Updated News From Kaup
ಮಟ್ಟಾರು : ಉಚಿತ ನೇತ್ರ ತಪಾಸಣೆ ; ಆರೋಗ್ಯ ಮಾಹಿತಿ ಮತ್ತು ದಂತ ತಪಾಸಣಾ ಶಿಬಿರ
Posted On: 25-03-2025 02:56PM
ಶಿರ್ವ : ಶಿರ್ವ ಮಟ್ಟಾರು ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಇದರ ನೇತೃತ್ವದಲ್ಲಿ ಡಾ.ವಿ.ಎಸ್.ಆಚಾರ್ಯ ಬಯಲು ರಂಗಮಂದಿರದಲ್ಲಿ ಜಿಲ್ಲಾ ಆರೋಗ್ಯ ಸೊಸೈಟಿ, ಅಂಧತ್ವ ನಿಯಂತ್ರಣ ವಿಭಾಗ ಉಡುಪಿ, ಸಂಚಾರಿ ನೇತ್ರಘಟಕ ಜಿಲ್ಲಾಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಉಪ ಆರೋಗ್ಯ ಕೇಂದ್ರ ಮಟ್ಟಾರು ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ತಪಾಸಣೆ, ಗ್ಲಾಕೋಮಾ ಕಾಯಿಲೆ ಬಗ್ಗೆ ಮಾಹಿತಿ, ಉಚಿತ ದಂತ ಚಿಕಿತ್ಸಾ ಶಿಬಿರ,ಮಧುಮೇಹ, ರಕ್ತದೊತ್ತಡ ತಪಾಸಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಸ್ಪತ್ರೆಯ ಹಿರಿಯ ನೇತ್ರತಜ್ಞರಾದ ಡಾ. ನಿತ್ಯಾನಂದ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿ, ಶಿಬಿರದ ಉದ್ದೇಶ ಮತ್ತು ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ - ಸ್ಟಾರ್ ನೃೆಟ್ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ
Posted On: 25-03-2025 02:47PM
ಪಡುಬಿದ್ರಿ : ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ರಿ.) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ "ಸ್ಟಾರ್ ನೃೆಟ್" ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಿತು.
ಪಾಜಕ ಶ್ರೀವಿಶ್ವೇಶತೀರ್ಥ ಮಹಾವಿದ್ಯಾಲಯ -ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
Posted On: 25-03-2025 02:35PM
ಶಿರ್ವ : ಕುಂಜಾರುಗಿರಿ ಸಮೀಪದ ಪಾಜಕ ಶ್ರೀವಿಶ್ವೇಶತೀರ್ಥ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ, ಜೆಸಿಐ ಕಟಪಾಡಿ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಎರ್ಮಾಳಿನಲ್ಲಿ ಯುವಕನಿಗೆ ಕಾರು ಡಿಕ್ಕಿ ; ಗಂಭೀರ
Posted On: 25-03-2025 02:21PM
ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ಎದುರು ರಾ.ಹೆ. 66ರಲ್ಲಿ ಕೊರಿಯರ್ ಸರ್ವೀಸ್ ಯುವಕನಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭಿರವಾಗಿ ಗಾಯಗೊಂಡ ಘಟನೆ ಮಂಗಳವಾರ ಘಟಿಸಿದೆ.
ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಟೋಲ್ ವಿನಾಯಿತಿ : ಕಾಪು ಶಾಸಕರ ನೇತೃತ್ವದಲ್ಲಿ ಮನವಿ
Posted On: 24-03-2025 03:36PM
ಪಡುಬಿದ್ರಿ : ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸ್ಥಳೀಯ ವಾಹನಗಳಿಗೆ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮನವಿ ನೀಡಲಾಯಿತು.
ಮಾ.25ರಂದು ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ
Posted On: 23-03-2025 05:34PM
ಕಾಪು : ಮಾರ್ಚ್ 25 ಮಂಗಳವಾರ ಸುಗ್ಗಿ ಜಾತ್ರೆಯ ಪರ್ವಕಾಲದಂದು “ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ" ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾತ್ರಿ 9.30 ಗಂಟೆಗೆ ಶ್ರೀ ದೇವಳದ ಮುಂಭಾಗದ ವೇದಿಕೆಯಲ್ಲಿ "ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಪ್ರಾರಂಭ ಸಂಬಂಧಿ "ಸಭಾ ಕಾರ್ಯಕ್ರಮ - ಜೀರ್ಣೋದ್ಧಾರ ಲಾಂಛನ ಅನಾವರಣ", ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಪ್ರಸಾದ್ ಜಿ ಶೆಣೈ ಹೇಳಿದ್ದಾರೆ. ಅವರು ಶನಿವಾರ ಕಾಪು ಹಳೆಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾಪು ಶ್ರೀ ಹಳೆ ಮಾರಿಯಮ್ಮನ ದೇಗುಲ ಜೀರ್ಣೋದ್ಧಾರ ಆಗಬೇಕೆಂದು ಲಕ್ಷಾಂತರ ಭಕ್ತರ ಬಹು ಕಾಲದ ಕನಸಾಗಿದ್ದು, ಶ್ರೀ ದೇವಿಯ ಸಮ್ಮುಖ ಊರಿನ ಗುರು ಹಿರಿಯರ, ಗಣ್ಯರ, ಸಮಸ್ತ ಭಕ್ತಾಧಿಗಳ ಸಹಭಾಗಿತ್ವದಲ್ಲಿ ಇದಕ್ಕೆ ಮುನ್ನುಡಿ ಇಡಲಾಗುತ್ತಿದೆ.
ಪಡುಬಿದ್ರಿ : ಅರಣ್ಯ ಇಲಾಖೆ ನೆಟ್ಟ ಗಿಡಗಳನ್ನು ಜೆಸಿಬಿಯಿಂದ ಕಿತ್ತೆಸೆದ ವ್ಯಕ್ತಿ ; ದೂರು ದಾಖಲು
Posted On: 21-03-2025 01:49PM
ಪಡುಬಿದ್ರಿ : ಪಡುಬಿದ್ರಿಯ ಅಲಂಗಾರು ಎಂಬಲ್ಲಿ ರಾ. ಹೆ. 66ರ ಬದಿಯಲ್ಲಿ ಬೆಳೆದ ಗಿಡಗಳು ಜಾಹೀರಾತು ಫಲಕಗಳಿಗೆ ಅಡ್ಡವಾಗುತ್ತದೆ ಎಂದು ಅರಣ್ಯ ಇಲಾಖೆ ನೆಟ್ಟ 42 ಗಿಡಗಳು ಹಾಗೂ ಅರಣ್ಯ ಇಲಾಖೆಯ ಬೋರ್ಡನ್ನು ಜಾಹೀರಾತು ಫಲಕ ಹಾಕುವ ವ್ಯಕ್ತಿ ಜೆಸಿಬಿಯಿಂದ ಕಿತ್ತೆಸೆದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಶ್ರೀ ಕ್ಷೇತ್ರ ಶಂಕರಪುರ : ಉಚಿತ ಚಿನ್ನದ ಮೂಗುತಿ ಕಾರ್ಯಕ್ರಮದ ಮಾಹಿತಿ ಪತ್ರ ಬಿಡುಗಡೆ
Posted On: 21-03-2025 01:35PM
ಶಿರ್ವ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ, ಕಾಲಭೈರವ ದೇವಸ್ಥಾನ ವತಿಯಿಂದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಲ್ಲಿ 2025 ನವರಾತ್ರಿಯಂದು ನಡೆಯುವ ಉಚಿತ ಚಿನ್ನದ ಮೂಗುತಿ ಕಾರ್ಯಕ್ರಮದ ಮಾಹಿತಿ ಪತ್ರ ವೀಣಾ ಶೆಟ್ಟಿ ಹಾಗೂ 5 ಕನ್ಯೆಯರಿಂದ ಕ್ಷೇತ್ರದಲ್ಲಿ ಬಿಡುಗಡೆಯಾಯಿತು.
ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಸ್ವಾಮೀಜಿ ದಂಪತಿ ಕಾಪು ಮಾರಿಯಮ್ಮ ಸನ್ನಿಧಾನ ಭೇಟಿ
Posted On: 20-03-2025 06:09PM
ಕಾಪು : ಆಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀಚಂದ್ರಶೇಖರ ಸ್ವಾಮೀಜಿ ದಂಪತಿ ಹಾಗೂ ಪುತ್ರ ಮತ್ತು ಅವರ ಹಿರಿಯ ಸಹೋದರ ವಿಶ್ವನಾಥ್ ಭಟ್ ದಂಪತಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸರಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ
Posted On: 20-03-2025 03:25PM
ಪಡುಬಿದ್ರಿ : ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸಾಕಷ್ಟು ಸವಲತ್ತುಗಳು ಜನಸಾಮಾನ್ಯರಿಗೆ ಲಭ್ಯವಿದ್ದು, ಅರ್ಹ ಫಲಾನುಭವಿಗಳು ವಿವಿಧ ಇಲಾಖೆಗಳನ್ನು ಸಂಪರ್ಕಿಸಿ, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಡುಬಿದ್ರಿ ಬೇಂಗ್ರೆಯ ಗಜಾನನ ಜ್ಞಾನ ವಿಕಾಸ ಕೇಂದ್ರದ ಮಹಿಳಾ ಸದಸ್ಯರಿಗೆ ಸರಕಾರಿ ಸವಲತ್ತುಗಳ ಕುರಿತು ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
