ಪಡುಬಿದ್ರಿ ಠಾಣಾ 10 ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆ ಸೀಲ್‌ಡೌನ್
Thumbnail
ಪಡುಬಿದ್ರಿ : ಪಡುಬಿದ್ರಿ ಠಾಣೆಯ ಠಾಣಾಧಿಕಾರಿ ಸಹಿತ ೧೦ ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣಾಧಿಕಾರಿ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಅಂಟಿಕೊಂಡಿದ್ದು, ಸದ್ಯ ಅವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದಾರೆ. ಈ ಹಿನ್ನೆಲೆ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ಡೌನ್ ಮಾಡಿ ಠಾಣೆಯನ್ನು ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಸಿಬ್ಬಂದಿಯೊಬ್ಬರಿಗೆ ಜ್ವರ ಬಂದ ಹಿನ್ನೆಲೆಯಲ್ಲಿ  ಕೊವಿಡ್ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಸಂದರ್ಭ ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಡಪಟ್ಟಿರುವುದಾಗಿ ತಿಳಿದು ಬಂದಿದೆ.
22 May 2021, 11:18 AM
Category: Kaup
Tags: