ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೋವಿಡ್ ವ್ಯಾಕ್ಸಿನ್ ನೀಡಲು ಜಿಲ್ಲಾಧಿಕಾರಿಗೆ ಮನವಿ
Thumbnail
ಉಡುಪಿ : ಜಿಲ್ಲೆಯಲ್ಲಿ 130ಕ್ಕಿಂತ ಜಾಸ್ತಿ ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿದ್ದು ಸುಮಾರು 200ಕ್ಕಿಂತ ಜಾಸ್ತಿ ಸಿಬ್ಬಂದಿಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ 2 ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ . ಬಹುತೇಕ ಎಲ್ಲಾ ಸೌಹಾರ್ದ ಸಹಕಾರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಇವರಿಗೆ ಯಾವುದೇ ವ್ಯಾಕ್ಸಿನ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸೌಹಾರ್ದ ಒಕ್ಕೂಟ ತಿಳಿಸಿದೆ. ಇಂಥ ಕರೋನಾ ಸಂಕಷ್ಟ ಕಾಲದಲ್ಲಿ ಕೂಡ ಸೌಹಾರ್ದ ಸಹಕಾರಿಗಳು ಉಡುಪಿ ಜಿಲ್ಲಾದ್ಯಂತ ತಮ್ಮ ಸದಸ್ಯರ ಅನುಕೂಲಕ್ಕಾಗಿ ನಗದು, ಈ ಸ್ಟಾಂಪಿಂಗ್ ಮತ್ತು ಆರ್ ಟಿ ಸಿ ಯಂತಹ ಸೇವೆ ನೀಡುತ್ತಿದೆ. ಸೇವೆ ನೀಡುವಾಗ ಕರೋನಾ ಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಸಹಕಾರಿ ರಂಗದ ಆದ್ಯತೆಯ ಮೇರೆಗೆ ಎಲ್ಲಾ ಸಿಬ್ಬಂದಿಗಳಿಗೂ ಕೋವಿಡ್ ವ್ಯಾಕ್ಸಿನ್ ನೀಡಬೇಕೆಂದು ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಂಯೋಜಕರಾದ ವಿಜಯ ಬಿ. ಎಸ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21 May 2021, 10:09 AM
Category: Kaup
Tags: