Updated News From Kaup
ಪಡುಬಿದ್ರಿ : ರೋಟರಿ ಕ್ಲಬ್ ಮತ್ತು ಇನ್ನರ್ವೀಲ್ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ತ್
 (1) (1).jpg)
Posted On: 24-07-2022 11:36PM
ಪಡುಬಿದ್ರಿ : ತುಳುನಾಡು ಕೃಷ್ಣದೇವರಾಯ ಅರಸರಾಗಿ, ಹಲವಾರು ಸಾಮಂತರಾಜರು ಆಳಿದ ಸ್ಥಳವಾಗಿದೆ. ತುಳು ನೆಲದಲ್ಲಿ ವಿಶೇಷತೆ, ಅದರದೇ ಆದ ಮಹಿಮೆ ಜಗತ್ತಿನಲ್ಲಿ ಸ್ಥಾನವನ್ನು ಪಡೆದಿದೆ. ಇಲ್ಲಿ ಬಂದು ಅಧ್ಯಯನ ನಡೆಸಿದ ಬ್ರಿಟಿಷರಿಗೆ ಇಲ್ಲಿನ ಜನಪದ ಸಂಸ್ಕೃತಿ ಅವರನ್ನು ಕುತೂಹಲಿಗರನ್ನಾಗಿಸಿದೆ. ಅವರು ದಾಖಲಿಸಿದ್ದು ಜನರಿಗೆ ತಿಳಿಯುವಂತಾಗಿದೆ. ಜಗತ್ತಿನ ಹಲವಾರು ಭಾಷೆಗಳಿಗೆ ಅವುಗಳದೇ ಆದ ಮಹತ್ವ, ವ್ಯಾಪ್ತಿಯಿದೆ. ಸರಕಾರದ ಮಟ್ಟದಲ್ಲಿ ಮಾನ್ಯತೆ ದೊರಕಿದೆ. ಆದರೆ ಎಲ್ಲ ಇದ್ದು ಏನೂ ಇಲ್ಲದಂತೆ ಇರುವ ಭಾಷೆಯಾಗಿ ತುಳುವಿದೆ. ಸ್ವತಂತ್ರ ಕ್ಯಾಲೆಂಡರ್, ಸ್ವತಂತ್ರ ಲಿಪಿ, ಅಷ್ಟಮಠಾಧಿಪತಿಗಳು ತುಳು ಲಿಪಿಯಲ್ಲಿಯೇ ಸಹಿ ಹಾಕುವ ರೂಢಿಯಿದೆ. ಅಸಂಖ್ಯಾತ ಶಿಲಾಶಾಸನಗಳು, ಅಸಂಖ್ಯಾತ ತಾಮ್ರ ಶಾಸನಗಳು ತುಳುವಲ್ಲಿ ಇದೆ. ವಿಶ್ವದಲ್ಲಿ ಎರಡುವರೆ ಕೋಟಿ ಜನಸಂಖ್ಯೆ ಇದ್ದರೂ ತುಳು ಅಧಿಕೃತ ಭಾಷೆ ಆಗಲಿಲ್ಲ. ನಾವು ನಮ್ಮ ಭಾಷೆಯನ್ನು ಮರೆಯದಿರಲು ನಮ್ಮ ಕಾರ್ಯಕ್ರಮ, ಮನೆ ಮನಗಳಲ್ಲಿ ತುಳು ಭಾಷೆಯ ಬಳಕೆ ಅನಿವಾರ್ಯ. ಅದರಲ್ಲೂ ಕೃಷಿ ಪ್ರಧಾನ ಸಂಸ್ಕೃತಿಯಲ್ಲಿ ಒಂದಾದ ಆಟಿ ಆಚರಣೆಯು ನಮ್ಮಲ್ಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು.
ಅವರು ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಇನ್ನರ್ವೀಲ್ ಕ್ಲಬ್ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ಜರಗಿದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಕಲಶಕ್ಕೆ ಭತ್ತವನ್ನು ಸುರಿಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮೂಢನಂಬಿಕೆ, ರೂಢನಂಬಿಕೆಗಳು ಭಿನ್ನ. ಆಟಿದ ಆಚರಣೆಯ ಹಿನ್ನೆಲೆಯನ್ನು ತಿಳಿಯಬೇಕಾಗಿದೆ. ವೈಜ್ಞಾನಿಕ ಮಹತ್ವ ಮತ್ತು ಆರೋಗ್ಯಯುತ ಆಹಾರ ಪದಾರ್ಥಗಳನ್ನು ಬಳಸುವಲ್ಲಿ ಮಹತ್ವದ ಅಂಶಗಳನ್ನು ನಮಗೆ ತಿಳಿಸುತ್ತದೆ ಎಂದರು.
ಈ ಸಂದರ್ಭ ಶಿಕ್ಷಣ ಕ್ಷೇತ್ರದ ಸಾಧಕಿ, ಶಿಕ್ಷಕಿ ವಂದನಾ ರೈ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಾಗೇಶ್ ಕುಲಾಲ್, ಇನ್ನರ್ವೀಲ್ ಅಧ್ಯಕ್ಷೆ ವಿಮಲ ಸಾಲ್ಯಾನ್, ಕಾರ್ಯದರ್ಶಿ ಸುನಿತ ಭಕ್ತವತ್ಸಲ, ರೋಟರಿ ಅಧ್ಯಕ್ಷೆ ಗೀತಾ ಅರುಣ್, ಕಾರ್ಯದರ್ಶಿ ಜ್ಯೋತಿ ಮೆನನ್, ಪುಷ್ಪಲತಾ, ಅನಿತಾ ಉಪಸ್ಥಿತರಿದ್ದರು. ಪಡುಬಿದ್ರಿ ರೋಟರಿ ಕ್ಲಬ್ ನ ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ರಾಜೇಶ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಜ್ಯೋತಿ ಮೆನನ್ ವಂದಿಸಿದರು.
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟನೆ
 (1) (1).jpg)
Posted On: 24-07-2022 02:18PM
ಕಾಪು : ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ(ರಿ.), ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಮುದರಂಗಡಿ ಇದರ ಸಹಭಾಗಿತ್ವದಲ್ಲಿ ಜುಲೈ 24ರಂದು ವಿದ್ಯಾ ಪೋಷಕ ನಿಧಿ (2022-23)ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವ ಮಂಗಲ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಮುಂಬಯಿಯ ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ವಿದ್ಯೆಗಿಂತ ಸಂಸ್ಕಾರ ಮುಖ್ಯ, ವಿದ್ಯೆಗೆ ಕರಾವಳಿಯಲ್ಲಿ ಅತಿ ಪ್ರಾಮುಖ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಜಿಎಸ್ ಬಿ ಸಮಾಜ ಶೈಕ್ಷಣಿಕವಾಗಿ ಮುಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ರಾಜಕೀಯದ ಕಡೆಗೆ ಗಮನ ನೀಡದೆ ವಿದ್ಯಾರ್ಜನೆಗೆ ಗಮನ ನೀಡಬೇಕಾಗಿದೆ. ನಮ್ಮಲ್ಲಿ ತುಂಬಾ ಯುವ ಜನಾಂಗವಿದೆ ಇವರು ಸಮಾಜವನ್ನು ಮುನ್ನಡೆಸಬೇಕಾಗಿದೆ ಎಂದರು. ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೆಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ಪಿ ರವೀಂದ್ರ ದಯಾನಂದ ಪೈಯವರು ತಮ್ಮ ದಿಕ್ಸೂಚಿ ಭಾಷಣದಲ್ಲಿ ಜಿಎಸ್ ಬಿ ಸಮಾಜದೊಂದಿಗಿನ ಒಡನಾಟ ಇಂದು ಸಮಾಜ ಗುರುತಿಸುವಂತಾಗಿದೆ. ಎಲ್ಲಾ ಕ್ಷೇತ್ರದಲ್ಲಿ ನಾವು ಇದ್ದೇವೆ. ಎಲ್ಲರಿಂದ ಗೌರವಿಸಲ್ಪಡುತ್ತಿದ್ದೇವೆ. ಜೀವನೋಪಾಯಕ್ಕಾಗಿ ನಾವು ಆಯ್ದುಕೊಂಡ ಕಾರ್ಯಗಳನ್ನು ನಿಷ್ಠೆಯಿಂದ ಮಾಡುತ್ತಿದ್ದೇವೆ. ಭಾರತದ ಆರ್ಥಿಕತೆಯಲ್ಲಿ ನಮ್ಮ ಪಾಲೂ ಇದೆ ಎಂದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಉಡುಪಿಯ ಅನಂತ ವೈದಿಕ ಕೇಂದ್ರದ ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್, ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಮೈಸೂರು ಇದರ ಪಾಲುದಾರರಾದ ಗೋವಿಂದ ಜಗನ್ನಾಥ ಶೆಣೈ, ಅಮೇರಿಕದ ವಾಷಿಂಗ್ಟನ್ ಡಿಸಿಯ ಇಂಡಿಯನ್ ಸಿಎ ಎಸೋಸಿಯೇಷನ್ ನ ಸ್ಥಾಪಕಾಧ್ಯಕ್ಷರು, ಹಾಗೂ ವಿಶ್ವ ಬ್ಯಾಂಕ್ ನ ಕಾರ್ಯನಿರ್ವಾಹಕರಾಗಿರುವ ಸಿಎ ಗೋಕುಲ್ದಾಸ್ ಪೈ, ಮುಂಬಯಿ ನ್ಯಾಚುರಲ್ ಐಸ್ ಕ್ರೀಂನ ಆಡಳಿತ ನಿರ್ದೇಶಕರಾದ ರಘುನಂದನ್ ಎಸ್. ಕಾಮತ್, ಮುಂಬಯಿಯ ಎಮ್.ವಿ. ಕಿಣಿ ಲಾ-ಫರ್ಮ್ ನ ಸಂಸ್ಥಾಪಕರಾದ ಖ್ಯಾತ ಸುಪ್ರೀಂ ಕೋರ್ಟ್ ನ ವಕೀಲರಾದ ಮಣಿಪುರ ವಸಂತ ಕಿಣಿ, ಭಾರತ ಸರಕಾರದ ನ್ಯಾಶನಲ್ ಬ್ಯಾಂಕ್ ಆಫ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ನ ಅಧ್ಯಕ್ಷರಾದ ಪದ್ಮಭೂಷಣ ಕೆ.ವಿ ಕಾಮತ್, ಎಂ ವಿ ಕಿಣಿ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.)ಮುದರಂಗಡಿ ಇದರ ವಿಶ್ವಸ್ಥರಾದ ರತ್ನಾಕರ ಕಾಮತ್, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಪಿ ರಾಮಚಂದ್ರ ಶೆಣೈ, ಕಾರ್ಗಿಲ್ ಹುತಾತ್ಮ ಲೆ|ಕ|ಶೌರ್ಯಚಕ್ರ ಪುರಸ್ಕೃತ ಅಜಿತ್ ವಿ ಭಂಡಾರ್ಕಾರ್ ರವರ ಧರ್ಮಪತ್ನಿ ಶಕುಂತಲಾ ಎ. ಭಂಡಾರ್ಕಾರ್, ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಹಳೆ ಮಾರಿಗುಡಿಯ ಆಡಳಿತ ಮೊಕ್ತೇಸರರಾದ ಶ್ರೀ ಪ್ರಸಾದ ಶೆಣೈ, ರಾಯಚೂರಿನ ಹೆಸರಾಂತ ಲೆಕ್ಕ ಪರಿಶೋಧಕರಾದ ಉಪ್ಪುಂದ ರಾಮಚಂದ್ರ ಪ್ರಭು, ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಸಂಚಾಲಕರಾದ ಆರ್. ವಿವೇಕಾನಂದ ಶೆಣೈ, ಅಧ್ಯಕ್ಷರಾದ ಜಿ. ಸತೀಶ್ ಹೆಗ್ಡೆ ಕೊಟ, ಸಿಎ ಎಸ್ ಎಸ್ ನಾಯಕ್, ವಿಜಯಕುಮಾರ್ ಶೆಣೈ, ಸಿಎ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
ಮುರಳೀದರ ಜಿ ಶೆಣೈ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿದರು. ಸಿಎ ಎಸ್ ಎಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಕಾಪು : ಆಗಸ್ಟ್ 14ರಂದು ದೇಶಕ್ಕಾಗಿ ಓಟ

Posted On: 23-07-2022 10:54PM
ಕಾಪು : ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ದೇಶಕ್ಕಾಗಿ ಓಟ ಕಾರ್ಯಕ್ರಮ ಜರಗಲಿದೆ.
ಇದರ ಪ್ರಯುಕ್ತ 11 ಕಿಲೋಮೀಟರ್ ಓಟವನ್ನು ಆಗಸ್ಟ್ 14ರಂದು ಬೆಳಿಗ್ಗೆ 6 ಗಂಟೆಗೆ ಕಾಪು ಸರಕಾರಿ ಪ್ರಾಥಮಿಕ ಶಾಲಾ ಮೈದಾನದಿಂದ ಪಡುಬಿದ್ರಿ ಶಾಲಾ ಮೈದಾನದವರೆಗೆ ಓಟ ಸಾಗಲಿದೆ.
ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಬಹುಮಾನಗಳಿದ್ದು, ನಗದು ಮತ್ತು ಟ್ರೋಫಿ ನೀಡಲಾಗುವುದು ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಆಸಕ್ತರು 90081 69918, 82177 52220, 9844 7427 45 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಮೋರ್ಚ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಮೂಡುಬೆಳ್ಳೆ ತಿಳಿಸಿದ್ದಾರೆ.
ಯುವವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ - ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು
.jpg)
Posted On: 23-07-2022 10:31PM
ಉಡುಪಿ : ಯುವ ವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜುಲೈ 23 ರಂದು ಉದ್ಯಾವರ ಬಲಾಯಿಪಾದೆಯ ಯುವವಾಹಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಸಾಹಿತಿಗಳು ಹಾಗೂ ಉಪನ್ಯಾಸಕರಾದ ವಾಸಂತಿ ಅಂಬಲಪಾಡಿ ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಪರ್ಧಾ ಕೂಟದ ಯಶಸ್ಸಿಗೆ ಶುಭ ಹಾರೈಸಿದರು.
.jpg)
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಹೈಸ್ಕೂಲು ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಒಟ್ಟು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲಾ ಪ್ರತಿಭೆಗಳಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಉಡುಪಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಜಗದೀಶ್ ಕುಮಾರ್, ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ ಯುವವಾಹಿನಿ ಘಟಕದ ಪ್ರವೀಣ್ ಡಿ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕ ವೀಕ್ಷಿತ್ ಪ್ರಸ್ತಾವಿಸಿದರು. ಸುಪ್ರೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ದಯಾನಂದ್ ಕರ್ಕೇರ ವಂದಿಸಿದರು. ಶ್ರೇಯಸ್ ಕೋಟ್ಯಾನ್ ತೀರ್ಪುಗಾರರಾಗಿ ಹಾಗೂ ಅಮಿತಾಂಜಲಿ ಕಿರಣ್ ಕಾರ್ಯಕ್ರಮ ಸಂಚಾಲಕರಾಗಿ ಸಹಕರಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಪುವಿನಲ್ಲಿ ಎಸ್ಡಿಪಿಐ ಪ್ರತಿಭಟನೆ
.jpg)
Posted On: 23-07-2022 08:12PM
ಕಾಪು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು.
ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್ಟಿ ಹಾಕಿ ಜನರನ್ನು ಬದುಕದಂತೆ ಮಾಡಿದ್ದಾರೆ. ಇದೇ ರೀತಿ ಬಡವರನ್ನು ತುಳಿಯುವ ಪ್ರಯತ್ನ ಮುಂದುವರಿದರೆ, ಮುಂದಿನ ದಿನಗಳಲ್ಲಿ ಶ್ರೀಲಂಕಾ ದೇಶದ ಪರಿಸ್ಥಿತಿ ಭಾರತದಲ್ಲಿ ಬರುವುದು ಖಚಿತ ಎಂದರು.
ಈ ಸಂದರ್ಭ ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಹ್ಮದ್, ಕಾಪು ಪುರಸಭಾ ಸದಸ್ಯ ನೂರುದ್ದೀನ್ ಅಹಮದ್ ಮಹಲ್ಲಾ, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ಕಟಪಾಡಿ : ಎಸ್. ವಿ.ಎಸ್ ಶಾಲೆಯ ಹಳೆವಿದ್ಯಾರ್ಥಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಕೊಡುಗೆ
 (1).jpg)
Posted On: 23-07-2022 07:10PM
ಕಟಪಾಡಿ : ಇಲ್ಲಿನ ಎಸ್. ವಿ.ಎಸ್ ಹೈಸ್ಕೂಲ್ ಇದರ 1997ರಿಂದ 2002 ರ ಬ್ಯಾಚ್ ನ ಹಳೆವಿದ್ಯಾರ್ಥಿಗಳ ವತಿಯಿಂದ ಶಾಲಾ ಮಕ್ಕಳಿಗೆ ಗುರುತಿನ ಚೀಟಿ ನೀಡುವ ಕಾರ್ಯಕ್ರಮ ಜುಲೈ 22 ರಂದು ಎಸ್. ವಿ. ಎಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ಜರಗಿತು.
ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ತಂತ್ರಿ ಶಾಲಾ ಸಮಿತಿ ಸದಸ್ಯರಾದ ನಿತ್ಯಾನಂದ ಶೆಣೈ, ಸಂಘದ ಗೌರವಾಧ್ಯಕ್ಷರಾದ ಸತೀಶ್ ಕುಮಾರ್ ಉದ್ಯಾವರ ಹಾಗೂ ಅಧ್ಯಕ್ಷರಾದ ಜ್ಯೋತಿ ಪ್ರಶಾಂತ್ ಕಟಪಾಡಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಸ್. ವಿ. ಎಸ್ ನ 1997-2002 ರ ಬ್ಯಾಚ್ ನ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು

Posted On: 22-07-2022 06:23PM
ಕಾಪು : ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವಾಗ ಹೊಂಡ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದ ಘಟನೆ ನಡೆದಿದೆ.
ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ ಪತ್ರಕರ್ತ ಹಮೀದ್ ಪಡುಬಿದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ

Posted On: 22-07-2022 01:18PM
ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು.
ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಬೂಸ್ಟರ್ ಡೋಸ್ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷಕ್ಕಿಂತ ಮೇಲ್ಪಟ್ಟ ಎರಡು ಡೋಸ್ ಪಡೆದ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಮಣ್ಯರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ , ಆಶಾ ಕಾರ್ಯಕರ್ತರಾದ ಸವಿತಾ,ರೆಹೆಮತ್ವರು ಸಹಕಾರವನ್ನು ನೀಡಿದರು.
ಸುರತ್ಕಲ್ ರಸ್ತೆ ಅಪಘಾತದಲ್ಲಿ ಕಟಪಾಡಿಯ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

Posted On: 22-07-2022 01:10PM
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ.
ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತರು ತಾಯಿಯನ್ನು ಅಗಲಿದ್ದಾರೆ.
ಜುಲೈ 23 : ಮುಕುಂದ ಕೃಪಾ ನರ್ಸರಿ, ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆ
.jpg)
Posted On: 21-07-2022 11:27AM
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಮುಕುಂದ ಕೃಪಾ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆಯ ಸಮಾರಂಭ ಜುಲೈ 23ರಂದು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಮಾಧ್ಯಾಹ್ನ 2:30 ಕ್ಕೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುದಿ ವಸಂತ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಹಾಗೂ ಈ ವೇಳೆ ಸಮಾರಂಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಪ್ರಭಾರ ಬಿಇಒ ಅಶೋಕ್ ಕಾಮತ್, ಅಕಾಡೆಮಿ ಜನರಲ್ ಎಜುಕೇಷನ್ ಮಣಿಪಾಲ ಇದರ ಕಾರ್ಯದರ್ಶಿ ವರದಾಯ ಪೈ, ಡೆಂಟಾ ಕೇರ್ ಕ್ಲಿನಿಕ್ ಉಡುಪಿ ಇದರ ಡಾ.ವಿಜಯೇಂದ್ರ ವಸಂತ್ ರಾವ್, ಮುಕುಂದ ಕೃಪಾ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಪ್ರಭಾವತಿ.ಎಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.