Updated News From Kaup

ತುಳುಕೂಟ ಬೆಂಗಳೂರಿನ ವತಿಯಿಂದ ಕಷಾಯ ಮತ್ತು ಮೆಂತೆ ಗಂಜಿ ವಿತರಣೆ

Posted On: 28-07-2022 06:04PM

ಉಡುಪಿ : ತುಳುಕೂಟ ಬೆಂಗಳೂರಿನ ವತಿಯಿಂದ ಪ್ರತಿ ವರುಷ ಬೆಂಗಳೂರಿನಲ್ಲಿ ವಾಸವಾಗಿರುವ. ತುಳುನಾಡಿನ ಜನರಿಗೆ ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಆಷಾಢ ಮಾಸದಲ್ಲಿ ಉಪಯೋಗಿಸುವ ಕಷಾಯ ಮತ್ತು ಮೆಂತೆ ಗಂಜಿ ವಿತರಣಾ ಕಾರ್ಯಕ್ರಮವು ಶೇಷಾದ್ರಿಪುರದಲ್ಲಿರುವ ಶ್ರೀ ರಾಘವೇಂದ್ರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ವಿದ್ಯಾರ್ಥಿಗಳಿಗೆ 500 ಗಿಡ ವಿತರಣೆ

Posted On: 28-07-2022 05:53PM

ಉಡುಪಿ : ವನಮಹೋತ್ಸವದಂತಹ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೆ, ನಾವು ನೆಡುವ ಪ್ರತಿ ಗಿಡವು ವೃದ್ಧಿಯಾಗುವಂತೆ ನೋಡಬೇಕು. ಪ್ರಕೃತಿಯಲ್ಲಿ ನಾವು ನೆಟ್ಟ ಗಿಡ ಮರವಾಗಿ ಬೆಳೆದಾಗ ಅದರಿಂದ ನಮಗೂ ನೆಮ್ಮದಿ ಸಿಗುತ್ತದೆ. ವನಮಹೋತ್ಸವದಂತಹ ಕಾರ್ಯಕ್ರಮಗಳು ಪವಿತ್ರ ಕಾರ್ಯಕ್ರಮವೆಂದು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ. ವಂ. ಫಾ. ಸ್ಟ್ಯಾನಿ ಬಿ ಲೋಬೋ ತಿಳಿಸಿದರು. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ನೇತೃತ್ವದಲ್ಲಿ ಉದ್ಯಾವರ ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ 500 ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಗಿಡ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರವೀಣ್ ನೆಟ್ಟಾರು ಹತ್ಯೆ - ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳ ಖಂಡನೆ

Posted On: 28-07-2022 05:32PM

ಕಾಪು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಭಾಗದಲ್ಲಿ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆಯಾಗಿದೆ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ ಹಲವಾರು ವರ್ಷಗಳಿಂದ ತಮ್ಮ ನಾಯಕರ ಮಾತುಗಳನ್ನು ಕೇಳಿ ಉದ್ರೇಕಗೊಂಡು ಕೆಲವು ಯುವಕರು ತಮ್ಮ ಜೀವನವನ್ನು ಕಳೆದುಕೊಂಡಿದ್ದಾರೆ. ಇದರಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಯಾವುದೇ ರಾಜಕಾರಣಿಗಳ ಮಕ್ಕಳು ಅಥವಾ ಶ್ರೀಮಂತರ ಮಕ್ಕಳು ಸಾಯುತ್ತಿಲ್ಲ ಬದಲಾಗಿ ಹಿಂದುಳಿದ ವರ್ಗದ ಯುವಕರು, ಬಡವರ ಮನೆಯ ಮಕ್ಕಳು ಈ ಕೋಮುಗಲಭೆಯ ಕಾರಣದಿಂದಾಗಿ ಸಾಯುತ್ತಿದ್ದಾರೆ ಎಂದು ಉಡುಪಿ ಜಿಲ್ಲೆಯ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

ಪಕ್ಷದ ಕಾರ್ಯಕರ್ತರಿಗೆ ರಕ್ಷಣೆಕೊಡದ ಬಿಜೆಪಿ ಯಾವ ಪುರುಷಾರ್ಥಕ್ಕೆ ಜನೋತ್ಸವ ಮಾಡುತ್ತೆ ? - ಕೃಷ್ಣಮೂರ್ತಿ ಆಚಾರ್ಯ

Posted On: 28-07-2022 05:18PM

ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣ ಖಂಡನೀಯ. ಕರ್ನಾಟಕದ ಜನತೆಗೆ ಹಾಗೂ ಸ್ವತಃ ತಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆನೇ ರಕ್ಷಣೆ ಕೊಡುವ ಸಾಮರ್ಥ್ಯ ಇಲ್ಲದ ಬಿಜೆಪಿ ಸರ್ಕಾರ ಯಾವ ಮುಖ ಇಟ್ಕೊಂಡು ಜನೋತ್ಸವ ಮಾಡುತ್ತೆ..? ಈ ಬಿಜೆಪಿ ಸರ್ಕಾರ ಬಂದ ನಂತರ ದಿನದಿಂದ ದಿನ ಹಿಂದೂ ಮುಸ್ಲಿಂ ಸಹೋದರರುಗಳ ಹತ್ಯೆ ಮತ್ತಷ್ಟು ನಿರಂತರವಾಗಿ ಜಾಸ್ತಿ ಆಗ್ತಾನೆ ಇದೆ. ಹತ್ಯೆಯಾದ ಕುಟುಂಬಗಳಿಗೆ ಇನ್ನೂ ಸರಿಯಾಗಿ ನ್ಯಾಯ ಸಿಕ್ಕಿಲ್ಲ ಹೀಗಿರುವಾಗ ಬಿಜೆಪಿ ಯಾವ ಮುಖದಲ್ಲಿ ಜನೋತ್ಸವ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿಯ ಆಚಾರ್ಯ ಪ್ರಶ್ನಿಸಿದ್ದಾರೆ. ಒಂದು ಕಡೆ ಬಿಜೆಪಿ ಸರ್ಕಾರ ಕಾಂಟ್ರ್ಯಾಕ್ಟರುಗಳಿಂದ 40% ಕಮಿಷನ್ ಭ್ರಷ್ಟಾಚಾರ ಮಾಡುತ್ತಿದೆ. ಮತ್ತೊಂದು ಕಡೆ ಜನರಿಗೆ ನಿರಂತರವಾಗಿ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಇಷ್ಟೆಲ್ಲ ಜನರಿಗೆ ತೊಂದರೆ ಕೊಟ್ಟು ಯಾವ ಮುಖ ಇಟ್ಟುಕೊಂಡು ಜನೋತ್ಸವ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಪ್ರವೀಣ್ ಪೂಜಾರಿ ನೆಟ್ಟಾರು ಹತ್ಯೆ: ಯುವವಾಹಿನಿ ಕೇಂದ್ರ ಸಮಿತಿ ಖಂಡನೆ

Posted On: 27-07-2022 11:03PM

ಮಂಗಳೂರು : ಯುವವಾಹಿನಿಯ ಸದಸ್ಯರಾಗಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಸಮಾಜದ ಅಭ್ಯುದಯಕ್ಕೆ ದುಡಿಯುತ್ತಿದ್ದ ಪ್ರವೀಣ್ ಪೂಜಾರಿ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ವಿಷಾದನಿಯ ವಿಷಯ.

ಬೆಳಪು : ನಾಲ್ಕು ತಿಂಗಳ ಗ್ರಾ.ಪಂ. ಭತ್ಯೆಯನ್ನು ಸಂಕಷ್ಟದಲ್ಲಿರುವ ಗ್ರಾಮಸ್ಥನಿಗೆ ನೀಡಿ ಮಾನವೀಯತೆ ಮೆರೆದ ಫಹಿಮ್

Posted On: 27-07-2022 10:56PM

ಬೆಳಪು : ಇಲ್ಲಿನ ನಿವಾಸಿಯಾದ ಗುರುರಾಜ್ ಆಚಾರ್ಯ ಹಲವಾರು ವರ್ಷಗಳಿಂದ ಇಲ್ಲಿನ ಜನತಾ ಕಾಲೋನಿ ಬಳಿಯ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದು ತನ್ನ ದಿನನಿತ್ಯ ಜೀವನ ನಡೆಸಲು ದನವನ್ನು ಸಾಕಿ ಹಾಲು ಮಾರಾಟ ಮಾಡಿ ಅದರಿಂದ ಬರುವ ಆದಾಯದಿಂದ ಕುಟುಂಬ ನಿರ್ವಹಿಸುತ್ತಿದ್ದಾರೆ.

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಮೈದಾನದಲ್ಲಿ ಹೋಬಳಿ ಮಟ್ಟದ ಖೋಖೋ ಪಂದ್ಯಾಟ

Posted On: 27-07-2022 05:23PM

ಉಚ್ಚಿಲ : ಇಲ್ಲಿನ ಸರಸ್ವತಿ ಮಂದಿರ ಶಾಲಾ ಮೈದಾನದಲ್ಲಿ ಹೋಬಳಿ ಮಟ್ಟದ ಖೋಖೋ ಪಂದ್ಯಾಟ ನಡೆಯಿತು.

ಅದಮಾರು : ಕಾರ್ಗಿಲ್ ವಿಜಯ ದಿವಸ ಆಚರಣೆ ಮತ್ತು ಯೋಧ ನಮನ ಕಾರ್ಯಕ್ರಮ

Posted On: 27-07-2022 05:10PM

ಅದಮಾರು : ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಅದಮಾರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಆಟಿ ಅಮಾವಾಸ್ಯೆ : ಆಟಿದ ಮರ್ದ್

Posted On: 27-07-2022 03:00PM

ಆಟಿ ತಿಂಗಳ(ಕರ್ಕಾಟಕ ಮಾಸ) ಅಮಾವಾಸ್ಯೆಯಂದು "ಆಟಿದ ಮರ್ದ್' (ಹಾಳೆ ಮರದ ಕೆತ್ತೆಯಿಂದ ತಯಾರಿಸಿದ ಕಷಾಯ ಕುಡಿಯುವ - ಮೆತ್ತೆ ಗಂಜಿ ಊಟಮಾಡುವ) ಕುಡಿಯುವ ಸಂಪ್ರದಾಯ ಇವತ್ತಿಗೂ ಚಾಲ್ತಿಯಲ್ಲಿದೆ. ಆದರೆ ಇತ್ತೀಚೆಗೆ ಉತ್ಸಾಹಿ ಸಂಘಟನೆಗಳು , ಆಚರಣೆ - ಸಂಸ್ಕೃತಿ ಪ್ರೀತಿಯ ಮಂದಿ 'ಕಷಾಯ' ತಯಾರಿಸಿ ಮನೆ,ಮನೆಗಳಿಗೆ ಹಂಚುವ , ಆಮೂಲಕ 'ಆಟಿಯ ಮದ್ದು' ಕುಡಿಯುವ ಸಂಪ್ರದಾಯವೊಂದನ್ನು ನೆನಪಿಸುತ್ತಾ , ಆಚರಿಸುವಂತೆ  ಪ್ರೇರೇಪಿಸುವ ಕೆಲಸ ನಡೆಯುತ್ತಿದೆ ,ಇದು ಸಂತೋಷದ ಸಂಗತಿ. ಯಾವ ಮರದ ಕೆತ್ತೆ , ಯಾವ ಕ್ರಮದಲ್ಲಿ ಯಾವ ವೇಳೆಯಲ್ಲಿ ತೆಗೆಯಬೇಕು ಮತ್ತು ಕಷಾಯ ತಯಾರಿಯ ಕ್ರಮ ,ಕಷಾಯ ಕುಡಿಯುವವರಿಗೆ ತಿಳಿದರೆ ಈ ಸಂಪ್ರದಾಯ ಉಳಿಯಬಹುದು . ಮುಂದೊಂದು ದಿನ ಮೆಡಿಕಲ್ ಶಾಪ್ ಗಳಲ್ಲಿ' ಸಿದ್ಧ ಕಷಾಯ'  ದೊರೆಯುವ ದಿನವೂ ಬಂದೀತು. ಆಗ ಮಾತ್ರ ಈ ಸಂದರ್ಭದ ಆಚರಣೆಯಲ್ಲಿ ಪಾವಿತ್ರ್ಯ ಇಲ್ಲವಾಗಬಹುದು ಅಲ್ಲವೇ ?ಗದ್ದೆಗಳಲ್ಲಿ ಬೆಳೆಯುತ್ತಿರುವ ಬೆಳೆಯರಕ್ಷಣೆಗೆ ಕಾಸರ್ಕದ ಮರದ ಗೆಲ್ಲುಗಳನ್ನು ಕಡಿದು ಹಾಕುವ ಕ್ರಮವೂ ಇತ್ತು ಎಂಬುದು ಮರೆಯಾಗುತ್ತಿರುವ ವಿಷಯ.ಬೇಸಾಯ ಜೀವನಾಧಾರವಾಗಿದ್ದರೆ ಮಾತ್ರ ‌ ನಮ್ಮ ಆರೋಗ್ಯದೊಂದಿಗೆ ನಮ್ಮ ಬೆಳೆಯ ರಕ್ಷಣೆಯ ಕಾಳಜಿತಾನೇ ?  

ಬಂಟಕಲ್ಲು‌: ಶ್ರೀ ವಿಶ್ವಕರ್ಮ ಸಂಘ ಇದರ ಗಾಯತ್ರಿ ವೃಂದದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Posted On: 26-07-2022 11:20PM

ಬಂಟಕಲ್ಲು : ಇಲ್ಲಿನ ಶ್ರೀ ವಿಶ್ವಕರ್ಮ ಸಂಘ ಇದರ ಗಾಯತ್ರಿ ವೃಂದದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.