ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ಅಂತರಾಷ್ಟ್ರೀಯ ಯೋಗ ದಿನಾಚರಣೆ
ಶಿರ್ವ : ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಆಚರಿಸಲಾಗುತ್ತದೆ. ಪ್ರಸ್ತುತ ಸಾಲಿನಲ್ಲಿ ಕೋವಿಡ್ -19 ಕಾರಣದಿಂದ ಸಾರ್ವಜನಿಕ ಸಭೆ,ಸಮಾರಂಭ ಹಾಗೂ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸುವುದರಿಂದ, ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ,ಯೋಗ ದಿನವನ್ನು ಆಚರಿಸಲು ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಆಯುಷ್ ಮಂತ್ರಾಲಯವು ನೀಡಿರುವ ಮಾರ್ಗಸೂಚಿಯಂತೆ ಬಿ ವಿತ ಯೋಗ,ಬಿ ಏಟ್ ಹೋಂ ಘೋಷವಾಕ್ಯದೊಂದಿಗೆ ಪ್ರಸಕ್ತ ಸಾಲಿನ ಯೋಗ ದಿನವನ್ನು ಆಚರಿಸಬೇಕು. ಇದರ ಪ್ರಯುಕ್ತ ಶಿರ್ವ,ಸಂತ ಮೇರಿ ಮಹಾವಿದ್ಯಾಲಯದ ಎನ್.ಸಿ.ಸಿ ಘಟಕವು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮನೆಯಿಂದ ಯೋಗ ಮಾಡುವ ಮೂಲಕ ಆಚರಿಸಲಾಯಿತು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಸಾಂಕೇತಿಕವಾಗಿ ಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಈ ಕಾರ್ಯಕ್ರಮದಲ್ಲಿ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಉತ್ತರ ಕನ್ನಡ ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಹಾಗೂ ಸಾರ್ವಜನಿಕರು ಕಾಲೇಜು ಹಮ್ಮಿಕೊಂಡಿರುವ ಯೋಗ ಫ್ರಮ್ ಹೋಂ ಕಾಂಪಿಟೇಷನ್ನಲ್ಲಿ ಭಾಗವಹಿಸಿ, ಯೋಗ ಮಾಡುವ ಮೂಲಕ ಆಚರಿಸಿದರು.
21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ,ಉಡುಪಿ ಘಟಕದ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪರ್ಮಿಂದರ್ ಸಿಂಘ್,ಎಲ್ಲಾ ಕಾಲೇಜಿನ ಎನ್.ಸಿ.ಸಿ,ಅಧಿಕಾರಿಗಳು, ಘಟಕದ ಸಹ ಸಂಯೋಜಕಿ ಯಶೋದರವರು,ಸೀನಿಯರ್ ಕ್ಯಾಡೆಟ್ ಅಂಡರ್ ಆಫೀಸರ್ ರಾಮದಾಸ್, ಜೂನಿಯರ್ ಅಂಡರ್ ಆಫೀಸರ್ ಪ್ರವಿತ ಮತ್ತು ರಿಯಾನ್ ರಿಷಿ ಅಲ್ಫೋನ್ಸೋ , ಕಾಲೇಜಿನ ಅಧ್ಯಾಪಕ-ಅಧ್ಯಾಪಕೇತರ ಬಂಧುಗಳು,ಹಾಗೂ ಎಲ್ಲಾ ಕ್ಯಾಡೆಟ್ ಗಳು ಉಪಸ್ಥಿತರಿದ್ದರು.
