್ಲು : ವೇದಿಕೆಯಲ್ಲಿರುವ ವ್ಯಕ್ತಿಗಳು ದೊಡ್ಡವರಲ್ಲ ವೇದಿಕೆಯ ಮುಂಭಾಗದಲ್ಲಿರುವ ವ್ಯಕ್ತಿಗಳು ಸಣ್ಣವರಲ್ಲ ಎಂದು ಉತ್ತಮ ಕಾರ್ಯಕ್ರಮ ನಿರೂಪಕ ವಾಗ್ಮಿ ವಿದ್ವಾಂಸರಾದ ಎನ್. ದಾಮೋದರ ಶರ್ಮಾರವರು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಯುವಕ ಸೇವಾದಳ ನೂತನ ಸದಸ್ಯರಿಗೆ ನೀಡಿದ ಸಜ್ಜನರು ಸವೆಸಿದ ದಾರಿ ಮಾಹಿತಿ ಕಾರ್ಯಕ್ರಮದಲ್ಲಿ ನಮ್ಮತನವನ್ನು ಉಳಿಸುವುದರ ಜೊತೆಗೆ ನಮ್ಮ ಸಮಾಜವನ್ನು ಬೆಳೆಸುವಂತೆ ಯುವಕರು ಮುನ್ನಡೆಯಬೇಕು ಹಿರಿಯರ ಮನಸ್ಸು ನೋವಾಗದ ರೀತಿಯಲ್ಲಿ ನಾವು ಬದುಕಿ ಬಾಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳು ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಮುರಳಿಧರ ಆಚಾರ್ಯ, ಗೌರವಾಧ್ಯಕ್ಷ ಗಣಪತಿ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ ಬಿಳಿಯಾರು ಸುರೇಶ ಆಚಾರ್ಯ, ಗಾಯತ್ರಿ ವೃಂದದ ಅಧ್ಯಕ್ಷೆ ಮಾಲತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಾದಳದ ಅಧ್ಯಕ್ಷ ರಾಜೇಶ್ ಆಚಾರ್ಯ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಭರತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ವಿಜಯೇಂದ್ರ ಆಚಾರ್ಯ ವಂದಿಸಿದರು. ಸುಮಾರು 30ಕ್ಕೂ ಅಧಿಕ ನೂತನ ಸದಸ್ಯರು ಭಾಗವಹಿಸಿದ್ದರು.
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎನ್ಸಿಸಿಯ ಸ್ವಚ್ಛತಾ ಶ್ರಮದಾನ - ಜನಾಂದೋಲನ

Posted On: 12-11-2022 10:47PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಚ್ಛತಾ ಶ್ರಮದಾನ- ಜನಾಂದೋಲನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.
ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛಸರ್ವೆಕ್ಷಣಗ್ರಾಮಿಣ–2022’ ಜನಾಂದೋಲನ ಕಾರ್ಯಕ್ರಮಕ್ಕೆ ಸ್ವಚ್ಛ ಭಾರತ್ ಅಭಿಯಾನದಡಿಯಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರ ವ್ಯಾಪಿ ಚಾಲನೆ ನೀಡಿದೆ. ಇದರ ಪ್ರಯುಕ್ತ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಎನ್.ಸಿ.ಸಿ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಮತ್ತು ಅದನ್ನು ಸಮರ್ಪಕವಾಗಿ ತಮ್ಮ ಸುತ್ತಲ ಮನೆ, ಪರಿಸರಗಳಿಗೆ ಅನ್ವಯವಾಗುವಂತೆ ಕಾರ್ಯರೂಪಗೋಳಿಸುವಲ್ಲಿ ಸ್ವಚ್ಚತಾ ಸರ್ವೇಕ್ಷಣ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿ, ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ, ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಲೇಜು ಎನ್.ಸಿ.ಸಿ ಘಟಕವನ್ನು ಶ್ಲಾಘಿಸಿ- ಶುಭ ಹಾರೈಸಿದರು. ಕ್ಯಾಡೆಟ್ ಪೂಜಾ ಶೆಟ್ಟಿ ಸ್ವಚ್ಛತೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ವಿವರಿಸಿದರು. ಎಲ್ಲಾ ಕ್ಯಾಡೆಟ್ಗಳು ಅಂಚೆ ಕಚೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪರಿಸರವನ್ನು ಸ್ವಚ್ಛಗೊಳಿಸಿದ್ದರು.
ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಲೋಬೋ ಆನ್ ರಿಯಾ ನೇವಿಲ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ಹಾಗೂ ಕ್ಯಾಡೆಟ್ ಅನುಪ್ ನಾಯಕ್ , ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು. ಈ ಕಾರ್ಯಕ್ರಮದಲ್ಲಿ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿಉಡುಪಿಯ ನೈಬ್ ಸುಬೇದಾರ್ ತೇಜೇಂದ್ರ ಕುಮಾರ್ , ಬಿ ಹೆಚ್ ಎಂ ರಾಜಾ ಸಾಬ್ ಎಚ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಕ್ಯಾಡೆಟ್ ಸೋನಾಲಿ ಕುಲಾಲ್ ಸ್ವಾಗತಿಸಿದರು. ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮಶ್ರೀ, ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ವಂದಿಸಿದರು.