Updated News From Kaup
ಜ.21 : ಕಾಪು ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ, ಅಹವಾಲು ಸ್ವೀಕಾರ ಸಭೆ
Posted On: 20 Jan 2025, 06:45 PM
ಕಾಪು : ಕಾಪು ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ, ಅಹವಾಲು ಸ್ವೀಕಾರ ಸಭೆಯು ಜ.21, ಮಂಗಳವಾರ ಕಾಪು ತಹಶಿಲ್ದಾರ್ ರವರ ಅಧ್ಯಕ್ಷತೆಯಲ್ಲಿ ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅಹವಾಲನ್ನು ಸಲ್ಲಿಸುವವರು ಆಗಮಿಸುವಂತೆ ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 22: ಕುಲಾಲ ಸಂಘ ಪೆರ್ಡೂರು ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದಲ್ಲಿ ಆರೋಗ್ಯ ಶಿಬಿರ
Posted On: 20 Jan 2025, 06:34 PM
ಉಡುಪಿ : ಕುಲಾಲ ಸಂಘ (ರಿ.) ಪೆರ್ಡೂರು ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮ ಕುಲಾಲ ಸಮುದಾಯ ಭವನ, ಬುಕ್ಕಿಗುಡ್ಡೆ ಪೆರ್ಡೂರು ಇಲ್ಲಿ ಜ.22 ರಂದು ನಡೆಯಲಿದ್ದು, ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕೇಂದ್ರ ಉಕ್ಕು, ಬೃಹತ್ ಕೈಗಾರಿಕಾ ಸಚಿವರಿಗೆ ಆಮಂತ್ರಣ
Posted On: 20 Jan 2025, 06:30 PM
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಪ್ರತಿಷ್ಠಾಧಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಜರಗಲಿದ್ದು ಆ ಪ್ರಯುಕ್ತ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್. ಡಿ ಕುಮಾರಸ್ವಾಮಿಯವರಿಗೆ ಶ್ರೀ ಕ್ಷೇತ್ರದ ಆಮಂತ್ರಣ ಪತ್ರಿಕೆ ನೀಡಲಾಯಿತು. ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಎಚ್. ಡಿ ಕುಮಾರಸ್ವಾಮಿಯವರನ್ನು ಮೈಸೂರಿನಲ್ಲಿ ಭೇಟಿ ಮಾಡಿ ಮನವಿಯನ್ನು ನೀಡುವ ಮೂಲಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಸಂಚಾಲಕ ಉದಯ ಶೆಟ್ಟಿ ಭಾರ್ಗವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ, ಹೆದ್ದಾರಿ ತಡೆ, ಪ್ರತಿಭಟನಾ ಸಭೆ
Posted On: 20 Jan 2025, 05:26 PM
ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಸೋಮವಾರ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು. ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್ ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ ಹೆದ್ದಾರಿ ದೀಪ ಅಳವಡಿಕೆ, ಉಚ್ಚಿಲ ಪೇಟೆಯಲ್ಲಿ ಹೈಮಾಸ್ಕ್ ದೀಪ ಅಳವಡಿಕೆ, ಹೆದ್ದಾರಿಯಲ್ಲಿ ಜೀಬ್ರಾ ಕ್ರಾಸಿಂಗ್, ಸಮರ್ಪಕ ಕ್ರಾಸಿಂಗ್ ವ್ಯವಸ್ಥೆ, ಸರ್ವಿಸ್ ರಸ್ತೆ ಡಿವೈಡರಿಗೆ ಸ್ಪೀಡ್ ಬ್ರೇಕರ್ ಅಳವಡಿಕೆ ಇದೇ ಮುಂತಾದ ಬೇಡಿಕೆಗಳನ್ನು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಂದರ್ಭ ಉಚ್ಚಿಲ ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಲಾಯಿತು. ಪ್ರತಿಭಟನಾ ಸಭೆಯಲ್ಲಿ ರಾಜಕೀಯ ಮುಖಂಡರಿಗೆ ಮತ್ತು ಅಧಿಕಾರಿ ವರ್ಗಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಸಿರಾಜ್ ಉಚ್ಚಿಲ, ಯೋಗೀಶ್ ಶೆಟ್ಟಿ, ಶೇಖರ್ ಹೆಜಮಾಡಿ, ಎಂ.ಎ ಗಫರ್ ಸಹಿತ ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ
Posted On: 19 Jan 2025, 11:56 PM
ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿಯಾಗಿ ಭಾನುವಾರ ಸಮಾಲೋಚನಾ ಸಭೆ ಕಾಪುವಿನ ವಿವೇಕ್ ಕಾಂಪ್ಲೆಕ್ಸ್ ನ ಸರೋಜ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಿತು. ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಭಕ್ತರು ತಮ್ಮ ಸಮಯದ ಜೊತೆಗೆ ಸಹಕಾರವನ್ನೂ ನೀಡಿ ಕಾಪು ಹೊಸ ಮಾರಿಗುಡಿಯ ಹೊರೆಕಾಣಿಕೆ ಮತ್ತು ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕಿದೆ. ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು. ಹೊರೆ ಕಾಣಿಕೆ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೃಹತ್ ಹೊರೆ ಕಾಣಿಕೆಯನ್ನು ನಿರೀಕ್ಷಿಸಲಾಗಿದೆ. ಫೆ.22 ರಂದು ದ.ಕ ಜಿಲ್ಲೆಯಿಂದ ಮತ್ತು ಫೆ. 23 ರಂದು ಉಡುಪಿ ಜಿಲ್ಲೆಯಿಂದ ಹೊರೆಕಾಣಿಕೆಯು ಶ್ರೀ ಕ್ಷೇತ್ರಕ್ಕೆ ಬರಲಿದೆ. ಈಗಾಗಲೇ ಉಭಯ ಜಿಲ್ಲೆಯ ದೇವಳಗಳು, ಸಂಘ ಸಂಸ್ಥೆಗಳ ಸಹಕಾರ ಕೋರಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಊರಿನಲ್ಲೂ ಸಭೆ ನಡೆಸಲಾಗುವುದು ಎಂದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸ್ವರ್ಣ ಗದ್ದುಗೆ ಸಮಿತಿ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಹೊರೆ ಕಾಣಿಕೆ ಸಮಿತಿ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಮಹಿಳಾ ಸಂಚಾಲಕಿಯರಾದ ಡಾ. ಸುನೀತಾ ಶೆಟ್ಟಿ ಕರ್ಜೆ, ಕಸ್ತೂರಿ ಪಂಜ, ಲಕ್ಷ್ಮೀ ಜನಾರ್ಧನ ದೇವಳದ ಮೊಕ್ತೇಸರ ಮನೋಹರ ಶೆಟ್ಟಿ, ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಹೊರೆ ಕಾಣಿಕೆ ಸಮಿತಿ ಕೋಶಾಧಿಕಾರಿಯಾಗಿ ಹರೀಶ್ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಶೆಟ್ಟಿ ಪಾದೂರು ಮತ್ತಿತರರು, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು. ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ಪ್ರಸ್ತಾವನೆಗೈದರು. ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಿದರು.
ಜ.17 : ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ಮೂಲಕ್ಷೇತ್ರಕ್ಕೆ ಪಡುಬಿದ್ರಿ ವಲಯದಿಂದ ಹಸಿರು ಹೊರೆಕಾಣಿಕೆ ಸಮರ್ಪಣೆ
Posted On: 16 Jan 2025, 12:46 PM
ಪಡುಬಿದ್ರಿ : ಕಚ್ಚೂರು ಶ್ರೀಮಾಲ್ತಿದೇವಿ ಶ್ರೀಬಬ್ಬುಸ್ವಾಮಿ ಮೂಲಕ್ಷೇತ್ರದ ವಾರ್ಷಿಕ ಜಾತ್ರೆ ಮಹೋತ್ಸವದ ಪ್ರಯುಕ್ತ ಹಸಿರು ಹೊರೆಕಾಣಿಕೆ ಸಮರ್ಪಣೆ ಜ.17ರಂದು ಮದ್ಯಾಹ್ನ 12 ಗಂಟೆಗೆ ಸರಿಯಾಗಿ ಪಡುಬಿದ್ರಿ ವಲಯ ಹೊರೆಕಾಣಿಕೆ ಸಮಿತಿಯ ನೇತೃತ್ವದಲ್ಲಿ ಪಡುಬಿದ್ರಿ ಶ್ರೀಮಹಾಲಿಂಗೇಶ್ವರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಪಡುಬಿದ್ರಿ ಏಳು ಮಾಗಣೆ, ವಲಯದ ವಿವಿಧ ಕೋಡ್ದಬ್ಬು ದೈವಸ್ಥಾನಗಳ ಗುರಿಕಾರರು ಹತ್ತು ಸಮಸ್ತರು, ಮುಂಡಾಲ ಯುವ ವೇದಿಕೆ ಪಡುಬಿದ್ರಿ, ವಿವಿಧ ಭಜನಾ ಮಂಡಳಿಗಳು ಮತ್ತು ಸಂಘ-ಸಂಸ್ಥೆಗಳ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಮರ್ಪಣೆಯಾಗಲಿದೆ ಎಂದು ಪಡುಬಿದ್ರಿ ವಲಯ ಹೊರೆಕಾಣಿಕೆ ಸಮಿತಿಯ ದಿನೇಶ್ ಕಂಚಿನಡ್ಕ, ರಾಜು ಹೆಜಮಾಡಿ, ರವಿ ಬೊಗ್ಗರಿಲಚ್ಚಿಲ್, ಪ್ರವೀಣ್ ಎರ್ಮಾಳು, ಪ್ರಸನ್ನ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ : ರಸ್ತೆ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾ
Posted On: 15 Jan 2025, 09:28 PM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ಪೊಲೀಸ್ ಠಾಣೆ, ಪಡುಬಿದ್ರಿ ಲಯನ್ಸ್ ಕ್ಲಬ್, ಇನ್ನರ್‌ವೀಲ್ ಕ್ಲಬ್, ರೋಟರ‍್ಯಾಕ್ಟ್ ಕ್ಲಬ್, ಕರ್ನಾಟಕ ಪಬ್ಲಿಕ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬುಧವಾರ ಬೋಡ್೯ ಶಾಲಾ ಮೈದಾನದಿಂದ ಪಡುಬಿದ್ರಿ ಪೇಟೆ, ಮಾರ್ಕೆಟ್ ರಸ್ತೆಯ ಮೂಲಕ ಜಾಗೃತಿ ಜಾಥಾ ನಡೆಯಿತು. ಕಾರ್ಯಕ್ರಮದ ವೇಳೆ ಹೆಲ್ಮೆಟ್ ಧರಿಸದ ಸವಾರನಿಗೆ ಹೊಸ ಹೆಲ್ಮೆಟ್ ವಿತರಿಸುವ ಮೂಲಕ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಾಗೃತಿ ಜಾಥಾದಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ, ರಸ್ತೆ ದಾಟಲು ಝೀಬ್ರಾ ಕ್ರಾಸಿಂಗ್ ಬಳಕೆಯ ಬಗ್ಗೆ ಪಡುಬಿದ್ರಿ ಎಸ್‌ಐ ಪ್ರಸನ್ನ ಅವರು ಮಾಹಿತಿ ನೀಡಿದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನೀನ್ ಅರ‍್ಹಾ, ಪೂರ್ವಾಧ್ಯಕ್ಷ ರಮೀಝ್ ಹುಸೈನ್, ಗಣೇಶ್ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಪಿ. ಬಂಗೇರ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಅವಿನಾಶ್, ಸ್ನೇಹಾ, ಮುದರಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ರಿಯಾಝ್ ಮುದರಂಗಡಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ಗೀತಾ ಶೆಟ್ಟಿ, ಪ್ರಾಥಮಿಕ ವಿಭಾಗದ ಜಾನೆಟ್ ಕ್ಲಾರಾ, ರೋಟರಿ ಕ್ಲಬ್‌ನ ಪುಷ್ಪಾ, ಶೋಭಾ ಉಪಸ್ಥಿತರಿದ್ದರು.
ಕಾಪು : ದಂಡತೀರ್ಥ ಕಾಲೇಜು ಸಂಸ್ಥಾಪಕ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಪುಣ್ಯತಿಥಿ ಆಚರಣೆ
Posted On: 15 Jan 2025, 08:56 PM
ಕಾಪು : ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಇವರ ಪುಣ್ಯತಿಥಿಯನ್ನು ಬುಧವಾರದಂದು ಕಾಲೇಜಿನಲ್ಲಿ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಡಾll ಕೆ.ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು. ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಮಾತನಾಡಿ, ದಿ. ಡಾ|| ಕೆ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಜೊತೆಗೆ ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜನ್ನು ಸ್ಥಾಪಿಸಿ ಬಳಿಕ ಕಲಾ ಮತ್ತು ವಾಣಿಜ್ಯ ವಿಭಾಗವನ್ನಾಗಿ ಪರಿವರ್ತಿಸಿ, ಪ್ರತೀ ವರ್ಷ ಆರು ಲಕ್ಷದಷ್ಟು ವಿದ್ಯಾರ್ಥಿವೇತನವನ್ನು ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿದ್ದಲ್ಲದೆ ಈ ವಿದ್ಯಾ ಸಂಸ್ಥೆಯನ್ನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗುವಂತೆ ಮಾಡಿದವರು. ಅವರ ಆದರ್ಶ ನಮಗೆಲ್ಲ ದಾರಿದೀಪವಾಗಬೇಕು ಹಾಗೂ ಅವರು ಕಟ್ಟಿ ಬೆಳೆಸಿದ ಈ ವಿದ್ಯಾಸಂಸ್ಥೆಯ ಪ್ರಗತಿಗೆ ನಾವೆಲ್ಲ ನಿರಂತರವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ಸಮಾರಂಭದಲ್ಲಿ ಕಾಲೇಜು ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ಶಾಲಾ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ
Posted On: 14 Jan 2025, 07:21 PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ, ಕ.ಜಾ.ಪ. ಕುಂದಾಪುರ ತಾಲೂಕು ಹಾಗೂ ರೋಟರಿ ಸಮುದಾಯ ದಳ ಕೊರವಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಮಂಗಳವಾರ ಶ್ರೀ ವಿಷ್ಣುಮೂತಿ೯ ದೇವಸ್ಥಾನದ ಸಂಭಾಗಣ ಕೊರವಾಡಿಯಲ್ಲಿ ನಡೆಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಗ್ರಾ.ಪಂ ಅಧ್ಯಕ್ಷ ಆನಂದ ಪೂಜಾರಿ ನೆರವೇರಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು.ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ಸಮುದಾಯ ದಳ ಕೊರವಡಿ ಅಧ್ಯಕ್ಷ ಕೆ ಸುರೇಶ್ ವಿಠಲವಾಡಿ, ಸ್ಥಾಪಕ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ , ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕವಾ೯ಲು, ನರಸಿಂಹ ನಾಯಕ್, ತೀಪು೯ಗಾರರಾದ ಸಿಂಧು ಐತಾಳ, ರವಿಕಟ್ಕರೆ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕುಂದಾಪುರ ತಾಲೂಕು ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಂಧ್ಯಾ ಹೆಗಡೆ ನಿರೂಪಿಸಿದರು. ವಿಜೇತರಿಗೆ ನಗದು ಬಹುಮಾನ ದೊಂದಿಗೆ ಗೌರವಿಸಲಾಯಿತು.
ಕಳತ್ತೂರು : ಶ್ರೀ ಅಯ್ಯಣ್ಣ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಸಂಪನ್ನ
Posted On: 14 Jan 2025, 04:01 PM
ಕಾಪು : ತಾಲೂಕಿನ ಕುತ್ಯಾರು ಕಳತ್ತೂರು ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಯಶಸ್ವಿಯಾಗಿ ಇತ್ತೀಚೆಗೆ ನಡೆಯಿತು. ಶಾಲೆಯ ಹಳೆವಿದ್ಯಾರ್ಥಿ, ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಶಾಲೆಯ ಪ್ರೋತ್ಸಾಹಕರು, ಶಾಲೆಯ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
