Updated News From Kaup
ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯ
Posted On: 07 Apr 2025, 01:56 PM
ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗ ಶಿರ್ವ ಇದರ ವತಿಯಿಂದ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ನೇಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಪ್ರತಿ ವರ್ಷವೂ ಈ ಕಾರ್ಯಕ್ರಮ ನಡೆಯುತ್ತಿದ್ದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದ್ದು, ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭ ಅಧ್ಯಕ್ಷ ಉಮೇಶ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ, ಗೌರವಾಧ್ಯಕ್ಷ ಸುರೇಶ ಆಚಾರ್ಯ, ಕಾರ್ಯದರ್ಶಿ ಮಾಧವ ಆಚಾರ್ಯ ಕೋಶಾಧಿಕಾರಿ ಪ್ರಶಾಂತ ಆಚಾರ್ಯ, ಮಹಿಳಾ ಬಳಗದ ಕಾರ್ಯದರ್ಶಿ ಮಂಜುಳಾ ಉಮೇಶ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಹೆಜಮಾಡಿ ತೆನ್ನಯಜಾರು ತೋಟ ಪೂವಪ್ಪ ಕೋಟ್ಯಾನ್ ನಿಧನ
Posted On: 04 Apr 2025, 02:24 PM
ಹೆಜಮಾಡಿ : ಹೆಜಮಾಡಿ ತೆನ್ನಯ್ಯ ಜಾರು ತೋಟ ನಿವಾಸಿ, ಪ್ರಗತಿಪರ ಕೃಷಿಕ ಪೂವಪ್ಪ ಕೋಟ್ಯಾನ್ (93) ಅಸೌಖ್ಯದಿಂದ ಏ.3ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ , ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಇದ್ದಾರೆ. ಎಂಆರ್ ಪಿಎಲ್ ಗುತ್ತಿಗೆದಾರರಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು .ಹೆಜಮಾಡಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಮಾಜಿ ಗೌರವಾಧ್ಯಕ್ಷರಾಗಿದ್ದರು. ಇವರು ಕುಟುಂಬಿಕರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿಗೆ ವಾಟಾಳ್ ನಾಗರಾಜ್ ಭೇಟಿ
Posted On: 04 Apr 2025, 10:21 AM
ಕಾಪು : ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು ಅಮ್ಮನ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು, ನನಗೆ ಹಿಂತಿರುಗಲು ಫ್ಲೈಟ್ ಗೆ ಸಮಯ ಆಗುತ್ತಿದೆ ಆದರೂ ಇಲ್ಲೇ ಉಳಿಯೋಣ ಅನಿಸುತ್ತಿದೆ. ಮತ್ತೆ ಮತ್ತೆ ಇಲ್ಲಿಗೆ ಬರಬೇಕೆಂಬ ಹಂಬಲ ನನಗಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ರಾಧಾರಮಣ ಶಾಸ್ತ್ರೀ, ಪ್ರಬಂಧಕ ಗೋವರ್ಧನ್ ಶೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಎ. 8, 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹರಕೆ ಮಾರಿಪೂಜೆ
Posted On: 03 Apr 2025, 10:21 AM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ವಿವಿಧ ಉಪಸಮಿತಿ, ಸಿಬ್ಬಂದಿಗಳು ಮತ್ತು ನೌಕರವೃಂದ ಹಾಗೂ ಭಕ್ತವೃಂದದ ಸಹಕಾರದೊಂದಿಗೆ ಎ. 8 ಮತ್ತು 9 ರಂದು ಮಹಾಸೇವೆ ರೂಪದಲ್ಲಿ ಪ್ರಥಮ ಹರಕೆ ಮಾರಿಪೂಜೆ ನಡೆಯಲಿದ್ದು ಸಮಾಲೋಚನಾ ಸಭೆ ನಡೆಯಿತು. ಎಪ್ರಿಲ್ 8ರ ಸಂಜೆ 5ಕ್ಕೆ ಹೂ-ಹಿಂಗಾರ ಮೆರವಣಿಗೆ, ರಾತ್ರಿ 8:30ಕ್ಕೆ ಒಡೆಯನ ಸನ್ನಿದಾನದಿಂದ ರಜತ ರಥದಲ್ಲಿ ಅಲಂಕೃತಳಾಗಿ ಮಾರಿಯಮ್ಮನ ಆಗಮನ. ರಾತ್ರಿ 10:30ಕ್ಕೆ ದರ್ಶನ ಸೇವೆ. ಎಪ್ರಿಲ್ 9ರ ಬುಧವಾರ ಮದ್ಯಾಹ್ನ 3ಕ್ಕೆ ದರ್ಶನ ಸೇವೆ. ಸಂಜೆ 7ರಿಂದ 10ಗಂಟೆಯವರೆಗೆ ಮಾರಿಪೂಜೆಯ ಅನ್ನಪ್ರಸಾದ ವಿತರಣೆಯಾಗಲಿದೆ. ಭಕ್ತರು, ಹೂ ಹಿಂಗಾರ ಸಹಿತ ವಿವಿಧ ಸೇವೆಗಳನ್ನು ಹರಕೆ ರೂಪದಲ್ಲಿ ನೀಡಲು ಅವಕಾಶವಿದೆ, ಹೆಚ್ಚಿನ ಮಾಹಿತಿಯನ್ನು ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಕ್ಷೇತ್ರದ ಶಾಸಕರು ಮತ್ತು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಬೀನಾ ವಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ರವೀಂದ್ರ ಮಲ್ಲಾರು, ಮನೋಹರ ರಾವ್ ಕಲ್ಯ, ಚರಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ ಅಶಾಂತಿ ಉಂಟುಮಾಡಲು ಕೇಂದ್ರದ ಬಿಜೆಪಿ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ ಮಂಡನೆ : ಶರ್ಫುದ್ದೀನ್ ಶೇಖ್
Posted On: 02 Apr 2025, 10:55 PM
ಕೇಂದ್ರ ಸರ್ಕಾರ ದೇಶದಲ್ಲಿ ಹಿಂದೂ ಮುಸ್ಲಿಂ ಸಮುದಾಯ ವಿಭಜನೆ ಮಾಡಲು ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿ ವಕ್ಪ್ ಬೋರ್ಡ್ ಹಸರಿನಲ್ಲಿ ದೇಶದ ಜನರಿಗೆ ಶುದ್ದ ಸುಳ್ಳುಗಳನ್ನು ಹೇಳಿ ಇವತ್ತು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ಲನ್ನು ಮಂಡಿಸಿದೆ. ವಕ್ಪ್ ವಿಚಾರದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಯಾರಿಗೂ ಅನ್ಯಾಯವಾಗಿರಲಿಲ್ಲ. ಆದರೆ ವಖ್ಫ್ ವಿಚಾರದಲ್ಲಿ ಜನರಿಗೆ ವಾಸ್ತವ ವಿಚಾರವನ್ನು ಮರೆಮಾಚಿ ಸುಳ್ಳು ಹೇಳಿಕೆಗಳನ್ನು ನೀಡಿ ಕೇಂದ್ರ ಸರ್ಕಾರ ತನ್ನ ವೈಪಲ್ಯಗಳನ್ನು ಮರೆಮಾಚಲು ತಯಾರಿ ನಡೆಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಖಂಡಿಸಿದ್ದಾರೆ. ಈ ದೇಶಕ್ಕೆ ಅಲ್ಪಸಂಖ್ಯಾತರ ಕೊಡುಗೆ ಅಪಾರವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯಾವುದೇ ಜಾತಿಮತ ಭೇದ ಇಲ್ಲದೆ ಎಲ್ಲರೂ ಸೇರಿ ಭಾರತ ದೇಶಕ್ಕೆ ತಮ್ಮ ಸೇವೆಗಳನ್ನು ಸಲ್ಲಿಸಿದ್ದಾರೆ ಮತ್ತು ಬಲಿದಾನಗೈದಿದ್ದಾರೆ. ಆದರೆ ಇಂದು ವಕ್ಫ್ ತಿದ್ದುಪಡಿ ಕಾಯಿದೆಯನ್ನು ಜಾರಿಗೆ ತಂದು ದೇಶದಲ್ಲಿ ಅಶಾಂತಿ ಉಂಟುಮಾಡಲು ತಯಾರಿ ಮಾಡಿದ ಬಿಜೆಪಿ ಮತ್ತು ಸಂಘಪರಿವಾರದ ತ್ಯಾಗ ಏನು ಎಂಬುದು ನಾಡಿನ ಜನರ ಪ್ರಶ್ನೆಯಾಗಿದೆ. ನಿಜವಾಗಿಯೂ ವಕ್ಫ್ ಭೂಮಿ ಇರುವ ಪ್ರಮಾಣಕ್ಕಿಂತ ಅದೆಷ್ಟೋ ಪ್ರಮಾಣ ಕಡಿಮೆ ಇದೆ. ಭಾಗಶ: ಭೂಮಿ ಕಬಳಿಕೆ ಮಾಡಲಾಗಿದೆ. ಭೂಸುಧಾರಣೆ ಕಾನೂನಿಂದಾಗಿ ಕಳೆದುಕೊಂಡದ್ದು ಮತ್ತು ಸರ್ಕಾರಿ ಕಚೇರಿಗಳಿಗೆ ಕೊಟ್ಟು ಇರುವ ಭೂಮಿಯನ್ನು ಕೂಡ ಕಬಳಿಕೆ ಮಾಡಿ ತಮ್ಮ ಪರವಿರುವ ಉದ್ಯಮಿಗಳಿಗೆ ಹಂಚುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವಿದೆ. ಇದು ಖಂಡನೀಯ. ಧಾರ್ಮಿಕ ವಿಚಾರಗಳನ್ನೇ ಎತ್ತಿಕೊಂಡು ಸಮುದಾಯಗಳ ನಡುವೆ ಸಾಮರಸ್ಯ ಕದಡುವುದನ್ನು ಕಾಯಕವನ್ನಾಗಿ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಇದೆಲ್ಲವನ್ನು ಬಿಟ್ಟು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕೋಮುವಾದ ನಿರ್ಮೂಲನೆ ಕುರಿತು ಕಾಳಜಿ ವಹಿಸಬೇಕು. ದೇಶದಲ್ಲಿ ಶಾಂತಿ ಕದಡುವುದೇ ದೊಡ್ಡ ದೇಶದ್ರೋಹ. ಈ ಜ್ಞಾನ ಕೇಂದ್ರ ಸರ್ಕಾರ ಬೆಳೆಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ದಂಡತೀರ್ಥ ವಿದ್ಯಾಸಂಸ್ಥೆ : ಬೇಸಿಗೆ ಶಿಬಿರ ಉದ್ಘಾಟನೆ
Posted On: 02 Apr 2025, 10:43 PM
ಕಾಪು : ಪ್ರಕೃತಿ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳು ಹಾಗೂ ಹಾವುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ಅವು ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಅವುಗಳನ್ನು ಸಂರಕ್ಷಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ವನ್ಯಜೀವಿ ಹಾಗೂ ಉರಗ ರಕ್ಷಕ ಅಕ್ಷಯ್ ಎನ್. ಶೇಟ್ ಹೇಳಿದರು. ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಜರಗಿದ ಸ್ಕೌಟ್ಸ್, ಗೈಡ್ಸ್ ,ಕಬ್, ಬುಲ್-ಬುಲ್ ಮತ್ತು ಸೇವಾದಳಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಾನಂದ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕುಮಾರಿ ಅನುಷ್ಕಾ ಸ್ವಾಗತಿಸಿದರು. ವಿದ್ಯಾರ್ಥಿ ಮಾಸ್ಟರ್ ರಚಿತ್ ಕೆ. ದೇವಾಡಿಗ ವಂದಿಸಿದರು. ಕುಮಾರಿ ಕ್ಷಮ್ಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Posted On: 02 Apr 2025, 08:03 PM
ಉಡುಪಿ : ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ ಮನವಿಯನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ವತಿಯಿಂದ ಮವವಿ ಸಲ್ಲಿಸಿದ್ದು. ಈ ವಿಚಾರವಾಗಿ ಯಾರೂ ಕೂಡ ಗಮನ ಹರಿಸದೆ ಇರುವುದು ಬೇಸರದ ಸಂಗತಿಯಾಗಿದೆ. ಆಭಾಗದಲ್ಲಿ ದಿನೇ ದಿನೇ ಅಪಘಾತಗಳು ಜಾಸ್ತಿಯಾಗುತ್ತಿದ್ದು ಎ.1, ಮಂಗಳವಾರ ಬೆಳಿಗ್ಗೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆಗೆ ಹೋಗುವ ಸಂದರ್ಭದಲ್ಲಿ ರಸ್ತೆದಾಟುವಾಗ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾದ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ ಎಂಬ ಬಾಲಕನು ಅಪಘಾತದಲ್ಲಿ ಸಾವನಪ್ಪಿದ್ದು ಈ ಬಾಲಕನ ಕುಟುಂಬದವರಿಗೆ ಯಾವುದೇ ಪರಿಹಾರ ನೀಡದಿರುವುದರಿಂದ ಈ ಕೂಡಲೆ ಜಿಲ್ಲಾಡಳಿತ ಮತ್ತು ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಿ ಕೊಡುವಂತೆ ಹಾಗೂ ಆ ಭಾಗದಲ್ಲಿ ಪೈಓವರ್ ನಿರ್ಮಿಸುವಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಈ ವಿಚಾರದಲ್ಲಿ ತಕ್ಷಣವೇ ಕ್ರಮ ಕೃೆಗೂಳ್ಳುತೇನೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಸ್ಥಾಪಕ ಶಿವ ಕುಮಾರ್ ಕರ್ಜೆ, ಗೌರವ ಸಲಹೆಗಾರ ವಿಶ್ವಾಸ್ ಅಮೀನ್, ಸಂತೋಷ್ ಪಡುಬಿದ್ರಿ, ಉಡುಪಿ ತಾಲೂಕು ಅಧ್ಯಕ್ಷ ವಿದಿತ್ ನಾಗರಾಜ್, ಉಪಾಧ್ಯಕ್ಷ ಮನೀಷ್ ಪೂಜಾರಿ, ಕಾಲೇಜು ವಿದ್ಯಾರ್ಥಿಗಳಾದ ವಂಶಿತ್ ಶೆಟ್ಟಿ, ಕಿರಣ್ ಶೆಟ್ಟಿ, ಧನುಷ್ ಆಚಾರ್ಯ, ಸೌರಭ್ ಪೂಜಾರಿ ಉಪಸ್ಥಿತರಿದ್ದರು.
ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ 92 ಹೇರೂರು, ಬಂಟಕಲ್ಲು : ನೂತನ ಕಾರ್ಯಕಾರಿ ಸಮಿತಿ ರಚನೆ
Posted On: 31 Mar 2025, 09:59 PM
ಬಂಟಕಲ್ಲು : ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) 92 ಹೇರೂರು, ಬಂಟಕಲ್ಲು ಇಲ್ಲಿನ ವಾರ್ಷಿಕ ಮಹಾಸಭೆಯಲ್ಲಿ 2025-27ನೇ ಸಾಲಿನ ಅವಧಿಗೆ ಕಳೆದ ಕಾರ್ಯಕಾರಿ ಸಮಿತಿಯು ಅವಿರೋಧವಾಗಿ ಪುನರಾಯ್ಕೆಗೊಂಡಿತು. ಅಧ್ಯಕ್ಷರಾಗಿ ರಾಘವೇಂದ್ರ ಸ್ವಾಮಿ, ಕಾರ್ಯದರ್ಶಿಯಾಗಿ ಚರಣ್ ದೇವಾಡಿಗ, ಉಪಾಧ್ಯಕ್ಷರಾಗಿ ಮಾಧವ ಆಚಾರ್ಯ, ಕೋಶಾಧಿಕಾರಿಯಾಗಿ ಸುಧೀರ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಉದಯ ಕರ್ಕೇರ, ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜೇಶ್ ಜೋಗಿ, ದೇವದಾಸ ಜೋಗಿ, ಶ್ರೀಧರ್ ಕಾಮತ್, ಶ್ರೀನಿವಾಸ ದೇವಾಡಿಗ, ದಿನೇಶ್ ದೇವಾಡಿಗ ರವರು ಆಯ್ಕೆಯಾದರು. ಇದರ ಜೊತೆಗೆ ಸಕ್ರಿಯ ಮತ್ತು ಹಿರಿಯ ಸದಸ್ಯರುಗಳ ಸಲಹಾ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಭೇಟಿ
Posted On: 31 Mar 2025, 09:50 PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಅವರು ಅಮ್ಮನ ದರುಶನ ಪಡೆದು ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಪಡೆದಿದ್ದರು. ಪುಸ್ತಕದಲ್ಲಿ ನವದುರ್ಗಾ ಲೇಖನವನ್ನು 9 ದಿನಗಳವರೆಗೆ ಬರೆದು "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ
Posted On: 31 Mar 2025, 09:44 PM
ಪಡುಬಿದ್ರಿ : ಕರ್ನಾಟಕ ಸರಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ , ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗು ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೃೆದು ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಅಗಿರುವ ಪ್ರಸನ್ನ ಪಿ.ಎಸ್ ರವರು ಭಾಜನರಾಗಿದ್ದಾರೆ. ಎಪ್ರಿಲ್ 2 ರಂದು ಬೆಂಗಳೂರು ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
