Updated News From Kaup
ವಿಶ್ವ ಹೃದಯ ದಿನದಂದು ನಮ್ಮ ಹೃದಯಕ್ಕೆ ಹತ್ತಿರವಾಗಿರೋಣ
Posted On: 29-09-2020 01:46AM
ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಇದು ಹೃದಯ ಕಾಯಿಲೆ ಮತ್ತು ಸಂಬಂಧಿತ ಆರೋಗ್ಯ ಸಮಸ್ಯೆಗಳ ವ್ಯಾಪ್ತಿಯ ಬಗ್ಗೆ ಜನರ ಗಮನವನ್ನು ಸೆಳೆಯುವ ಗುರಿಯನ್ನು ಹೊಂದಿದೆ. ಹೃದಯಾಘಾತ, ಹೃದಯ ವೈಫಲ್ಯ ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ಹೃದಯ ಸಂಬಂಧಿ ಕಾಯಿಲೆಗಳನ್ನು ತಪ್ಪಿಸಲು, ವಿಭಿನ್ನ ತಡೆಗಟ್ಟುವ ಕ್ರಮಗಳು ಮತ್ತು ಜೀವನಶೈಲಿಯ ಬದಲಾವಣೆಗಳನ್ನು ಉತ್ತೇಜಿಸಲು ಈ ದಿನವನ್ನು ಸ್ಮರಿಸಲಾಗುತ್ತದೆ.
ಹಾರ್ಟ್ ಫಾರ್ ಲೈಫ್, ” ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತ ಹೃದಯ ಕಾಯಿಲೆಗಳು ಬರದಂತೆ ಸಂಗೀತ ಕಚೇರಿಗಳು, ಕ್ರೀಡಾಕೂಟಗಳಂತಹ ಚಟುವಟಿಕೆಗಳು. ಜಾಗೃತಿ ಘಟನೆಗಳು ಆರೋಗ್ಯ ತಪಾಸಣೆ. ನಡಿಗೆಗಳು, ಮತ್ತು ಫಿಟ್ನೆಸ್ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
ವಿಶ್ವದಲ್ಲಿ ಪ್ರತಿ ವರ್ಷ ಸರಾಸರಿ 17 ದಶಲಕ್ಷಕ್ಕೂ ಹೆಚ್ಚು ಜನರು ಹೃದಯ ಸಂಬಂಧಿತ ಕಾಯಿಲೆಗಳಿಂದ ಸಾಯುತ್ತಾರೆ. ಇದು ಎಚ್‌ಐವಿ, ಮಲೇರಿಯಾ ಮತ್ತು ಕ್ಯಾನ್ಸರ್ ನಿಂದ ಸಾಯುವ ಜನರಿಗಿಂತ ಹೆಚ್ಚಾಗಿರುವುದು ದುಃಖದ ವಿಷಯವಾಗಿದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಲ್ಪೆ ವತಿಯಿಂದ ಆರ್ಥಿಕ ಸಹಕಾರ
Posted On: 28-09-2020 09:48AM
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮಲ್ಪೆ ಇದರ ವತಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಶ್ರೀ ರಾಜೇಶ್ ಪೈ ಇವರಿಗೆ ಗಣೇಶೋತ್ಸವ ಸಮಿತಿಯ ಸದಸ್ಯರ ಸಹಕಾರದಿಂದ ನೀಡಲಾದ ಆರ್ಥಿಕ ಸಹಕಾರದ ಚೆಕ್ಕನ್ನು ಅವರ ಧರ್ಮಪತ್ನಿ ಶ್ರೀಮತಿ ಫ್ಲೋರಾ ಇವರಿಗೆ ಹಸ್ತಾಂತರಿಸಲಾಯಿತು. ಹಾಗೂ ಸಮಿತಿಯ ಮಾಜಿ ಕಾರ್ಯದರ್ಶಿ ಶ್ರೀ ನಾರಾಯಣ ಟಿ. ಕಿಣಿಯವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಶ್ರೀ ಕಾಂತಪ್ಪ ಕರ್ಕೇರ, ಶ್ರೀ ಶ್ಯಾಮ ಅಮೀನ್, ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಮೈಂದನ್, ಉಪಾಧ್ಯಕ್ಷರಾದ ಶ್ರೀ ಮಹೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿ ಶಿವರಾಮ ಕಲ್ಮಾಡಿ, ಕೋಶಾಧಿಕಾರಿ ಶ್ರೀ ಸುರೇಶ್ ಕರ್ಕೇರ ಮತ್ತು ಸದಸ್ಯರಾದ ಶ್ರೀಮತಿ ಪುಷ್ಪಾ ಶಶಿಧರ್ ಉಪಸ್ಥಿತರಿದ್ದರು.
ಆಸರೆ ಹೆಲ್ಪಿoಗ್ ಹ್ಯಾoಡ್ಸ್ ಉಡುಪಿ ಗೋವಿಗಾಗಿ ಮೇವು ಅಭಿಯಾನ
Posted On: 27-09-2020 10:58PM
ಉಡುಪಿ : ಆಸರೆ ಹೆಲ್ಪಿoಗ್ ಹ್ಯಾoಡ್ಸ್ ಉಡುಪಿ ಇದರ ವತಿಯಿಂದ ಗೋವಿಗಾಗಿ ಮೇವು ಅಭಿಯಾನ ಸೆ.27ರಂದು ನೀಲಾವರ ಗೋ ಶಾಲೆಯಲ್ಲಿ ನಡೆಯಿತು. ಈ ಸಂದಭ೯ದಲ್ಲಿ ಆಶೀವ೯ಚನ ನೀಡಿದ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀಥ೯ ಶ್ರೀಪಾದರು, ಗೋವಿಗೆ, ಮೇವು ಕೊಡುವುದು ಪುಣ್ಯದ ಕಾಯ೯. ನಾವು ಬೆಳಿಗ್ಗೆ ಹಾಲು ಕುಡಿದಾಗ ಅದು ಯಾವ ದನದ ಹಾಲು ಎಂದು ತಿಳಿಯಲು ಅಸಾಧ್ಯ ಅದೇ ರೀತಿ ನಾವು ಹಿoದಿನ ಜನ್ಮದಲ್ಲಿ ಏನಾಗಿದ್ದೇವು ಗೊತ್ತಿಲ್ಲ ಹೀಗಾಗಿ ಪುಣ್ಯಕೋಟಿಗೆ ಆಹಾರ ನೀಡಿದರೆ ನಮ್ಮ ಜನ್ಮ ಸಾಥ೯ಕವಾಗಲು ಸಾಧ್ಯ ಎಂದರು.
ದೇಶ ಕಾಯೋ ಯೋಧರಿಗೆ ಮಾಸ್ಕ್ ತಯಾರಿಸಿದ ಇಶಿತಾಗೆ ಉಡುಪಿಯಲ್ಲಿ ಸಮ್ಮಾನ
Posted On: 27-09-2020 03:33AM
ಗಡಿ ಕಾಯುವ ಯೋಧರಿಗೆ ಸ್ವತಃ ಮಾಸ್ಕ್ ತಯಾರಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಮೆಚ್ಚುಗೆಯ ಪತ್ರವನ್ನು ಪಡೆದ ವಿದ್ಯಾರ್ಥಿನಿ ಇಶಿತಾ ಆಚಾರ್ ಅವರನ್ನು ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಇಂದು ಸನ್ಮಾನಿಸಲಾಯಿತು.
ವಿಶ್ವ ಪ್ರವಾಸೋದ್ಯಮ ದಿನ ಅಭಿವೃದ್ಧಿಯ ಹೊಸ ಹೆಜ್ಜೆಯಾಗಿ ಪರಿಣಮಿಸಲಿ
Posted On: 27-09-2020 03:21AM
ಸೆ.27 ವಿಶ್ವ ಪ್ರವಾಸೋದ್ಯಮ ದಿನ, ದೇಶಾದ್ಯಂತ ಈ ದಿನವನ್ನು ವಿಶೇಷ ಕಾಯ೯ಕ್ರಮದ ಮೂಲಕ ಆಚರಿಸಲಾಗುತ್ತದೆ. ಪ್ರವಾಸ ಎಂದರೆ ನಮ್ಮೆಲ್ಲರೂ ಇಷ್ಟ ಕಾರಣ ಅದು ಹಲವು ವೈವಿದ್ಯತೆಗಳ ಪರಿಚಯ ಮತ್ತು ವಿಭಿನ್ನ ಅನುಭವಗಳನ್ನು ನೀಡುತ್ತದೆ. ಮೈಮನಸ್ಸನ್ನು ಉಲ್ಲಾಸಗೊಳಿಸುವಲ್ಲಿ ಪ್ರವಾಸದ ಪಾತ್ರ ಬಹಳ ಮಹತ್ತರವಾದದ್ದು. ದೇಶ ಸುತ್ತು-ಕೋಶ ಓದು ಎನ್ನುವ ಮಾತು ಎಲ್ಲರಿಗೂ ಸದಾ ನೆನಪಿಸುತ್ತಲೇ ಇರುತ್ತದೆ. ಏಕೆಂದರೆ ಒಂದು ಪ್ರವಾಸದಲ್ಲಿ ಸಿಗುವ ಅನುಭವ ದೊಡ್ಡ ಗ್ರಂಥ ಓದುವುದಕ್ಕಿಂತಲು ಹೆಚ್ಚಿನದು ಎಂದರೆ ತಪ್ಪಾಗಲಾರುದು.
ಕಡಲಕಿನಾರೆ ಬಿಡದ ಪ್ರವಾಸೋದ್ಯಮ ಪ್ರವಾಸಿಗೆ ಪ್ರದರ್ಶಿಸಬೇಕಿದೆ ಸಾಂಸ್ಕೃತಿಕ ಸಂಪತ್ತು
Posted On: 27-09-2020 03:06AM
ಆನಂದ , ಆಶ್ಚರ್ಯ , ಆಮೋದಗಳನ್ನು ಏಕಕಾಲದಲ್ಲಿ ಪ್ರವಾಸಿಗೆ ನೀಡಬಲ್ಲ ಸೊಗಸಾದ ತಾಣಗಳಲ್ಲಿ ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಪ್ರಮುಖವಾಗಿ ಗುರುತಿಸಲ್ಪಡುತ್ತದೆ .
ವಿಫುಲವಾದ ಅವಕಾಶಗಳಿದ್ದರೂ ಪ್ರವಾಸೋದ್ಯಮ ಎಷ್ಟು ಅಭಿವೃದ್ಧಿಯಾಗಿದೆ , ಇಲ್ಲಿರುವ ಪ್ರವಾಸಿ ಆಕರ್ಷಣೆಯ ಎಷ್ಟು ವಿಷಯಗಳು ತೆರೆದುಕೊಂಡಿವೆ ಅಥವಾ ಅನಾವರಣಗೊಳಿಸಲಾಗಿದೆ ! ಗೊತ್ತಿಲ್ಲ . ಆದರೆ ಬಹುತೇಕ ನಮ್ಮ ಪ್ರವಾಸೋದ್ಯಮ ಕಡಲ ಕಿನಾರೆಯನ್ನು ಬಿಟ್ಟು ಪೂರ್ವಾಭಿಮುಖವಾಗಿ ನೋಡಿದ ಹಾಗೆ ಅನಿಸುವುದೇ ಇಲ್ಲ . ಹಾಗಾದರೆ ಕಡಲು - ಘಟ್ಟದ ನಡುವೆ ಏನಿದೆ .
ನಮ್ಮ ಉಭಯ ಜಿಲ್ಲೆಗಳಲ್ಲಿ
ಸಮೃದ್ಧವಾಗಿ ಬೆಳೆದಿರುವ ಸಂಸ್ಕೃತಿಯು ವೈಶಿಷ್ಟ್ಯ ಪೂರ್ಣವಾದುದು . ಇಲ್ಲಿ ಜಾನಪದ ಮೂಲದ ಆಚರಣೆ , ನಂಬಿಕೆಗಳಿವೆ . ಆರಾಧನಾ ಕಲೆಗಳು ,ಪ್ರದರ್ಶನ ರಂಗ ಕಲೆಗಳಿವೆ .
ಪರ್ವತ , ಗುಡ್ಡ , ಬೆಟ್ಟ , ಜಲಪಾತ , ಝರಿ , ನದಿ , ಹೊಳೆ , ಸಮುದ್ರ ಎಲ್ಲವೂಇದೆ . ಆಹಾರ ಪದಾರ್ಥಗಳ ವೈವಿಧ್ಯತೆ ಇದೆ . ಆಕರ್ಷಕ ಉತ್ಪನ್ನಗಳಿವೆ .ಇತಿಹಾಸ ಹೇಳುವ ಪುರಾತನ ನಿರ್ಮಿತಿಗಳಿವೆ . ವೀರರ , ಪ್ರತಿಭಾವಂತರ , ಸಾಧಕರ , ದೈವೀಪುರುಷರ ಆಡುಂಬೊಲವಿದೆ . ಭವ್ಯವಾಗಿ ಬೆಳೆದ ದೇವಾಲಯ ಸಂಸ್ಕೃತಿಯಿದೆ . ಒಟ್ಟಿನಲ್ಲಿ ಮನಮೋಹಕ ಪರಿಸರದಲ್ಲಿ ವಾದನ - ನರ್ತನ - ಗಾಯನ - ರಂಗಿನ ಹಿನ್ನೆಲೆಯೊಂದಿಗೆ ಪ್ರತಿದಿನ ದೈವ - ದೇವಲೋಕಗಳು , ನಾಗ - ಬ್ರಹ್ಮ ಸನ್ನಿಧಾನಗಳು ಸನ್ನಿಹಿತವಾಗುತ್ತವೆ ,ಪುರಾಣ ಪ್ರಪಂಚ ತೆರೆದುಕೊಳ್ಳುತ್ತದೆ.
ಇದನ್ನೆಲ್ಲ ನಮ್ಮ ಸಂಸ್ಕೃತಿ ಎಂಬ ಗೌರವದೊಂದಿಗೆ ಪ್ರವಾಸಿಗೆ ತೋರಿಸಬೇಕು . ವಿವಿಧ ಸೌಲಭ್ಯಗಳೊಂದಿಗೆ ಈ ಸಾಂಸ್ಕೃತಿಕ ಸಂಪತ್ತಿನ ಖಜಾನೆಯ ಬಾಗಿಲು ತೆರೆಯಬೇಕು . ಆಗ ನಮ್ಮ ಸಂಸ್ಕೃತಿ ಜಗಜ್ಜಾಹೀರಾಗುತ್ತದೆ . ಬಹುತ್ವದ , ಬಹು ಆಯಾಮಗಳುಳ್ಳ ಒಂದು ಸಂಸ್ಕೃತಿ ಗೌರವಯುತವಾಗಿ ಪ್ರಸ್ತುತಪಡುವುದು ಹೆಮ್ಮೆಯಲ್ಲವೆ . ಆದರೆ ಪ್ರಸ್ತುತಿ ಹೇಗಾಗುತ್ತಿದೆ ಗೊತ್ತಿಲ್ಲ . ಅಂತಹ ಯಾವುದೇ ಮಾಹಿತಿ ಇಲ್ಲ . ನದಿಯಲ್ಲಿ ಸಾಹಸದ , ರೋಚಕ ದೋಣಿಪ್ರವಾಸದ ಬಗ್ಗೆ ಕೇಳಿ ಬರುತ್ತದೆ , ಸಮುದ್ರದಲ್ಲಿ ಬೋಟಿಂಗ್ ನೋಡ ಸಿಗುತ್ತದೆ . ರೆಸಾರ್ಟ್ಗಗಳೂ ಇವೆ , ಅಷ್ಟಕ್ಕೆ ಸೀಮಿತವೇ ? ಗೊತ್ತಿಲ್ಲ .
ಕಾಪುವಿನ ಪಕೀರ್ನಕಟ್ಟೆಯಲ್ಲಿ ಕತ್ತಲ ಮನೆಗೆ ಬೆಳಕು ನೀಡಿದ ಸೇವ್ ಲೈಫ್
Posted On: 26-09-2020 04:45PM
ಕಾಪು ಪುರಸಭಾ ವ್ಯಾಪ್ತಿಯ ಪಕೀರ್ನಕಟ್ಟೆ ಅಪ್ಪಿಯವರು ಕಳೆದ ಹತ್ತು ವರ್ಷಗಳಿಂದ ಹುಲ್ಲಿನ ಮನೆಯಲ್ಲಿ ಚಿಮಿಣಿ ದೀಪದ ಬೆಳಕಿನಲ್ಲೇ ದಿನ ಕಳೆಯುತ್ತಿದ್ದು,ವಿದ್ಯುತ್ ಸಂಪರ್ಕ ಇಲ್ಲದೆ ವಾಸಿಸುತ್ತಿದ್ದರು.
ಬೆಳ್ಮಣ್ ನಲ್ಲಿ ಅಂತರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ
Posted On: 25-09-2020 10:50PM
ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು.
ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಕಾಪು
Posted On: 25-09-2020 05:12PM
ಶಾರ್ವರಿ ನಾಮ ಸಂವತ್ಸರದ ಆಶ್ವಯುಜ ಮಾಸವು ಈ ಬಾರಿ ಅಧಿಕ ಪುರುಷೋತ್ತಮ ಮಾಸವಾಗಿದ್ದು , ದೇವತಾ ಕಾರ್ಯಗಳಿಗೆ ಅತ್ಯಂತ ಸೂಕ್ತ ಪರ್ವ ಕಾಲ. ಈ ಪ್ರಯುಕ್ತ ತಾ. 29/09/20 ಮಂಗಳವಾರ ಅಧಿಕ ಆಶ್ವೀಜ ಶುದ್ಧ ತ್ರಯೋದಶಿ , ಶ್ರೀ ದೇವಳದಲ್ಲಿ ಚಂಡಿಕಾ ಯಾಗ ಜರಗಲಿದೆ. ಬೆಳಿಗ್ಗೆ 8.00 ಗಂಟೆಗೆ *ಪ್ರಾರ್ಥನೆ* ಮಧ್ಯಾಹ್ನ 12.00 ಗಂಟೆಗೆ ಚಂಡಿಕಾ ಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ, ಈ ಪುಣ್ಯಪ್ರದ ಕಾರ್ಯಕ್ರಮದಲ್ಲಿ ಸರ್ವ ಸಮಸ್ತ ಭಕ್ತರು ಭಾಗವಹಿಸಿ ಶ್ರೀ ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗ ಬೇಕೆಂದು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ,ಕಾಪು ಆಡಳಿತ ಮಂಡಳಿ ವಿನಂತಿಸಿದ್ದಾರೆ.
ಶ್ರಾವ್ಯ ಆರ್. ಅಂಚನ್ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆ
Posted On: 24-09-2020 02:14PM
ಪಡುಬಿದ್ರಿಯ ರವಿರಾಜ್ ಕೋಟ್ಯಾನ್ ಮತ್ತು ಶ್ಯಾಮಲಾ ದಂಪತಿಯ ಪುತ್ರಿಯಾದ ಶ್ರಾವ್ಯ ಆರ್. ಅಂಚನ್ ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ ರಂಗದಲ್ಲಿ ಮುಂದಿದ್ದು, ಪಡುಬಿದ್ರಿ ಸಾಗರ್ ವಿದ್ಯಾ ಮಂದಿರ ಶಾಲೆಯ ವಿದ್ಯಾರ್ಥಿಯಾಗಿ ಕಬಡ್ಡಿ ಕ್ರೀಡೆಯಲ್ಲಿ 2 ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೂ ಆಯ್ಕೆಯಾದವರು. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 (98.08%)ಅಂಕ ಪಡೆದಿರುವ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ದಾವಣಗೆರೆ-ಸಾಲಿಗ್ರಾಮ ಇವರು ನೀಡಲ್ಪಡುವ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ರಾಜ್ಯೋತ್ಸವದಂದು ದಾವಣಗೆರೆಯ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ.
