Updated News From Kaup

ಫೆಬ್ರವರಿ 25 : ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಢಕ್ಕೆಬಲಿ ಸೇವೆ

Thumbnail
Posted On: 24 Feb 2023, 11:30 PM

ಪಡುಬಿದ್ರಿ : ಇಲ್ಲಿನ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಅಂಗಡಿಗುತ್ತು ಸುಜಯ್ ಕುಮಾರ್ ಶೆಟ್ಟಿ , ಅವರಾಲು ಕಂಕಣಗುತ್ತು ಅಮೃತಾ ಎಸ್ ಶೆಟ್ಟಿ ಇವರ ಪರಿವಾರದಿಂದ ಫೆಬ್ರವರಿ 25, ಶನಿವಾರದಂದು ಢಕ್ಕೆಬಲಿ ಸೇವೆಯು ನಡೆಯಲಿದೆ. ಆ ದಿನ ಮಧ್ಯಾಹ್ನ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಅನ್ನಸಂತರ್ಪಣೆ ಜರುಗಿ, ಸಂಜೆ 4 ಗಂಟೆಯಿಂದ ಫಲ ಪುಷ್ಪ ತಾಂಬೂಲಾ ಪರಿಕರ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಅನ್ನಸಂತರ್ಪಣೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ, ಈ ಪುಣ್ಯ ಸೇವೆಯಲ್ಲಿ ಭಕ್ತ ಮಹಾಶಯರೆಲ್ಲರೂ ಸಕಾಲದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ಖಡ್ಗೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಸುಜಯ ಕುಮಾರ್ ಶೆಟ್ಟಿ ಹಾಗೂ ಅಮೃತಾ ಎಸ್ ಶೆಟ್ಟಿ, ಸಚಿ ಶೆಟ್ಟಿ, ಸವ್ಯ ಶೆಟ್ಟಿ, ಎಸ್. ಕೆ. ಎಸ್. ಕಾರ್ಕಳ ಇನ್ ಫ್ರಾ. ಪ್ರೈ. ಲಿ. ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಮಾರ್ಚ್ 8 : ಬೆಳಪು ಬಡಿಕೇರಿ ಪದ್ಮಶ್ರೀ ಮನೆಯ ವಠಾರದಲ್ಲಿ ಶ್ರೀ ದೇವಿ ಮಹಾತ್ಮೆ

Thumbnail
Posted On: 24 Feb 2023, 07:49 PM

ಕಾಪು : ಬೆಳಪು ಗ್ರಾಮದ ಬಡಿಕೇರಿ ಪದ್ಮಶ್ರೀ ಮನೆಯ ವಠಾರದಲ್ಲಿ ಮಾರ್ಚ್ 8, ಬುಧವಾರ ಸಂಜೆ 5.30 ಕ್ಕೆ ಚೌಕಿ ಪೂಜೆ ಆರಂಭಗೊಳ್ಳುವುದರೊಂದಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರ ಶ್ರೀ ದೇವಿ ಮಹಾತ್ಮೆ (ಕಾಲಮಿತಿ ಯಕ್ಷಗಾನ) ಎಂಬ ಪ್ರಸಂಗ ನಡೆಯಲಿದೆ. ಅಂದು ಸಂಜೆ 7.30 ರಿಂದ 8.30 ರವರೆಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ಸುಕನ್ಯಾ ಮತ್ತು ಶ್ರೀ ಹರಿರಾವ್ ಹಾಗೂ ಮಕ್ಕಳು ಬಡಿಕೇರಿ, ಮಲಂಗೋಳಿ ಪಣಿಯೂರು ಇವರು ಪ್ರಕಟಣೆಯಲ್ಲಿ ತಿಳಿಸಿರುವರು.

ಕಾಪು : ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಬಂಜಾರ ಗ್ರೂಪ್ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಭೇಟಿ ; ಸನ್ಮಾನ

Thumbnail
Posted On: 22 Feb 2023, 06:09 PM

ಕಾಪು : ಫೆಬ್ರವರಿ 22ರಿಂದ 25 ರವರೆಗೆ ಪುನರ್ ಪ್ರತಿಷ್ಟೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ ನಡೆಯಲಿರುವ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಬಂಜಾರ ಗ್ರೂಪ್ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ ನೀಡಿ, ಸ್ವಾಗತ ಗೋಪುರದ ಪ್ರಾಯೋಜಕತ್ವ ವಹಿಸಿರುವ ಅವರನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಐಕಳಭಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ಹರೀಶ್ ನಾಯಕ್ ಕಾಪು, ಸುಕುಮಾರ್ ಶೆಟ್ಟಿ ನಡಿಮನೆ, ಉದಯ ಶೆಟ್ಟಿ ಪಡುಮನೆ, ರಾಕೇಶ್ ಕುಂಜೂರು, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳವಂದಿಗರು ಉಪಸ್ಥಿತರಿದ್ದರು.

ಮಾಚ್೯ 12 - 14 : ಕಟಪಾಡಿ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ಕಾಲಾವಧಿ ಜಾತ್ರೆ

Thumbnail
Posted On: 22 Feb 2023, 03:02 PM

ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಮಾಚ್೯13, ಸೋಮವಾರ ಜರಗಲಿದೆ. ಮಾಚ್೯ 12, ಆದಿತ್ಯವಾರ ಬೆಳಿಗ್ಗೆ ಗಂಟೆ 11:45ಕ್ಕೆ ಧ್ವಜಾರೋಹಣ ರಾತ್ರಿ ಗಂಟೆ 7ರಿಂದ ಅನ್ನ ನೈವೇದ್ಯದ ಅಗೆಲುಸೇವೆ, ಮಾಚ್೯ 13, ಸೋಮವಾರ ಸಂಜೆ ಗಂಟೆ 6:30ಕ್ಕೆ ಶ್ರೀ ಬೈದೇರುಗಳ ನೇಮೋತ್ಸವ, ರಾತ್ರಿ ‌ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ಮಾಚ್೯ 14, ಮಂಗಳವಾರ ಸಂಜೆ ಗಂಟೆ 3ಕ್ಕೆ ಮಾಯಂದಾಲ ನೇಮ ರಾತ್ರಿ ಗಂಟೆ ‌8ಕ್ಕೆ ಪರಿವಾರ ದೈವಗಳ ನೇಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೆ. 22ರಿಂದ 25 : ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ನೇಮ

Thumbnail
Posted On: 21 Feb 2023, 08:36 PM

ಕಾಪು : ತಾಲೂಕಿನ ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಫೆಬ್ರವರಿ 22ರಿಂದ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ನೆರವೇರಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿಯವರು ಮಂಗಳವಾರ ಪಣಿಯೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆಬ್ರವರಿ 22ರಿಂದ ಮೊದಲ್ಗೊಂಡು ಫೆಬ್ರವರಿ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ, ಸುಕುಮಾರ್‌ ಶೆಟ್ಟಿ ನಡಿಮನೆ, ಗುತ್ತಿನಾರ್‌ ಯೋಗೀಶ್‌ ಶೆಟ್ಟಿ ಮಣಿಯೂರು ಗುತ್ತು, ಕಾರ್ಯದರ್ಶಿ ಗಣೇಶ್‌ ಶೆಟ್ಟಿ, ಗುರಿಕಾರ ಶಂಕರ ಬಿ. ಪ್ರಚಾರ ಸಮಿತಿಯ ಸತೀಷ್‌ ಶೆಟ್ಟಿ ಗುಡ್ಡೆಚ್ಚಿ, ರಾಕೇಶ್‌ ಕುಂಜೂರು ಮತ್ತಿತರರು ಉಪಸ್ಥಿತರಿದ್ದರು.

ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಗಲು ರಥೋತ್ಸವ ರಥಾರೋಹಣ ಸಂಪನ್ನ

Thumbnail
Posted On: 21 Feb 2023, 07:28 PM

ಉಚ್ಚಿಲ : ಇಲ್ಲಿನ ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದ ವಾರ್ಷಿಕ ಹಗಲು ರಥೋತ್ಸವ ಹಾಗೂ ರಥಾರೋಹಣ ಮಂಗಳವಾರ ಮಧ್ಯಾಹ್ನ ಸಂಪನ್ನಗೊಂಡಿತು. ದೇವಳದ ತಂತ್ರಿ ವರ್ಯರಾದ ಶ್ರೀ ರಾಧಾಕೃಷ್ಣ ಉಪಾಧ್ಯಾಯ, ಆಡಳಿತಾಧಿಕಾರಿ ಕಾಪು ತಹಶಿಲ್ದಾರ್‌ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಸಿಬ್ಬಂದಿ ವರ್ಗ, ಅರ್ಚಕರ ಸಹಿತ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆಯೂ ನೆರವೇರಿತು.

ಪಡುಬಿದ್ರಿ : ಢಕ್ಕೆ ಬಲಿ ಸೇವೆ ; ಹೊರೆ ಕಾಣಿಕೆ ಮೆರವಣಿಗೆ

Thumbnail
Posted On: 21 Feb 2023, 05:57 PM

ಪಡುಬಿದ್ರಿ : ಇಲ್ಲಿನ ಕಲ್ಲಟ್ಟೆ ಜಾರಂದಾಯ ದೈವಸ್ಥಾನದಿಂದ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯಲಿರುವ ಢಕ್ಕೆ ಬಲಿ ಸೇವೆಯ ಪ್ರಯುಕ್ತ ಫಲಪುಷ್ಪ ತಾಂಬೂಲ ಪರಿಕರ ಹೊರಕಾಣಿಕೆ ಮೆರವಣಿಗೆಯು ಮಂಗಳವಾರ ವಿಜೃಂಭಣೆಯಿಂದ ಜರಗಿತು. ಮಧ್ಯಾಹ್ನ ಜಾರಂದಾಯ ದೈವಸ್ಥಾನದಲ್ಲಿ ಅನ್ನಸಂತರ್ಪಣೆಯು ಜರಗಿದ್ದು ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದರು. ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಪಡುಬಿದ್ರಿ - ಮುಂಬಯಿ ಕಲ್ಲಟ್ಟೆ ಶ್ರೀ ಜಾರಂದಾಯ ಸೇವಾ ಸಮಿತಿ, ಕಲ್ಲಟ್ಟೆ ಶ್ರೀ ಜಾರಂದಾಯ ಯುವಕ ವೃಂದ, ಕಲ್ಲಟ್ಟೆ ಶ್ರೀ ಜಾರಂದಾಯ ಮಹಿಳಾ ಮಂಡಲ, ಗುರಿಕಾರರು, ಊರ ಹತ್ತು ಸಮಸ್ತರು ಪಾಲ್ಗೊಂಡಿದ್ದರು.

ಕುಂಬಾರರ ಬೇಡಿಕೆಯನ್ನು ಸರಕಾರ ನಿರ್ಲಕ್ಷಿಸಿರುವುದು ಬೇಸರ ತಂದಿದೆ : ಅನಿಲ್ ದಾಸ್

Thumbnail
Posted On: 21 Feb 2023, 04:27 PM

ಮಂಗಳೂರು : ಕುಂಬಾರರ ಬೇಡಿಕೆಯನ್ನು ಸರಕಾರ ನಿರ್ಲಕ್ಷಿಸಿರುವುದು ತುಂಬಾ ಬೇಸರ ತಂದಿದೆ. ಒಂದು ರಾಜಕೀಯ ಪಕ್ಷವನ್ನು ಗೆಲ್ಲಿಸುವಲ್ಲಿ ಹಾಗೂ ಸೋಲಿಸುವುದರಲ್ಲಿ ಕುಲಾಲ-ಕುಂಬಾರರ ಮತಗಳು ನಿರ್ಣಾಯಕವೆನ್ನುವುದನ್ನು ರಾಜಕೀಯ ನಾಯಕರು ಮನಗಂಡಿಲ್ಲ ಎಂದು ಕರ್ನಾಟಕ ರಾಜ್ಯ ಕುಲಾಲ-ಕುಂಬಾರ ಯುವ ವೇದಿಕೆಯ ಮಂಗಳೂರು ವಿಭಾಗದ ಉಪಾಧ್ಯಕ್ಷ ಅನಿಲ್‌ದಾಸ್ ಹೇಳಿದ್ದಾರೆ. ರಾಜ್ಯ ಸರಕಾರ ರಾಜ್ಯದಲ್ಲಿ ಇರುವ ಕುಂಬಾರರ ಶ್ರೇಯೋಭಿವೃದ್ಧಿಗೆ ಕುಂಭ ನಿಗಮವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಆಶ್ವಾಸನೆಗಳನ್ನು ನೀಡುತ್ತಾ ಬಂದಿರುತ್ತದೆ. ಅನೇಕ ಹೋರಾಟ ಹಕ್ಕೊತ್ತಾಯ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷದ ನಾಯಕರುಗಳು ಭರವಸೆಗಳನ್ನು ನೀಡುತ್ತಾ ಬಂದಿದ್ದು, ಇದು ರಾಜಕೀಯ ನಾಯಕರ ಕಾಲಹರಣ ಎಂಬುದು ಕುಂಬಾರರಿಗೆ ಈಗ ಮನದಟ್ಟಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಮುಖ್ಯಮಂತ್ರಿಗಳು ಕುಂಬಾರರ ಬೇಡಿಕೆಯನ್ನು ನಿರ್ಲಕ್ಷಿಸಿರುವುದು ತುಂಬಾ ಬೇಸರ ತಂದಿದೆ. ಕುಂಬಾರರ ಯುವಶಕ್ತಿ, ಮಹಿಳಾ ಶಕ್ತಿ ರಾಜ್ಯದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ, ಸಮುದಾಯದ ನಿರ್ಲಕ್ಷ್ಯ ಸಲ್ಲದು ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಶಿರ್ವ ಗ್ರಾಮ ಪಂಚಾಯತ್ ಗೆ ಎರಡನೆಯ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿಮೆ

Thumbnail
Posted On: 20 Feb 2023, 05:16 PM

ಶಿರ್ವ : ಇಲ್ಲಿನ ಗ್ರಾಮ ಪಂಚಾಯತ್ ಗೆ ಎರಡನೆ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದು ತುಂಬಾ ಸಂತಸದ ವಿಚಾರ. ಈ ಹಿಂದೆ 2020 ರಲ್ಲಿ ಶಿರ್ವಾ ಗ್ರಾಮ ಪಂಚಾಯತ್ ನ ಇತಿಹಾಸದಲ್ಲಿಯೇ ಪ್ರಥಮ ಭಾರಿಗೆ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷರಾದ ವಾರಿಜಾ ಪೂಜಾರಿಯವರ ಹಾಗೂ ಉಪಾಧ್ಯಕ್ಷರಾದ ದೇವದಾಸ್ ನಾಯಕ್ ಇವರ ಅವಧಿಯಲ್ಲಿ ಗಾಂಧಿ ಗ್ರಾಮ ಗೌರವಕ್ಕೆ ಪಾತ್ರವಾಗಿದೆ. ವಾರಿಜಾ ಪೂಜಾರಿಯವರ ಅಧಿಕಾರಾವಧಿಯಲ್ಲಿ ಶಿರ್ವ ಗ್ರಾಮ ಪಂಚಾಯತ್ ಸ್ವಚ್ಛತೆಯನ್ನು ಪಾಲಿಸುವ ಸಲುವಾಗಿ ವಿಶೇಷ ಗಮನವನ್ನು ಕೊಟ್ಟು ಸಮಗ್ರವಾಗಿ ಹಸಿ ಕಸ ಹಾಗೂ ಒಣ ಕಸವನ್ನು ವಿಂಗಡನೆ ಮಾಡಲು ಎಸ್.ಎಲ್.ಆರ್.ಎಂ.ಘಟಕವನ್ನು ಸ್ಥಾಪಿಸಿದ ಹೆಗ್ಗಳಿಕೆಯೂ ವಾರಿಜಾ ಪೂಜಾರಿಯವರಿಗೆ ಸಲ್ಲುತ್ತದೆ. ಅಲ್ಲದೇ ಪ್ರತಿನಿತ್ಯ ಕೇವಲ ಒಂದೇ ಕಸ ಸಂಗ್ರಹಿಸುವ ವಾಹನ ಹಾಗೂ ನಿಯಮಿತ ಸ್ವಚ್ಛತಾ ಸಿಬಂದಿಗಳಿದ್ದರೂ ಬಹಳ ಉತ್ತಮ ರೀತಿಯಲ್ಲಿ ಕಸ ವಿಲೇವಾರಿಯ ಕೆಲಸವನ್ನೂ ನಿರ್ವಹಿಸುತ್ತಾರೆ. ಇದರ ಮೊದಲು ಶಿರ್ವ ಬಸ್ಸು ತಂಗುದಾಣ,ಪೇಟೆಯ ಸುತ್ತ ಮುತ್ತದಲ್ಲಿ ಕಸದ ರಾಶಿಗಳು ಗಬ್ಬು ನಾರುತ್ತಿತ್ತು. 2020 ರಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ದೊರಕುವಲ್ಲಿ ಶಿರ್ವ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಾದ ಅನಂತ ಪದ್ಮನಾಭ ನಾಯಕ್ ಇವರ ಶ್ರಮವನ್ನು ಮರೆಯುವಂತಿಲ್ಲ. ಅವರ ಮೊದಲ ಆದ್ಯತೆ ಸ್ವಚ್ಛತೆಯ ಕಡೆಗೆ ಇತ್ತು. ಇದರೊಂದಿಗೆ ಗ್ರಾಮ ಪಂಚಾಯತ್ ಸದಸ್ಯರ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಸಹಕಾರ ಸ್ವಚ್ಛತಾ ಸಿಬ್ಬಂದಿಗಳ ಶ್ರಮವನ್ನು ಮರೆಯುವಂತಿಲ್ಲ. ಪ್ರಸ್ತುತ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರವು ದೊರೆಯಲು ಈ ಹಿಂದೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಆಡಳಿತ ಅವಧಿಯಲ್ಲಿ ಹಾಕಿದ ಭದ್ರಬುನಾದಿಯೇ ಮೂಲ ಕಾರಣವಾಗಿದೆ ಎಂಬುದನ್ನು ಗ್ರಾಮಸ್ಥರು ಎಂದಿಗೂ ಮರೆಯುವಂತಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ರವೀಂದ್ರ ಪಾಟ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 24, 25, 26 : ಕಟಪಾಡಿ ಉತ್ಸವ

Thumbnail
Posted On: 20 Feb 2023, 04:57 PM

ಕಟಪಾಡಿ‌ : ಜೋಕಾಲಿ ಫ್ರೆಂಡ್ಸ್ ಪಳ್ಳಿಗುಡ್ಡೆ ಕಟಪಾಡಿ ಇದರ ಆಶ್ರಯದಲ್ಲಿ ನಾಡೋಜ ಡಾ.ಜಿ.ಶಂಕರ್ ಅವರ ಆಶೀರ್ವಾದದೊಂದಿಗೆ ಕಟಪಾಡಿ ಪಳ್ಳಿಗುಡ್ಡೆ ಮೈದಾನದಲ್ಲಿ ಫೆಬ್ರವರಿ 24, 25, 26ರಂದು ವಿವಿಧ ಕ್ರೀಡೆಗಳು, ಸಭಾ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಒಳಗೊಂಡ ಕಟಪಾಡಿ ಉತ್ಸವ ಜರಗಲಿದೆ. ಫೆಬ್ರವರಿ 24, ಶುಕ್ರವಾರದಂದು ಬೆಳಗ್ಗೆ 9:30ಕ್ಕೆ ಕಟಪಾಡಿ ಪೇಟೆಯಿಂದ ಮಹಿಳಾ ಸಂಗಮ ಮೆರವಣಿಗೆ, ಬೆಳಗ್ಗೆ ಗಂಟೆ 10:30ಕ್ಕೆ ಸಭಾ ಕಾರ್ಯಕ್ರಮ ತದನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಕ್ರೀಡೆ, ಸಂಜೆ ಗಂಟೆ 6ಕ್ಕೆ ಮಧುಕರ್ ಕಟಪಾಡಿ ಇವರಿಂದ ಸಂಗೀತ ಸಂಜೆ, ಸಂಜೆ 7:30ರಿಂದ ಸಭಾ ಕಾರ್ಯಕ್ರಮ, ರಾತ್ರಿ 8:30ರಿಂದ ಚಲನಚಿತ್ರ ಕಂಠದಾನ ಕಲಾವಿದರಾದ ಅಂತರಾಷ್ಟ್ರೀಯ ಮಟ್ಟದ ಗಾಯಕ ಕೆ. ನವೀನಚಂದ್ರ ಅರ್ಪಿಸುವ ಶಿವಾನಿ ಮ್ಯೂಸಿಕಲ್ ಇವರಿಂದ ಅದ್ದೂರಿಯ ಸಂಗೀತ ರಸಮಂಜರಿ ಕಾರ್ಯಕ್ರಮ, ರಾಜ್ಯಪ್ರಶಸ್ತಿಯ ಕ್ರೇಜಿ ಗಾಯ್ಸ್ ತಂಡದವರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಲಿದೆ. ಫೆಬ್ರವರಿ 25, ಶನಿವಾರ ಬೆಳಿಗ್ಗೆ 9ರಿಂದ ಜೋಕಾಲಿ ಫ್ರೆಂಡ್ಸ್ ಟ್ರೋಫಿ 2023 ವಾಲಿಬಾಲ್ ಪಂದ್ಯಾಟ, ಸಂಜೆ 6:30ಕ್ಕೆ ರಾಜ್ಯಪ್ರಶಸ್ತಿ ವಿಜೇತ ಎಕ್ಸ್- ಟ್ರೀಮ್ ಡ್ಯಾನ್ಸ್ ಕ್ರ್ಯೂ ಬಿ.ಸಿ.ರೋಡ್ ಇವರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ, ಸಂಜೆ 8ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 9ಕ್ಕೆ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್ ಪಂದ್ಯಾಕೂಟ ಜೋಕಾಲಿ ಫ್ರೆಂಡ್ಸ್ ಟ್ರೋಫಿ -2023 ಜರಗಲಿದೆ. ಫೆಬ್ರವರಿ 26, ರವಿವಾರ ಮಧ್ಯಾಹ್ನ 12:30ರಿಂದ ಅನ್ನಸಂತರ್ಪಣೆ, ಸಂಜೆ ಗಂಟೆ 6ಕ್ಕೆ ರಾಜ್ ಸಂತೆಕಟ್ಟೆ ಇವರಿಂದ ಸಂಗೀತ ಸಂಜೆ, ರಾತ್ರಿ ಗಂಟೆ 8ಕ್ಕೆ ಸಭಾ ಸಭಾ ಕಾರ್ಯಕ್ರಮ, ರಾತ್ರಿ 9:30 ರಿಂದ ಕಲಾಚಾವಡಿ ಅಂಬಲಪಾಡಿ, ಉಡುಪಿ ತಂಡದಿಂದ ಮೋಕೆದ ಮದಿಮಾಲ್ ತುಳು ಸಾಂಸಾರಿಕ ಹಾಸ್ಯಮಯ ನಾಟಕ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.