Updated News From Kaup
ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Posted On: 25-06-2024 07:35PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸ?ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು.
ಮುಂಬೈ ಹೇರಂಭ ಸಂಸ್ಥೆಯ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ದೇವಿಯ ಆರಾಧಕರಿಗೆ ಸುವರ್ಣಾವಕಾಶ ಒದಗಿ ಬಂದಿದ್ದು, ಕಾಪುವಿನ ಮಾರಿಯಮ್ಮ ದೇವಿಯನ್ನು ಸುವರ್ಣ ಗದ್ದುಗೆಯಲ್ಲಿ ನೋಡುವಲ್ಲಿ ಎಲ್ಲರಿಗೂ ಕೈ ಜೋಡಿಸುವ ಭಾಗ್ಯ. ತಂದೆ ತಾಯಿ ಕೊಟ್ಟ ಸಂಸ್ಕಾರ, ಸತತ ಪರಿಶ್ರಮ, ಧರ್ಮ ಕಾರ್ಯದ ಮೂಲಕ ದೈವೀ ಶಕ್ತಿಯು ಜಾಗೃತಗೊಳ್ಳಲಿದೆ. ಆ ನಿಟ್ಟಿನಲ್ಲಿ ಇತಿಹಾಸ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಶ್ರದ್ಧಾ ಭಕ್ತಿಯಿಂದ ಕೈ ಜೋಡಿಸುವ ಮೂಲಕ ಕರಾವಳಿಯ ಶ್ರೇಷ್ಠ ಶ್ರದ್ಧಾ ಕೇಂದ್ರವಾಗಿ ಮೂಡಿ ಬರಲಿ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಅಮ್ಮನ ನುಡಿಯಂತೆ ಸ್ವರ್ಣ ಗದ್ದುಗೆ ಸಮರ್ಪಣೆಗೆ ಮುಂದಾಗಿದ್ದು, ಶ್ರೀ ಕ್ಷೇತ್ರಕ್ಕೆ ಶಕ್ತಿ, ಚೈತನ್ಯವನ್ನು ತುಂಬುವಲ್ಲಿ ಸ್ವರ್ಣ ಗದ್ದುಗೆ ನಿರ್ಮಾಣದ ಸಂದರ್ಭ ಇಲ್ಲಿ ಬರುವ ಬಂಗಾರದ ಮಳೆಯು ಎಲ್ಲರ ಬದುಕಿಗೂ ಸ್ವರ್ಣ ಯುಗವಾಗಲಿ. ಈ ಪುಣ್ಯ ಅವಕಾಶವನ್ನು ಭಕ್ತರೆಲ್ಲರೂ ಸದುಪಯೋಗಪಡಿಸಿಕೊಂಡು ಸನ್ನಿಧಾನದಲ್ಲಿ ಸ್ವರ್ಣ ಸಮರ್ಪಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿದರು. ವಿ.ಕೆ. ಗ್ರೂಪ್ ಆಫ್ ಕಂಪೆನಿ ಮುಂಬಯಿಯ ಆಡಳಿತ ನಿರ್ದೇಶಕ ಕೆ.ಎಮ್. ಶೆಟ್ಟಿ ಅವರು ಸ್ವರ್ಣ ಗದ್ದುಗೆ ಮಾದರಿಯನ್ನು ಅನಾವರಣ ಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂಆರ್ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕ ಡಾ|ಕೆ. ಪ್ರಕಾಶ್ ಶೆಟ್ಟಿ, ಆಶಾ ಪ್ರಕಾಶ್ ಶೆಟ್ಟಿ ದಂಪತಿಯನ್ನು ಸಮ್ಮಾನಿಸಿ ಗೌರವಿಸಲಾಯಿತು.
ಸುಮಾರು ೩.೮೨ ಕೋಟಿ ರೂ. ವೆಚ್ಚದ ಅದಾನಿ ನಿರ್ಮಲ್ ಸೆಂಟರ್ ಕಟ್ಟಡವನ್ನು ನಿರ್ಮಿಸಿ ಕೊಡುವಂತೆ ಅದಾನಿ ಸಮೂಹದ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಅವರಲ್ಲಿ ಮನವಿಯನ್ನು ಸಲ್ಲಿಸಲಾಯಿತು. ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುಂಬಯಿ ತುಂಗಾ ಗ್ರೂಪ್ ಆಫ್ ಹೋಟೆಲ್ನ ಆಡಳಿತ ನಿರ್ದೇಶಕ ಸುಧಾಕರ್ ಹೆಗ್ಡೆ, ಮುಂಬಯಿ ಈಸ್ಟ್ವೆಲ್ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಭಾಕರ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ ಆರ್. ಈ ಪುಣ್ಯ ಕಾರ್ಯದಲ್ಲಿ ಭಕ್ತರೆಲ್ಲರೂ ಕೈ ಜೋಡಿಸುವಂತೆ ವಿನಂತಿಸಿದರು. ಈ ಸಂದರ್ಭ ಮುಂಬಯಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮಹೇಶ್ ಕೋಟ್ಯಾನ್, ಮುಂಬಯಿ ಉದ್ಯಮಿ ಮಾನವ್ ಶಂಕರ್ ಜೋಶಿ, ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಸುವರ್ಣ, ಹೊಸಮಾರಿಗುಡಿ ಜೀರ್ಣೋದ್ಧಾರ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಮಾರಿಗುಡಿಯ ಆಡಳಿತ ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಅಧ್ಯಕ್ಷ ರವಿ ಸುಂದರ್ ಶೆಟ್ಟಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ಪೂನಾ, ಕೃಷ್ಣ ಶೆಟ್ಟಿ, ಶಿವಾನಂದ ಶೆಟ್ಟಿ, ಸಂತೋಷ್ ಶೆಟ್ಟಿ ಪೂನಾ, ದಿವಾಕರ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಕಾರ್ಯಾಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಸನ್ನ ಆಚಾರ್ಯ ಕಾಪು, ಕಾರ್ಯದರ್ಶಿ ರವಿ ಭಟ್ ಮಂದಾರ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಮುಖರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಯರಾಮ ಆಚಾರ್ಯ, ಸಂದೀಪ್, ಮಾಧವ ಆರ್ ಪಾಲನ್, ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ಹೊಸಮಾರಿಗುಡಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸಿಬಂದಿ ವರ್ಗ ಉಪಸ್ಥಿತರಿದ್ದರು.
ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯಾಧ್ಯಕ್ಷ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಕದ್ರಿ ನವನೀತ್ ಶೆಟ್ಟಿ ಸಮ್ಮಾನಿತರ ಅಭಿನಂದನಾ ನುಡಿಗಳನ್ನಾಡಿದರು. ಸಮಾಜ ಸೇವಕ ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ಕೊತ್ವಾಲಗುತ್ತು ವಂದಿಸಿದರು. ಈ ಸಂದರ್ಭ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಉಪಸ್ಥಿತಿಯಲ್ಲಿ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆ, ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಂಕಲ್ಪ, ಮಹಾ ಮಂಗಳಾರತಿ, ಭಕ್ತಾಧಿಗಳಿಗೆ ಸ್ವರ್ಣ ಸಮರ್ಪಣೆಗೆ ಅವಕಾಶ, ಪ್ರಸಾದ ಭೋಜನ ನಡೆಯಿತು.
ಕಾಪು : ನಿರ್ಮಾಣ ಹಂತದಲ್ಲಿರುವ ಶಿಲಾಮಯ ಗರ್ಭಗುಡಿ, ಮಾರಿಗುಡಿಯ ಶಿಲಾಸ್ತಂಭ ಪರಿಗ್ರಹ ಸಮರ್ಪಣಾ ಸಂಕಲ್ಪ ಪೂಜೆ ಸಂಪನ್ನ

Posted On: 25-06-2024 07:17AM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸಂಪೂರ್ಣ ಇಳಕಲ್ ಕೆಂಪು ಶಿಲೆಯೊಂದಿಗೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶಿಲಾಮಯ ಗರ್ಭಗುಡಿ ಮತ್ತು ಸಂಪೂರ್ಣ ಮಾರಿಗುಡಿಯ ಶಿಲಾಸ್ತಂಭ ಪರಿಗ್ರಹ ಸಮರ್ಪಣಾ ಸಂಕಲ್ಪ ಪೂಜೆಯು ಸೋಮವಾರ ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಹೊಸ ಮಾರಿಗುಡಿ ನಿರ್ಮಾಣ ಕಾಮಗಾರಿಯನ್ನು ವಹಿಸಿಕೊಂಡಿರುವ ಶಿಲ್ಪಿಗಳು ಮಾರಿಗುಡಿಯ ಮಹಾದ್ವಾರ, ನಾಲ್ಕು ಮಹಾಸ್ಥಂಭ, ಮರದ ಕೆತ್ತನೆಯ ಮೇಲ್ಛಾವಣಿಯ ಕರ್ಣ ಮುಚ್ಚಿಗೆ, ಸುತ್ತು ಪೌಳಿಯ ಶಿಲಾಸ್ಥಂಭಗಳ ಸಹಿತವಾಗಿ ನಾಲ್ಕು ಲಕ್ಷ ರೂ. ಗಳಿಂದ ಎರಡು ಕೋಟಿ ರೂಪಾಯಿವರೆಗಿನ ೮೬ ಶಿಲಾಸ್ಥಂಬಗಳನ್ನು ದಾನಿಗಳಿಗೆ ಹಸ್ತಾಂತರಿಸಿದರು.
ದಾನಿಗಳು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಕೆ. ರವಿಕಿರಣ್, ಮುಂಬಯಿ ಗೌರವಾಧ್ಯಕ್ಷ ಎಂ. ಸುಧಾಕರ್ ಹೆಗ್ಡೆ, ಮುಂಬಯಿ ಸಮಿತಿ ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಮಹಾದ್ವಾರದ ದಾನಿ ಕೆ. ಎಂ. ಶೆಟ್ಟಿ ಮುಂಬಯಿ, ಮಹಾಸ್ತಂಭದ ದಾನಿ ಪ್ರಭಾಕರ ಜೆ. ಶೆಟ್ಟಿ ಮಂಡಗದ್ದೆ ಹಾಗೂ ಶಿಲಾಸ್ತಂಭ ಸಮರ್ಪಿಸಿದ ದಾನಿಗಳು, ಅವರ ಕುಟುಂಬಸ್ಥರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಗೆ ನೂತನ ಸ್ವರ್ಣ ಗದ್ದುಗೆ ನಿರ್ಮಾಣಗೊಳ್ಳಲಿದ್ದು ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಜೂ. ೨೫ರಂದು ಬೆಳಿಗ್ಗೆ ೯.೦೯ ಕ್ಕೆ ಸ್ವರ್ಣ ಗೌರಿ ಪೂಜೆಯ ಮೂಲಕವಾಗಿ ಚಾಲನೆ ನೀಡಲಾಗುವುದು. ಭಕ್ತರಿಗೆ ೯ ಗ್ರಾಂ, ೧೮ ಗ್ರಾಂ, ೯೯ ಗ್ರಾಂ, ೨೪೩ ಗ್ರಾಂ, ೪೫೦ ಗ್ರಾಂ, ೯೯೯ ಗ್ರಾಂ ಸ್ವರ್ಣ ಸಮರ್ಪಣೆಗೆ ಅವಕಾಶವಿದ್ದು ಸ್ವರ್ಣ ಸಮರ್ಪಣಾ ಸಮಾರಂಭ ಮತ್ತು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲೂ ಸ್ವರ್ಣ ಸಮರ್ಪಿಸಬಹುದಾಗಿದೆ. ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ ಎಂದು ಸ್ವರ್ಣ ಸಮರ್ಪಣಾ ಸಮಿತಿ ಮತ್ತು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪ್ರಕಟಣೆಯು ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ

Posted On: 24-06-2024 07:28PM
ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇವರ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಜೂ. 23 ರಂದು ಶಾಂತಿ ನಗರ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯ ಅಧ್ಯಕ್ಷ ಡಾ. ಎಸ್ ಬಾಲಾಜಿ ಜನಪದ ಸಾಹಿತ್ಯವು ಧರ್ಮತೀತವಾಗಿದೆ. ಜಾನಪದದಿಂದ ಹಲವಾರು ಸಂಸ್ಕೃತಿಯ ಪರಿಚಯ ನಮಗೆ ದೊರೆಯುತ್ತದೆ. ಈ ನಿಟ್ಟಿನಲ್ಲಿ ಜನಪದ ಸಾಹಿತ್ಯ ಮತ್ತು ಅದರ ದಾಖಲೀಕರಣ ಅಗತ್ಯವಾಗಿದೆ. ಜಾನಪದ ಪರಿಷತ್ ಮೂಲಕ ಮುಂದಿನ ದಿನಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಮಹಿಳಾ ಪ್ರತಿನಿಧಿ ಅಹಲ್ಯ ಹೆಗ್ಡೆ, ಮಹಾಮಾಯಿ ಭಜನಾ ಮಂಡಳಿಯ ಸಂಸ್ಥಾಪಕಿ ಮೋಹಿನಿ ಭಟ್, ಆಶ್ಲೇಷ ಹೋಟೆಲಿನ ಮಾಲಕರಾದ ಶ್ರುತಿ ಜಿ.ಶಣೈ, ಜಿಲ್ಲಾ ಘಟಕದ ಖಜಾಂಚಿ ಚಂದ್ರ ಹಂಗಾರುಕಟ್ಟೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದಭ೯ದಲ್ಲಿ ಹಿರಿಯ ಜಾನಪದ ಕಲಾವಿದೆ ಸರಸ್ವತಿ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಂಸ್ಥೆ ವತಿಯಿಂದ ರಾಜಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರನ್ನು ಗೌರವಿಸಲಾಯಿತು. ನೂತನ ಅಧ್ಯಕ್ಷೆ ಮಾಯಾ ಕಾಮತ್ ಮತ್ತು ಅವರ ತಂಡಕ್ಕೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿದರು. ಪ್ರ.ಕಾಯ೯ದಶಿ೯ ಕುಸುಮ ಕಾಮತ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಭಜನಾ ಮತ್ತು ಸಾಂಸ್ಕ್ರತಿಕ ಕಾಯ೯ಕ್ರಮ ನಡೆಯಿತು.
ಪಡುಬಿದ್ರಿ : ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ

Posted On: 24-06-2024 06:10PM
ಪಡುಬಿದ್ರಿ : ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ, ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡುತ್ತಿದ್ದಾರೆ. ಪೋಷಕರ ಕನಸುಗಳನ್ನು ನನಸುಗೊಳಿಸಲು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕು. ಇಂತಹ ಸಮಾಜ ಘಾತುಕ ಮಾದಕ ವಸ್ತುಗಳಿಗೆ ಆಕರ್ಷಿತರಾಗಬಾರದು. ಅಪರಾಧ ಕೃತ್ಯಗಳಿಗೆ ಬಲಿಯಾಗದೇ ದೇಶದ ಉತ್ತಮ ಪ್ರಜೆಯಾಗಿ ಬಾಳಿ ಎಂದು ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಹಾಗು ಪಡುಬಿದ್ರಿ ಪೋಲಿಸ್ ಠಾಣೆ ವತಿಯಿಂದ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಾಲೇಜು ಸಭಾಂಗಣದಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಅಭಿಯಾನ ಕಾರ್ಯಕ್ರಮಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ವಹಿಸಿದ್ದರು.
ಇನ್ನರ್ ವೀಲ್ ಅಧ್ಯಕ್ಷೆ ನಮೃತಾ ಮಹೇಶ್, ಕಾಲೇಜು ಪ್ರಭಾರ ಪ್ರಾಂಶುಪಾಲೆ ಹರ್ಷದ್ ಭಾನು, ಹಿರಿಯ ಶಿಕ್ಷಕಿ ಗೀತಾ ಶೆಟ್ಟಿ, ರೋಟರಿ ನಿಕಟ ಪೂರ್ವ ಅಧ್ಯಕ್ಷೆ ಗೀತಾ ಅರುಣ್, ನಿಯೋಜಿತ ಅಧ್ಯಕ್ಷೆ ತಸ್ನೀನ್ ಅರಾ, ಕೋಶಾಧಿಕಾರಿ ಸುನಿಲ್ ಕುಮಾರ್, ಪೋಲಿಸ್ ಸಿಬ್ಬಂದಿ ಹೇಮರಾಜ್ ಉಪಸ್ಥಿತರಿದ್ದರು.
ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮೋಹನ್ ಕರ್ಕೇರ ನಿರೂಪಿಸಿದರು. ರೋಟರಿ ಕಾರ್ಯದರ್ಶಿ ಪವನ್ ಸಾಲ್ಯಾನ್ ವಂದಿಸಿದರು.
ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ - ಇಲಾಖಾಧಿಕಾರಿಗಳೊಂದಿಗೆ ಶಾಸಕರ ಭೇಟಿ

Posted On: 23-06-2024 05:03PM
ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ರವಿವಾರ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಕಾಪು ತಹಶೀಲ್ದಾರರಾದ ಪ್ರತಿಭ ಆರ್., ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರರಾದ ಜಯರಾಜ್ ಉಪಸ್ಥಿತರಿದ್ದರು.
ಓಂ ಶ್ರೀ ಯೋಗ ಕೇಂದ್ರ ಬಸ್ರೂರು : ಯೋಗ ದಿನಾಚರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Posted On: 23-06-2024 03:12PM
ಬಸ್ರೂರು : ಓಂ ಶ್ರೀ ಯೋಗ ಕೇಂದ್ರ ಬಸ್ರೂರು ವತಿಯಿಂದ ಜರಗಿದ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ .ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ನಿತ್ಯದ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.
ಸನ್ಮಾನ : 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದಂತಹ ಸ್ಥಳೀಯ ಬಸ್ರೂರು ಗ್ರಾಮದ ಸಾಧಕ ವಿದ್ಯಾರ್ಥಿಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉದ್ಯಮಿ ಅನಿಲ್ ಕುಮಾರ್ ಶೆಟ್ಟಿ, ನಿರುಪಮ ಹೆಗ್ಡೆ ಉಪಸ್ಥಿತರಿದ್ದರು. ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ್ ಐತಾಳ್ ಸ್ವಾಗತಿಸಿದರು. ಸಾರಿಕಾ ಅಶೋಕ್ ನಿರೂಪಿಸಿದರು. ಕಾರ್ಯದರ್ಶಿ ಅಶೋಕ್ ಕೆರೆಕಟ್ಟೆ ವಂದಿಸಿದರು.
ಜಯಂಟ್ಸ್ ಬ್ರಹ್ಮಾವರ ವಾಷಿ೯ಕ ಮಹಾಸಭೆ ; ಸಾಧಕರಿಗೆ ಅಭಿನಂದನಾ ಸಮಾರಂಭ

Posted On: 23-06-2024 03:02PM
ಬ್ರಹ್ಮಾವರ : ಸಮಾಜದಲ್ಲಿ ನಾವೆಲ್ಲರೂ ಹೊಸ ಚಿಂತನೆಗಳನ್ನು ಬೆಳೆಸಿಕೊಂಡು ಪರಿಸರಕ್ಕೆ ಪೂರಕವಾದ ಕಾಯ೯ ಮಾಡಬೇಕಾಗಿದೆ ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋರೋಗ ತಜ್ಞರಾದ ಡಾ. ವಿರೂಪಾಕ್ಷ ದೇವರಮನೆ ಹೇಳಿದರು. ಅವರು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರದ ವತಿಯಿಂದ ಸಿಟಿ ಸೆಂಟರ್ ನಲ್ಲಿ ನಡೆದ ವಾಷಿ೯ಕ ಮಹಾಸಭೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಸೇವಾ ಕಾಯ೯ಗಳನ್ನು ಮಾಡಿದಾಗ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರಿ ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ ಎಂದರು.
ಜಯಂಟ್ಸ್ ಫೆಡರೇಶನ್ 6 ರ ಅಧ್ಯಕ್ಷ ಎಲ್.ಬಿ ದೊಡ್ಡಮನಿ ಜಯಂಟ್ಸ್ ನ ಮುಂದಿನ ಕಾಯ೯ಕ್ರಮಗಳ ವಿವರ ನೀಡಿದರು. ವೇದಿಕೆಯಲ್ಲಿ ಫೆಡರೇಶನ್ ಪೂವ೯ ಅಧ್ಯಕ್ಷ ಮಧುಸೂಧನ್ ಹೇರೂರು, ಉಪಾಧ್ಯಕ್ಷ ತೇಜೇಶ್ವರ ರಾವ್, ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್, ಮುಂತಾದವರು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಜಯಂಟ್ಸ್ ಅದ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ವಹಿಸಿದ್ದರು.
ಈ ಸಂದಭ೯ದಲ್ಲಿ ಖ್ಯಾತ ಮಿಯಾವಾಕಿ ತಜ್ಞ ಕೆ.ಮಹೇಶ್ ಶೆಣೈ, ಈಜು ಪಟು ಲಿಮ್ಕಾ ದಾಖಲೆಗಾರ ರೋನಾನ್ ಲೂವಿಸ್ ರವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿಧನರಾದ ಜಯಂಟ್ಸ್ ಉಡುಪಿ ಮಾಜಿ ಅಧ್ಯಕ್ಷ ಜಯರಾಂ ರಾವ್, ಡಾ. ಎ.ರಾಜಾ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಡಾ.ಜೀವನ್ ಕೃಷ್ಣ ಯುಎಸ್ಐ ರವರ ಪ್ರಾಯೋಜಕತ್ವದಲ್ಲಿ ಅನಾಥ ಶ್ರಮಗಳಿಗೆ ವೀಲ್ ಚೈರ್ ಗಳನ್ನು ಹಸ್ತಾಂತರಿಸಲಾಯಿತು.ಕಾಯ೯ ದಶಿ೯ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಶ್ರೀನಾಥ ಕೋಟ, ರೊನಾಲ್ಡ್ ಸಹಕರಿಸಿದರು.
ಸಾಂತೂರಿನಲ್ಲಿ ಅಕ್ರಮ ಗ್ಯಾಸ್ ಫಿಲ್ಲಿಂಗ್ : ಇಬ್ಬರು ಪೋಲಿಸ್ ವಶ

Posted On: 23-06-2024 02:25PM
ಸಾಂತೂರು : ಅನಾಹುತಕ್ಕೆ ಎಡೆಮಾಡುವ ರೀತಿಯಲ್ಲಿ ತುಂಬಿದ ಸಿಲಿಂಡರ್ಗಳಿಂದ ಗ್ಯಾಸನ್ನು ಖಾಲಿ ಸಿಲಿಂಡರ್ಗಳಿಗೆ ತುಂಬಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಗೋದಾಮಿಗೆ ದಾಳಿ ಮಾಡಿ ಪಡುಬಿದ್ರಿ ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಕಾಪು ತಾಲೂಕಿನ ಸಾಂತೂರಿನಲ್ಲಿ ನಡೆದಿದೆ.
ಅಕ್ರಮವಾಗಿ ಸಿಲಿಂಡರ್ ಗಳಿಗೆ ಅನಿಲ ತುಂಬಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು, ತಹಶಿಲ್ದಾರರ ನಿರ್ದೇಶನದಂತೆ ಆಹಾರ ನಿರೀಕ್ಷಕರ ಜೊತೆಗೂಡಿ ಸಾಂತೂರಿನ ಸಮನ್ಯು ಗ್ಯಾಸ್ ಏಜೆನ್ಸಿ ಗೋದಾಮಿಗೆ ದಾಳಿ ಮಾಡಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ರಾಜಸ್ಥಾನ ಮೂಲದ ಸುರೇಂದ್ರ ಕುಮಾರ್ (25) ಹಾಗೂ ಸುಖ್ ದೇವ್(23) ಎಂದು ಗುರುತಿಸಲಾಗಿದೆ. ಉಳಿದಂತೆ ರಾಜಸ್ಥಾನದ ದೇವರಾಮ್ ಹಾಗೂ ಗ್ಯಾಸ್ ಏಜೆನ್ಸಿ ಮಾಲಕಿಯನ್ನು ಇನ್ನಷ್ಟೆ ವಶಕ್ಕೆ ಪಡೆಯ ಬೇಕಾಗಿದೆ.
ಅಂದಾಜು ರೂ.55 ಸಾವಿರ ಮೌಲ್ಯದ 15 ಸಿಲಿಂಡರ್ ಗಳು, ಗ್ಯಾಸ್ ರಿಫಿಲ್ಲಿಂಗ್ ಮಾಡಲು ಬಳಸುವ ಪರಿಕರ, ಲೇಬಲ್ಗಳು, ರೂ.15,460 ನಗದು, ಮೊಬೈಲ್ಫೋನ್ಗಳನ್ನು ವಶಪಡಿಸಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ ಕುತ್ಯಾರು : ಯೋಗ ದಿನಾಚರಣೆ

Posted On: 22-06-2024 07:42AM
ಕುತ್ಯಾರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆ, ಕುತ್ಯಾರು ಇಲ್ಲಿ ಜೂ.21ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪತಂಜಲಿ ಯೋಗ ಸಮಿತಿ ಇದರ ಸಕ್ರಿಯ ಸದಸ್ಯರಾಗಿರುವ ಶ್ರೀಪತಿ ಕಾಮತ್ ಹಾಗೂ ಗಣೇಶ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ವಿವಿಧ ಯೋಗಾಸನಗಳನ್ನು ತಿಳಿಸಿಕೊಟ್ಟರು.
ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಶಾಲಾ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ ಹಾಗೂ ಶಾಲಾ ಪ್ರಾಂಶುಪಾಲರಾದ ಸಂಗೀತಾ, ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು : ಮುಖ್ಯ ಶಿಕ್ಷಕಿ ರಜನಿ ಕೆ ಇವರಿಗೆ ಬೀಳ್ಕೊಡುಗೆ

Posted On: 22-06-2024 07:39AM
ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇಲ್ಲಿಯ ಮುಖ್ಯೋಪಾಧ್ಯಾಯಿನಿ ರಜನಿ ಕೆ ಇವರ ಬೀಳ್ಕೊಡುಗೆ ಸಮಾರಂಭವು ಜೂನ್ 13 ರಂದು ಬೆಳಪು ಶಾಲೆಯಲ್ಲಿ ನೆರವೇರಿತು.
ಬೀಳ್ಕೊಡುಗೆ ಸಮಾರಂಭದ ನೇತೃತ್ವವನ್ನು ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ವಹಿಸಿದ್ದರು.
ಈ ಸಂದರ್ಭ ಎರ್ಮಾಳ್ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಸುಧೀರ್, ಮುಸ್ತಾಕ್ ಸಾಹೇಬ್, ಬಾಲಕೃಷ್ಣ ಆಚಾರ್ಯ, ಸುರೇಂದ್ರ ಪಣಿಯೂರ್, ಚಂದ್ರಹಾಸ್, ಮಹೇಶ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ ವೃಂದ , ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸೌಮ್ಯಶ್ರೀ ಸ್ವಾಗತಿಸಿದರು. ಅನಸೂಯ ಹಾಗೂ ಲಿಡಿಯ ಮರಿಯಾ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಜಯಲಕ್ಷ್ಮಿ ನಿರೂಪಿಸಿದರು. ಕುಮಾರಿ ಶರ್ಮಿಳಾ ವಂದಿಸಿದರು.