Updated News From Kaup

ಏ.25 - 26 : ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನ ಮೂಡುಕರೆ ಗರಡಿ ಮನೆ ಹೆಜಮಾಡಿ - ವಾರ್ಷಿಕ ನೇಮೋತ್ಸವ

Posted On: 24-04-2025 07:04AM

ಪಡುಬಿದ್ರಿ : ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನ ಮೂಡುಕರೆ ಗರಡಿ ಮನೆ ಹೆಜಮಾಡಿ ಇದರ ವಾರ್ಷಿಕ ನೇಮೋತ್ಸವು ಏ. 25, ಶುಕ್ರವಾರ ಮತ್ತು 26, ಶನಿವಾರ ಜರಗಲಿದೆ.

ಮೂಡುಬೆಳ್ಳೆ - ಹಿರಿಯ ಪಾರ್ದನಗಾರ್ತಿ ಅಪ್ಪಿ ಕೃಷ್ಣ ಪಾಣಾರ ಇವರಿಗೆ ಕರ್ನಾಟಕ ಜಾನಪದ ಅಕಾಡೆಮಿಯಿಂದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ

Posted On: 23-04-2025 02:21PM

ಶಿರ್ವ : ಪಾರ್ದನಗಳು ಗ್ರಂಥಸ್ಥವಾಗಿ ಮುಂದಿನ ಪೀಳಿಗೆಗೆ ಸಿಗುವಂತಾಗಬೇಕು. ಬಾಯಿಯಿಂದ ಬಾಯಿಗೆ ಹರಿದು ಬಂದ ಸತ್ ಸಂಪ್ರದಾಯ ಗೀತೆಗಳಾದ ಪಾರ್ದನಗಳು ಈ ನಾಡಿನ ಭವ್ಯ ಜಾನಪದ ಇತಿಹಾಸವನ್ನು ತಿಳಿಸುತ್ತವೆ. ಪಾಣಾರ ಸಮುದಾಯ ಈ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಇದನ್ನು ಶಾಶ್ವತವಾಗಿ ಉಳಿಸುವ ಕಾರ್ಯ ನಡೆಯಬೇಕು ಎಂದು ಕಾಪು ತಹಶೀಲ್ದಾರ್ ಡಾ.ಪ್ರತಿಭಾ ಆರ್ ನುಡಿದರು. ಅವರು ಪಾಣಾರ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಮೂಡುಬೆಳ್ಳೆ ಇವರ ಆಶ್ರಯದಲ್ಲಿ ಬೆಳ್ಳೆ ಕಾಡಬೆಟ್ಟು ಶ್ರೀ ಪಂಜಿರ್ಲಿ ದೈವಸ್ಥಾನದ ಪ್ರಾಂಗಣದಲ್ಲಿ ಮೂಡುಬೆಳ್ಳೆಯ ಹಿರಿಯ ಪಾರ್ದಾನಗಾರ್ತಿ ಅಪ್ಪಿ ಕೃಷ್ಣ ಪಾಣಾರ ಇವರಿಗೆ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡೆಮಿಯಿಂದ ವಾರ್ಷಿಕ "ಗೌರವ ಪ್ರಶಸ್ತಿ ಪ್ರದಾನ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿರ್ವ ಮಾರಿಗುಡಿ ಶ್ರೀ ಮಹಮ್ಮಾಯಿ ಸಾನ್ನಿಧ್ಯದಲ್ಲಿ ಚಪ್ಪರ ಮೂಹೂರ್ತ

Posted On: 23-04-2025 12:31PM

ಶಿರ್ವ : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಶಿರ್ವ ಮಾರಿಗುಡಿ ಶ್ರೀ ಮಹಮ್ಮಾಯೀ ಅಮ್ಮನವರ ಸಾನ್ನಿಧ್ಯದಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಬುಧವಾರ ಬೆಳಿಗ್ಗೆ ಆಗಮ ಪಂಡಿತ ಕುತ್ಯಾರು ಕೇಂಜ ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ಹಾಗೂ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವೆಂಕಟರಮಣ ಭಟ್ ಪೌರಾಹಿತ್ಯದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಲಾಯಿತು.‌

ಪತ್ರಕರ್ತ ಕಿರಣ್ ಪೂಜಾರಿ ಮುದ್ದುಗುಡ್ಡೆಯವರಿಂದ ಅರೆಬೆತ್ತಲೆ ಪ್ರತಿಭಟನೆ

Posted On: 22-04-2025 04:56PM

ಕುಂದಾಪುರ : ಅನವಶ್ಯಕ ಕೇಸು ದಾಖಲಿಸಿ ಕಿರುಕುಳ ನೀಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಇಲ್ಲಿನ ತಾಲೂಕು ಕಚೇರಿ ಎದುರು ಬಿಲ್ಲವ ಹೋರಾಟಗಾರ, ಪತ್ರಕರ್ತ ಕಿರಣ್ ಪೂಜಾರಿ ಮುದ್ದುಗುಡ್ಡೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ ಟಿ ಪಿ) ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ಸಜ್ಜಾದ ಮೂಳೂರು ಗ್ರಾಮಸ್ಥರು

Posted On: 22-04-2025 02:25PM

ಕಾಪು : ತಾಲೂಕಿನ ಮೂಳೂರು ಗ್ರಾಮದಲ್ಲಿ ಪುರಸಭೆಯು ಸುಮಾರು 1.78 ಎಕರೆ ಜಾಗದಲ್ಲಿ ಕಾಪು ಪೇಟೆಯ ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್ ಟಿ ಪಿ) ನಿರ್ಮಿಸುವ ಬಗ್ಗೆ ಸ್ಥಳೀಯರು ಹೋರಾಟಕ್ಕೆ ಸಜ್ಜಾಗಿದ್ದು ಪೂರ್ವಭಾವಿಯಾಗಿ ಎ.24 ರಂದು ಅಧಿಕಾರಿವರ್ಗ ಮತ್ತು ಜನಪ್ರತಿಧಿಗಳಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥ ಪುರುಷೋತ್ತಮ ಸಾಲ್ಯಾನ್ ಕಾಪು ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೂಳೂರಿನ ಗ್ರಾಮಸ್ಥರು ಒಟ್ಟಾಗಿ ಎ.24 ರಂದು ಗುರುವಾರ ಬೆಳಿಗ್ಗೆ 8.30 ಕ್ಕೆ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಬಳಿ ಸೇರಿ ಕಾಪು ಪುರಸಭೆಗೆ,ತಾಲೂಕು ಕಚೇರಿಗೆ, ಶಾಸಕರಿಗೆ, ಮಾಜಿ ಸಚಿವರಿಗೆ ಪ್ರತಿಭಟನೆಯೊಂದಿಗೆ ತೆರಳಿ ಮನವಿ ಪತ್ರ ನೀಡಲು ಉದ್ದೇಶಿಸಲಾಗಿದೆ. ಪುರಸಭಾ ಸದಸ್ಯರಿಗೆ ಮಾಹಿತಿ ನೀಡದೆ ಕೆಲವು ದಿನಗಳ ಹಿಂದೆ ಸುಮಾರು 1.78 ಎಕರೆ ಸರಕಾರಿ ಜಮೀನನ್ನು ತಾಲೂಕು ಆಡಳಿತ ಕಾಪು ಪುರಸಭೆಗೆ ಮಂಜೂರು ಮಾಡಿದೆ. ಮೂಳೂರಿನ ಸೂಜಿಮೊನೆಯಷ್ಟು ಜಾಗವನ್ನು ಬಿಟ್ಟು ಕೊಡುವುದಿಲ್ಲ ಎಂದರು.

ಜನಿವಾರ ಪ್ರಕರಣ : ವಿಶ್ವಕರ್ಮ ಒಕ್ಕೂಟದಿಂದ ಖಂಡನೆ

Posted On: 21-04-2025 03:31PM

ಕಾಪು : ಇತ್ತೀಚೆಗೆ ಸರಕಾರದ ವತಿಯಿಂದ ನಡೆಸಲಾದ ಸಿ.ಇ.ಟಿ. ಪರೀಕ್ಷೆಯ ವೇಳೆ ರಾಜ್ಯದ ವಿವಿಧ ಸ್ಥಳಗಳಲ್ಲಿ ವಿದ್ಯಾರ್ಥಿಗಳ ಜನಿವಾರ ಕಳಚಿದ ಹಾಗೂ ಕತ್ತರಿಸಿದ ಘಟನೆ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮಾಡಿದ ಅಪಮಾನವಲ್ಲ, ಸಮಸ್ತ ಜನಿವಾರಧಾರಣೆ ಮಾಡುವ ಹಿಂದೂ ಸಮುದಾಯಗಳಿಗೆ ಮಾಡಿರುವ ಅವಮಾನವಾಗಿರುತ್ತದೆ. ಈ ಘಟನೆಯನ್ನು ಅವಿಭಜಿತ ದ. ಕ. ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಮಧು ಆಚಾರ್ಯ, ಮೂಲ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಕರ್ತ, ಸಾಮಾಜಿಕ ಹೋರಾಟಗಾರ ಕಿರಣ್ ಪೂಜಾರಿಯವರಿಂದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ

Posted On: 20-04-2025 02:47PM

ಉಡುಪಿ : ಪೋಲೀಸ್ ಹಾಗೂ ಪಂಚಾಯತ್ ಅಧಿಕಾರಿಯೊಬ್ಬರು ಕರ್ತವ್ಯಲೋಪ ಎಸಗಿ ತಮ್ಮ ಮೇಲೆ ದೌರ್ಜನ್ಯ ವೆಸಗಿದ್ದಾರೆ ಮತ್ತು ನ್ಯಾಯವಾದಿಯೊಬ್ಬರು ತಮಗೆ ಹಾಗೂ ತಮ್ಮ ಸಮಾಜಕ್ಕೆ ಅವಮಾನಿಸಿ ತಮ್ಮ ಮೇಲೆ ಸುಳ್ಳು ಪ್ರಕರಣಗಳು ದಾಖಲಿಸುವಂತೆ ಪೋಲಿಸರ ಮೇಲೆ ಒತ್ತಡ ಹೇರಿದ್ದಾರೆ. ಈ ಮೂವರ ವಿರುದ್ದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ ನಡೆಸಲಿದ್ದೇನೆ ಎಂದು ಪತ್ರಕರ್ತ ಹಾಗೂ ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಹಳೆಯ ಕೆರೆಗಳನ್ನು ಉಳಿಸಿದರೆ ಮುಂದಿನ ಜೀವ ಕುಲ ಉಳಿದೀತು : ಕಟ್ಟಿಂಗೇರಿ ಹೆಬ್ಬಾರ್

Posted On: 19-04-2025 05:38PM

ಕಾಪು : ಕೃಷಿ ಹಾಗೂ ಅಂತರ್ಜಲ ವೃದ್ಧಿಗೆ ಕೆರೆಗಳು ಪ್ರಮುಖ ಪಾತ್ರ ವಹಿಸುತ್ತವೆ. ನೀರಿನ ಶೇಖರಣೆಗೆ ಕೆರಗಳು ಅತೀ ಮುಖ್ಯ. ಜೀವಜಲ ಉಳಿಸುವುದು ಪುಣ್ಯದ ಕಾರ್ಯ. ಹಳೆಯ ಕೆರೆಗಳನ್ನು ಉಳಿಸಿದರೆ ಮುಂದಿನ ಜೀವ ಕುಲ ಉಳಿದೀತು ಎಂದು ರಾಜ್ಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪೂರ್ವ ಅಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ನುಡಿದರು. ಅವರು ಶನಿವಾರ ಬೆಳ್ಳೆ ಗ್ರಾ.ಪಂ.ವ್ಯಾಪ್ತಿಯ ಪಡುಬೆಳ್ಳೆ ಸಮೀಪ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ "ನಮ್ಮೂರು ನಮ್ಮ ಕೆರೆ" ಕಾರ್ಯಕ್ರಮದಲ್ಲಿ ಕುರುಡಾಯಿ ಕೆರೆಯ ಹೂಳೆತ್ತುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಮೂಲಕ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಹುಟ್ಟಿನಿಂದ ಸಾಯುವವರೆಗೆ ಮನುಷ್ಯರಿಗೆ ಏನೆಲ್ಲಾ ಅಗತ್ಯ ಇದೆಯೋ ಅದನ್ನೆಲ್ಲಾ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಸಾಕಾರಗೊಳಿಸಲಾಗುತ್ತಿದೆ. ಈಗಾಗಲೇ 800ಕ್ಕೂ ಅಧಿಕ ಕೆರಗಳ ಜೀರ್ಣೋದ್ದಾರ ಮಾಡಲಾಗಿದೆ ಎಂದರು.

ಏ.17, 18 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ದೃಢ ಸಂಪ್ರೋಕ್ಷಣೆ

Posted On: 15-04-2025 07:29PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿದ್ವಾನ್ ಕೆ. ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಏ.17, ಗುರುವಾರ ಮತ್ತು ಏ.18, ಶುಕ್ರವಾರ ಕಾಪು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ.

ಬಂಟಕಲ್ಲು ಉಮಾನಾಥ ನಾಯಕ್ ನಿಧನ

Posted On: 15-04-2025 07:19PM

ಶಿರ್ವ : ಬಂಟಕಲ್ಲು ಪೊದಮಲೆ ನಿವೃತ್ತ ಶಿಕ್ಷಕ ದಿ.ರಾಮಚಂದ್ರ ನಾಯಕ್‌ರವರ ಪುತ್ರ ಉಮಾನಾಥ ನಾಯಕ್(62) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಬಯಿ ದಹೀಸಾರ್‌ನಲ್ಲಿ ನಿಧನರಾದರು. ಸ್ವಂತ ಉದ್ಯಮ ನಡೆಸುತ್ತಿದ್ದ ಇವರು ಜನಾನುರಾಗಿಯಾಗಿದ್ದರು. ತಾಯಿ, ಪತ್ನಿ, ಮಗಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.