ಪಡುಬಿದ್ರಿ : ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿ ಸಹಯೋಗದಲ್ಲಿ ಆಟಿದ ಪಂಥ
Thumbnail
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಜಂಟಿ ಸಹಯೋಗದಲ್ಲಿ ನಾಳೆ (1-8-21) ಬೆಳಿಗ್ಗೆ 10.30 ಕ್ಕೆ ಪಡುಬಿದ್ರಿ ಅಬ್ಬೇಡಿ ರಸ್ತೆಯ ಆರ್ ಆರ್ ಕಾಲೋನಿಯಲ್ಲಿ ಆಟಿದ ಪಂಥ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಡಾ| ವೈ. ಎನ್. ಶೆಟ್ಟಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಮಹಮ್ಮದ್ ನಿಯಾಜ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಶೋದ ,ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಎನ್. ಶೆಟ್ಟಿ, ವಲಯ 5ರ ವಲಯ ಸಂಯೋಜಕರಾದ ರಮೀಝ್ ಹುಸೈನ್, ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಅನಿತಾ ಬಿ.ವಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
31 Jul 2021, 04:59 PM
Category: Kaup
Tags: