Updated News From Kaup
ಎ. 8, 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹರಕೆ ಮಾರಿಪೂಜೆ
Posted On: 03-04-2025 10:21AM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ವಿವಿಧ ಉಪಸಮಿತಿ, ಸಿಬ್ಬಂದಿಗಳು ಮತ್ತು ನೌಕರವೃಂದ ಹಾಗೂ ಭಕ್ತವೃಂದದ ಸಹಕಾರದೊಂದಿಗೆ ಎ. 8 ಮತ್ತು 9 ರಂದು ಮಹಾಸೇವೆ ರೂಪದಲ್ಲಿ ಪ್ರಥಮ ಹರಕೆ ಮಾರಿಪೂಜೆ ನಡೆಯಲಿದ್ದು ಸಮಾಲೋಚನಾ ಸಭೆ ನಡೆಯಿತು.
ದೇಶದಲ್ಲಿ ಅಶಾಂತಿ ಉಂಟುಮಾಡಲು ಕೇಂದ್ರದ ಬಿಜೆಪಿ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ ಮಂಡನೆ : ಶರ್ಫುದ್ದೀನ್ ಶೇಖ್
Posted On: 02-04-2025 10:55PM
ಕೇಂದ್ರ ಸರ್ಕಾರ ದೇಶದಲ್ಲಿ ಹಿಂದೂ ಮುಸ್ಲಿಂ ಸಮುದಾಯ ವಿಭಜನೆ ಮಾಡಲು ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿ ವಕ್ಪ್ ಬೋರ್ಡ್ ಹಸರಿನಲ್ಲಿ ದೇಶದ ಜನರಿಗೆ ಶುದ್ದ ಸುಳ್ಳುಗಳನ್ನು ಹೇಳಿ ಇವತ್ತು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ಲನ್ನು ಮಂಡಿಸಿದೆ. ವಕ್ಪ್ ವಿಚಾರದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಯಾರಿಗೂ ಅನ್ಯಾಯವಾಗಿರಲಿಲ್ಲ. ಆದರೆ ವಖ್ಫ್ ವಿಚಾರದಲ್ಲಿ ಜನರಿಗೆ ವಾಸ್ತವ ವಿಚಾರವನ್ನು ಮರೆಮಾಚಿ ಸುಳ್ಳು ಹೇಳಿಕೆಗಳನ್ನು ನೀಡಿ ಕೇಂದ್ರ ಸರ್ಕಾರ ತನ್ನ ವೈಪಲ್ಯಗಳನ್ನು ಮರೆಮಾಚಲು ತಯಾರಿ ನಡೆಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಖಂಡಿಸಿದ್ದಾರೆ.
ಕಾಪು ದಂಡತೀರ್ಥ ವಿದ್ಯಾಸಂಸ್ಥೆ : ಬೇಸಿಗೆ ಶಿಬಿರ ಉದ್ಘಾಟನೆ
Posted On: 02-04-2025 10:43PM
ಕಾಪು : ಪ್ರಕೃತಿ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳು ಹಾಗೂ ಹಾವುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ಅವು ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಅವುಗಳನ್ನು ಸಂರಕ್ಷಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ವನ್ಯಜೀವಿ ಹಾಗೂ ಉರಗ ರಕ್ಷಕ ಅಕ್ಷಯ್ ಎನ್. ಶೇಟ್ ಹೇಳಿದರು. ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಜರಗಿದ ಸ್ಕೌಟ್ಸ್, ಗೈಡ್ಸ್ ,ಕಬ್, ಬುಲ್-ಬುಲ್ ಮತ್ತು ಸೇವಾದಳಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Posted On: 02-04-2025 08:03PM
ಉಡುಪಿ : ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ ಮನವಿಯನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ವತಿಯಿಂದ ಮವವಿ ಸಲ್ಲಿಸಿದ್ದು. ಈ ವಿಚಾರವಾಗಿ ಯಾರೂ ಕೂಡ ಗಮನ ಹರಿಸದೆ ಇರುವುದು ಬೇಸರದ ಸಂಗತಿಯಾಗಿದೆ. ಆಭಾಗದಲ್ಲಿ ದಿನೇ ದಿನೇ ಅಪಘಾತಗಳು ಜಾಸ್ತಿಯಾಗುತ್ತಿದ್ದು ಎ.1, ಮಂಗಳವಾರ ಬೆಳಿಗ್ಗೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆಗೆ ಹೋಗುವ ಸಂದರ್ಭದಲ್ಲಿ ರಸ್ತೆದಾಟುವಾಗ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾದ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ ಎಂಬ ಬಾಲಕನು ಅಪಘಾತದಲ್ಲಿ ಸಾವನಪ್ಪಿದ್ದು ಈ ಬಾಲಕನ ಕುಟುಂಬದವರಿಗೆ ಯಾವುದೇ ಪರಿಹಾರ ನೀಡದಿರುವುದರಿಂದ ಈ ಕೂಡಲೆ ಜಿಲ್ಲಾಡಳಿತ ಮತ್ತು ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಿ ಕೊಡುವಂತೆ ಹಾಗೂ ಆ ಭಾಗದಲ್ಲಿ ಪೈಓವರ್ ನಿರ್ಮಿಸುವಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ 92 ಹೇರೂರು, ಬಂಟಕಲ್ಲು : ನೂತನ ಕಾರ್ಯಕಾರಿ ಸಮಿತಿ ರಚನೆ
Posted On: 31-03-2025 09:59PM
ಬಂಟಕಲ್ಲು : ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) 92 ಹೇರೂರು, ಬಂಟಕಲ್ಲು ಇಲ್ಲಿನ ವಾರ್ಷಿಕ ಮಹಾಸಭೆಯಲ್ಲಿ 2025-27ನೇ ಸಾಲಿನ ಅವಧಿಗೆ ಕಳೆದ ಕಾರ್ಯಕಾರಿ ಸಮಿತಿಯು ಅವಿರೋಧವಾಗಿ ಪುನರಾಯ್ಕೆಗೊಂಡಿತು.
ಕಾಪು ಶ್ರೀ ಹೊಸ ಮಾರಿಗುಡಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಭೇಟಿ
Posted On: 31-03-2025 09:50PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಅವರು ಅಮ್ಮನ ದರುಶನ ಪಡೆದು ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಪಡೆದಿದ್ದರು.
ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ
Posted On: 31-03-2025 09:44PM
ಪಡುಬಿದ್ರಿ : ಕರ್ನಾಟಕ ಸರಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ , ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗು ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೃೆದು ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಅಗಿರುವ ಪ್ರಸನ್ನ ಪಿ.ಎಸ್ ರವರು ಭಾಜನರಾಗಿದ್ದಾರೆ.
ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಹಾಗೂ ಕನ್ನಡ, ಸಂಸ್ಕೃತಿ ಇಲಾಖೆ ಉಡುಪಿ : ಪ್ರಸಾದನ ಕಾರ್ಯಗಾರ ಸಂಪನ್ನ
Posted On: 31-03-2025 09:33PM
ಉಡುಪಿ : ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಪ್ರಸಾದನ ಕಾರ್ಯಗಾರ ಜರುಗಿತು.
ಮೇ.6 : ಯುವಸೇನೆ ಮಡುಂಬು - 18ನೇ ವಾರ್ಷಿಕೋತ್ಸವ
Posted On: 31-03-2025 04:38PM
ಕಾಪು : ಯುವಸೇನೆ ಮಡುಂಬು ವೈ.ಎಸ್.ಎಮ್ ಫ್ರೆಂಡ್ಸ್ ಮಡುಂಬು ಇದರ 18ನೇ ವಾರ್ಷಿಕೋತ್ಸವ ಮೇ 06, ಮಂಗಳವಾರ ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ಜರಗಲಿದೆ.
ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ
Posted On: 31-03-2025 04:17PM
ಕಟಪಾಡಿ : ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗಾಗಿ ಹೊಸ ಆಡಳಿತ ಮಂಡಳಿಗೆ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾಗಿದ್ದಾರೆ.
