ಶಿರ್ವ : ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಸ್ವಚ್ಚತಾ ಕಾರ್ಯ
ಕಾಪು : ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರ್ವ ಮಂಡಲದ ಸೇವಾ ಚಟುವಟಿಕೆಯ ಅಂಗವಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣ ವನ್ನು ಸ್ವಚ್ಛಗೊಳಿಸಲಾಯಿತು.
ಈ ಕಾರ್ಯಕ್ರಮವು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾಪು ತಾಲೂಕಿನ ಸೇವಾ ಪ್ರಮುಖರಾದ ಸುಬ್ರಮಣ್ಯ ವಾಗ್ಳೆ, ಸೇವಾಭಾರತಿಯ ಪ್ರಮುಖರಾದ ಗಿರಿಧರ್ ಪ್ರಭು ಶಿರ್ವ, ಪ್ರವೀಣ್ ಪೂಜಾರಿ ಇವರ ನೇತೃತ್ವದಲ್ಲಿ ಸುಮಾರು 25ಕ್ಕೂ ಹೆಚ್ಚು ಸ್ವಯಂಸೇವಕರು ಸೇರಿಕೊಂಡು ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.
ಸಮಾಜಸೇವಕರಾದ ಶ್ರೀನಿವಾಸ ಶೆಣೈ ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು. ಈ ಕಾರ್ಯಕ್ರಮದ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು. ಭಾಗವಹಿಸಿದ ಸ್ವಯಂಸೇವಕರಿಗೆ ಧನ್ಯವಾದ ಅರ್ಪಿಸಲಾಯಿತು. ಸಂಘದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
