Updated News From Kaup

ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಅರಣ್ಯಾಧಿಕಾರಿಯ ಮಾತುಗಳು ಖಂಡನೀಯ : ಪ್ರವೀಣ್ ಪೂಜಾರಿ

Posted On: 27-10-2024 07:09AM

ಉಡುಪಿ : ಅರಣ್ಯಾಧಿಕಾರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದು ಖಂಡನೀಯ ಎಂದು ಬಿಲ್ಲವ ಯುವ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹೇಳಿಕೆ ನೀಡಿದ್ದಾರೆ.

ಅ. 29 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Posted On: 27-10-2024 07:03AM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಇದೇ ಬರುವ ಅಕ್ಟೋಬರ್ 29ರಂದು ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅ. 29 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ - ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Posted On: 25-10-2024 02:51PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ ಹಮ್ಮಿಕೊಂಡಿರುವ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಇದೇ ಬರುವ ಅಕ್ಟೋಬರ್ 29ರಂದು ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.30 : ಕ್ರಿಯೇಟಿವ್ ಕಾಲೇಜಿನಲ್ಲಿ ಯುವ ಬರಹಗಾರರ ಸಮ್ಮೇಳನ "ಅಕ್ಷರ ಯಾನ"

Posted On: 25-10-2024 10:25AM

ಕಾರ್ಕಳ : ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ 'ಅಕ್ಷರಯಾನ - ಬರವಣಿಗೆಯ ಮೆರವಣಿಗೆ' ಕಾರ್ಯಕ್ರಮವು ಅಕ್ಟೋಬರ್ 30ರ ಬುಧವಾರ ಬೆಳಗ್ಗೆ 9:30ಕ್ಕೆ ಆರಂಭಗೊಳ್ಳಲಿದೆ.

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಸ್ವರ್ಣ ಜುವೆಲ್ಲರ್ಸ್ ಗೆ ಸ್ವರ್ಣ ಹಸ್ತಾಂತರ

Posted On: 24-10-2024 07:39PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಸ್ವರ್ಣ ಜುವೆಲರ್ಸ್ ನ ಪ್ರಬಂಧಕ ಲಕ್ಷ್ಮೀ ನಾರಾಯಣ್ ಮತ್ತು ಸುನಿಲ್ ಜಿ ಅವರಿಗೆ ಗುರುವಾರದಂದು ಚಿನ್ನ ಮತ್ತು ಬೆಳ್ಳಿಯನ್ನು ಹಸ್ತಾಂತರಿಸಲಾಯಿತು. ‌

ವಿಧಾನ ಪರಿಷತ್‌ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾ‌ರ್ ಗೆಲುವು

Posted On: 24-10-2024 12:47PM

ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್‌ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾ‌ರ್ ಬೊಟ್ಯಾಡಿ ಜಯಭೇರಿ ಸಾಧಿಸಿದ್ದಾರೆ.

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Posted On: 24-10-2024 11:31AM

ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾಗಿರುವ ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿ ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟದ ಟ್ರೋಫಿ ಹಾಗೂ ಪದಕಗಳ ಕೊಡುಗೆ

Posted On: 24-10-2024 11:29AM

ಕಾಪು : ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ, ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆ ಮಲ್ಲಾರು ಮತ್ತು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.23 ಮತ್ತು 24 ರಂದು ಮಹಾತ್ಮ ಗಾಂಧಿ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟದ ಟ್ರೋಫಿ ಹಾಗೂ ಪದಕಗಳನ್ನು ಬೆಳಪು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿವಂಗತ ಮೊಹಮ್ಮದ್ ಝಹಿರ್ ಅಬ್ದುಲ್ ಸತ್ತಾರ್ ಅವರ ಸ್ಮರಣಾರ್ಥ ವಹಿಸಲಾಗಿದೆ.

ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಉನ್ನತ ಶಿಕ್ಷಣ ಸಚಿವರಿಗೆ ಪತ್ರ

Posted On: 23-10-2024 10:52PM

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ : 2025ರ ಏಪ್ರಿಲ್ 3 ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ

Posted On: 23-10-2024 08:42PM

ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದೇವಳದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬುಧವಾರ ಸಂಜೆ ನಡೆದ ನಡೆದ ವಿಶೇಷ ಸಭೆಯಲ್ಲಿ 2025 ಏಪ್ರಿಲ್ 3ರಂದು ಬಾಲಾಲಯ ಪ್ರತಿಷ್ಟೆ, 2026 ಮಾರ್ಚ್‌ ತಿಂಗಳಲ್ಲಿ ಬ್ರಹ್ಮಕಲಶಾದಿ ಕಾರ್ಯ ಎಂದು ಗ್ರಾಮಸ್ಥರ ಸಮ್ಮುಖ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ, ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ, ದೇವಳ ಸಂಕೋಚಕ್ಕೆ ತಂತ್ರಿಗಳು ಪ್ರಶಸ್ತ ದಿನ ನೀಡಿದ್ದಾರೆ. 20 ಕೋಟಿ ವೆಚ್ಚದಲ್ಲಿ ಮೊದಲ ಹಂತದಲ್ಲಿ ದೇಗುಲದ ಸಮಗ್ರ ಜೀರ್ಣೋದ್ಧಾರವಾಗಲಿದೆ. ದೇವಸ್ಥಾನದ ಗರ್ಭಗುಡಿಯ ಪುಣ್ಯಕಾರ್ಯವು ಗ್ರಾಮದ ಸಮಸ್ತ ಭಕ್ತಾದಿಗಳ ಆರ್ಥಿಕ ಸಹಕಾರದಿಂದ ನಡೆಯಲಿದೆ ಎಂದು ಹೇಳಿದರು.