Updated News From Kaup
ಕಲ್ಯಾಣಪುರ ರೋಟರಿ ಕ್ಲಬ್ : ಕುಟುಂಬ ಸಮ್ಮಿಲನ, ಸೌಹಾರ್ದ ಕೂಟ, ಸನ್ಮಾನ
Posted On: 02-01-2022 11:43AM
ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ನ ಸದಸ್ಯರ ಕುಟುಂಬ ಸಮ್ಮಿಲನ ಮತ್ತು ಸೌಹಾರ್ದ ಕೂಟ ನೆರವೇರಿತು. ಈಬಸಂದರ್ಭ ಸದಸ್ಯರಾದ ವಿಜಯ ಮಯ್ಯಾಡಿ ಇವರ ಹುಟ್ಟು ಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಶಿರ್ವ ಗ್ರಾಮ ಪಂಚಾಯತ್ ಗೆ ರೂ 11ಲಕ್ಷ ಮೌಲ್ಯದ ಸ್ವಚ್ಛವಾಹಿನಿ ವಾಹನ ಕೊಡುಗೆ
Posted On: 02-01-2022 09:15AM
ಶಿರ್ವ : ಇಲ್ಲಿನ ಗ್ರಾಮ ಪಂಚಾಯತ್ ನ ನಮ್ಮ ಶಿರ್ವ, ಸ್ವಚ್ಛ ಶಿರ್ವ ಪರಿಕಲ್ಪನೆಯಡಿ ಸ್ವಚ್ಚತೆಯನ್ನು ನಿರ್ವಹಿಸಲು ಅನುಕೂಲವಾಗುವಂತೆ , ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರ ವಿನಂತಿಗೆ ಸ್ಪಂದಿಸಿದ ಶಿರ್ವ ನಿವಾಸಿ, ದಾನಿ, ಮುಂಬೈಯಲ್ಲಿ ಉದ್ಯಮಿಯಾಗಿರುವ ಥೋಮಸ್ ವಿಲ್ಫ್ರಡ್ ಪಿಂಟೊ ರವರು ರೂ. 11 ಲಕ್ಷ ಮೌಲ್ಯದ ಬೊಲೆರೋ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.
ಜಿಲ್ಲೆಯಲ್ಲಿ 15 -18 ವರ್ಷದವರೆಗಿನ 53,555 ಮಕ್ಕಳಿಗೆ ಕೋವಿಡ್-19 ಲಸಿಕೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
Posted On: 01-01-2022 08:09PM
ಉಡುಪಿ : ಜಿಲ್ಲೆಯಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 309 ಹೈಸ್ಕೂಲ್, 104 ಪದವಿ ಪೂರ್ವ ಕಾಲೇಜು, 21 ಐ.ಟಿ.ಐ ಇತ್ಯಾದಿ ಸಂಸ್ಥೆಗಳನ್ನು ಸೇರಿದಂತೆ ಒಟ್ಟು 434 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 15 ರಿಂದ 18 ವರ್ಷದವರೆಗಿನ 53,555 ಮಕ್ಕಳಿಗೆ ಲಸಿಕೆ ನೀಡಲು ಗುರಿಯನ್ನು ನಿಗದಿಪಡಿಸಲಾಗಿದೆ.
ಬಾರಿಕೆರೆ ಕೊರಗ ಕಾಲೋನಿಗೆ ಗೃಹ ಸಚಿವರ ಭೇಟಿ
Posted On: 01-01-2022 07:59PM
ಉಡುಪಿ : ಬ್ರಹ್ಮಾವರ ತಾಲೂಕು ಕೋಟತಟ್ಟುವಿನ ಕೊರಗ ಕಾಲೋನಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ಕೊರಗರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಘಟನೆಯ ಕುರಿತಂತೆ ,ಇಂದು ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಈ ಘಟನೆಯ ತನಿಖೆಯನ್ನು ಸಿ.ಓ.ಡಿ ಗೆ ವಹಿಸುವುದಾಗಿ ತಿಳಿಸಿದರು.
ಮಲ್ಪೆ : ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಾಗಾರ
Posted On: 01-01-2022 10:32AM
ಉಡುಪಿ : ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘ ಮಲ್ಪೆ ಜಂಟಿಯಾಗಿ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂನಿಂದ ಆಗುವ ಅನಾಹುತಗಳ ಬಗ್ಗೆ ಕಾರ್ಯಾಗಾರವನ್ನು ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀರ್ಮಾನ ; ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಆರಂಭ ಕುರಿತಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು : ಸಚಿವ ಶಂಕರ ಬ ಪಾಟೀಲ
Posted On: 31-12-2021 06:55PM
ಉಡುಪಿ : ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಕುರಿತಂತೆ, ಎಥೆನಾಲ್ ಪಾಲಿಸಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಹೇಳಿದರು. ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ, ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ಸೀತಾರಾಮ ಶೆಟ್ಟಿಗಾರರ ಕೈ ಮಗ್ಗ ಕೇಂದ್ರಕ್ಕೆ ರಾಜ್ಯದ ಕೈಮಗ್ಗ ಮತ್ತು ಜವಳಿ ಖಾತೆ ಸಚಿವರ ಭೇಟಿ
Posted On: 31-12-2021 06:45PM
ಉಡುಪಿ: ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಅವರು ಇಂದು ದೊಡ್ಡಣಗುಡ್ಡೆಯ ನೇಕಾರರ ಕಾಲೋನಿಯ, ಸೀತಾರಾಮ ಶೆಟ್ಟಿಗಾರ ಅವರ ಕೈ ಮಗ್ಗಕ್ಕೆ ಭೇಟಿ ನೀಡಿ, ಕೈ ಮಗ್ಗದ ಕಾರ್ಯ ವಿಧಾನವನ್ನು ವೀಕ್ಷಿಸಿದರು.
ಜಿಲ್ಲೆಯಲ್ಲಿ ಕೈಮಗ್ಗಗಳ ಆಧುನೀಕರಣ ಕುರಿತು ಪರಿಶೀಲನೆಗೆ ತಜ್ಞರ ತಂಡ : ಸಚಿವ ಶಂಕರ ಬ ಪಾಟೀಲ
Posted On: 31-12-2021 06:31PM
ಉಡುಪಿ : ಜಿಲ್ಲೆಯ ಕೈಮಗ್ಗಗಳನ್ನು ಆಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಜವಳಿ ಇಂಜಿನಿಯರ್ಗಳು ಮತ್ತು ಜವಳಿ ಪರಿಣಿತರ ತಂಡವನ್ನು ಜಿಲ್ಲೆಗೆ ಕಳುಹಿಸಿ, ಅವರಿಂದ ಪರಿಶೀಲನಾ ವರದಿ ಪಡೆದು, ಕೈಮಗ್ಗಗಳನ್ನು ತಾಂತ್ರಿಕವಾಗಿ ಸುಧಾರಿಸಿ, ನೇಕಾರರಿಗೆ ಆರ್ಥಿಕ ಅನುಕೂಲವಾಗುವಂತೆ ಮಾಡಲಾಗುವುದು ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಅವರು ಇಂದು ಉಡುಪಿ ನೇಕಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ನಡೆದ ದ.ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳ ಸಭೆ ಹಾಗೂ ಉಡುಪಿ ಜಿಲ್ಲಾ ನೇಕಾರರ ಕುಂದು ಕೊರತೆ ಆಲಿಸಿ ಮಾತನಾಡಿದರು.
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ವಿಶೇಷ ಭಜನಾ ಕಾರ್ಯಕ್ರಮ
Posted On: 31-12-2021 06:25PM
ಶಿರ್ವ : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ಆವರಣದಲ್ಲಿರುವ ಭವ್ಯ ಏಕಶಿಲಾ ಪರಶುರಾಮ ವಿಗ್ರಹವನ್ನೊಳಗೊಂಡ ಪರಶುರಾಮೇಶ್ವರ ದೇವಸ್ಥಾನದಲ್ಲಿ ನಾಗೇಶ್ವರ ಭಜನಾ ಮಂಡಳಿ, ಪಡುಬಿದ್ರಿ - ಮೂಲ್ಕಿ ವಲಯ ಇವರಿಂದ ಡಿಸೆಂಬರ್ 31 ರಂದು ವಿಶೇಷ ಭಜನಾ ಕಾರ್ಯಕ್ರಮವು ಜರುಗಿತು.
ಅಮ್ಚೆ ಸಂಸಾರ್ ಕೊಂಕಣಿ ಸಿನೆಮಾ : ಕೊಲ್ಕತ್ತಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ಗೆ ಆಯ್ಕೆ
Posted On: 30-12-2021 10:08PM
ಉಡುಪಿ : ರಾಜಾಪುರ ಸಾರಸ್ವತ ಕೊಂಕಣಿ ಭಾಷೆಯ ಅಮ್ಚೆ ಸಂಸಾರ್ ಕೊಂಕಣಿ ಸಿನೆಮಾ 2021-22 ನೇ ಸಾಲಿನ ಕೊಲ್ಕತ್ತಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಅಧಿಕೃತವಾಗಿ ಆಯ್ಕೆಗೊಂಡಿದೆ.
