Updated News From Kaup

ಹಿರಿಯ ನಾಗರಿಕರ ಕ್ರೀಡಾ ಪ್ರವೃತ್ತಿ ಯುವ ಜನತೆಗೆ ಸ್ಪೂರ್ತಿಯಾಗಬೇಕು- ಜಿಲ್ಲಾಧಿಕಾರಿ ಕೂರ್ಮಾರಾವ್

Posted On: 29-09-2021 08:32PM

ಉಡುಪಿ : ಹಿರಿಯ ನಾಗರಿಕರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು, ವಯೋಮಾನಕ್ಕೆ ತಕ್ಕ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಯುವಕರಿಗೆ ಸ್ಪೂರ್ತಿಯಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ, ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮದಲ್ಲಿ ವಿಕೆಟ್ಗೆ ರಿಂಗ್ ಹಾಕುವ ಮೂಲಕ ಚಾಲನೆ ನೀಡಿದರು.

ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಉಚಿತ ಮಧುಮೇಹ ಶಿಬಿರ

Posted On: 29-09-2021 08:26PM

ಉಡುಪಿ : ರೋಟರಿ ಕ್ಲಬ್ ಸೈಬ್ರಕಟ್ಟೆ ಯಿಂದ ,ರೋಟರಿ ಇಂಡಿಯಾ ಮತ್ತು ಆರ್ ಎಸ್ ಎಸ್ ಡಿ ಐ ಯೋಜನೆಯಾದ ಒಂದೇ ದಿನದಲ್ಲಿ ಮಿಲಿಯನ್ ಬ್ಲಡ್ ಶುಗರ್ ಟೆಸ್ಟ್ ಮಾಡುವ ಉದ್ದೇಶದಿಂದ ಇಡೀ ಭಾರತದಲ್ಲಿ ಶಿಬಿರ ಹಮ್ಮಿಕೊಂಡಿದ್ದು ಸೈಬ್ರಕಟ್ಟೆ ರೋಟರಿಯ ಆರೋಗ್ಯ ಕೇಂದ್ರ ದಲ್ಲಿ ಹಮ್ಮಿಕೊಂಡ ಉಚಿತ ಮಧುಮೇಹ ಶಿಬಿರವನ್ನು ರೋ ವಲಯ 3 ರ ಸಹಾಯಕ ಗವರ್ನರ್ ಅವರು ದೀಪ ಬೇಳಗಿಸುದರ ಮೂಲಕ ಉದ್ಘಾಟಿಸಿದರು.

ಅಕ್ಟೋಬರ್ 2 : ಶಿರ್ವದಲ್ಲಿ ಸಂಜೀವಿನಿ ಸಂತೆ

Posted On: 29-09-2021 02:45PM

ಕಾಪು : ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರ ಆದೇಶದಂತೆ ಸಂಜೀವಿನಿ ಒಕ್ಕೂಟಗಳ ಸಂಜೀವಿನಿ ಸಂತೆಯನ್ನು ನಡೆಸುವಂತೆ ನೀಡಿರುವ ಆದೇಶದ ಹಿನ್ನಲೆಯಲ್ಲಿ ಅಕ್ಟೋಬರ್ 2 ರಂದು ಶಿರ್ವ ಪಂಚಾಯತ್ ವಠಾರದಲ್ಲಿ ಸಂಜೀವಿನಿ ಸಂತೆಗೆ ಚಾಲನೆ ನೀಡಲಾಗುವುದು.

ಕಲ್ಯಾಣಪುರ ರೋಟರಿ ಕ್ಲಬ್ ಪ್ರಾಯೋಜಿತ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ

Posted On: 29-09-2021 02:41PM

ಉಡುಪಿ : ಡಾ.ಟಿ.ಎಂ.ಎ ಪೈ. ಹೈಸ್ಕೂಲು ಕಲ್ಯಾಣಪುರದ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭವು ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾದ ಕುಮಾರಿ. ಪ್ರಜ್ಞಾ .ಸಿ.ದೇವಾಡಿಗ, ಕಾರ್ಯದರ್ಶಿಯಾದ ಕುಮಾರಿ ನಂದಿತಾ, ಹಾಗೂ ದಂಡಪಾಣಿಯಾದ ಕುಮಾರಿ ನಿಖಿತಾ ರವರಿಗೆ ರೋಟರಿ ಕ್ಲಬ್ಬಿನ ಅಧ್ಯಕರಾದ ರೊಟೇರಿಯನ್ ಶಂಭು ಶಂಕರ್ ರವರು ಪದಪ್ರದಾನ ನೆರವೇರಿಸಿದರು.

ಉಡುಪಿ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮಲ್ಪೆ ಅಭಿವೃದ್ಧಿ ಸಮಿತಿ ಸಭೆ

Posted On: 28-09-2021 08:22PM

ಉಡುಪಿ : ಮಲ್ಪೆ ಬೀಚ್ಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ ಅವರುಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು ಅವರು ಇಂದು ನಗರದ ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬೀಚ್ಗೆ ದೇಶ ವಿದೇಶಗಳಿಂದ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು , ಪ್ರವಾಸಿಗರಿಗೆ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು , ವಾಹನಗಳ ಸುಗಮ ಸಂಚಾರಕ್ಕೆ ಉತ್ತಮ ರಸ್ತೆ , ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಕಲ್ಪಿಸಿ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಿ ಆರ್ ಝಡ್ ಅಧಿಸೂಚನೆ ೨೦೧೯ ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ : ಜಿಲ್ಲಾಧಿಕಾರಿ ಕೂರ್ಮಾರಾವ್

Posted On: 28-09-2021 08:10PM

ಉಡುಪಿ : ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ ೨೦೧೯ರಲ್ಲಿ ಅಭಿವೃಧ್ದಿ ಚಟುವಟಿಕೆಗಳನ್ನು ಕೈಗೊಳ್ಳಲು ಹೆಚ್ಚಿನ ರಿಯಾಯಿತಿಗಳು ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ ೨೦೧೯ರ ಪ್ರಕಾರ ತಯಾರಿಸಿದ, ಕರಡು ಕರಾವಳಿ ವಲಯ ನಿರ್ವಹಣಾ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೇವಾ ಮನೋಭಾವದಿಂದ ಗೋಶಾಲೆ ನಿರ್ವಹಣೆ ಮಾಡಬೇಕು - ಜಿಲ್ಲಾಧಿಕಾರಿ ಕೂರ್ಮಾರಾವ್

Posted On: 28-09-2021 08:00PM

ಉಡುಪಿ : ಗೋಶಾಲೆಗಳಲ್ಲಿನ ಗೋವುಗಳ ಪಾಲನೆಯನ್ನು ಸೇವಾ ಮನೋಭಾವದಿಂದ ಯಾವುದೇ ಪ್ರತಿಫಲಗಳನ್ನು ಬಯಸದೇ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು. ಅವರು ಸೋಮವಾರ ತಮ್ಮ ಕಛೇರಿಯಲ್ಲಿ ನಡೆದ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಸರಕಾರ ಜಾನುವಾರು ಹತ್ಯ ಪ್ರತಿಬಂಧಕ ಕಾಯ್ದೆ ಹಾಗೂ ಸಂರಕ್ಷಣೆ ಕಾನೂನು ಜಾರಿಗೆ ತಂದಿದೆ. ಗೋರಕ್ಷಣೆಗಾಗಿ ಸರಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು ಮುಂದಾಗಿದ್ದು ಪ್ರತಿ ಜಿಲ್ಲೆಗೆ ಮೊದಲನೇ ಹಂತದಲ್ಲಿ ೨೪ ಲಕ್ಷ ರೂಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಪಡುಬಿದ್ರಿ : ರೋಟರಿ ಕ್ಲಬ್ ವತಿಯಿಂದ ಸಾಕ್ಷರತಾ ದಿನಾಚರಣೆ

Posted On: 28-09-2021 07:51PM

ಪಡುಬಿದ್ರಿ : ನಮ್ಮ ದೇಶವು ಶೇಕಾಡ 69 ರಷ್ಟು ಸಾಕ್ಷರತೆ ಹೊಂದಿದ್ದು , ದೇಶದ ಪ್ರತಿಯೊಬ್ಬ ಪ್ರಜೆ ಸಾಕ್ಷರತೆ ಹೊಂದಿದ್ದಲ್ಲಿ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಸರಕಾರ ಇನ್ನಷ್ಟು ಸಾಕ್ಷರತೆಯ ಬಗ್ಗೆ ಜಾೃಗತಿ ಹಾಗು ಪ್ರೇರೇಪಿಸುವತಂಹ ಕಾರ್ಯಕ್ರಮ ಗಳನ್ನು ಹಮ್ಮಿಕೂಳ್ಳಬೇಕಾದ ಅಗತ್ಯ ವಿದೆ ಎಂದು ಅದಮಾರು ಪೂರ್ಣಪ್ರಜ್ಞಾ ಶಾಲಾ ಶಿಕ್ಷಕಿ ಯಶೋಧ ಪಡುಬಿದ್ರಿಯವರು ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ರೋಟರಿ ಕಚೇರಿಯಲ್ಲಿ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಮುಂಡ್ಕೂರು : ಜೇಸೀ ಸಪ್ತಾಹ -2021; ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 5 ರವರಗೆ

Posted On: 28-09-2021 07:42PM

ಕಾರ್ಕಳ : ಜೇಸಿಐ ಮುಂಡ್ಕೂರು ಭಾರ್ಗವ, ಜೇಸಿರೇಟ್ ಮತ್ತು ಜೂನಿಯರ್ ಜೇಸೀ ವಿಭಾಗ ಪ್ರಾಂತ್ಯ -E, ವಲಯ XV 23 ರ ಸಂಭ್ರಮ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 5 ರವರಗೆ ನಡೆಯಲಿದೆ.

ನಿಧನ : ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ

Posted On: 28-09-2021 02:24PM

ಕಾಪು : ಇಲ್ಲಿನ ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ ಅನಾರೋಗ್ಯದಿಂದ ಇಂದು ಮಧ್ಯಾಹ್ನ ದೈವಾದೀನರಾಗಿದ್ದಾರೆ.