ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ವತಿಯಿಂದ ಕ್ಲಬ್ ನ ಸದಸ್ಯರಾದ ರೂಪ ವಸುಂದರ ಇವರ ಮನೆಯ ಅಂಗಳದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಕೋಟ್ಯಾನ್ ಮಾತನಾಡಿ ಪರಿಸರದಲ್ಲಿರುವ ಗಿಡ-ಮರಗಳ ಕೊರತೆಯಿಂದ ನಾವೆಲ್ಲ ಇಂದು ಉಸಿರಾಡಲು ತೊಂದರೆಯನ್ನು ಪಡುತ್ತಿದ್ದೇವೆ. ಪರಿಸರದ ಉಳಿವಿಗಾಗಿ ನಾವು ಮನೆಯ ಸುತ್ತ ಗಿಡ ಮರಗಳನ್ನು ನೆಡಬೇಕು ಎಂದು ಕರೆಯಿತ್ತರು.
ಇನ್ನರ್ವೀಲ್ ಅಧ್ಯಕ್ಷರಾದ ಅನಿತಾ ಬಿ.ವಿ ಯವರು ಮಾತನಾಡಿ ಮನೆಗೊಂದು ಮರ ಊರಿಗೊಂದು ವನ ಇದ್ದರೆ ನಮ್ಮ ಪ್ರಕೃತಿ ಸುಂದರ ಎಂದರು.
ಸಭೆಯ ಅಧ್ಯಕ್ಷತೆಯನ್ನು ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ವಹಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಬಿ. ಎಸ್. ಆಚಾರ್ಯ ವಂದಿಸಿದರು. ಸುಧಾಕರ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಇನ್ನರ್ವೀಲ್ ಮತ್ತು ರೋಟೇರಿಯನ್ ಸದಸ್ಯರು ಉಪಸ್ಥಿತರಿದ್ದರು.
