Updated News From Kaup

ಕಾಪು : ಶ್ರೀ ನಾರಾಯಣಗುರು ಟ್ರೋಫಿ - ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ

Posted On: 07-01-2025 05:54PM

ಕಾಪು: ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ 25ನೇ ಶ್ರೀ ನಾರಾಯಣಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಿಭಾಗದ ಚೆಸ್ ಸ್ಪರ್ಧೆ ನೆರವೇರಿತು.

ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್, ಬೆಂದೂರು ರೋಡ್ ಇಲ್ಲಿನ ಹೃದ್ರೋಗ ತಜ್ಞರಾದ ಡಾ. ಮುಕುಂದ ಕುಂಬಳೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭ ಕಾಪು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ, ಮಂಗಳೂರು ಸಾಮ್ರಾಟ್ ಚೆಸ್ ಯುನಿಟ್ ಕಾರ್ಯದರ್ಶಿ ನಾಗೇಶ್ ಕಾರಂತ್, SNG ಕೋಚಿಂಗ್ ಸೆಂಟರ್ ಹಳೆ ವಿದ್ಯಾರ್ಥಿನಿ ಕು. ನಮೃತಾ ಎಸ್. ಶೆಟ್ಟಿ, ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಧಾಕರ್ ಸಾಲ್ಯಾನ್ ಕಾಪು ಗುರಿಕಾರರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ಸಾಲ್ಯಾನ್ ಕಾರ್ಯದರ್ಶಿ ಬಿಲ್ಲವರ ಸಹಾಯಕರ ಸಂಘ (ರಿ.) ಕಾಪು, ಡಾ. ಅಜಿತ್ ಶೆಣೈ ಮಹಾಲಕ್ಷ್ಮೀ ಕಣ್ಣಿನ ಆಸ್ಪತ್ರೆ ಉಡುಪಿ, ಶ್ರೀ ಲಕ್ಷ್ಮೀ ನಾರಾಯಣ ಆಚಾರ್ಯ ಉಡುಪಿ ಮುಖ್ಯ ಸಲಹೆಗಾರರು ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ನಾಗೇಶ್ ಕಾರಂತ್ ಪಾಂಗಳ ಟೂರ್ನಮೆಂಟ್ ಡೈರೆಕ್ಟರ್, ಶ್ರೀ ಪ್ರಶಾಂತ್ ಎನ್ ಹಾಗೂ ಶಶೀಂದ್ರ ಎಮ್ ಮಾಸ್ಟರ್ ಚೆಸ್ ಅಕಾಡೆಮಿ ಬದಿಯಡ್ಕ, ಉಮಾನಾಥ ಕಾಪು ಅಧ್ಯಕ್ಷರು ಶ್ರೀ ನಾರಾಯಣ ಗುರು ಸ್ಪೋಟ್ಸ್ & ಎಜುಕೇಶನ್ ಟ್ರಸ್ಟ್ ಬಾಬು ಜೆ ಪೂಜಾರಿ ಉಪ್ಪುಂದ ಉಪಸ್ಥಿತರಿದ್ದರು. ಚಾಂಪಿಯನ್ ಆಗಿ ರುದ್ರ ರಾಜೀವ್ ಮಂಗಳೂರು, ರನ್ನರ್ ಆಫ್ ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ನ ವಿದ್ಯಾರ್ಥಿ ಲೀಲಾ ಜೈ ಕೃಷ್ಣ, ತೃತೀಯ ಚೆಸ್ ಕೋಚ್ ಹರೀಶ್ ಕುಮಾರ್ ಉಡುಪಿ ಪ್ರಶಸ್ತಿ ಗಳಿಸಿದರು.

ಒಟ್ಟು 115 ಬಹುಮಾನ ವಿತರಿಸಲಾಯಿತು. ಫಿಡೇ ಆರ್ಬಿಟರ್ ಕೋಚ್, ಸ್ಥಾಪಕರಾದ ಸಾಕ್ಷಾತ್ ಯು.ಕೆ. ಸ್ವಾಗತಿಸಿದರು. ಫಿಡೇ ಆರ್ಬಿಟರ್ ಕೋಚ್ ನಿರ್ದೇಶಕಿ ಸೌಂದರ್ಯ ಯು.ಕೆ. ಕಾರ್ಯಕ್ರಮ ನಿರೂಪಿಸಿದರು. ಉಮಾನಾಥ ವಂದಿಸಿದರು.

ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆಯಲ್ಲಿ ಸಾಮಾನ್ಯ ಸದಸ್ಯರಿಗೂ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Posted On: 06-01-2025 05:12PM

ಪಡುಬಿದ್ರಿ : ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಚುನಾವಣೆಯಲ್ಲಿ ಯಾವುದೇ ರೀತಿಯ ‌ಅಕ್ರಮ ಮತದಾನ ನಡೆಯದಂತೆ ಪಾರದರ್ಶಕ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸುವಂತೆ ಹಾಗು ಆಡಳಿತ ಮಂಡಳಿಯು ದುರುದ್ದೇಶ ಪೂರಕವಾಗಿ, ಸ್ವಾರ್ಥಕ್ಕಾಗಿ ನಿಗದಿ ಪಡಿಸಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸದಸ್ಯನು ರೂ ರೂ.15,000 ಷೇರು ಮೊಬಲಗನ್ನು ಹೊಂದಿರ ಬೇಕೇಂಬ ನಿಯಮವನ್ನು ರದ್ದು ಪಡಿಸಿ , ಸರಕಾರದ ನಿರ್ದೇಶನದಂತೆ ಕನಿಷ್ಠ ರೂ. 500 ಷೇರು ಮೊತ್ತ ಹೊಂದಿರುವ ಸಾಮಾನ್ಯ ಸದಸ್ಯರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೂಂಡುವಂತೆ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ವತಿಯಿಂದ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಯವರು ಈ ಬಗ್ಗೆ ಸೂಕ್ತ ಕ್ರಮ ಕೃೆಗೊಳ್ಳುವುದಕ್ಕಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಶೇಖರ್ ಹೆಜ್ಮಾಡಿ, ಗೌರವ ‌ಸಲಹೆಗಾರ ದಿನೇಶ್ ಕೋಟ್ಯಾನ್ ಪಲಿಮಾರು, ಉಪಾಧ್ಯಕ್ಷರಾದ ಮೈಯದ್ದಿ ಕನ್ನಂಗಾರು, ರಚನ್ ಸಾಲ್ಯಾನ್, ಲೀಲಾಧರ್.ಪಿ., ರೋಶನ್ ಕಾಂಚನ್ ಹೆಜ್ಮಾಡಿ, ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ರತ್ನಾಕರ್ ಕೋಟ್ಯಾನ್ ಉಪಸ್ಥಿತರಿದ್ದರು.

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೃಷ್ಣ ಮತ್ತು ಧನ್ತಿ

Posted On: 05-01-2025 07:20PM

ಕಾಪು : ಬೈಂದೂರಿನಲ್ಲಿ ಜರಗಿದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರ್ ಇಲ್ಲಿನ ವಿದ್ಯಾರ್ಥಿ ಕೃಷ್ಣ ಇವರು ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಕುಮಾರಿ ಧನ್ತಿ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ.

ವಿದ್ಯಾರ್ಥಿ ಕೃಷ್ಣ, ಬೆಂಗಳೂರಿನ ರಮೇಶ್ ಆಚಾರ್ ಮತ್ತು ಕವಿತಾ ಎಸ್ ಆಚಾರ್ ಇವರ ಮಗನಾಗಿದ್ದು, 9ನೇ ತರಗತಿ ವಿದ್ಯಾರ್ಥಿ.

ಕುಮಾರಿ ಧನ್ತಿ, ಬೋಳ ಪದವಿನ ಸುರೇಶ್ ಮೂಲ್ಯ ಮತ್ತು ಅಮಿತಾ ದಂಪತಿಗಳ ಮಗಳು. 7ನೇ ತರಗತಿಯ ವಿದ್ಯಾರ್ಥಿನಿ.

ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟೀಯ ಪ್ರಶಸ್ತಿ ಪುರಸ್ಕೃತರಾದ ಡಾ.ಯು.ಎಂ ಫಾರೂಕ್ ಚಂದ್ರನಗರ

Posted On: 05-01-2025 06:56PM

ಕಾಪು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ವಿಶ್ವ ಮಾನವ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರ ಸಮಾಜ ಸೇವೆಗಾಗಿ ಕೊಡಲ್ಪಡುವ ಡಾ||ಎ.ಪಿ.ಜೆ. ಅಬ್ದುಲ್ ಕಲಾಂ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರಿನ ಕಲಾಗ್ರಾಮ ಜ್ಞಾನಭಾರತಿ ಯೂನಿವರ್ಸಿಟಿ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಚಿತ್ರದುರ್ಗ, ಕರ್ನಾಟಕ ಸರಕಾರದ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎನ್. ಕೆ. ಸುಧೀಂದ್ರ, ಬಿ.ಎಂ.ಟಿ.ಎಫ್ ರೆವಿನ್ಯೂ ತಹಸೀಲ್ದಾರ್ ದೀಪಾ ಪ್ರಭಾಕರ್ ಮೈಶಾಲೆ, ಲೋಕಾಯುಕ್ತ ಸಿಪಿಐ ಹಾಲಪ್ಪ ವಾಯ್ ಭಾಲದಂಡಿ, ಬೆಳಗಾವಿ ವಿಜಯಕಾಂತ್ ಡೈರಿ ಮತ್ತು ಆಹಾರ ಉತ್ಪನ್ನಗಳ ಉಪಾಧ್ಯಕ್ಷರು ನಿವೇದಿತಾ ಶಿವಕಾಂತ್ ಸಿದ್ನಾಳ್, ಹೈಕೋರ್ಟ್ ವಕೀಲರಾದ ಅನಂತ್ ನಾಯ್ಕ್, ಕೆ.ಪಿ.ಸಿ.ಸಿ ಸದಸ್ಯರಾದ ಅರ್ಜುನ್ ನಾಯಕ್ ವಾಡಿ, ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಕು| ನಿತ್ಯ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆ : ಕಂಪ್ಯೂಟರ್, ಎಲ್.ಕೆ.ಜಿ, ಯು.ಕೆ.ಜಿ ತರಗತಿ ಕೊಠಡಿಗಳ ಉದ್ಘಾಟನೆ

Posted On: 05-01-2025 05:16PM

ಕಾಪು : ಆನೆಗುಂದಿ ಸರಸ್ವತಿ ಪೀಠ ಪಡುಕುತ್ಯಾರು ಅಸ್ಸೆಟ್ ಅಧೀನಕ್ಕೆ ಒಳಪಟ್ಟ ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ ನೂತನ ಕಂಪ್ಯೂಟರ್ ವಿಭಾಗ, ಎಲ್ ಕೆ ಜಿ ಹಾಗೂ ಯು ಕೆ ಜಿ ಕೊಠಡಿಗಳ ಉದ್ಘಾಟನೆಯನ್ನು ಪಡುಕುತ್ಯಾರು ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭ ಶ್ರೀಗಳು ವಿದ್ಯಾರ್ಥಿಗಳ ಹಸ್ತಪ್ರತಿ ಚೈತನ್ಯವಾಣಿ ಇದರ ದ್ವಿತೀಯ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಸಂಪಾದಕ ಮಂಡಳಿಯ ಶಿಕ್ಷಕಿ ಅನಿತಾ ಮತ್ತು ಅಮಿತಾ ಸಹಕರಿಸಿದರು.

ಅಸ್ಸೆಟ್ ಅಧ್ಯಕ್ಷರಾದ ಬಿ ಸೂರ್ಯಕುಮಾರ ಹಳೆಯಂಗಡಿ, ಗೌರವಾಧ್ಯಕ್ಷ ಬಿ. ಮೋಹನ್ ಕುಮಾರ್ ಮಂಗಳೂರು, ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ ಶಿರ್ವ, ಜನಾರ್ದನ ಆಚಾರ್ಯ ಬಜಕೂಡ್ಲು, ಆನೆಗುಂದಿ ಮೂಲ ಮಠದ ಅಧ್ಯಕ್ಷರಾದ ದಿನೇಶ್ ಆಚಾರ್ಯ ಪಡುಬಿದ್ರೆ,ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿತಂತ್ರಿ, ಮಾತೃ ಮಂಡಳಿಯ ಅಧ್ಯಕ್ಷೆ ಶೋಭಾ ಆಚಾರ್ಯ, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ, ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ಅಸೆಟ್ ಕಾರ್ಯದರ್ಶಿ ಗುರುರಾಜ. ಕೆ ಸ್ವಾಗತಿಸಿ, ಶಾಲಾ ಪ್ರಾಂಶುಪಾಲರಾದ ಸಂಗೀತ ರಾವ್ ವಂದಿಸಿದರು. ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

8 ಭಾಷೆಗಳಲ್ಲಿ 'ಸುಳ್ಳಿ' ಆಲ್ಬಂ ಸಾಂಗ್ ಬಿಡುಗಡೆ

Posted On: 05-01-2025 07:30AM

ಕಾಪು : ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ನಲ್ಲಿ ಶುಭ್ ದಾಸ್ ಶೆಟ್ಟಿ ನಿರ್ಮಾಣದ, ವಿಘ್ನೇಶ್ ದೇವನಾಥನ್ ಮತ್ತು ಶುಭ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ‌ದ‌ 'ಸುಳ್ಳಿ' ಆಲ್ಬಂ ಸಾಂಗ್ ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ.

ವಿಭಿನ್ನ ರೀತಿಯ ಆಲ್ಬಮ್ ಸಾಂಗ್ ಇದಾಗಿದ್ದು, 8 ಭಾಷೆಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ.

ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಲು ಲಭ್ಯವಿದೆ.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Posted On: 05-01-2025 06:58AM

ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಮಾಜಿ ನಾಗರಾಭಿವೃದ್ಧಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫರಾಸ್ಸಿನ ಮೇರೆಗೆ ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿರುವ ವಿಕ್ರಂ ಕಾಪುರವರನ್ನು ಅಧ್ಯಕ್ಷರನ್ನಾಗಿ, ಮೊಹಮ್ಮದ್ ಸಾದಿಕ್, ಲಕ್ಷ್ಮೀಶ ತಂತ್ರಿ ಮತ್ತು ಹರೀಶ್ ನಾಯಕ್ ರವರನ್ನು ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.

ನೇಮಕದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರ ಪ್ರಕಟಣೆಯು ತಿಳಿಸಿದೆ.

ನೂತನ ಕಾಪು ನಗರ ಯೋಜನಾ ಪ್ರಾಧಿಕಾರದ ಸಮಿತಿಯ ಅಧಿಕಾರ ಸ್ವೀಕಾರ ಸಮಾರಂಭವು ಜ. 6, ಸೋಮವಾರದಂದು ಪೂರ್ವಹ್ನ ಗಂಟೆ 10ಕ್ಕೆ ಕಾಪು ಪುರಸಭೆ ಕಟ್ಟಡದಲ್ಲಿರುವ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಜರುಗಲಿದೆ.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪೂರ್ವಭಾವಿ ಸಮಾಲೋಚನಾ ಸಭೆ

Posted On: 04-01-2025 06:25PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭ ‌ವಿವಿಧ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರ ಕಾರ್ಯ ನಡೆದು ಬಂದ ದಾರಿ, ವಿವಿಧ ವ್ಯವಸ್ಥೆಗಳ ಜೋಡಣೆ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಮಂದಿ ಭಕ್ತರು, ಮುಖ್ಯಮಂತ್ರಿಗಳಾದಿಯಾಗಿ ರಾಜ್ಯ ಮತ್ತು ಕೇಂದ್ರ ಸಚಿವರುಗಳ ಸಹಿತ ವಿವಿಧ ಗಣ್ಯರು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಸುಸಜ್ಜಿತ ವ್ಯವಸ್ಥೆಗಳ ಜೋಡಣೆ ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಪುರಸಭೆ ಸಹಿತ ವಿವಿಧ ಇಲಾಖೆಗಳು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯೊಂದಿಗೆ ಕೈ ಜೋಡಿಸಲಿದೆ ಎಂದರು. ಪೊಲೀಸ್ ಇಲಾಖೆಯು ಪೂರ್ಣ ಸಹಕಾರ ನೀಡಲಿದೆ ಎಂದರು.

ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪರಮೇಶ್ವರ ಎ. ಹೆಗಡೆ, ಎಸ್. ಟಿ. ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಮ್ಯಾನೇಜರ್, ತಹಶೀಲ್ದಾರ್ ಡಾ| ಪ್ರತಿಭಾ ಆರ್., ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಸಿ., ವೃತ್ತ ನಿರೀಕ್ಷಕಿ ಜಯಶ್ರೀ ಎಸ್. ಮಾನೆ, ಕಾಪು ಎಸ್ಸೈ ತೇಜಸ್ವಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ‌ ಆರ್. ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ, ಸಮಿತಿ ಉಪಾಧ್ಯಕ್ಷರಾದ ಮನೋಹರ ಶೆಟ್ಟಿ, ಮಾಧವ ಆರ್. ಪಾಲನ್, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಜಯಲಕ್ಷ್ಮೀ ಶೆಟ್ಟಿ, ಚರಿತಾ ದೇವಾಡಿಗ, ಮನೋಹರ ರಾವ್ ಮೊದಲಾದವರು ಉಪಸ್ಥಿತರಿದ್ದರು.

ದಿವ್ಯಾಂಗ ಬಾಲಕನ ಮನೆ ಬಾಗಿಲಿಗೆ ಬಂದು ಅಂಗವಿಕಲ ವೇತನ ಮಂಜೂರು ಮಾಡಿದ ತಹಶಿಲ್ದಾರ್ ಡಾ.ಪ್ರತಿಭಾ ಆರ್.

Posted On: 03-01-2025 07:02PM

ಕಾಪು : ಕೆಲ ದಿನಗಳ ಹಿಂದೆ ಫಲಿಮಾರು ಗ್ರಾಮದ ಅಡ್ವೆಯ ದಿವ್ಯಾಂಗ ಬಾಲಕನಿಗೆ ಮನೆ ಬಾಗಿಲಿಗೆ ಬಂದು ಆಧಾರ್ ಮಾಡಿಸಿಕೊಟ್ಟಿದ್ದ ತಹಶಿಲ್ದಾರ್ ಡಾ. ಪ್ರತಿಭಾರವರು ಗುರುವಾರ ಅದೇ ಬಾಲಕನ ಮನೆ ಬಾಗಿಲಿಗೆ ಬಂದು ಅಂಗವಿಕಲ ವೇತನವನ್ನೂ ಮಂಜೂರು ಮಾಡಿ ಮಾನವೀಯತೆ ಮೆರೆದಿದ್ದಾರೆ.

ಹದಿನಾಲ್ಕು ವರ್ಷದ ಕೀರ್ತನ್ ರವರಿಗೆ ಅಂಗವೈಕಲ್ಯದಿಂದ ಸದಾ ಕಾಲ ಹಾಸಿಗೆಯಲ್ಲಿಯೇ ಇರಬೇಕಾದ ಪರಿಸ್ಥಿತಿ. ತಾಯಿ ಮಮತಾರವರೇ ಎಲ್ಲಾ ಸೇವೆ ಮಾಡುತ್ತಿದ್ದು, ಆಧಾರ್ ಕಾರ್ಡ್ ಇಲ್ಲದೇ ಅಂಗವಿಕಲ ವೇತನವನ್ನು ಪಡೆಯಲು ಸಾಧ್ಯವಾಗಿರಲಿಲ್ಲ. ಆಗ ಸ್ವತಃ ತಹಶಿಲ್ದಾರ್ ಇಡೀ ಆಧಾರ್ ಕೇಂದ್ರವನ್ನೇ ಬಾಲಕನ ಮನೆ ಬಾಗಿಲಿಗೆ ಕೊಂಡೊಯ್ದು ಆಧಾರ್ ಕಾರ್ಡ್ ಮಾಡಿಸಿದ್ದರು. ಶೀಘ್ರವಾಗಿ ಅಂಗವಿಕಲ ಕಾರ್ಡ್ ಬರುವಂತೆ ಮಾಡಿ ಅಂಗವಿಕಲ ವೇತನವನ್ನು ಸಹ ಮಂಜೂರು ಮಾಡಿರುತ್ತಾರೆ.

ಈ ಬಗ್ಗೆ ಬಾಲಕನ ತಾಯಿ ಮಮತಾ ಮತ್ತು ತಂದೆ ಗುರುಸ್ವಾಮಿ ಪ್ರತಿಕ್ರಿಯಿಸಿ, ತಹಶಿಲ್ದಾರ್ ಪ್ರತಿಭಾ ಮೇಡಂರವರ ದೆಸೆಯಿಂದಾಗಿ ನಮಗಿಂದು ಈ ಪಿಂಚಣಿ ದೊರಕಲು ಸಾಧ್ಯವಾಗಿದೆ. ಅಂದು ಮನೆಗೆ ಆಧಾರ್ ಕೇಂದ್ರ ತಂದು ಆಧಾರ್ ಕಾರ್ಡ್ ಮಾಡಿಸಿಕೊಟ್ಟು ಹೋಗಿದ್ದರು. ಇಂದು ಮನೆ ಬಾಗಿಲಿಗೆ ಬಂದು ಪಿಂಚಣಿ ಮಂಜೂರಾತಿ ಪತ್ರ ನೀಡಿದ್ದಾರೆ. ಅವರಿಲ್ಲದೇ ಇದ್ದಿದ್ದರೆ ನಾವು ಜೀವನವಿಡೀ ಆಧಾರ್ ಕಾರ್ಡ್ ಮಾಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವರಿಂದಾಗಿ ನಮ್ಮ ಬಾಳಿನಲ್ಲಿ ಬೆಳಕು ಕಂಡಿದೆ. ಇಂತಹ ಮಾನವೀಯತೆಯ ಅಧಿಕಾರಿಗಳು ವಿರಳ ಎಂದರು. ಈ ಬಗ್ಗೆ ತಹಶಿಲ್ದಾರ್ ಪ್ರತಿಭಾ ಆರ್ ಮಾತನಾಡಿ, ಸರಕಾರದ ಸೌಲಭ್ಯಗಳನ್ನು ನಿಜವಾದ ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಅಂಗವಿಕಲ ವೇತನ ಮಂಜೂರು ಮಾಡಲು ಆಧಾರ್ ಕಾರ್ಡ್ ಅವಶ್ಯಕತೆ ಇತ್ತು. ವೈದ್ಯರಿಂದ ಅಂಗವಿಕಲ ಕಾರ್ಡ್ ನ ಅವಶ್ಯಕತೆ ಇತ್ತು. ಇವುಗಳನ್ನು ನಾನೇ ಸ್ವತಃ ಮುತುವರ್ಜಿ ವಹಿಸಿ ಮಾಡಿಸಿಕೊಟ್ಟಿರುತ್ತೇನೆ. ಇಂದು ಅಂಗವಿಕಲ ವೇತನವನ್ನು ಸಹ ಮಂಜೂರು ಮಾಡಿರುತ್ತೇನೆ. ಸರ್ಕಾರದ ಸೌಲಭ್ಯಗಳನ್ನು ದೊರಕಿಸುವಲ್ಲಿ ಅಧಿಕಾರಿಗಳು ಮಾನವೀಯ ಸ್ಪರ್ಶದೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಗ್ರಾಮ ಒನ್ ಸೆಂಟರ್ ನಡೆಸುತ್ತಿರುವ ಇಸ್ಮಾಯಿಲ್ ಫಲಿಮಾರು ಇವರು ತಹಶಿಲ್ದಾರ್ ಪ್ರತಿಭಾರವರ ಗಮನಕ್ಕೆ ತಂದು ಅಗತ್ಯ ನೆರವು ಸಿಗಲು ನೆರವಾಗಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಸುನಿಲ್ ಉಪಸ್ಥಿತರಿದ್ದರು.

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ

Posted On: 03-01-2025 06:58PM

ಪಡುಬಿದ್ರಿ : ಬೆಳಪು ವ್ಯವಸಾಯ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರಿ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಎಲ್ಲಾ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಆಡಳಿತ ಮಂಡಳಿಯ ಮುಂದಿನ ಅವಧಿಗೆ ಸತತವಾಗಿ 9 ನೇ ಅವಧಿಗೆ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಉಪಾಧ್ಯಕ್ಷರಾಗಿ ದ್ಯುಮಣಿ ಆರ್ ಭಟ್ ಉಚ್ಚಿಲರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ಪಣಿಯೂರಿನಲ್ಲಿರುವ ಸಂಘದ ಕೇಂದ್ರ ಕಛೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

ನಿರ್ದೇಶಕರುಗಳಾಗಿ ಪಾಂಡು ಶೆಟ್ಟಿ, ಸಾಧು ಶೆಟ್ಟಿ ಪಣಿಯೂರು, ಆಲಿಯಬ್ಬ, ಗೋಪಾಲ ಪೂಜಾರಿ, ಪಾಂಡು ಎಮ್. ಶೇರಿಗಾರ, ಸೈಮನ್ ಡಿಸೋಜ , ಮೀನ ಪೂಜಾರ್ತಿ, ಸುಂದರಿ, ವಿಮಲ ಅಂಚನ್, ಅನಿತ ಆನಂದರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಚುನಾವಣೆಯಲ್ಲಿ ಸಹಕಾರ ಸಂಘಗಳ ಚುನಾವಣಾ ನಿರ್ವಚನಾಧಿಕಾರಿ ಕೆ. ಆರ್. ರೋಹಿತ್‌ರವರು ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೋಚನ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ನಿರ್ದೇಶಕ ಬಾಲಗೋಪಾಲರವರು ಉಪಸ್ಥಿತರಿದ್ದರು.