ಕಾಪು : ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮ
Thumbnail
ಕಾಪು : ಕಾಪು ಪುರಸಭೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಯೋಜನೆಯಲ್ಲಿ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕಾಪುವಿನ ಶ್ರೀ ಹಳೇ ಮಾರಿಯಮ್ಮ ಸಭಾಗೃಹದಲ್ಲಿ ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಕಾಪು ಪುರಸಭಾ ಅಧ್ಯಕ್ಷರಾದ ಅನಿಲ್ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈಯವರು ಸಾರ್ವಜನಿಕರ ಹಿತಕ್ಕಾಗಿ ಸಭಾಗೃಹವನ್ನು ನೀಡಲು ಸಂತಸವಾಗುತ್ತಿದೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕಾಪುವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಯನ್ನು ನೀಡುತ್ತಿದ್ದು, ಜನಸಂದಣಿ ಜಾಸ್ತಿಯಾಗುತ್ತಿರುವ ಕಾರಣ ಲಸಿಕಾ ಕೇಂದ್ರವನ್ನು ಶ್ರೀ ಹಳೇ ಮಾರಿಯಮ್ಮ ಸಭಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಮೊದಲ ದಿನ 200ರಷ್ಟು ಡೋಸ್ ಗಳು ಲಭ್ಯವಿದ್ದು ಮಾಹಿತಿ ಪಡೆದ ಸಾರ್ವಜನಿಕರು ಮುಂಜಾನೆಯಿಂದಲೇ ಧಾವಿಸಿ ಸುಮಾರು 500ರಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ಬಂದವರಲ್ಲಿ ಮೊದಲ 200 ಜನರ ನೋಂದಣಿ ಮಾಡಿ ಉಳಿದ ಸಾರ್ವಜನಿಕರನ್ನು ಲಸಿಕೆ ಬಂದ ಮೇಲೆ ಕರೆಸುತ್ತೇವೆ ಎಂದು ತೆರಳಲು ಸೂಚಿಸಲಾಯಿತು. ಕಾಪುವಿನ ಪುರಸಭಾ ಸದಸ್ಯರು, ಆರಕ್ಷಕ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗ ಮತ್ತು ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದರು.
Additional image Additional image
28 May 2021, 11:47 AM
Category: Kaup
Tags: