Updated News From Kaup
ಆಗಸ್ಟ್ 4 : ಕಾಪುವಿನಲ್ಲಿ ಹಾಲೆ ಮರದ ತೊಗಟೆ ಕಷಾಯ ವಿತರಣೆ
Posted On: 02-08-2024 06:59PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಆಗಸ್ಟ್ 4 ರಂದು ಆಟಿ ಅಮವಾಸ್ಯೆ ಪ್ರಯುಕ್ತ ಕಾಪು ತೃಪ್ತಿ ಹೊಟೇಲ್ ಮುಂಭಾಗದಲ್ಲಿ ಬೆಳಿಗ್ಗೆ 6.30 ರಿಂದ 8.30 ರವರೆಗೆ ಉಚಿತವಾಗಿ ಹಾಲೆ ಮರದ ತೊಗಟೆ ಕಷಾಯ ವಿತರಣೆ ನಡೆಯಲಿದೆ ಎಂದು ಪ್ರಕಟಣೆಯು ತಿಳಿಸಿದೆ.
ಪಡುಬಿದ್ರಿ : ಅದಾನಿ ಫೌಂಡೇಶನ್ ವತಿಯಿಂದ ರೂ.60 ಲಕ್ಷ ಮೌಲ್ಯದ ಶಿಕ್ಷಣ ಪರಿಕರಗಳ ವಿತರಣೆ
Posted On: 02-08-2024 04:56PM
ಪಡುಬಿದ್ರಿ : ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಳ್ಳುವುದರ ಜೊತೆಗೆ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮದ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ ಎಸ್ ಆರ್ ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು ರೂ. 60 ಲಕ್ಷ ಮೊತ್ತದ ಶಿಕ್ಷಣ ಪರಿಕರಗಳನ್ನು 76 ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 6,800 ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ ಎಂದು ಅದಾನಿ ಫೌಂಡೇಷನ್ ಅಧ್ಯಕ್ಷರಾದ ಕಿಶೋರ್ ಆಳ್ವ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘದಲ್ಲಿ ಅದಾನಿ ಸಂಸ್ಥೆಯ ವತಿಯಿಂದ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಸಂಸ್ಥೆಯ ಶೈಕ್ಷಣಿಕ ಪರಿಕರ ವಿತರಿಸಿ ಮಾತನಾಡಿದರು.
ಪಡುಕುತ್ಯಾರು : ಆನೆಗುಂದಿ ಶ್ರೀಗಳವರ ಜನ್ಮ ವರ್ಧಂತ್ಯುತ್ಸವ ; ವಿವಿಧ ಧಾರ್ಮಿಕ ಕಾರ್ಯಕ್ರಮ
Posted On: 02-08-2024 09:14AM
ಪಡುಕುತ್ಯಾರು : ಬದುಕಿನಲ್ಲಿ ಸಂತಸ ಕಾಣಲು ಹುಟ್ಟು ಸಾವಿನ ನಡುವಿನ ನಮ್ಮ ಜೀವನದ ಅವಧಿಯಲ್ಲಿ ಭಗವಂತನ ಅನುಗ್ರಹದೊಂದಿಗೆ ಸನ್ನಡತೆ, ಸತ್ಕಾರ್ಯ,ಉತ್ತಮ ನುಡಿಯ ಮೂಲಕ ಬದುಕಿನಲ್ಲಿ ಸ್ವರ್ಗವನ್ನು ಕಾಣಲು ಸಾಧ್ಯ. ನಮ್ಮಿಂದ ಇನ್ನೊಬ್ಬರ ಬದುಕಿನಲ್ಲಿ ಸಂತಸ ಮೂಡಿದರೆ ಅದುವೇ ಬದುಕಿನ ಅತ್ಯಂತ ಸುಂದರ ಸಂತಸದ ಕ್ಷಣಗಳು ಎಂದು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಹೇಳಿದರು. ಅವರು ಪಡುಕುತ್ಯಾರಿನಲ್ಲಿ ಗುರುವಾರ ನಡೆದ ತಮ್ಮ 20ನೇ ಚಾತುರ್ಮಾಸ್ಯದ ಅಂಗವಾಗಿ ಜನ್ಮವರ್ಧಂತ್ಯುತ್ಸವ ಧರ್ಮ ಸಂಸತ್ನಲ್ಲಿ ಆಶೀರ್ವಚನ ನೀಡಿದರು. ಜ್ಞಾನದ ಹರಿವು ಹರಿದಷ್ಟು ಸಮಾಜದ ಜನರಲ್ಲಿ ಅರಿವಿನ ಜಾಗೃತಿ ಹೆಚ್ಚುತ್ತದೆ. ಶಾಸ್ತ್ರರಹಿತವಾದ ಶಿಲ್ಪವು ಕೇವಲ ಕೂಲಿ ಕೆಲಸವಾಗುತ್ತದೆ ಶಾಸ್ತ್ರಸಹಿತವಾದ ಅಧ್ಯಯನದ ಮೂಲಕ ಮಾತ್ರವೇ ಅದು ಶಿಲ್ಪವಾಗುತ್ತದೆ ಅದರ ನಿರ್ಮಾತೃ ಶಿಲ್ಪಿ ಎನಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪಡುಕುತ್ಯಾರಿನ ಮಹಾಸಂಸಂಸ್ಥಾನದಲ್ಲಿ ಶಾಸ್ತ್ರ ಸಹಿತವಾದ ಶಿಲ್ಪ ಕಲೆಯ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಪಂಚ ಶಿಲ್ಪದ, ವಾಸ್ತು ಶಿಲ್ಪವನ್ನು ಕಲಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ನುಡಿದರು.
ಶಿರ್ವ : ಆಶಾಲತ ಮೂಲ್ಯರಿಗೆ ಬೇಕಿದೆ ಸಹೃದಯಿ ಬಂಧುಗಳ ನೆರವು
Posted On: 02-08-2024 08:55AM
ಕಾಪು : ತಾಲೂಕಿನ ಶಿರ್ವ ಸಮೀಪದ ಆಶಾಲತ ಮೂಲ್ಯ ಇವರಿಗೆ 6 ವರ್ಷದ ಹಿಂದೆ ಕ್ಯಾನ್ಸರ್ ಆಗಿದ್ದು, ಇದೀಗ ಚೇತರಿಸಿ ಮತ್ತೆ ಅಲ್ಸರ್ ಸಮಸ್ಯೆ ಇದ್ದು ಒಂದು ಹೆಣ್ಣು ಮಗಳ ವಿದ್ಯಾಭ್ಯಾಸದ ಚಿಂತೆಯಾದರೆ, ಇತ್ತ ಪತಿಯ ಆಸರೆಯನ್ನು ಕಳೆದುಕೊಂಡ ಇವರಿಗೆ ತಿಂಗಳ ಚಿಕಿತ್ಸೆಗಾಗಿ ಹಣವಿಲ್ಲದೆ ಸಂಕಷ್ಟದಲ್ಲಿದ್ದು ನೆರವಿನ ನಿರೀಕ್ಷೆಯಲ್ಲಿದ್ದಾರೆ.
ಕುಲಾಲ ಸಮಾಜ ಸೇವಾ ಸಂಘ ಬೆಳಪು : ವಾರ್ಷಿಕ ಮಹಾಸಭೆ, ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ
Posted On: 02-08-2024 08:51AM
ಕಾಪು : ತಾಲೂಕಿನ ಕುಲಾಲ ಸಮಾಜ ಸೇವಾ ಸಂಘ ಬೆಳಪು ಇದರ ಮಹಾಸಭೆಯು ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ ಪಣಿಯೂರು ಇದರ ಸಭಾಂಗಣದಲ್ಲಿ ಜರಗಿತು. ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕುಲಾಲ ಸಮಾಜದ ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನದ ವ್ಯವಸ್ಥೆ ಜೊತೆಗೆ ಬೆಳಪು ಭಾಗದಲ್ಲಿ ಆಗುವ ಕಾರ್ಖಾನೆಯಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಕಲ್ಪಿಸಿ ಕೊಡುವುದಾಗಿ ಹೇಳಿದರು.
ಕಾಪು : ಸ್ವತಃ ಫೀಲ್ಡಿಗಿಳಿದ ಸಾಹಸಿ ತಹಶಿಲ್ದಾರ್ ಡಾ. ಪ್ರತಿಭಾ ಆರ್.
Posted On: 01-08-2024 08:39PM
ಕಾಪು : ಸಾಮಾನ್ಯವಾಗಿ ಅಧಿಕಾರಿಗಳೆಂದರೆ ಭರವಸೆಯ ಮಾತುಗಳಿಗೆ ಸೀಮಿತ ಎಂಬ ಅಪವಾದವಿದೆ. ಆದರೆ ಇಲ್ಲೊಬ್ಬರು ಮಹಿಳಾ ಅಧಿಕಾರಿ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅವರೇ ಕಾಪು ತಾಲ್ಲೂಕಿನ ತಹಶಿಲ್ದಾರ್ ಡಾ. ಪ್ರತಿಭಾ ಆರ್. ಬುಧವಾರ ಸುರಿದ ಭಾರೀ ಮಳೆಯಿಂದಾಗಿ ನೆರೆ ಉಂಟಾಗಿ ಕಾಪು ತಾಲ್ಲೂಕಿನಲ್ಲಿ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿತ್ತು. ಸುರಿತಯುವ ಮಳೆಯನ್ನೂ ಲೆಕ್ಕಿಸದೆ ತಾವೇ ಸ್ವತಃ ಫೀಲ್ಡಿಗಿಳಿದು ನೆರೆ ಪ್ರದೇಶಕ್ಕೆ ಧಾವಿಸಿ ಬೋಟ್ ನ ಮೂಲಕ ನೆರೆಗೆ ಸಿಲುಕಿದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದರು. ಸಂತ್ರಸ್ತರ ಮನ ಒಲಿಸಿ ಕರೆತಂದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಲ್ಲಿ ತಹಶಿಲ್ದಾರ್ ಪ್ರತಿಭಾ ಯಶಸ್ವಿಯಾಗಿದ್ದಾರೆ.
ಕಟಪಾಡಿ - ಏಣಗುಡ್ಡೆ : ಎಂಟು ಮನೆಗಳು ಜಲಾವೃತ ; ತಹಶಿಲ್ದಾರ್ ಭೇಟಿ
Posted On: 01-08-2024 08:15PM
ಕಟಪಾಡಿ : ಇಲ್ಲಿನ ಏಣಗುಡ್ಡೆ ಗ್ರಾಮದಲ್ಲಿ ಜಲಾವೃತಗೊಂಡ ಎಂಟು ಮನೆಗಳಿಗೆ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭೇಟಿ ನೀಡಿ, ಸಾಂತ್ವನ ಹೇಳಿದರು.
ಕಾಪು : ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನ - ವ್ಯಸನ ಮುಕ್ತ ದಿನಾಚರಣೆ
Posted On: 01-08-2024 07:54PM
ಕಾಪು : ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ವ್ಯಸನ ಮುಕ್ತ ದಿನಾಚರಣೆಯಾಗಿ ಕಾಪು ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ಆಚರಿಸಲಾಯಿತು.
ಬಂಟಕಲ್ಲು ಬಸ್ ನಿಲ್ದಾಣದಲ್ಲಿ ಕಸಾಪ "ಮನೆಯೇ ಗ್ರಂಥಾಲಯ" ಅಭಿಯಾನ
Posted On: 01-08-2024 07:42PM
ಬಂಟಕಲ್ಲು : ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕು ಘಟಕದ ವತಿಯಿಂದ ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಅವರಿಗೆ ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ ಅವರು ಹಸ್ತಾಂತರಿಸಿದರು.
ನಾಳೆ (ಆಗಸ್ಟ್ 2) : ಮಳೆ ಹಿನ್ನೆಲೆ - ಉಡುಪಿ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ
Posted On: 01-08-2024 07:17PM
ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 2ರಂದು (ನಾಳೆ) ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
