ಕುತ್ಯಾರು : ಕೃಷಿ ಮಾಹಿತಿ ರಥಕ್ಕೆ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತ
Thumbnail
ಕಾಪು : ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು ಹಾಗೂ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕಾಪು ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನದ ಅಂಗವಾಗಿ ಕೃಷಿ ಮಾಹಿತಿಯನ್ನು ಒಳಗೊಂಡ ವಾಹನ ರಥವು ರೈತರಿಗೆ ಉಪಯುಕ್ತ ಮಾಹಿತಿ ನೀಡಿ, ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಕರಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಎಸ್. ಆಚಾರ್ಯ, ಉಪಾಧ್ಯಕ್ಷ ದೇವರಾಜ ಬಿ. ಶೆಟ್ಟಿ, ಪಿಡಿಒ ರಜನಿ ಭಟ್, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
08 Aug 2021, 10:49 PM
Category: Kaup
Tags: