ತುಲು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಜೈ ತುಲುನಾಡ್ ಸಂಘಟನೆಯಿಂದ ಮನವಿ
Thumbnail
ಉಡುಪಿ : ಅಂಬಲಪಾಡಿ ಕಾರ್ತಿಕ್ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೈ ತುಲುನಾಡ್ (ರಿ.) ಸಂಘಟನೆಯ ಪರವಾಗಿ ಸದಸ್ಯರಾದ ಅಕ್ಷತಾ ಕುಲಾಲ್ ಇವರಿಂದ ಕೇಂದ್ರ ಕೃಷಿ ಸಚಿವೆಯಾದ ಶೋಭಾ ಕರಂದ್ಲಾಜೆ ಇವರಿಗೆ ತುಲು ಭಾಷೆಗೆ ಕರ್ನಾಟಕ ರಾಜ್ಯದಲ್ಲಿ ಅಧಿಕೃತ ಸ್ಥಾನಮಾನ ನೀಡುವಂತೆ ಹಾಗೂ ಈ ವಿಷಯವನ್ನು ಆರ್ಟಿಕಲ್ 347 ಪ್ರಕಾರ ಸನ್ಮಾನ್ಯ ರಾಷ್ಟ್ರಪತಿಗಳ ಗಮನಕ್ಕೆ ತರುವಂತೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಂಘಟನೆಯವರೊಂದಿಗೆ ಶೋಭಾ ಕರಂದ್ಲಾಜೆಯವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಈ ನಡುವೆ ರಘುಪತಿ ಭಟ್ ತುಲು ಭಾಷೆಯು ರಾಜ್ಯದ ಅಧಿಕೃತ ಭಾಷೆಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ ಸುವರ್ಣ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ತಾರಾ ಉಮೇಶ್ ಆಚಾರ್ಯ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇದರ ಸದಸ್ಯರಾದ ಕೇಸರಿ ಯುವರಾಜ್, ಜೈ ತುಲುನಾಡ್ (ರಿ) ಸಂಘಟನೆಯ ತುಲು ಲಿಪಿ ಮೇಲ್ವಿಚಾರಕರಾದ ಶರತ್ ಕೊಡವೂರು ಮತ್ತು ನಗರ ಬಿ.ಜೆ.ಪಿ ಉಪಾಧ್ಯಕ್ಷೆ ಸರೋಜ ಶೆಣೈ, ಜಿಲ್ಲಾ ಬಿ.ಜೆ.ಪಿ. ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಿ ಎಸ್ ಶೆಟ್ಟಿ, ಜೈ ತುಲುನಾಡ್ (ರಿ) ಸಂಘಟನೆಯ ಸದಸ್ಯರಾದ ಸಂತೋಷ್ ಎಸ್ ಎನ್ , ತುಲು ಲಿಪಿ ಶಿಕ್ಷಕಿಯರಾದ ಸ್ವಾತಿ ಸುವರ್ಣ, ಶಿಲ್ಪಾ ಕೇಶವ್, ಸುಶೀಲಾ ಜಯಕರ್‌ರವರು ಉಪಸ್ಥಿತರಿದ್ದರು.
19 Aug 2021, 08:10 PM
Category: Kaup
Tags: