Updated News From Kaup

ಕಾರ್ಕಳ ಪ್ರಭಾರ ತಹಶೀಲ್ದಾರ್ ಆಗಿ ಪ್ರತಿಭಾ.ಆರ್ ಅಧಿಕಾರ ಸ್ವೀಕಾರ

Posted On: 18-08-2024 08:42AM

ಕಾರ್ಕಳ : ಕಾಪು ತಾಲೂಕಿನ ತಹಶೀಲ್ದಾರ್ ಡಾ. ಪ್ರತಿಭಾ ಆ‌ರ್. ಕಾರ್ಕಳ ತಾಲೂಕು ಪ್ರಭಾರ ತಹಶೀಲ್ದಾರ್ ಆಗಿ ಶನಿವಾರದಂದು ಅಧಿಕಾರ ಸ್ವೀಕರಿಸಿದರು.

ಕಂಚಿನಡ್ಕ ರಾಜ್ಯ ಹೆದ್ದಾರಿ ಟೋಲ್‌ : ಪಡುಬಿದ್ರಿ ರೋಟರಿ, ಲಯನ್ಸ್, ಜೆಸಿಐ ಸಂಸ್ಥೆಗಳಿಂದ ಪ್ರತಿಭಟನೆಗೆ ಸಹಕಾರ

Posted On: 17-08-2024 06:46PM

ಪಡುಬಿದ್ರಿ : ಇಲ್ಲಿನ ಕಂಚಿನಡ್ಕದಲ್ಲಿ ರಾಜ್ಯ ಹೆದ್ದಾರಿಯ ಟೋಲ್‌ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು ಇದನ್ನು ವಿರೋಧಿಸುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸಂಸ್ಥೆಗಳಾದ ಪಡುಬಿದ್ರಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಲಯನ್ಸ್ ಸ್ಫೂರ್ತಿ, ಜೆಸಿಐ ಪಡುಬಿದ್ರಿ ಶನಿವಾರ ಪಡುಬಿದ್ರಿ ಸೊಸೈಟಿ ಸಭಾಂಗಣದಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಎರ್ಮಾಳು : ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕ ಅನಾವರಣ

Posted On: 16-08-2024 10:53PM

ಎರ್ಮಾಳು : ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಎರ್ಮಾಳು ರಾಮಪ್ಪ ಜಿ. ಸಾಲ್ಯಾನ್‌ರವರ ಮನೆಯಲ್ಲಿ ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಗುರುವಾರ ಜರಗಿತು. ಪತ್ರಕರ್ತ ಚೇತನ್ ಶೆಟ್ಟಿ ರಾಷ್ಟ್ರಧ್ವಜಕ್ಕೆ ಪುಷ್ಪಾಚ೯ನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾನಪದ ವಿದ್ವಾಂಸ ಡಾ. ವೈ .ಎನ್ . ಶೆಟ್ಟಿ ನಾಮಫಲಕ ಅನಾವರಣ ಮಾಡಿದರು.

ಶಿರ್ವ ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ : ಸ್ವಾತಂತ್ರ್ಯೋತ್ಸವ ಆಚರಣೆ ; ಆಕ್ಸಿಲಿಯಮ್ ನಿವಾಸ ಭೇಟಿ

Posted On: 16-08-2024 10:16PM

ಶಿರ್ವ : ಸೈಂಟ್ ಮಿಲಾಗ್ರಿಸ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆ ವತಿಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಕ್ಸಿಲಿಯಮ್ ನಿವಾಸ ಶಿರ್ವ ಇಲ್ಲಿನ 43 ಮಕ್ಕಳಿಗೆ ಬೆಡ್‌ಶೀಟ್ ಮತ್ತು ಸಿಹಿ ತಿಂಡಿ ವಿತರಣೆ ಮಾಡಲಾಯಿತು.

ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು : 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Posted On: 15-08-2024 11:16PM

ಕಾಪು : ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ಬೆಳಪು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಪಡುಬಿದ್ರಿಯ ಕಂಚಿನಡ್ಕ ಟೋಲ್ ಗೇಟ್ : ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ - ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ

Posted On: 15-08-2024 11:10PM

ಪಡುಬಿದ್ರಿ : ರಾಜ್ಯ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಪಡುಬಿದ್ರಿ ರೈಲು ನಿಲ್ದಾಣದಲ್ಲಿ ಮತ್ಸ್ಯಗಂಧ ನಿಲುಗಡೆಗೆ ರೈಲ್ವೆ ಸಚಿವರಿಗೆ ಕಾಪು ಶಾಸಕರಿಂದ ಮನವಿ

Posted On: 15-08-2024 10:56PM

ಕಾಪು : ಪಡುಬಿದ್ರಿ - ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ ಲೋಕಮಾನ್ಯ ತಿಲಕ್‌ ಮತ್ಸ್ಯಗಂಧ ರೈಲು ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಗುರುವಾರ ಸಂಜೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣನವರಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ ಸಲ್ಲಿದರು. ಕಾಪು ಮಂಥನ ಬೀಚ್‌ ರಿಸಾರ್ಟ್‌ಗೆ ಔಪಚಾರಿಕ ಭೇಟಿ ಸಂದರ್ಭ ಮನವಿ ನೀಡಿದರು.

ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಕಾಪು ಕಳತ್ತೂರು : 78ನೇ ಸ್ವಾತಂತ್ರೋತ್ಸವ ಆಚರಣೆ

Posted On: 15-08-2024 10:45PM

ಕಾಪು : ಕುಶಲ ಶೇಖರ್ ಶೆಟ್ಟಿ ಇಂಟರ್ ನ್ಯಾಷನಲ್ ಹಾಲ್ ಹಾಗೂ ಫ್ರೆಂಡ್ಸ್ ಕ್ಲಬ್ ಕಳತ್ತೂರು ಜಂಟಿಯಾಗಿ ಆಯೋಜಿಸಿದ್ದ 78ನೇ ಸ್ವಾತಂತ್ರೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ರಾಜ್ಯ ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತರಾದ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರು ಧ್ವಜಾರೋಹಣಗೈದರು.

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ : 78ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 05:03PM

ಪಡುಬಿದ್ರಿ : ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ನೆರವೇರಿಸಿದರು.

ಕಾಪು : ದಂಡತೀರ್ಥ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 04:32PM

ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.