Updated News From Kaup

92 ಹೇರೂರು ಗ್ರಾಮದಲ್ಲಿ ಗಿಡಬೆಳೆಸಿ ಬಹುಮಾನ ಗೆಲ್ಲಿ ಕಾರ್ಯಕ್ರಮ

Posted On: 02-08-2022 10:10PM

ಕಾಪು : ಲಯನ್ಸ್ ಕ್ಲಬ್ ಬಂಟಕಲ್ಲು ಬಿ.ಸಿ.ರೋಡ್ ಇವರ ನೇತೃತ್ವದಲ್ಲಿ ಕಾಪು ತಾಲೂಕಿನ ಮಜೂರು ಪಂಚಾಯತ್ ವ್ಯಾಪ್ತಿಯ 92 ಹೇರೂರು ಗ್ರಾಮದಲ್ಲಿ ಗಿಡ ಬೆಳೆಸಿ ಮೂರು ವರ್ಷಗಳ ನಂತರ ಬಹುಮಾನ ಗೆಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮಿಸ್ ಇಂಡಿಯಾ ಸಿನಿ ಶೆಟ್ಟಿ - ಉಂಡಾರು ದೇವಳಕ್ಕೆ ಭೇಟಿ

Posted On: 02-08-2022 06:09PM

ಕಾಪು : ಮಿಸ್ ಇಂಡಿಯಾ ಪಟ್ಟವನ್ನು ಗೆದ್ದು ಮನೆಮಾತಾಗಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಮಡುಂಬುವಿನ ಸದಾನಂದ ಶೆಟ್ಟಿ ಮತ್ತು ಹೇಮ ಶೆಟ್ಟಿ ದಂಪತಿಗಳ ಪುತ್ರಿ ಸಿನಿ ಶೆಟ್ಟಿಯವರು ತನ್ನ ಹುಟ್ಟೂರಿನ ಗ್ರಾಮ ದೇವರಾಗಿರುವ ಉಂಡಾರು ವಿಷ್ಣುಮೂರ್ತಿ ದೇವರ ಸನ್ನಿಧಾನಕ್ಕೆ ಆಗಮಿಸಿ ದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು.

ರೋಟರಾಕ್ಟ್ ಕ್ಲಬ್ ಸುಭಾಷ್ ನಗರ ಪದಗ್ರಹಣ

Posted On: 01-08-2022 11:02PM

ಶಿರ್ವ : ರೋಟರಾಕ್ಟ್ ಕ್ಲಬ್ ಸುಭಾಷ್ ನಗರದ 2022-23 ನೇ ವರ್ಷಕ್ಕೆ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 30ರಂದು ರೋಟರಿ ಭವನ ಶಂಕರಪುರ ಇಲ್ಲಿ ಜರಗಿತು.

ಶಿರ್ವ ಸೈಂಟ್ ಮೇರಿಸ್ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

Posted On: 01-08-2022 10:53PM

ಶಿರ್ವ : ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಲು ಕಂಪ್ಯೂಟರ್ಗಳನ್ನು ಬಳಸಲಾಗಿದೆ. ಹೀಗಾಗಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ. ವಿದ್ಯಾರ್ಥಿಗಳು ಕಂಪ್ಯೂಟರ್‌ಗಳ ಸದುಪಯೋಗ ದಿಂದ ಉತ್ತಮ ಉಪಾದಿ ಹಾಗೂ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಇವತ್ತು ಕಂಪ್ಯೂಟರ್ ಒಂದು ಮೂಲಭೂತ ಅಗತ್ಯ ವಸ್ತುವಾಗಿದೆ. ಶಿಕ್ಷಣ ,ಆರೋಗ್ಯ ,ಪ್ರಾಕೃತಿಕ ಹಿನ್ನಲೆಯಲ್ಲಿ ಕರ್ಣಾಟಕ ಬ್ಯಾಂಕ್ ತನ್ನದೇ ಆದ ಕೊಡುಗೆಯನ್ನು ಈ ಸಮಾಜಕ್ಕೆ ನೀಡುತ್ತಾ ಬಂದಿದೆ ಎಂದು ಇಲ್ಲಿನ ಶಿರ್ವ ಸೈಂಟ್ ಮೇರಿಸ್ ಕಾಲೇಜಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಲಾದ 5 ಕಂಪ್ಯೂಟರ್ ಗಳನ್ನು ಕರ್ಣಾಟಕ ಬ್ಯಾಂಕ್ ಉಡುಪಿ ರೀಜನಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಾಜ್ ಗೋಪಾಲ್ ಬಿ. ಅವರು ಮುಖ್ಯ ಅತಿಥಿಯಾಗಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಉಡುಪಿಯ ಪ್ರಖ್ಯಾತ ವಕೀಲರಾದ ಸಂಕಪ್ಪ.ಎ ಜೆಡಿಎಸ್ ಸೇರ್ಪಡೆ

Posted On: 01-08-2022 09:30PM

ಉಡುಪಿ : ಇಲ್ಲಿಯ ಪ್ರಖ್ಯಾತ ವಕೀಲರು, ಬಿಲ್ಲವ ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಸಂಕಪ್ಪ.ಎ ಅವರಿಗೆ ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು.

ಚಿತ್ರ ಕಲಾವಿದ ರಮೇಶ್ ಬಂಟಕಲ್ ಗೆ ಸನ್ಮಾನ

Posted On: 01-08-2022 09:05PM

ಶಿರ್ವ : ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆ ಇಲ್ಲಿ ಚಿತ್ರ ಕಲಾವಿದ ರಮೇಶ್ ಬಂಟಕಲ್ ಇವರ ದೈವಾರಾಧನೆ ಕಲಾಕೃತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಗೊಂಡ ನಿಮಿತ್ತ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ನಾಗರಪಂಚಮಿ : ಕರೆನಾಡಿನಲ್ಲಿ ನಾಗ ಆರಾಧನಾ ಪರ್ವ ದಿನವೇ? ನಾಗಬನಗಳ ಪುನರ್ ರಚನೆ ಅನಿವಾರ್ಯ

Posted On: 01-08-2022 08:46PM

ನಾಗರಪಂಚಮಿ‌ ತುಳವರ "ನಾಗ ಆರಾಧನಾ" ಪರ್ವ ದಿನವೇ ? ಏನು ಪ್ರಶ್ನೆ ; ಶತಮಾನಗಳಿಂದ , ತಲೆಮಾರುಗಳಿಂದ, ಲಾಗಾಯ್ತಿನಿಂದ ನಡೆದು ಬರುತ್ತಿರುವ ಒಂದು ಆರಾಧನಾ ದಿನದ ಬಗ್ಗೆ ಇಂತಹ ಸಂಶಯ ಏಕೆ ? ಹೌದು..... ಕರೆನಾಡಿನ ಉಭಯ ಜಿಲ್ಲೆಗಳಲ್ಲಿ ರೂಢಿಯಲ್ಲಿರುವ ವೈವಿಧ್ಯಮಯ ನಾಗ ಉಪಾಸನಾ ಕ್ರಮಗಳ ಮಾಹಿತಿ ಸಂಗ್ರಹಿಸಿ ಕ್ಷೇತ್ರಕಾರ್ಯದ ಮೂಲಕ ದಾಖಲಿಸಿಕೊಂಡಾಗ ಈ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತದೆ. ಮೇಲ್ನೋಟಕ್ಕೆ ಈ ಆರಾಧನಾ ಪ್ರಕಾರಗಳು ನಮ್ಮ ನಡುವೆ ಇದೆಯಾದರೂ ನಾವು ಗಮನಿಸಿಲ್ಲ ಅಷ್ಟೆ. ಏಕೆಂದರೆ ನಮಗೆ ನಮ್ಮದೇ ಶ್ರೇಷ್ಠ .ಬೇರೆ ಏನಿದ್ದರೂ ಅದು ನಮ್ಮ ಕ್ರಮದಷ್ಟು ಶಾಸ್ತ್ರೀಯವಾಗಿರಲಾರದು ಎಂಬ ಅಹಂ. ವರ್ಷದ ಸಂಭ್ರಮಗಳೆಲ್ಲ ತೆರೆದುಕೊಳ್ಳುವ ಪ್ರಾರಂಭದ ಹಬ್ಬ ನಾಗರಪಂಚಮಿ. ಆದುದರಿಂದ ತುಳುನಾಡಿನಲ್ಲೂ ಆಚರಣೆ ಪ್ರಶಸ್ತವೇ. ಆಗಮಿಸಿದವುಗಳಲ್ಲಿ ಹಲವು ವಿಚಾರಧಾರೆಗಳು ಒಪ್ಪಿತವಾಗಿವೆ, ಕೆಲವು ತಿರಸ್ಕರಿಸಲ್ಪಟ್ಟಿವೆ. ಅದರಲ್ಲಿ ನಾಗರಪಂಚಮಿ ಒಪ್ಪಿತವಾದುದು.ಏಕೆಂದರೆ ನಾಗ ಲೋಕಪ್ರಿಯ, ಮಾನವನಿಂದ ಮೊತ್ತಮೊದಲು ದೈವತ್ವಕ್ಕೆ ಏರಿದವ. ತನು - ತಂಬಿಲದಂತಹ ಪುರಾತನ ಕ್ರಮವನ್ನು ನಾವು ಬಿಟ್ಟವರಲ್ಲ . ನಾಗರಪಂಚಮಿಗೂ ನಮ್ಮ ಆರಾಧನೆ ತನು - ತಂಬಿಲವೇ. ಇಷ್ಟಕ್ಕೆ ನಮ್ಮ ಶ್ರದ್ಧೆ. ನಮ್ಮ ಭರವಸೆ ಮತ್ತು ವಿಶ್ವಾಸಗಳ ಮೂರ್ತ ಸ್ವರೂಪವಾದ ನಂಬಿಕೆಯೇ ನಾಗ ಉಪಾಸನೆಯ ಮೂಲ.

ಸಿ.ಇ.ಟಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್‌ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ

Posted On: 01-08-2022 01:52PM

ಕಾರ್ಕಳ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್‌ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್‌ ಗಳಿಸಿರುತ್ತಾರೆ ಮತ್ತು ಮಧುಶ್ರೀ ವಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 72 ನೇ ರ‍್ಯಾಂಕ್‌, ಪಶುವೃದ್ಯಕೀಯ ಪ್ರಾಯೋಗಿಕದಲ್ಲಿ 126 ನೇ ರ‍್ಯಾಂಕ್‌. ಕಾಲೇಜಿನ ರಾಘವೇಂದ್ರ ತಾಳಿಕೋಟಿ ಪಶುವೈದ್ಯಕೀಯದಲ್ಲಿ ರಾಜ್ಯಕ್ಕೆ 110 ನೇ ರ‍್ಯಾಂಕ್‌, ಬಿ-ಫಾರ್ಮಾ ದಲ್ಲಿ 150 ನೇ ರ‍್ಯಾಂಕ್‌ , ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 165 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 186 ನೇ ರ‍್ಯಾಂಕ್‌ ಹಾಗೂ ಇಂಜಿನಿಯರಿಂಗ್ ನಲ್ಲಿ 636 ನೇ ರ‍್ಯಾಂಕ್‌ ಪಡೆದಿರುತ್ತಾರೆ. ಸಾತ್ವಿಕ್‌ ಶ್ರೀಕಾಂತ ಹೆಗಡೆ ಬಿ.ಎನ್‌.ವೈ.ಎಸ್‌ ನಲ್ಲಿ 116 ರ‍್ಯಾಂಕ್‌, ಪಶುವೈದ್ಯಕೀಯದಲ್ಲಿ 222 ನೇ ರ‍್ಯಾಂಕ್‌, ಬಿ.ಫಾರ್ಮಾ ದಲ್ಲಿ 383 ನೇ ರ‍್ಯಾಂಕ್‌ ಪಡೆದಿರುತ್ತಾರೆ. ಕುಮಾರಿ ಸಿಂಚನ ಕೆ ಎಸ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 745 ನೇ ರ‍್ಯಾಂಕ್‌, ಕೃಷಿ ವಿಜ್ಞಾನದಲ್ಲಿ 835 ನೇ ರ‍್ಯಾಂಕ್‌, ಅಗಸ್ತ್ಯ ಸಮ್ಯಕ್‌ ಜ್ಞಾನ್‌ ಕೃಷಿ ವಿಜ್ಞಾನದಲ್ಲಿ 679 ನೇ ರ‍್ಯಾಂಕ್‌, ಬಿ.ಎನ್‌.ವೈ.ಎಸ್‌ ವಿಭಾಗದಲ್ಲಿ 924 ನೇ ರ‍್ಯಾಂಕ್‌ ಹಾಗೂ ಅನ್ವಿನ್ ಬಿ ಪಿ ಇಂಜಿನಿಯರಿಂಗ್‌ ವಿಭಾಗದಲ್ಲಿ 681 ನೇ ರ‍್ಯಾಂಕ್‌ ಪಡೆದಿರುತ್ತಾರೆ.

ಎಎಪಿ ಪಕ್ಷದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ ಕಲಂಬಾಡಿ ಪದವು ಮಂಜುನಾಥ್ ಕುಲಾಲ್ ಆಯ್ಕೆ

Posted On: 31-07-2022 11:04PM

ಕಾರ್ಕಳ : ಭಾರತೀಯ ರಾಷ್ಟ್ರೀಯ ಪಕ್ಷ ಆಮ್ ಆದ್ಮಿ ಪಕ್ಷ ಇದರ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ ಕಲಂಬಾಡಿ ಪದವು ಇಲ್ಲಿಯ ಮಂಜುನಾಥ್ ಕುಲಾಲ್ ಇವರು ಆಯ್ಕೆಯಾಗಿರುತ್ತಾರೆ.

ಮಣಿಪಾಲದ ಟಿ ಮೋಹನ್ ದಾಸ್ ಎಂ ಪೈ ವಿಧಿವಶ

Posted On: 31-07-2022 10:22PM

ಮಣಿಪಾಲ : ಇಲ್ಲಿನ ಡಾ.ಟಿ ಎಂ ಎ ಪೈ ಅವರ ಹಿರಿಯ ಪುತ್ರ ಟಿ ಮೋಹನ್ ದಾಸ್ ಎಂ ಪೈ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. 1933 ರ ಜೂನ್ 20 ರಂದು ಜನಿಸಿದ್ದರು.