Updated News From Kaup

ಪಡುಬಿದ್ರಿ : ರೋಟರಿ ಕ್ಲಬ್ ವತಿಯಿಂದ ಸಾಕ್ಷರತಾ ದಿನಾಚರಣೆ

Posted On: 28-09-2021 07:51PM

ಪಡುಬಿದ್ರಿ : ನಮ್ಮ ದೇಶವು ಶೇಕಾಡ 69 ರಷ್ಟು ಸಾಕ್ಷರತೆ ಹೊಂದಿದ್ದು , ದೇಶದ ಪ್ರತಿಯೊಬ್ಬ ಪ್ರಜೆ ಸಾಕ್ಷರತೆ ಹೊಂದಿದ್ದಲ್ಲಿ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಸರಕಾರ ಇನ್ನಷ್ಟು ಸಾಕ್ಷರತೆಯ ಬಗ್ಗೆ ಜಾೃಗತಿ ಹಾಗು ಪ್ರೇರೇಪಿಸುವತಂಹ ಕಾರ್ಯಕ್ರಮ ಗಳನ್ನು ಹಮ್ಮಿಕೂಳ್ಳಬೇಕಾದ ಅಗತ್ಯ ವಿದೆ ಎಂದು ಅದಮಾರು ಪೂರ್ಣಪ್ರಜ್ಞಾ ಶಾಲಾ ಶಿಕ್ಷಕಿ ಯಶೋಧ ಪಡುಬಿದ್ರಿಯವರು ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ರೋಟರಿ ಕಚೇರಿಯಲ್ಲಿ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭ ಹೆಜಮಾಡಿ ಗ್ರಾಮದ ಒಬ್ಬ ವಿದ್ಯಾರ್ಥಿಯನ್ನು ರೋಟರಿ ವತಿಯಿಂದ ದತ್ತು ಸ್ವೀಕರಿಸಲಾಯಿತು.

ರೋಟರಿ ಅಧ್ಯಕ್ಷ ಮಹಮ್ಮದ್ ನಿಯಾಜ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ ಸಂಯೋಜಕ ರಮೀಜ್ ಹುಸೇನ್ , ಕಾರ್ಯದರ್ಶಿ ಬಿ.ಯಸ್. ಆಚಾರ್ಯ, ಕಾರ್ಯಕ್ರಮ ನಿರ್ದೇಶಕ ಸುಧಾಕರ್ ಕೆ. ಉಪಸ್ಥಿತರಿದ್ದರು.

ಮಹಮ್ಮದ್ ನಿಯಾಜ್ ಸ್ವಾಗತಿಸಿ, ಸುಧಾಕರ್ ಕೆ. ನಿರೂಪಿಸಿ, ಬಿ.ಯಸ್. ಆಚಾರ್ಯ ವಂದಿಸಿದರು.

ಮುಂಡ್ಕೂರು : ಜೇಸೀ ಸಪ್ತಾಹ -2021; ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 5 ರವರಗೆ

Posted On: 28-09-2021 07:42PM

ಕಾರ್ಕಳ : ಜೇಸಿಐ ಮುಂಡ್ಕೂರು ಭಾರ್ಗವ, ಜೇಸಿರೇಟ್ ಮತ್ತು ಜೂನಿಯರ್ ಜೇಸೀ ವಿಭಾಗ ಪ್ರಾಂತ್ಯ -E, ವಲಯ XV 23 ರ ಸಂಭ್ರಮ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 5 ರವರಗೆ ನಡೆಯಲಿದೆ.

ಸೆಪ್ಟೆಂಬರ್ 29 ರಂದು ಸಂಜೆ 6:45 ಕ್ಕೆ ಉದ್ಘಾಟನೆಗೊಳ್ಳಲಿದ್ದು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಗೌರವಾರ್ಪಣೆ, ರಂಗೋಲಿ, ಮೆಹಂದಿ ಸ್ಪರ್ಧೆ, ವಾಲಿಬಾಲ್ ಪಂದ್ಯಾಟ, ವಿದ್ಯಾರ್ಥಿಗಳಿಗೆ ಪ್ರತಿಭಾ ಸ್ಪರ್ಧೆ ನಡೆಯಲಿದ್ದು ಅಕ್ಟೋಬರ್ 5 ರಂದು ಸಂಜೆ 6:45 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿಧನ : ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ

Posted On: 28-09-2021 02:24PM

ಕಾಪು : ಇಲ್ಲಿನ ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ ಅನಾರೋಗ್ಯದಿಂದ ಇಂದು ಮಧ್ಯಾಹ್ನ ದೈವಾದೀನರಾಗಿದ್ದಾರೆ.

ಅವರ ಅಂತ್ಯ ಸಂಸ್ಕಾರ ಇಂದು ರಾತ್ರಿ 8.30 ಕ್ಕೆ ಕಳತ್ತೂರು ಮಯೂರ ಹೌಸ್ ನಲ್ಲಿ ನಡೆಯಲಿದೆ.

ಸನ್ಮಾನ : ಛಾಯಾಗ್ರಾಹಕ ಸುರೇಂದ್ರ ಕುಲಾಲ್ ಪಣಿಯೂರ್

Posted On: 28-09-2021 12:11PM

ಕಾಪು : ಛಾಯಾಗ್ರಾಹಕ ಸುರೇಂದ್ರ ಕುಲಾಲ್ ಪಣಿಯೂರ್ ಅವರಿಗೆ ಶ್ರೀ ನೀಲಕಂಠ ಮಹಾ ಬಬ್ಬುಸ್ವಾಮಿ ದೈವಸ್ಥಾನ ಬೈಲೂರು ವತಿಯಿಂದ ಸನ್ಮಾನಿಸಲಾಯಿತು.

ಕಾಪು ರೋಟರಿ ಕ್ಲಬ್ : ಉಚಿತ ಮಧುಮೇಹ ತಪಾಸಣಾ ಶಿಬಿರ

Posted On: 28-09-2021 10:52AM

ಕಾಪು : ಕಾಪು ರೋಟರಿ ಕ್ಲಬ್ಬಿನ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬುಧವಾರ (29-9-2021) ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಾಪು ಪೇಟೆಯ ಅನಂಥಮಹಲ್ ಕಟ್ಟಡದ ಮುಂಬಾಗದಲ್ಲಿ ಉಚಿತ ಮಧುಮೇಹ, ರಕ್ತ ಪರೀಕ್ಷೆ ನಡೆಸಲಾಗುವುದು.

ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನ್ಯೂ ಫ್ರೆಂಡ್ಸ್ ಗಿರಿನಗರ ವತಿಯಿಂದ ಶ್ರಮದಾನ ಕಾರ್ಯಕ್ರಮ

Posted On: 28-09-2021 10:40AM

ಕಾಪು : ನ್ಯೂ ಫ್ರೆಂಡ್ಸ್ (ರಿ.) ಗಿರಿನಗರ ಇದರ ವತಿಯಿಂದ ಗಿರಿನಗರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಕುರ್ಕಾಲು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಬಿಳಿಯಾರು ,ನ್ಯೂ ಫ್ರೆಂಡ್ಸ್ ಗಿರಿನಗರದ ಅಧ್ಯಕ್ಷರು , ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲೆಯ ಕರಕುಶಲ, ವೈಶಿಷ್ಠ ಪೂರ್ಣ ವಸ್ತುಗಳ ರಫ್ತು ಕುರಿತು ನೀಲ ನಕಾಶೆ : ಜಿಲ್ಲಾಧಿಕಾರಿ ಕೂರ್ಮಾರಾವ್

Posted On: 27-09-2021 11:24PM

ಉಡುಪಿ : ಜಿಲ್ಲೆಯಲ್ಲಿ ದೊರೆಯುವ ಮತ್ತು ಉತ್ಪಾದಿಸುವ ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು ಸೇರಿದಂತೆ ವಿವಿಧ ವೈಶಿಷ್ಠ ಪೂರ್ಣ ವಸ್ತುಗಳನ್ನು ಬ್ರಾಂಡಿಂಗ್ ಮಾಡಿ, ರಫ್ತು ಮಾಡಲು ನೀಲ ನಕಾಶೆ ಸಿದ್ದಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ, ವಾಣಿಜ್ಯ ಸಪ್ತಾಹದ ಅಂಗವಾಗಿ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ರಫ್ತುದಾರರ ಸಮಾವೇಶ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಕ್ಯಾಶ್ಯೂವನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿದೆ ಆದರೆ ಜಿಲ್ಲೆಯಲ್ಲಿ ಕ್ಯಾಶ್ಯೂ ಹೊರತು ಪಡಿಸಿ ವಿವಿಧ ಕರಕುಶಲ ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದು ಇದರೊಂದಿಗೆ ಮರೈನ್ ಉತ್ಪನ್ನಗಳನ್ನೂ ಸಹ ರಫ್ತು ಮಾಡಲು ಉದ್ದಿಮೆದಾರರು ಪ್ರಯತ್ನಿಸಬೇಕು, ಜಿಲ್ಲೆಯ ವೈಶಿಷ್ಠ ಪೂರ್ಣ ಉತ್ಪನ್ನಗಳನ್ನು ಬ್ರಾಂಡಿಂಗ್ ಮಾಡಲು ಮತ್ತು ಅವುಗಳನ್ನು ರಫ್ತು ಮಾಡಲು ನೀಲಿ ನಕಾಶೆ ಸಿದ್ದಪಡಿಸಲಾಗುವುದು ಎಂದರು. ಈ ಕಾರ್ಯಗಾರದ ಮೂಲಕ ರಫ್ತು ಮಾಡುವ ಕಾರ್ಯದಲ್ಲಿ ಅಗತ್ಯವಾಗಿ ಬೇಕಿರುವ ಅನುಮತಿ ಮತ್ತಿತರ ಅವಶ್ಯಕತೆಗಳ ಕುರಿತ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು ದೊರಕಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸಂಬಂದಿಸಿದ ಸಮಸ್ಯೆಗಳನ್ನು ಸಿಂಗಲ್ ವಿಂಡೋ ವ್ಯವಸ್ಥೆ ಮೂಲಕ ಬಗೆಹರಿಸಲಾಗುತ್ತಿದೆ ಎಂದರು.

ಕೆನರಾ ಬ್ಯಾಂಕ್ ಮುಖ್ಯ ಪ್ರಬಂದಕ ರಾಮಾ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಕ್ಯಾಶ್ಯೂ ಮತ್ತು ಮೀನು ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿದ್ದು, ರಫ್ತು ಮಾಡಲು ಇತರ ಸಂಪನ್ಮೂಲಗಳೂ ಸಹ ಜಿಲ್ಲೆಯಲ್ಲಿದ್ದು ಉತ್ತಮ ರಸ್ತೆ, ಜಲ ಮತ್ತು ವಾಯು ಸಾರಿಗೆ ವ್ಯವಸ್ಥೆ ಕೂಡ ಇದ್ದು, ಉದ್ದಿಮೆದಾರರು ಇದರ ಪ್ರಯೋಜನ ಪಡೆಯಬೇಕು, ಕೆನರಾ ಬ್ಯಾಂಕ್ ವತಿಯಿಂದ ರಫ್ತು ಉದ್ದಿಮೆಗಳಿಗೆ ಎಲ್ಲಾ ರೀತಿಯ ನೆರವನ್ನೂ ನೀಡಲಾಗುವುದು ಎಂದರು.

ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಉಡುಪಿ ನೋಡೆಲ್ ಅಧಿಕಾರಿ ರಮಾನಂದ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕ್ಯಾಶ್ಯೂ ಉತ್ಪಾದಕ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವಾ, ಉಡುಪಿ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಕೃಷ್ಣರಾವ್ ಕೊಡಂಚ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಬಾಳಿಗ ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಸ್ವಾಗತಿಸಿದರು.

ಉಡುಪಿ ಪ್ರವಾಸಿಗರ ಆಕರ್ಷಣೀಯ ಜಿಲ್ಲೆಯಾಗಬೇಕು: ರಘುಪತಿ ಭಟ್

Posted On: 27-09-2021 11:18PM

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲವಾದ ಅವಕಾಶಗಳಿದ್ದು, ಇವುಗಳನ್ನು ಬಳಿಸಿಕೊಂಡು, ವಿವಿಧ ಪ್ರವಾಸಿ ಯೋಜನೆಗಳನ್ನು ಅಭಿವೃದಿಗೊಳಿಸಿ ಜಿಲ್ಲೆಯನ್ನು ಪ್ರವಾಸೀಗರ ಆಕರ್ಷಣೀಯ ತಾಣವನ್ನಾಗಿ ಮಾಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ದಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ‘ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ’ ಎಂಬ ಸಂದೇಶದೊಂದಿಗೆ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರವೂ ಸಹ ನಷ್ಠ ಅನುಭವಿಸಿದೆ ಆದರೆ ಪ್ರಸ್ತುತ ಪ್ರವಾಸಿಗರು ಪ್ರವಾಸಿ ಕ್ಷೇತ್ರಗಳಿಗೆ ಆಗಮಿಸುತ್ತಿದ್ದು, ಉಡುಪಿಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ ಮತ್ತು ಹೆಲ್ತ್ ಟೂರಿಸಂಗೆ ವಿಫುಲವಾದ ಅವಕಾಶಗಳಿವೆ, ಜಿಲ್ಲೆಯಲ್ಲಿನ ಹೊಸ ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸಲು ಇದು ಸಕಾಲ. ಇಂತಹ ತಾಣಗಳನ್ನು ಮುನ್ನೆಲೆಗೆ ತರಬೇಕಿದೆ ಎಂದರು. ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃದ್ದಿಪಡಿಸಲು ಟೂರಿಸಂ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಈ ಕಾರ್ಯಪಡೆಯ ಸಭೆಗಳನ್ನು ನಡೆಸಿ, ಸಭೆಯ ನಿರ್ಣಯಗಳ ಕುರಿತು ಸರಕಾರಕ್ಕೆ ವರದಿಯನ್ನು ಕಳುಹಿಸಬೇಕು ಎಂದು ಶಾಸಕರು ಹೇಳಿದರು. ಕಾಪು ಬೀಚ್‌ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಪ್ರವಾಸಿ ಮಿತ್ರ ಲಕ್ಷ್ಮೀ ನಾರಾಯಣ ರಾವ್ ಅವರನ್ನು ಅಭಿನಂದಿಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ವೈವಿಧ್ಯತೆಯಿಂದ ಕೂಡಿರುವ ಹಲವು ತಾಣಗಳಿವೆ, ಇವುಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ದಿಗೊಳಿಸಲು ಪ್ರಯತ್ನಿಸಲಾಗುವುದು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ಥಳೀಯ ಉತ್ಪನ್ನಗಳ ಬಗ್ಗೆ ಪ್ರದರ್ಶನ ಏರ್ಪಡಿಸಬೇಕು, ಹೋಂಸ್ಟೇ ಮೂಲಕ ಹೆಚ್ಚಿನ ಆದಾಯ ಗಳಿಸಲು ಸಾಧ್ಯವಿದ್ದು, ಹೋಂ ಸ್ಟೇ ಮಾಡಲು ಎನ್.ಓ.ಸಿ ಅಗತ್ಯವಿದ್ದು ಇದರಲ್ಲಿನ ಷರತ್ತುಗಳನ್ನು ಸರಳೀಕರಣಗೊಳಿಸಲಾಗುವುದು. ಆತಿಥ್ಯ ವ್ಯವಸ್ಥೆಗೆ ಸಂಬಂದಿಸಿದಂತೆ ಉಡುಪಿ ಪ್ರಸಿದ್ದಿ ಹೊಂದಿದ್ದು, ಈ ಕ್ಷೇತ್ರದದಲ್ಲಿನ ಪರಿಣಿತರ ಕಾರ್ಯಾಗಾರ ಏರ್ಪಡಿಸಲಾಗುವುದು ಉಡುಪಿ ಜಿಲ್ಲೆಗೆ ಆಗಮಿಸಿದ ಪ್ರವಾಸಿಗರು ಇಲ್ಲಿಂದ ತಮ್ಮ ಜೀವನದ ಅತ್ಯುತ್ತಮ ನೆನಪುಗಳೊಂದಿಗೆ ಮರಳುವಂತೆ ಪ್ರವಾಸಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಕೇರಳ ಮತ್ತು ಗೋವಾ ಮಧ್ಯೆ ಇರುವ ಕರ್ನಾಟಕದ ಕರಾವಳಿಯಲ್ಲಿ 100 ಕ್ಕೂ ಹೆಚ್ಚು ಪ್ರವಾಸಿ ತಾಣಗಳಿವೆ. ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಜೊತೆಗೆ ಇಲ್ಲಿನ ಪಾರಂಪರಿಕತೆಯನ್ನೂ ಪರಿಚಯಿಸುವ ಅಗತ್ಯವಿದೆ. ಇಲ್ಲಿನ ಕರಕುಶಲ ವಸ್ತುಗಳು ಮತ್ತು ಸಂಸ್ಕೃತಿ ಕುರಿತು ಹೋಟೆಲ್ ರೆಸಾರ್ಟ್ಗಳಲ್ಲಿ ಪ್ರದರ್ಶನ ಮಾಹಿತಿ ಇರಬೇಕು. ಪ್ರಮುಖವಾಗಿ ಎಲ್ಲಡೆ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ, ಜಿಲ್ಲಾ ಪಂಚಾಯತ್ ವತಿಯಿಂದ ಈಗಾಗಲೇ ಕಸ ಹಾಕುವ ಜಾಗವನ್ನು ಗುರುತಿಸಿ ಅಲ್ಲಿ ಸ್ವಚ್ಛತೆ ಮೂಡಿಸಲಾಗುತ್ತಿದೆ, ಜಿಲ್ಲೆಯನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲಾಗುತ್ತಿದೆ ಇದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಕೊಡುಗೆ ಅತ್ಯಗತ್ಯ ಎಂದರು.

ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ದೇಶಗಳನ್ನು ಸಂದರ್ಶಿಸಿ, ಅಲ್ಲಿನ ಪ್ರವಾಸಿ ತಾಣಗಳು ಮತ್ತು ಅವುಗಳ ಅಭಿವೃದ್ದಿ ಕುರಿತು ಪ್ರವಾಸ ಕಥನ ಉಪನ್ಯಾಸ ನೀಡಿದ ಕೆ.ಎಂ.ಸಿ. ಮಣಿಪಾಲದ ಮೂಳೆ ವಿಭಾಗದ ಮುಖ್ಯಸ್ಥ ಮತ್ತು ಉಪನ್ಯಾಸಕ ಡಾ.ಕಿರಣ್ ಕೆವಿ ಆಚಾರ್ಯ ಮಾತನಾಡಿ, ಸ್ಥಳೀಯ ಪ್ರವಾಸಿ ತಾಣಗಳನ್ನು, ವಿದೇಶಗಳ ರೀತಿಯಲ್ಲಿ, ವಿವಿಧ ಬಗೆಯ ಪ್ರವಾಸಿ ಸ್ಥಳಗಳನ್ನಾಗಿ ಅಭಿವೃದ್ದಿಗೊಳಿಸಬಹುದಾದ ಕುರಿತು ಮಾಹಿತಿ ನೀಡಿದರು. ನಗರಸಭೆ ಆಯುಕ್ತೆ ಸುಮಿತ್ರಾ ನಾಯಕ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಪೌರಾಯುಕ್ತ ಉದಯ್ ಶೆಟ್ಟಿ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮ ಭೇಟಿ - ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ

Posted On: 26-09-2021 10:50PM

ಕಾಪು : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಜೊತೆಗೆ ಮಲ್ಪೆಯ ಸುಕೇತ್ ಕುಲಾಲ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಆಸರೆ ತಂಡದ ಡಾ. ಕೀರ್ತಿ ಪಾಲನ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಆಸರೆ ತಂಡದ ಕೋಶಾಧಿಕಾರಿ ಜಗದೀಶ್ ಬಂಟಕಲ್, ಸದಸ್ಯರಾದ ಬೇಬಿ ಶೆಟ್ಟಿ, ಮೋಕ್ಷ ಪಾಲನ್, ಶ್ಲೋಕ ಪಾಲನ್ ಉಪಸ್ಥಿತರಿದ್ದರು.

ಕಾರುಣ್ಯ ವೃದ್ಧಾಶ್ರಮದ ವ್ಯವಸ್ಥಾಪಕರಾದ ಕುಮಾರ್ ಅವರು ಸುಕೇತ್ ಕುಲಾಲ್ ಅವರಿಗೆ ಶುಭ ಹಾರೈಸಿದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ

Posted On: 26-09-2021 10:35PM

ಶಿರ್ವ: ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಬಹುಮಾನ ವಿತರಣೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ ಬ್ಯಾಚಿನ ಹಳೆ ವಿದ್ಯಾರ್ಥಿನಿ ಐರಿನ್ ಮೆಂಡೋನ್ಸಾ ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್ ಪಡೆದ ಸತ್ಯ ಸುಬ್ರಹ್ಮಣ್ಯ ವಿ.ಎಸ್ (ಬಿ.ಸಿ.ಎ) 4ನೇ ರ‍್ಯಾಂಕ್, ಸ್ನಾತಕೋತ್ತರ ವಾಣಿಜ್ಯದಲ್ಲಿ 9ನೇ ರ‍್ಯಾಂಕ್ ಪಡೆದ ಲವಿಟಾ ಮೊರಾಸ್ ಹಾಗೂ ಸಾಧನೆ ಮಾಡಿದ ಅಧ್ಯಾಪಕ ವೃಂದದ ಅವರನ್ನು ಕಾಲೇಜಿನ ವತಿಯಿಂದ ಸಮ್ಮಾನಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಶ್ವನಾಥ್ ರವರು ಕಾಲೇಜಿನ ಸರ್ವತೋಮುಖ ಬೆಳವಣಿಗಾಗಿ ಸಂಘದ ವತಿಯಿಂದ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನಗದು ಮೂಲಕ ಕಾಲೇಜಿನ ಸಂಚಾಲಕರು ಹಾಗೂ ಪ್ರಾಂಶುಪಾಲರಿಗೆ ಹಸ್ತಾಂತರಿಸಿ ವಿದ್ಯೆ ಕಳಿಸಿದ ಸಂಸ್ಥೆಗಳಿಗೆ ತಾವು ಸದಾ ಋಣಿ, ಕಾಲೇಜಿನ ಕೀರ್ತಿ ಬೆಳೆಸಿದ ರ‍್ಯಾಂಕ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಇನ್ನು ತಮ್ಮಿಂದ ಆಗುವಂತಹ ಒಳ್ಳೆಯ ಕಾರ್ಯಕ್ರಮಗಳನ್ನು ಆಯೋಜಿಸಲು ಕಾಲೇಜಿನ ವತಿಯಿಂದ ಅನುವುಮಾಡಿಕೊಡಬೇಕು ಎಂದು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೇನ್ನಿಸ್ ಅಲೆಕ್ಸಾಂಡರ್ ಡೇಸರವರು ನವೀಕೃತಗೊಂಡ ಸುಸಜ್ಜಿತ ಕಂಪ್ಯೂಟರುಗಳನ್ನು ಉದ್ಘಾಟಿಸಿ ಆಶೀರ್ವದಿಸಿದ್ದರು. ಕಾಲೇಜಿನ ದೊಡ್ಡ ಆಸ್ತಿ ಎಂದರೆ ಅದು ವಿದ್ಯಾರ್ಥಿಗಳೇ. ಎಲ್ಲಾ ವಿದ್ಯಾರ್ಥಿಗಳು ಅವರವರ ವಿವಿಧ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿರುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಬೆಳವಣಿಗೆಗಳಲ್ಲಿ ಶಿಕ್ಷಕರು, ಹೆತ್ತವರು ಹಾಗೂ ಪೋಷಕರ ಪಾತ್ರ ಮಹತ್ವದಾಗಿದೆ. ಹಳೆವಿದ್ಯಾರ್ಥಿ ಸಂಘ ವತಿಯಿಂದ ಕಲ್ಪಿಸುವ ಪ್ರತಿಯೊಂದು ಕೊಡುಗೆಯು ಶಿಕ್ಷಣ ಸಂಸ್ಥೆಯ ಬೆಳವಣಿಗೆ ಹಾಗೂ ಅವರ ಪ್ರೀತಿಪಾತ್ರ ದೊಡ್ಡದಾಗಿದೆ, ಎಲ್ಲರಿಗೂ ಒಳಿತಾಗಲಿ ಈ ಕೋವಿಡ್ ಅಂತ ಸಂಕಷ್ಟಗಳು ದೂರವಾಗಿ ಎಲ್ಲರೂ ನೆಮ್ಮದಿಯಿಂದ ಸುಖ ಜೀವನ ನಡೆಸಲಿ ಎಂದು ಹಾರೈಸಿದರು.

ಕಾಲೇಜಿನ ವಾರ್ಷಿಕ ಚಟುವಟಿಕೆಗಳನ್ನು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಾಚಿಸಿದರು. ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಬಗ್ಗೆ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಜಗದೀಶ್ ಆಚಾರ್ಯ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸನ್ಮಾನ ಪಡೆದ ವಿದ್ಯಾರ್ಥಿಗಳು ಮಾತನಾಡಿದರು. ಶೈಕ್ಷಣಿಕ ಬಹುಮಾನಗಳ ಪಟ್ಟಿಯನ್ನು ಶ್ರೀ ವಿಠಲ್ ನಾಯಕ್ ರವರು ವಾಚಿಸಿದರು. ದತ್ತಿ ಬಹುಮಾನಗಳ ಪಟ್ಟಿಯನ್ನು ದಿವ್ಯಶ್ರೀ ರವರು ವಾಚಿಸಿದರು.ಕ್ರೀಡೆ ಮತ್ತು ಆಟಗಳ ಬಹುಮಾನಗಳ ಪಟ್ಟಿಯನ್ನು ಜೆಫ್ ಡಿಸೋಜಾ ವಾಚಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಮುಖ್ಯ ಅತಿಥಿಗಳು ಹಾಗೂ ಅಧ್ಯಕ್ಷರು ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿ ಅಧೀಕ್ಷಕಿ ಡೊರಿನ್ ಡಿ'ಸಿಲ್ವ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಜೆಸಿಂತಾ ಡಿಸೋಜ, ಆಡಳಿತ ಮಂಡಳಿಯ ಸದಸ್ಯ ಲೀನಾ ಮಚಾದೊ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶೈಲ ವಿಯೋಲ ಕ್ಯಾಸ್ಟಲಿನೋ ಹೆತ್ತವರು ಹಾಗೂ ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಕು.ಯಶೋದಾ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ನಾಯಕಿ ದಾಕ್ಷಾಯಿಣಿ ವಂದಿಸಿದರು. ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.